Manglore
ಮಂಗಳೂರು ಉತ್ತರ ವಲಯ ಹಾಗೂ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಬ್ಬಡ್ಡಿ ಪಂದ್ಯಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ಉತ್ತರ ವಲಯ ಹಾಗೂ ದ. ಕ. ಜಿ. ಪಂ. ಹಿ. ಪ್ರಾ. ಶಾಲೆ ಕಾವೂರು ಇವುಗಳ ಸಂಯುಕ್ತ ಆಶ್ರಯದಲ್ಲಿ 2024-2025 ನೇ ಸಾಲಿನ ಮಂಗಳೂರು ಹೋಬಳಿ ಮಟ್ಟದ ಕಬ್ಬಡ್ಡಿ ಪಂದ್ಯಾಟ ದಿನಾಂಕ 28ರಂದು ಶಾಲಾ ಮೈದಾನದಲ್ಲಿ ನಡೆಯಿತು.
ಸ್ಥಳೀಯ ಕಾರ್ಪೋರೇಟರ್ ಸುಮಂಗಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜೇಮ್ಸ್ ಕುಟಿನೋ, ದೈಹಿಕ ಶಿಕ್ಷಣಾಧಿಕಾರಿಗಳಾದ ಭರತ್, ಕರ್ನಾಟಕ ರಾಜ್ಯ ಸರಕಾರದ ಆಹಾರ ಆಯೋಗದ ಸದಸ್ಯ ಸುಮಂತ್ ರಾವ್, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿ ನಿತೇಶ್ ಕೊಂಡೆ, ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ವಾಣಿ, CRP ದೀಪಿಕಾ, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷರಾದ ಚೆಲುವಮ್ಮ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ ಛಲವಾದಿ, ಶಾಲಾ ಹಳೆ ವಿದ್ಯಾರ್ಥಿ ಹಸನಬ್ಬ, ಪ್ರವೀಣ್ ಲೋಬೊ, ನಿವೃತ್ತ ಮುಖ್ಯ ಶಿಕ್ಷಕಿ ಚಂದ್ರಾವತಿ, ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಕಬಡ್ಡಿ ಪಂದ್ಯಾಟದಲ್ಲಿ 28 ಶಾಲೆಗಳು ಭಾಗವಹಿಸಿದ್ದವು. ಬಾಲಕರ ವಿಭಾಗ- MGC ಬೋಂದೆಲ್( ಪ್ರಥಮ.)
ವಿದ್ಯಾಜ್ಯೋತಿ ಕಾವೂರು( ದ್ವಿತೀಯ)
ಬಾಲಕಿಯರ ವಿಭಾಗ – B.E. M ಕಾರ್ ಸ್ಟ್ರೀಟ್ (ಪ್ರಥಮ ) ವಿದ್ಯಾ ಆಂಗ್ಲ ಮಾಧ್ಯಮ ಹಿ. ಪ್ರಾಥಮಿಕ ಶಾಲೆ ಕೊಂಚಾಡಿ (ದ್ವಿತೀಯ ) ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ. ಜೆ ಸ್ವಾಗತಿಸಿದರು. ಸುನೀತಾ ಪ್ಲಾವಿಯಾ ಡಿಕೋಸ್ತಾ ನಿರೂಪಿಸಿದರು. ಕೋಕಿಲವಾಣಿ ವಂದಿಸಿದರು. ಶಿಕ್ಷಕಿ ಆಶಾ ಮತ್ತು ದೈಹಿಕ ಶಿಕ್ಷಕಿ ವಿಜಯಲಕ್ಷ್ಮಿ ಹಾಗೂ SDMC ಸದಸ್ಯರು ಸಹಕರಿಸಿದರು.
