Connect with us

Kodagu

ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಕಮರುದ್ದೀನ್ ಸಖಾಫಿ ಆಯ್ಕೆ

Published

on

ವರದಿ :ಝಕರಿಯ ನಾಪೋಕ್ಲು

ನಾಪೋಕ್ಲು: ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಸುನ್ನೀ ವಿದ್ಯಾರ್ಥಿ ಒಕ್ಕೂಟ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್ಎಸ್ಎಫ್) ಇದರ ಕೊಡಗು ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ನೆಲ್ಯಾಹುದಿಕೇರಿ ಕೋಫಿಯಾ ರೆಸ್ಟೋರೆಂಟ್ ನಲ್ಲಿ ನಡೆದ ವಾರ್ಷಿಕ ಮಹಾ ಸಭೆಯು ಜಿಲ್ಲಾಧ್ಯಕ್ಷರಾದ ಝುಬೈರ್ ಸಅದಿರವರ ಅಧ್ಯಕ್ಷತೆ ವಹಿಸಿದರು.
ಎಸ್ ವೈಎಸ್ ರಾಜ್ಯಾಧ್ಯಕ್ಷರಾದ ಅಬ್ದುಲ್ ಹಫೀಲ್ ಸಅದಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ನೆಲ್ಯಾಹುದಿಕೇರಿ ವಾರ್ಷಿಕ ವರದಿ ಮಂಡಿಸಿದರು.

ಜಿಲ್ಲಾ ಕೋಶಾಧಿಕಾರಿ ಸಯ್ಯದ್ ಶಿಹಾಬ್ ತಂಙಳ್ ಲೆಕ್ಕ ಪತ್ರ ಮಂಡಿಸಿದರು.

ರಾಜ್ಯ ಸಮಿತಿಯಿಂದ ಉಸ್ತುವಾರಿಯಾಗಿ ಆಗಮಿಸಿದ ಅಲಿ ತುರ್ಕಳಿಕೆ ನೇತೃತ್ವದಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಯಿತು. ಕೂರ್ಗ್ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಶೈಖುನಾ ಅಶ್ರಫ್ ಅಹ್ಸನಿ ನೂತನ ಸಮಿತಿಯನ್ನು ಘೋಷಣೆ ಮಾಡಿದರು.

ಕೊಡಗು ಜಿಲ್ಲಾಎಸ್ ಎಸ್ ಎಫ್ ನ ನೂತನ ಅಧ್ಯಕ್ಷರಾಗಿ ಕಮರುದ್ದೀನ್ ಅನ್ವಾರಿ ಸಖಾಫಿ ಕೊಡಗರಹಳ್ಳಿ,ಪ್ರಧಾನ ಕಾರ್ಯದರ್ಶಿ ಜುನೈದ್ ನೆಲ್ಯಾಹುದಿಕೇರಿ,ಕೋಶಾಧಿಕಾರಿ ನವಾಝ್ ಮದನಿ ಹೊದವಾಡ, ಉಪಾಧ್ಯಕ್ಷರಾಗಿ ರಝಾಕ್ ಸಅದಿ ನಲ್ವತ್ತೇಕರೆ,ಸಮಿತಿ ಕಾರ್ಯದರ್ಶಿಗಳಾಗಿ ಇಬ್ರಾಹಿಂ ಮಾಸ್ಟರ್ ಕೊಂಡಂಗೇರಿ,ರಾಶಿದ್ ಅನ್ವಾರಿ ಅಹ್ಸನಿ ಅಯ್ಯಂಗೇರಿ, ಗಫೂರ್ ಮಾಪಿಳತ್ತೋಡು, ಸ್ವಾದಿಕ್ ಕರ್ಕಳ್ಳಿ,ಕಮರುದ್ದೀನ್ ಅನ್ವಾರಿ ಅಹ್ಸನಿ ಮಾಲ್ದಾರೆ, ಬಶೀರ್ ಹೊದವಾಡ,ನಿಝಾಂ ಮಟ್ಟಂ,ಮುಹಮ್ಮದ್ ಹನೀಫ್ ಅಶ್ರಫಿ ನಂಜರಾಯಪಟ್ಪಣ, ನೌಫಲ್ ಮಹ್ಳರಿ ಕಂಡಕ್ಕರ, ಬಾದುಷಾ ಹುಸೈನ್ ಸುರೈಜಿ ಸಖಾಫಿ ಹೊಸತೋಟ ಹಾಗೂ ಕಾರ್ಯಕಾರಿಣಿ ಸದಸ್ಯರುಗಳಾಗಿ 14 ಜನರು ಆಯ್ಕೆಮಾಡಿದರು.

