Connect with us

Kodagu

ಕಡಂಗದಲ್ಲಿ ಎಸ್‌ವೈಎಸ್ ರಾಜ್ಯ ಜ್ಯೂಬಿಲಿ ಜರ್ನಿ ಕಾರ್ಯಕ್ರಮ

Published

on

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ (ಎಸ್‌ವೈಎಸ್) ೩೦ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ “ಪರಂಪರೆಯ ಪ್ರತಿನಿಧಿಗಳಾಗೋಣ”ಎಂಬ ಧ್ಯೇಯ ವಾಕ್ಯದಡಿಯಲ್ಲಿ ೨೦೨೪ ರ ಜನವರಿ ೨೪ ರಂದು ಮಂಗಳೂರಿನಲ್ಲಿ ನಡೆಯಲಿರುವ ಮಹಾ ಸಮ್ಮೇಳನದ ಪ್ರಚಾರಾರ್ಥ ಎಸ್‌ವೈಎಸ್ ಕೊಡಗು ಜಿಲ್ಲಾ ಸಮಿತಿ ಆಯೋಜಿಸಿದ್ದ ರಾಜ್ಯ ಸಮಿತಿ ನಾಯಕರ ಜ್ಯೂಬಿಲಿ ಜರ್ನಿ ಕಾರ್ಯಕ್ರಮವು ಕಡಂಗ ಬದ್ರಿಯಾ ಮದರಸ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.

ಎಸ್‌ವೈಎಸ್ ೩೦ ನೇ ವಾರ್ಷಿಕ ಮಹಾ ಸಮ್ಮೇಳನದ ಪ್ರಯುಕ್ತ ಸಮಾಜ ಸೇವೆ, ಸಾಮಾಜಿಕ ಕಾರ್ಯಕ್ರಮಗಳನ್ನು ವಿವಿಧ ಘಟಕಗಳಲ್ಲಿ ಹಮ್ಮಿಕೊಂಡಿದ್ದು, ಅವುಗಳೆಲ್ಲವನ್ನೂ ಕಾರ್ಯರೂಪಕ್ಕೆ ತಂದು ಯಶಸ್ವಿಗೊಳಿಸಿ ಸೇವಾ ಮನೋಭಾವವಿರುವ ಉತ್ತಮ ಶಿಸ್ತುಬದ್ದ ಕಾರ್ಯಕರ್ತರನ್ನು ಒಗ್ಗೂಡಿಸುವ ಮನೋಭಾವದಿಂದ ಮಂಗಳೂರಿನಲ್ಲಿ ನಡೆಯುವ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಎಸ್‌ವೈಎಸ್ ರಾಜ್ಯಾಧ್ಯಕ್ಷ ಹಫೀಲ್ ಸಅದಿ ಕೊಳಕೇರಿ ಕರೆ ನೀಡಿದರು.

ಎಸ್‌ವೈಎಸ್ ರಾಜ್ಯ ಕೋಶಾಧಿಕಾರಿ ಅಡ್ವಕೇಟ್ ಹಂಝತ್ ಉಡುಪಿ ಮಾತನಾಡಿ ಎಸ್‌ವೈಎಸ್ ೩೦ನೇ ಮಹಾ ಸಮ್ಮೇಳನ ಅಭೂತಪೂರ್ಣ ಯಶಸ್ವಿಗೊಳಿಸುವಂತೆ ಪ್ರತಿಯೊಬ್ಬ ಕಾರ್ಯಕರ್ತನು ಹುಮ್ಮಸಿನಿಂದ ಶ್ರಮಿಸ ಬೇಕೆಂದರು.

ಎಸ್‌ವೈಎಸ್ ರಾಜ್ಯ ಮಾಧ್ಯಮ ಸಲಹೆಗಾರ ಹಸೈನಾರ್ ಆನೆಮಹಲ್ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್‌ಗಳನ್ನು ಸದುಪಯೋಗ ಪಡಿಸಿಕೊಂಡು ಪ್ರಚಾರಪಡಿಸಬೇಕೆಂದರು.