Manglore
ದ.ಕ.ಜಿಲ್ಲೆಯಲ್ಲಿ ದೊಡ್ಡಮಟ್ಟದ ಗೋಮಾಫಿಯಾ ಸಕ್ರಿಯ- ಸುನೀಲ್ ಕೆ.ಆರ್. ಆರೋಪ

ಮಂಗಳೂರು: ದ.ಕ. ಜಿಲ್ಲಾದ್ಯಂತ ಅಕ್ರಮವಾಗಿ ನಡೆಯುವ ಗೋಮಾಂಸ ಸಾಗಾಟಕ್ಕೆ ಕಡಿವಾಣ ಹಾಕುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಆದ್ದರಿಂದ ಗೋಕಳವು, ಗೋಮಾಂಸ ಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ವಿಶ್ವ ಹಿಂದು ಪರಿಷತ್ ಪ್ರಾಂತ ಗೋರಕ್ಷಾ ಪ್ರಮುಖ್ ಸುನೀಲ್ ಕೆ.ಆರ್. ಆಗ್ರಹಿಸಿದರು.
ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾದ್ಯಂತ ಕಾನೂನು ಮೀರಿ ಪ್ರತಿದಿನ ನೂರಾರು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುವ, ಗೋಹತ್ಯೆಯನ್ನು ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಸಕ್ರಿಯವಾಗಿದೆ. ಈ ಮಾಫಿಯಕ್ಕೆ ಮಟ್ಟ ಹಾಕಬೇಕಿದೆ ಎಂದರು.
ಈ ವಿಚಾರದಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆ.ಆರ್.ಸುನೀಲ್ ಎಚ್ಚರಿಸಿದರು.
Manglore
ತುಳು ಅಧಿಕೃತ ರಾಜ್ಯಭಾಷೆಗೆ ಸಿಎಂರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಸೂಕ್ತ ತೀರ್ಮಾನ- ಯು.ಟಿ.ಖಾದರ್

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಲು ಸಿಎಂರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ವಾಗ್ದಾನ ಮಾಡಿದರು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ತುಳು ಪರಿಷತ್ ಹಾಗೂ ಮ್ಯಾಪ್ಸ್ ಕಾಲೇಜಿನ ಸಹಭಾಗಿತ್ವದಲ್ಲಿ ನಗರದ ಪುರಭವನದಲ್ಲಿ ನಡೆದ ಎರಡನೇ ವಿದ್ಯಾರ್ಥಿ ತುಳು ಸಮ್ಮೇಳನ-2025ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಸಮ್ಮೇಳನದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಉನ್ನತ ಮಟ್ಟಕ್ಕೆ ಏರಲಿ ಎಂದು ಆಶಿಸುತ್ತೇನೆ. ನಾನೂ ಹಿಂದೆ ವಿದ್ಯಾರ್ಥಿ ದೆಸೆಯಲ್ಲಿ ನಿಮ್ಮಂತೆ ವೇದಿಕೆ ಎದುರುಗಡೆ ಕುಳಿತುಕೊಳ್ಳುತ್ತಿದ್ದೆ. ಇದೀಗ ಸ್ಪೀಕರ್ ಸ್ಥಾನಕ್ಕೆ ಏರಿದ್ದೇನೆ. ಆ ಶಕ್ತಿಯನ್ನು ದೇವರು ಇಲ್ಲಿರುವ ವಿದ್ಯಾರ್ಥಿಗಳಿಗೂ ನೀಡಿದ್ದಾನೆ. ಮುಂದೆ ನಮಗಿಂತ ಹೆಚ್ಚಿನ ಎತ್ತರಕ್ಕೆ ನೀವು ತುಳು ಭಾಷೆ, ಪರಂಪರೆಗೆ ಒತ್ತುಕೊಟ್ಟು ಏರಬೇಕೆಂದು ಕೇಳಿಕೊಂಡರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಐಕಳ ಪೊಂಪೈ ಕಾಲೇಜಿನ ಪದವಿ ವಿದ್ಯಾರ್ಥಿನಿ ಸನ್ನಿಧಿ ಮಾತನಾಡಿ, ತುಳು ಮಾತನಾಡಲು ಹಿಂಜರಿಕೆ ಬೇಡ. ತುಳುವರೇ ತುಳು ಮಾತನಾಡದಿದ್ದರೆ ತುಳು ಭಾಷೆಯನ್ನು ಉಳಿಸುವವರು ಯಾರು? ಎಂದು ಖೇದ ವ್ಯಕ್ತಪಡಿಸಿದರು.