ಈ ಸಂದರ್ಭ ಎಸ್ ವೈಎಸ್ ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್,ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ, ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ,ಎಸ್ ಜೆಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ, ಕೋಶಾಧಿಕಾರಿ ಅಬ್ದುಲ್ಲಾ ಸಖಾಫಿ,ಎಸ್ ಎಸ್ ಎಫ್ ರಾಷ್ಟ್ರೀಯ ಮಾಜಿ ಕಾರ್ಯದರ್ಶಿ ಯಾಕೂಬ್ ಮಾಸ್ಟರ್,ಎಸ್ ಎಸ್ ಎಫ್ ರಾಜ್ಯ ಕಾರ್ಯದರ್ಶಿ ಮುಜೀಬ್ ನೂತನ ಸಮಿತಿಗೆ ಶುಭ ಹಾರೈಸಿದರು.
ಇದೆ ಸಂದರ್ಭ ಕಳೆದ ವರ್ಷದ ಆಝಾದಿ ರ‍್ಯಾಲಿ ಯಶಸ್ವಿಗೆ ಕಾರಣ ಕರ್ತರಾದ ಸ್ವಾಗತ ಸಮಿತಿಗೆ ಜಿಲ್ಲಾ ಸಮಿತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.ಸ್ವಾಗತ ಸಮಿತಿ ನಾಯಕರಾದ ಹಂಝ ಮಾನಿ,ಝುಬೈರ್ ಕೂಡಿಗೆ ಸ್ಮರಣಿಕೆ ಸ್ವೀಕರಿಸಿದರು.ಡಿವಿಷನ್ ನಿಂದ ಆಯ್ಕೆಯಾದ 80 ರಷ್ಟು ಜಿಲ್ಲಾ ಕೌನ್ಸಿಲರ್ಸ್ ಗಳು ಭಾಗವಹಿಸಿದರು.ಕೂರ್ಗ್ ಜಂಇಯ್ಯತುಲ್ ಉಲಮಾ ಹಾಗೂ ಸಾಂಘಿಕ ನಾಯಕರು ನೂತನ ಸಮಿತಿಗೆ ಎಸ್ ಎಸ್ ಎಫ್ ಧ್ವಜ ಹಸ್ತಾಂತರಿಸಿದರು. ಇಬ್ರಾಹಿಂ ಮಾಸ್ಟರ್ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ಜುನೈದ್ ನೆಲ್ಯಾಹುದಿಕೇರಿ ಸರ್ವರನ್ನು ವಂದಿಸಿದರು.

Continue Reading

Kodagu

ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸುವುದು ಅಸಂವಿಧಾನಿಕ ಕ್ರಮವಾಗಿದೆ : ಎಸ್‌ಡಿಟಿಯು ಟೀಕೆ

Published

on

ಮಡಿಕೇರಿ : ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಿ ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುವ ಸರಕಾರದ ಕ್ರಮ ಅಸಂವಿಧಾನಿಕವಾಗಿದ್ದು, ಇದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ ಹಲವು ನಿರ್ಣಯಗಳನ್ನು ತೆಗೆದುಕೊಂಡಿದೆ ಎಂದು ಎಸ್‌ಡಿಟಿಯು ಸಂಘಟನೆಯ ಕೊಡಗು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ತಿಳಿಸಿದ್ದಾರೆ.