ರಾಜ್ಯ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್, ದಅವಾ ವಿಭಾಗ ಕಾರ್ಯದರ್ಶಿ ಸಯ್ಯದ್ ಶಾಫಿ ನಈಮಿ ತಂಗಳ್,ಸಾAತ್ವನ ವಿಭಾಗ ಕಾರ್ಯದರ್ಶಿ ಕೊಡಗು ಜಿಲ್ಲಾ ಉಸ್ತುವಾರಿ ಅಬ್ದುಲ್ ರಹ್ಮಾನ್ ರಝ್ವಿ ಕಲ್ಕಟ್ಟ, ಸಯ್ಯದ್ ಇಲ್ಯಾಸ್ ಅಲ್ ಹೈದರೂಸಿ ತಂಗಳ್ ಎಮ್ಮೆಮಾಡು ಹಾಗೂ ಮತ್ತಿತರ ರಾಜ್ಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸುವಂತೆ ಕರೆನೀಡಿ ಮಾತನಾಡಿದರು.

ಮೊದಲಿಗೆ ಕಡಂಗ ಮುಖ್ಯ ರಸ್ತೆಯಿಂದ ರಾಜ್ಯ ನಾಯಕರುಗಳಿಗೆ ಬದ್ರಿಯಾ ಮಸೀದಿ,ಕೆಎಂಜೆ,ಎಸ್ ವೈ ಎಸ್,ಎಸ್‌ಎಸ್‌ಎಫ್, ಮದರಸ ವಿದ್ಯಾರ್ಥಿಗಳು, ಸುನ್ನಿ ಸಂಘ ಕುಟುಂಬದ ಸದಸ್ಯರು ದಫ್ ಪ್ರದರ್ಶನದ ಮೂಲಕ ಅದ್ದೂರಿ ಸ್ವಾಗತ ಕೋರಿದರು.

ಜಿಲ್ಲಾಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುನೀರ್ ಮಲ್ಹರಿ, ಮುಜೀಬ್, ಶಂಸುದ್ದಿನ್ ಅಮ್ಜದಿ,ಬದ್ರಿಯಾ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಅರಫಾ,ಕೆಎಂಜೆ ಕಡಂಗ ಅಧ್ಯಕ್ಷ ಸುಲೈಮಾನ್, ಎಸ್‌ವೈಎಸ್ ಅಧ್ಯಕ್ಷ ಅಶ್ರಫ್,ಸಲಾಂ,ಹನೀಫ್ ರಹ್ಮನಿ,ಅಶ್ರಫ್ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎಸ್‌ವೈಎಸ್ ಕೊಡಗು ಜಿಲ್ಲಾ ಕಾರ್ಯದರ್ಶಿ ಅಹಮದ್ ಮದನಿ ಸ್ವಾಗತಿಸಿ ಯಾಕೂಬ್ ಮಾಸ್ಟರ್ ವಂದಿಸಿದರು.

ವರದಿ : ಝಕರಿಯಾ ನಾಪೋಕ್ಲು

Continue Reading
Click to comment

Leave a Reply

Your email address will not be published. Required fields are marked *

Kodagu

ಅಪರಿಚಿತ ವಾಹನ ಡಿಕ್ಕಿ ಮಾದಾಪುರ ಮೂಲದ ವ್ಯಕ್ತಿ ಸಾ*ವು

Published

on

ಕುಶಾಲನಗರ : ಆನೆಕಾಡು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬುಧವಾರ ರಾತ್ರಿ 7-30 ರ ಸಮಯದಲ್ಲಿ ಜರುಗಿದೆ.

ಮಾದಾಪುರ ಬಳಿಯ ಜಂಬೂರು ಗ್ರಾಮದ ರವಿ ಹಾಗೂ ಗಂಗೆ ದಂಪತಿ ಗಳ ಪುತ್ರ ಮಹೇಶ್ (31) ಎಂಬಾತ ಮೃತ ವ್ಯಕ್ತಿ.

ಕುಶಾಲನಗರದ ಕಡೆಯಿಂದ ದ್ವಿಚಕ್ರ ವಾಹನದಲ್ಲಿ ಆನೆಕಾಡು ಹೆದ್ದಾರಿಯಲ್ಲಿ ಸುಂಟಿಕೊಪ್ಪದ ಕಡೆ ತೆರಳುತ್ತಿದ್ದರು ಎನ್ನಲಾಗಿದೆ.