ಬಳಿಕ ತುಳು ಸಂಶೋಧಕಿ ಇಂದಿರಾ ಹೆಗ್ಗಡೆಯವರೊಂದಿಗೆ ವಿದ್ಯಾರ್ಥಿಗಳು ಸಂವಾದ ನಡೆಸಿದರು. ಕವಿ ಭೋಜ ಸುವರ್ಣ ಅವರಿಗೆ ಹಿರಿಯ ಸಾಹಿತಿ ಡಾ.ಪ್ರಭಾಕರ ನೀರುಮಾರ್ಗ ತುಳು ಪರಿಷತ್ ಪ್ರಶಸ್ತಿ ಪ್ರಧಾನ ಮಾಡಿದರು.
Manglore
ಮನಪಾ ನೂತನ ಆಡಳಿತ ಅಧಿಕಾರಿಯಾಗಿ ಡಿಸಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

ಮಂಗಳೂರು: ಮಹಾನಗರಪಾಲಿಕೆಯ ನೂತನ ಆಡಳಿತ ಅಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ .ಯವರು ಸೋಮವಾರ ಅಧಿಕಾರ ಸ್ವೀಕರಿಸಿದರು.
ಮಂಗಳೂರು ಮನಪಾ ಪ್ರಸಕ್ತ ಅವಧಿಯ ಬಿಜೆಪಿ ಆಡಳಿತವು ಫೆ.27ಕ್ಕೆ ಅಂತ್ಯಗೊಂಡಿದೆ. ಈ ಮೂಲಕ ಮೇಯರ್ ಹಾಗೂ ಸ್ಥಾಯಿ ಸಮಿತಿಯ ಅಧಿಕಾರವಧಿಯೂ ಮುಕ್ತಾಯಗೊಂಡಿದೆ. ಆದ್ದರಿಂದ ಚುನಾಯಿತ ಕೌನ್ಸಿಲ್ ಇಲ್ಲದ ಹಿನ್ನೆಲೆಯಲ್ಲಿ ಡಿಸಿಯವರು ಮನಪಾ ಆಡಳಿತ ಅಧಿಕಾರವನ್ನು ಸ್ವೀಕರಿಸಿದರು.
ಈ ಹಿಂದೆ ಪ್ರಾದೇಶಿಕ ಆಯುಕ್ತರನ್ನು ಆಡಳಿತ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಸರಕಾರ ಅವರನ್ನು ಬದಲಾಯಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ರನ್ನು ಆಡಳಿತ ಅಧಿಕಾರಿಯಾಗಿ ನೇಮಕ ಮಾಡಿದೆ. ಈ ಮೂಲಕ ಇನ್ನು ಮುಂದೆ ಮೇಯರ್, ಸ್ಥಾಯೀ ಸಮಿತಿ ಸೇರಿದಂತೆ ಸಂಪೂರ್ಣ ಕೌನ್ಸಿಲ್ ಅಧಿಕಾರವನ್ನು ಜಿಲ್ಲಾಧಿಕಾರಿಯವರು ಆಡಳಿತ ಅಧಿಕಾರಿಯಾಗಿ ವಹಿಸಿಕೊಳ್ಳಲಿದ್ದಾರೆ.
-
State24 hours ago
ಅಕ್ರಮ ಮರ ಕಡಿತಲೆಗೆ ಶಿಕ್ಷೆ ಪ್ರಮಾಣ ಹೆಚ್ಚಳ: ಈಶ್ವರ ಖಂಡ್ರೆ ಖಡಕ್ ಸೂಚನೆ
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State7 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan7 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State8 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
State6 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
Kodagu4 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ
-
Hassan5 hours ago
ನನ್ನ ರಕ್ಷಿಸಿ, ಆಸ್ತಿ ಉಳಿಸಿಕೊಡಿ: ಡಿಸಿ ಕಛೇರಿ ಮುಂದೆ ವೃದ್ಧೆ ಅಳಲು