Mysore
ನಂಜನಗೂಡು ತಾಲೂಕಿನ ಕಳಲೆ ಗ್ರಾಮಕ್ಕೆ ನ.17 ರಂದು ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ : ಪೂರ್ವ ಭಾವಿ ಸಭೆ ನಡೆಸಿದ ಶಾಸಕ ದರ್ಶನ್ ಧ್ರುವನಾರಾಯಣ್

ನ.17 ರಂದು ಶುಕ್ರವಾರ ನಂಜನಗೂಡು ತಾಲೂಕಿನ ಕಳಲೆ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ ಎಂದು ಶಾಸಕ ಯುವ ನಾಯಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು,
ಸಿದ್ದರಾಮಯ್ಯರವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ನಂಜನಗೂಡು ತಾಲೂಕಿಗೆ ಆಗಮಿಸುತ್ತಿದ್ದಾರೆ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ನವೆಂಬರ್ 17ರಂದು ಮಧ್ಯಾಹ್ನ 3 ಗಂಟೆಗೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಶ್ರೀ ಕಡೇ ಮಾಲಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ. ನಂಜನಗೂಡಿನ ಹುಲ್ಲಹಳ್ಳಿ ವೃತ್ತದಲ್ಲಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಲಿದ್ದಾರೆ. ಬೈಕ್ ರ್ಯಾಲಿ ಮೂಲಕ ಅವರನ್ನು ಬರಮಾಡಿಕೊಳ್ಳುತ್ತೇವೆ.
ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಆಗಮಿಸುವ ಎಲ್ಲ ಜನತೆಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ವೆಂಕಟೇಶ್, ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕಾರ್ಯಕರ್ತರಲ್ಲಿ ಮನವಿ ಶಾಸಕ ಯುವನಾಯಕ ದರ್ಶನ್ ಧ್ರುವನಾರಾಯಣ್ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ಪಕ್ಷದ ತಾಲೂಕು ಅಧ್ಯಕ್ಷ ಸಿ.ಎಂ. ಶಂಕರ್, ಕಳಲೆ ರಾಜೇಶ್, ಶ್ರೀರಾಂಪುರದ ಮಹದೇವು,ಕಮಲೇಶ್, ಸುಧಾಕರ್, ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Mysore
ನಂಜನಗೂಡಿನಲ್ಲಿ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ಚಿಕ್ಕ ಜಾತ್ರಾ ಮಹೋತ್ಸವ ವಿಜೃಂಭಣೆ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿ
ಚಿಕ್ಕ ಜಾತ್ರೆ ಮಹೋತ್ಸವ ಮಂಗಳವಾರ ವೈಭವಯುತವಾಗಿ ನೆರವೇರಿತು.
ಬೆಳಿಗ್ಗೆ 10.45 ರಂದು ಸಲ್ಲುವ ಶುಭ ಮಕರ ಲಗ್ನದಲ್ಲಿ ದೇಗುಲದ ಪ್ರಧಾನ ಆಗಮಿಕ ಜೆ. ನಾಗ ಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕೈಂಕಯ೯ ನೆರವೇರಿಸಿ ರಥಗಳಿಗೆ ಪೂಜೆ ಸಲ್ಲಿಸಿದರು.
ಪೂಜೆ ಸಲ್ಲಿಸಿದ ಬಳಿಕ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಉತ್ಸವ ರಥಕ್ಕೆ ಚಾಲನೆ ನೀಡಿ ತೇರನ್ನು ಎಳೆದರು.
ಹೂವಿನ ಹಾರ ಅಲಂಕೃತಗೊಂಡ ರಥೋತ್ಸವ ನಂಜುಂಡೇಶ್ವರ ಸ್ವಾಮಿಯ ಹಾಗೂ ಪಾರ್ವತಿ ದೇವಿ ಸಮೇತ ಉತ್ಸವ ಮೂರ್ತಿ, ಗಣಪತಿ ಚಂಡಿಕೇಶ್ವರ, ಸೇರಿದಂತೆ ಮೂರು ರಥಗಳು ರಥ ಬೀದಿಯಲ್ಲಿ
ರಥಗಳನ್ನು ಸಾವಿರಾರು ಭಕ್ತಾದಿಗಳು ಹಗ್ಗ ಹಿಡಿದು ಜೈ ನಂಜುಂಡೇಶ್ವರ, ಜೈ ಶ್ರೀಕಂಠೇಶ್ವರ, ಜೈ ನಂಜುಂಡ, ಎಂಬ ಘೋಷಣೆಗಳನ್ನು ಕೂಗುತ್ತಾ ಎಳೆದರು.
ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ರಥಕ್ಕೆ ಹಣ್ಣು ದವನ ಎಸೆದು ಪುನೀತರಾದರು.
ರಥ ಬೀದಿಗಳಲ್ಲಿ ನಿಧಾನವಾಗಿ ಚಲಿಸಿ ಭಕ್ತಾದಿಗಳು ಭಕ್ತಿಯಿಂದ ನಮಿಸಿದರು.