Continue Reading

Kodagu

ಮರಗಳ್ಳರ ತಂಡ ಪತ್ತೆ ಹಚ್ಚಿದ ಅರಣ್ಯಾಧಿಕಾರಿಗಳು

Published

on

ಸೋಮವಾರಪೇಟೆ: ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುತ್ತಿದ್ದ ಮರಗಳ್ಳರ ತಂಡವನ್ನು ಪತ್ತೆ ಹಚ್ಚುವಲ್ಲಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಸೋಮವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ನಾಟಗಳಾನ್ನಾಗಿ ಪರಿವರ್ತಿಸಿ ಶಾಮಿಲ್ಗೆ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆರೋಪಿಗಳು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿಗೆ ಪ್ರಯತ್ನಿಸಿದ ಸಂದರ್ಭ, ಆತ್ಮರಕ್ಷಣೆಗಾಗಿ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಎಡವಾರೆ ಗ್ರಾಮದ ಬಿ.ಜೆ.ಸಂತೋಷ್ ಎಂಬ ಆರೋಪಿಯನ್ನು ಸ್ಥಳದಲ್ಲೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಾದ ಎಡವಾರೆ ಗ್ರಾಮದ ಬಿ.ಆರ್.ಆಶ್ವಥ್, ಬಿ.ವಿ.ನಿತೀನ್, ಕೊಡ್ಲಿಪೇಟೆ ಅರಕನಹಳ್ಳಿಯ ಸಯ್ಯದ್ ಜಹೀರ್, ಕುಶಾಲನಗರ ರಸಲ್ಪುರದ ವಿ.ಎಂ.ಷರೀಪ್, ಐಗೂರು ಗ್ರಾಮದ ಅಕ್ಷಯ್ ನಾಪತ್ತೆಯಾಗಿದ್ದಾರೆ. ವಾಹನ ಸಮೇತ ತೇಗದ ನಾಟಗಳನ್ನು ವಶಪಡಿಸಿಕೊಳ್ಳಲಾಗಿದೆ.

ತಲೆಮರೆಸಿಕೊಂಡಿರುವ ಅರೋಪಿಗಳನ್ನು ಬಂಧಿಸಲು ಆರ್ಎಫ್ಒ ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ. ಬಂಧಿತ ಅರೋಪಿಗೆ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

ಬುಧವಾರ ಘಟನಾ ಸ್ಥಳಕ್ಕೆ ಸಿಸಿಎಫ್ ಸೋನಾಲ್, ಡಿಎಫ್ಒ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ಅರಣ್ಯ ಸಂಚಾರಿ ದಳದ ಎಸಿಎಫ್ ಗಾನಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾರ್ಯಚರಣೆಯಲ್ಲಿ ಆರ್ಎಫ್ಒ ಶೈಲೇಂದ್ರ ಕುಮಾರ್, ಡಿಆರ್‌ಎಫ್‌ಒ ಚಂದ್ರೇಶ್, ಸಿಬ್ಬಂದಿಗಳಾದ ಚಂದ್ರಶೇಖರ್, ರವಿ ಕುಮಾರ್, ಅಂತೋಣಿ, ದಿವಾಕರ್, ಸಚಿನ್, ಅಯ್ಯಪ್ಪ, ಜೀವನ್, ಪ್ರಜ್ವಲ್, ಆನೆ ಕಾರ್ಯಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Kodagu