ಭಾರತದಲ್ಲಿ ಹಿಂದಿನ ವ್ಯವಸ್ಥೆಯಲ್ಲಿ ಹಲವು ಕೇಂದ್ರ ಕಾರ್ಮಿಕ ಕಾಯ್ದೆಗಳು ಜಾರಿಯಲ್ಲಿದ್ದವು. ಅವುಗಳನ್ನು ಕೇಂದ್ರ ಸರಕಾರ ನಾಲ್ಕು ಕಾಯ್ದೆಗಳಾಗಿ ಮಾರ್ಪಡುಗೊಳಿಸಿದೆ. ಈ ಕಾನೂನುಗಳಿಂದ ಕಾರ್ಮಿಕರ ಹಕ್ಕುಗಳು ಕಡಿತಗೊಳ್ಳುವ ಸಾಧ್ಯತೆಗಳಿದೆ, ಕಂಪೆನಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲಾಗಿದೆ. ಅನುಷ್ಠಾನದಲ್ಲಿಯೂ ಅಸ್ಪಷ್ಟತೆ ಕಂಡು ಬರುತ್ತಿದೆ. ಆದ್ದರಿಂದ ಈ ಹೊಸ ಕಾನೂನನ್ನು ರದ್ದುಗೊಳಿಸಿ ಹಿಂದಿನ ಕಾನೂನುಗಳನ್ನೇ ಸಮರ್ಪಕವಾಗಿ ಜಾರಿಗೊಳಿಸಬೇಕು.


ಕರ್ನಾಟಕ ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಅನೇಕ ಪದವೀಧರರು ಉತ್ತಮ ಶಿಕ್ಷಣ ಪಡೆದಿದ್ದರೂ, ತಮ್ಮ ಅರ್ಹತೆಗೆ ತಕ್ಕ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕ? ಅನುಭವಿಸುತ್ತಿದ್ದಾರೆ. ನಗರ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಹೆಚ್ಚು ಇದ್ದರೂ, ಗ್ರಾಮಾಂತರ ಯುವ ಜನತೆಗೆ ಮಾಹಿತಿ ಕೊರತೆ, ಮಾರ್ಗದರ್ಶನದ ಅಭಾವ ಹಾಗೂ ಆರ್ಥಿಕ ಅಡಚಣೆಗಳಿಂದ ಅವಕಾಶಗಳು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಗ್ರಾಮಾಂತರ ಪ್ರದೇಶಗಳಲ್ಲೇ ವಿಶೇ? ಉದ್ಯೋಗ ಮೇಳಗಳನ್ನು ಆಯೋಜಿಸಬೇಕು.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಕ್ಕಳಿಗೆ ಪದವಿಯವರೆಗೆ ಸರಕಾರ ಉಚಿತ ಶಿಕ್ಷಣ ನೀಡಬೇಕು ಎಂಬಿತ್ಯಾದಿ ಹಕ್ಕೊತ್ತಾಯಗಳ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಕೆ.ಹೆಚ್.ಅಣ್ಣ ಷರೀಫ್ ಹಾಗೂ ಎಂ.ಎ. ಅಬ್ದುಲ್ ರಜಾಕ್  ಮಾಹಿತಿ ನೀಡಿದ್ದಾರೆ.


ಎಸ್‌ಡಿಟಿಯು ಸಂಘಟನೆಯ ರಾಜ್ಯ ಸಂಚಾಲಕ ಅಥಾವುಲ್ಲಾ ಜೋಕಟ್ಟೆ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಫಾರೂಕು ತಮಿಳುನಾಡು, ರಾಜ್ಯ ಉಸ್ತುವಾರಿ ರಹೀಮ್ ಪಟೇಲ್, ಸಹ ಸಂಚಾಲಕ ಖಾದರ್ ಫರಂಗಿಪೇಟೆ, ಶಫಿ ರಾಯಚೂರು, ಸದಸ್ಯ ಅಬೂಬಕ್ಕರ್ ಮದ್ದ, ಇಮ್ರಾನ್ ಬೆಳಗಾವಿ, ಅಲ್ತಾಫ್ ಮೈಸೂರು, ಕೊಡಗು ಜಿಲ್ಲೆಯ ಪ್ರತಿನಿಧಿಗಳು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.