ಪೋಲಿಸ್ ಇಲಾಖೆಯಿಂದ ಬಿಗಿ ಬಂದೋಬಸ್ತು ಇರುವುದರಿಂದ ರಥದಲ್ಲಿ ಯಾವುದೇ ಅಡೆ-ತಡೆಗಳಿಲ್ಲದೆ ಮೂರು ರಥಗಳು 12.50 ಗಂಟೆಗೆ ಸ್ವಸ್ಧಾನಕ್ಕೆ ಸೇರಿದವು.
ಜಾತ್ರಾಯಲ್ಲಿ: ಶಾಸಕರಾದ ದರ್ಶನ್ ಧ್ರುವನಾರಾಯಣ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಕಾರ್ಯನಿವ೯ಹಣಾಧಿಕಾರಿ ಎಂ. ಜಗದೀಶ್ ಕುಮಾರ್, ಪೌರಾಯುಕ್ತಧಿಕಾರಿ ನಂಜುಂಡಸ್ವಾಮಿ, ಡಿಎಸ್ಪಿ ಗೋವಿಂದ್ ರಾಜ್, ಇದ್ದರು.
Mysore
ಗೃಹಲಕ್ಷ್ಮಿ : 1,18,000 ರೂಪಾಯಿ ಹಣ ನಾಡದೇವತೆ ತಾಯಿ ಚಾಮುಂಡೇಶ್ವ ದೇಗುಲಕ್ಕೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದರು.ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸೂಚಿಸಿದ್ದ ಡಿ ಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಮಾಡಲಾಗಿದ್ದು, ಅದರಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಲಾಗಿದೆ.
ಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಹಣ ಸಂದಾಯವಾಗಿದೆ.1,18,000 ರೂಪಾಯಿ ಹಣ ದೇಗುಲಕ್ಕೆ ನೀಡಿಕೆಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ ಹಣ ಸಂದಾಯ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
Mysore
ಪತ್ರಕರ್ತ ಪುನೀತ್ ಗೆ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿ

ಪಿರಿಯಾಪಟ್ಟಣ: ತಾಲೂಕಿನ ಚಪ್ಪರದಹಳ್ಳಿ ಗ್ರಾಮದ ಜನಮಿತ್ರ ವರದಿಗಾರ ಪತ್ರಕರ್ತ ಸಿ.ಜಿ ಪುನೀತ್ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕನ್ನಡಾಂಬೆ ರಕ್ಷಣಾ ವೇದಿಕೆಯಿಂದ ಪ್ರತಿ ವರ್ಷ ಸಾಧಕರನ್ನು ಗುರುತಿಸಿ ನೀಡಲಾಗುವ ಕನ್ನಡಾಂಬೆ ಸೇವಾ ರತ್ನ ಪ್ರಶಸ್ತಿಗೆ ಪ್ರಸ್ತಕ ಸಾಲಿನಲ್ಲಿ ಮಾಧ್ಯಮ ಕ್ಷೇತ್ರದ ಸೇವೆಗೆ ಸಿ.ಜಿ ಪುನೀತ್ ಆಯ್ಕೆಯಾಗಿದ್ದು, ನ.29ರ ಬುಧವಾರ ಮೈಸೂರಿನ ಕಲಾಮಂದಿರದಲ್ಲಿ ನಡೆಯಲಿರುವ ಕನ್ನಡಾಂಬೆ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ರಾಜಶೇಖರ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
-
Hassan1 month ago
ಮಲಗಿದಲ್ಲಿಯೇ ವ್ಯಕ್ತಿ ಸಾವು
-
Mysore1 month ago
KSRTC BUS – ಚಲಿಸುವಾಗ ನಿಯಂತ್ರಣ ತಪ್ಪಿ ಅಪಘಾತ
-
Crime2 weeks ago
ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
Hassan2 months ago
ಹಾಸನ-ಅರ್ಧ ಗಂಟೆಯಲ್ಲಿ 1 ಲೀಟರ್ ಮದ್ಯ ಕುಡಿಯುವ ಚಾಲೆಂಜ್- ಓರ್ವ ಸಾವು
-
Hassan6 days ago
ಜಿಲ್ಲಾಧಿಕಾರಿ ಕಛೇರಿ ಎಸ್ಡಿಎ ಆತ್ಮಹತ್ಯೆ
-
Mysore1 month ago
ಮಾಂಗಲ್ಯ ಸರ ಅಪಹರಣ, ಪೊಲೀಸ್ ವತಿಯಿಂದ ತಪಾಸಣೆ
-
Crime1 month ago
ಕ್ಷುಲ್ಲಕ ಕಾರಣಕ್ಕೆ ಪೆಟ್ರೋಲ್ ಬಂಕ್ಗೆ ನುಗ್ಗಿ ಯುವಕನ ಮಚ್ಚಿನಿಂದ ಹಲ್ಲೆ
-
State1 month ago
ರೇಷನ್ ಕಾರ್ಡ್ ತಿದ್ದುಪಡಿಗೆ ಅವಧಿ ವಿಸ್ತರಸಿದ ಸರಕಾರ