ಕಳಪೆ ಕಾಮಗಾರಿವೆಂದು ಆರೋಪಿಸಿ ಕೂತಿ ಗ್ರಾಮಸ್ಥರಿಂದ ಪ್ರತಿಭಟನೆ

Published

on

ಸೋಮವಾರಪೇಟೆ: ರಾಜ್ಯ ಹೆದ್ದಾರಿ ಪ್ರಾಧಿಕಾರದಿಂದ 20 ಕೋಟಿ ರೂ. ವೆಚ್ಚದಲ್ಲಿ ಕೂಡುರಸ್ತೆ, ತೋಳೂರುಶೆಟ್ಟಳ್ಳಿ, ಕೂತಿ ಗ್ರಾಮದ 10 ಕಿ.ಮೀ ವ್ಯಾಪ್ತಿಯ ಸಂಪರ್ಕ ರಸ್ತೆ ಕಾಮಗಾರಿ ಕಳಪೆಯಾಗುತ್ತಿದೆ ಎಂದು ಆರೋಪಿಸಿ ಕೂತಿ ಗ್ರಾಮಸ್ಥರು ಕೂಡುರಸ್ತೆ ಜಂಕ್ಷನ್ನಲ್ಲಿ ಲೋಕೂಪಯೋಗಿ ಇಲಾಖೆ ಅಧಿಕಾರಿಗಳನ್ನು ಬುಧವಾರ ರಸ್ತೆಯಲ್ಲಿ ತಡೆದು ತರಾಟೆಗೆ ತೆಗೆದುಕೊಂಡರು.

ಮಾಗಡಿ, ಜಾಲ್ಸೂರು ಎಸ್.ಎಚ್. ೮೫ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಲ್ಕಂದೂರು, ಹೊಸಬೀಡು, ತೋಳೂರುಶೆಟ್ಟಳ್ಳಿ, ಹರಪಳ್ಳಿ, ಇನಕನಹಳ್ಳಿ, ಕೂತಿ, ಎಡದಂಟೆ ಸೇರಿದಂತೆ ಇನ್ನಿತರ ಗ್ರಾಮಗಳ ಜನರ ಹತ್ತಾರು ವರ್ಷಗಳ ರಸ್ತೆ ಕನಸ್ಸು ನನಸ್ಸಾಗುವ ಹಂತದಲ್ಲಿರುವಾಗ, ಗುತ್ತಿಗೆದಾರರು ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಗುಣಮಟ್ಟದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಕೂತಿ ಗ್ರಾಮಸ್ಥರು ದೂರಿದರು.


ರಸ್ತೆ ಕಾಮಗಾರಿ ಸಂದರ್ಭ ಗ್ರಾಮಸ್ಥರು ತಮ್ಮ ಜಾಗದಲ್ಲಿದ್ದ ಮರದ ರೆಂಬೆಗಳನ್ನು ತೆಗೆದುಕೊಟ್ಟು ಸಹಕಾರ ನೀಡಿದ್ದಾರೆ. ಆದರೂ ಬೇಕಾಬೆಟ್ಟಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಕೂತಿ ಗ್ರಾಮದ ಉಪಾಧ್ಯಕ್ಷ ಕೆ.ಡಿ.ಗಿರೀಶ್ ದೂರಿದರು. ಹೆಚ್ಚಿನ ರಸ್ತೆ ಕಾಮಗಾರಿಗಳು ಕಳಪೆಯಾಗುತ್ತಿರುವುದರಿಂದ ಬಾಳಿಕೆ ಬರುತ್ತಿಲ್ಲ. ಸರ್ಕಾರ ಹಣ ಪೋಲಾಗುತ್ತಿದೆ. ಕಳಪೆ ಕಾಮಗಾರಿಗಳಿಗೆ ಕೆಲ ಇಂಜಿನಿಯರ್ಗಳೇ ಕಾರಣ ಎಂದು ಕೂತಿ ದಿವಾಕರ್ ದೂರಿದರು.

ಗುಣಮಟ್ಟದ ರಸ್ತೆ ಕಾರ್ಯ ನಡೆಸದೆ ಹೋದರೆ ರಸ್ತೆ ತಡೆದು ಪ್ರತಿಭಟಿಸುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಎಇಇ ಕುಮಾರ್, ಇಂಜಿನಿಯರ್ ಹರ್ಬಜ್ , ರೈತಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ಕೂತಿ ಗ್ರಾಮಸ್ಥರಾದ ಜೈರಾಜ್, ಯಾದವ್, ಲಕ್ಷ್ಮಣ್,  ಸಂಜು ಮತ್ತಿತರರು ಇದ್ದರು.

Continue Reading

Trending

error: Content is protected !!