Continue Reading

Kodagu

ಕೊಡಗು ವಿಶ್ವವಿದ್ಯಾಲಯದ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿಗಳ ಫಲಿತಾಂಶ ಪ್ರಕಟ

Published

on

ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ ದ್ವಿತೀಯ ಮತ್ತು ಚತುರ್ಥ ಸೆಮಿಸ್ಟರ್ ಬಿ.ಎಡ್ ಪದವಿ ಮತ್ತು ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಪರೀಕ್ಷಾ ಫಲಿತಾಂಶವನ್ನು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಆನ್‌ಲೈನ್‌ ತಂತ್ರಾಂಶದಲ್ಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪ್ರಕಟಿಸಿದರು.

ಕೊಡಗು ವಿಶ್ವವಿದ್ಯಾಲಯದ ಘಟಕ ಮತ್ತು ಸಂಯೋಜಿತ ಮಹಾವಿದ್ಯಾಲಯಗಳ 2025-26ನೇ ಶೈಕ್ಷಣಿಕ ಸಾಲಿನ ಬಿಕಾಂ, ಬಿಬಿಎ ಮತ್ತು ಬಿಎಸ್ಸಿ ಪದವಿಗಳ ಪ್ರಥಮ/ತೃತೀಯ/ ಪಂಚಮ ಸೆಮಿಸ್ಟರ್‌ನ (ಆವರ್ತನ ಮತ್ತು ಪುನರಾವರ್ತನ) ಪರೀಕ್ಷೆಗಳು ಮುಗಿದ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಅತೀ ಕಡಿಮೆ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿ ಫಲಿತಾಂಶವನ್ನು ಪ್ರಕಟಿಸಿದ ಕೀರ್ತಿಗೆ ಕೊಡಗು ವಿಶ್ವವಿದ್ಯಾಲಯ ಭಾಜನವಾಗಿದೆ.

ರಾಜ್ಯ ಶಿಕ್ಷಣ ನೀತಿ -2024/ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ನಡೆದ ಪ್ರಥಮ/ ತೃತೀಯ/ಪಂಚಮ ವರ್ಷದ ಸ್ನಾತಕ ಪದವಿ ಪರೀಕ್ಷಾ ಫಲಿತಾಂಶವನ್ನು ಅತೀ ಶೀಘ್ರವಾಗಿ ಪ್ರಕಟಿಸಿದೆ. ವಿಶ್ವವಿದ್ಯಾಲಯವು ಸ್ನಾತಕ ಪದವಿ ಪರೀಕ್ಷೆಗಳು ಮುಗಿದ 20 ದಿನಗಳೊಳಗೆ ಫಲಿತಾಂಶವನ್ನು ಪ್ರಕಟಿಸಬೇಕು ಎಂಬ ಯುಜಿಸಿಯ ನಿರ್ದೇಶನದಂತೆ ಕೇವಲ ನಾಲ್ಕು ದಿನಗಳಲ್ಲಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಕೊಡಗು ವಿಶ್ವವಿದ್ಯಾಲಯವು ಈ ಹಿಂದೆಯೂ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿತ್ತು.

ಇದೇ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ಕೊಡಗಿನ 22 ಕಾಲೇಜುಗಳ ಸುಮಾರು 6000 ವಿದ್ಯಾರ್ಥಿಗಳು ಹಾಜರಾಗಿದ್ದರು. ಹಾಗೆಯೇ ಫೆಬ್ರವರಿ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿ.ಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಒಟ್ಟು 95 ವಿದ್ಯಾರ್ಥಿಗಳು ಹಾಜರಾಗಿದ್ದರು. ಬಿಎಡ್ ಪರೀಕ್ಷೆ ಮುಗಿದು ಎಂಟು ದಿನಗಳಲ್ಲಿ ಮತ್ತು ಮೌಲ್ಯಮಾಪನ ಪೂರ್ಣವಾಗಿ ಒಂದು ದಿನದಲ್ಲಿ ಅತೀ ಶೀಘ್ರವಾಗಿ ಪ್ರಕಟಿಸಿದ ಹಿರಿಮೆಗೆ ಪಾತ್ರವಾಗಿದೆ ಕೊಡಗು ವಿಶ್ವವಿದ್ಯಾಲಯ.

ಕೊಡಗು ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆಯನ್ನು ಘಟಕ ಮಹಾವಿದ್ಯಾಲಯವಾಗಿರುವ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಕಾಲೇಜಿನಲ್ಲಿ ವ್ಯವಸ್ಥಿತವಾಗಿ ಮೌಲ್ಯಮಾಪನ ಕೇಂದ್ರವನ್ನು ಸಿದ್ಧಪಡಿಸಿಕೊಂಡು, ಜಿಲ್ಲೆಯ ವಿವಿಧ ಸ್ನಾತಕ ಪದವಿ ಕಾಲೇಜುಗಳ ವಿಷಯವಾರು ಮೌಲ್ಯಮಾಪಕರು ಸಕ್ರಿಯವಾಗಿ ಭಾಗವಹಿಸಿ ಮೌಲ್ಯಮಾಪನ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.

ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUMS) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಬಿಎಡ್ ಮತ್ತು ಸ್ನಾತಕ ಪದವಿ ವಿದ್ಯಾರ್ಥಿಗಳು ಪರೀಕ್ಷಾ ಫಲಿತಾಂಶವನ್ನು UUCMS ಅಥವಾ ಕೊಡಗು ವಿಶ್ವವಿದ್ಯಾಲಯದ ವೆಬ್‌ಸೈಟ್ KUK.Karnataka.gov.in ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮೂಲಕ ನೋಡಲು ಲಭ್ಯವಿದೆ.

ಇದೇ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಆದ ಡಾ. ಸುರೇಶ್ ಎಂ., ಕೊಡಗು ವಿವಿ ಪರೀಕ್ಷಾಂಗದ ವಿಶೇಷಾಧಿಕಾರಿ ದ ಪ್ರೊ. ರವಿಶಂಕರ್ ಎಂ ಎನ್, uucms ಸಿಬ್ಬಂದಿಗಳು ಮತ್ತು ಉಪನ್ಯಾಸಕರುಗಳು ಉಪಸ್ಥಿತರಿದ್ದರು.

Continue Reading

Kodagu

ಕರ್ನಾಟಕ ಒನ್ ಕೇಂದ್ರ ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಮರು ಅರ್ಜಿ ಆಹ್ವಾನ

Published

on

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಮರು ಅರ್ಜಿ ಆಹ್ವಾನಿಸಲಾಗಿದೆ.

ಪ್ರಸ್ತುತ ಕುಶಾಲನಗರ(ಟಿಎಂಸಿ), ಮಡಿಕೇರಿ(ಸಿಎಂಸಿ) ಮತ್ತು ಪೊನ್ನಂಪೇಟೆ(ಟಿಪಿ) ಈ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೇಂದ್ರವನ್ನು ತೆರೆಯಲು ಇಡಿಸಿಎಸ್ ನಿರ್ದೇಶನಾಲಯದಿಂದ ಅವಕಾಶ ಕಲ್ಪಿಸಿರುತ್ತಾರೆ.
ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/Franchiseeterms ಲಿಂಕ್‌ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಹಾಯವಾಣಿ ಸಂಖ್ಯೆ : 080-24410574(ಸರ್ಕಾರಿ ರಜೆಯನ್ನು ಹೊರತು ಪಡಿಸಿ 10 ರಿಂದ 6 ಗಂಟೆಯವರೆಗೆ) ಇ-ಮೇಲ್ [email protected] ಪ್ರಾಂಚೈಸಿ ಸ್ಥಾಪನೆಗಾಗಿ ಅರ್ಜಿಯನ್ನು ಫೆಬ್ರವರಿ, 16 ರಿಂದ ಮಾರ್ಚ್, 02 ರವರೆಗೆ ಪ್ರತಿದಿನ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಲ್ಲಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ತಿಳಿಸಿದ್ದಾರೆ.

Continue Reading

Trending

error: Content is protected !!