Connect with us

Hassan

ಕುಂಭೇನಹಳ್ಳಿ ಗ್ರಾಮದಲ್ಲಿ 35 ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಆಚರಣೆ

Published

on

ಶ್ರವಣಬೆಳಗೊಳ: ಕನ್ನಡ ನಾಡು ಉದಯವಾಗಿ 71 ವಸಂತಗಳನ್ನು ಪೂರೈಸಿರುವ ಅಂಗವಾಗಿ, ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಈ ಆಚರಣೆಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಕುಂಭೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಘು ಕದಂಬ ಹೇಳಿದರು.

ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಕುಂಭೇನಹಳ್ಳಿ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀ ಸಂಜೀವಿನಿ ಆಂಜನೇಯ ಸ್ವಾಮಿ ಓಕುಳಿ ಕಾರ್ಯಕ್ರಮದ ಅಂಗವಾಗಿ ಸಂಪ್ರದಾಯದಂತೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವವನ್ನು ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಳೆದ 35 ವರ್ಷಗಳಿಂದ ನಿರಂತರವಾಗಿ ಗ್ರಾಮದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ವಿಶೇಷವಾಗಿದ್ದು, ತಾಲ್ಲೂಕಿನಲ್ಲಿ ಕಾಂತರಾಜಪುರ ಗ್ರಾಮವನ್ನು ಹೊರತುಪಡಿಸಿದರೆ, ಕುಂಭೇನಹಳ್ಳಿ ಗ್ರಾಮದಲ್ಲಿ ಕಳೆದ 35 ವರ್ಷಗಳಿಂದ ಗ್ರಾಮಸ್ಥರೆಲ್ಲ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ಗ್ರಾಮದ ಕನ್ನಡಾಭಿಮಾನಕ್ಕೆ ಸಾಕ್ಷಿಯಾಗಿದೆ ಎಂದರು.

ಗ್ರಾಮದ ನಿವೃತ್ತ ಶಿಕ್ಷಕ ದೇವರಾಜ್ ಹಾಗೂ ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಮಾಯಣ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಇಬ್ಬರಿಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖಂಡರು, ಗ್ರಾಮಸ್ಥರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

ವರದಿ ನಾಗೇಂದ್ರ ರಾಯ

Continue Reading

Hassan

ಗೊಲ್ಲರ ಹೊಸಹಳ್ಳಿಯಲ್ಲಿ ಆನಂದಗೌಡ(ಎಜಿ) ಕಪ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಬಾಲಕೃಷ್ಣ ಚಾಲನೆ

Published

on

ಚನ್ನರಾಯಪಟ್ಟಣ : ಯುವಕರು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತುಬದ್ಧ ಜೀವನ ನಡೆಸಬೇಕೆಂದು ಶಾಸಕ ಸಿ‌.ಎನ್. ಬಾಲಕೃಷ್ಣ ತಿಳಿಸಿದರು.

ಕಸಬಾ ಹೋಬಳಿಯ ಗೊಲ್ಲರಹೊಸಹಳ್ಳಿ ಗ್ರಾಮದಲ್ಲಿ ಗುರುವಾರದಂದು ಸಮಾಜ ಸೇವಕ ಹಾಗೂ”ಅವಾ ಸಲ್ಯೂಷನ್ಸ್ ” ನ ಮ್ಯಾನೇಜಿಂಗ್ ಡೈರೆಕ್ಟರ್ ಆದ ಆನಂದ್ ಗೌಡ ರವರು ಆಯೋಜಿಸಿದ್ದ ಎಜೆ ಕಪ್ ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಸತ್ಪ್ರಜೆಗಳಾದ ಯುವಕರು ಮಾದಕ ವ್ಯಸನಕ್ಕೆ ಬಲಿಯಾಗಬಾರದು.

ಯುವಕರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಕನಿಷ್ಠ ಒಂದು ಗಂಟೆಯಾದರೂ ವ್ಯಾಯಾಮ ಮಾಡಬೇಕು, ಶಿಸ್ತು ಬದ್ಧ ಜೀವನ ರೂಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು.


ತಾಲೂಕಿನ ಕಸಬಾ ಹೋಬಳಿಯ ನಾಲ್ಕು ಗ್ರಾಮ ಪಂಚಾಯಿತಿಗಳಾದ ದಿಂಡಗೂರು, ಕಲ್ಕೆರೆ, ಗುಲಸಿಂದ ಮತ್ತು ಬ್ಯಾಡರಹಳ್ಳಿ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಕ್ರೀಡಾಪಟುಗಳಿಗೆ ಈ ಒಂದು ಕ್ರಿಕೆಟ್ ಪಂದ್ಯಾವಳಿ ತುಂಬಾ ಸಹಕಾರಿಯಾಗಿದೆ ಈ ಭಾಗದ ಕ್ರೀಡಾಪಟುಗಳು ಉತ್ತಮವಾಗಿ ಆಟವಾಡಿ ಮುಂದಿನ ಹೆಚ್ಚು ಅವಕಾಶಗಳು ಸಿಗುವಂತಾಗಲಿ ಎಂದು ಶುಭ ಹಾರೈಸಿದರು.
ತಾಲೂಕಿನ ಬಹುತೇಕ ಎಲ್ಲಾ ಗ್ರಾಮಗಳಿಗೂ ರಸ್ತೆ ಅಭಿವೃದ್ಧಿಪಡಿಸಿದ್ದು ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಲಾಗುವುದು.

ಉದ್ಯಮಿ ಆನಂದ ಗೌಡ ಮಾತನಾಡಿ ಕಸಬಾ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉತ್ತಮ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಲಿ ಎನ್ನುವ ಕಾರಣಕ್ಕಾಗಿ ಈ ಪಂದ್ಯಾವಳಿಯನ್ನು ಆ ಯೋಜನೆ ಮಾಡಿ ಸದ್ಯ ನಾಲ್ಕು ಪಂಚಾಯಿತಿಯ ವ್ಯಾಪ್ತಿಯ ಕ್ರೀಡಾಪಟುಗಳಿಗಾಗಿ ಈ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಎಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರಿಕೆಟ್ ಮತ್ತು ಕಬ್ಬಡ್ಡಿ ಸಂಬಂಧಿಸಿದ ಕ್ರೀಡಾಪಟುಗಳಿಗಾಗಿ ಕ್ರೀಡಾಪಂದ್ಯಗಳನ್ನು ಆಯೋಜನೆ ಮಾಡಿ ಪ್ರೋತ್ಸಾಹಿಸಲಾಗುವುದು ಎಂದರು.

ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ಒಟ್ಟು ಒಂಬತ್ತು ತಂಡಗಳು ಭಾಗವಹಿಸಿದ್ದು ಇಂದಿನಿಂದ ಮೂರು ದಿನಗಳವರೆಗೆ ನಡೆಯುತ್ತದೆ ಭಾನುವಾರದಂದು ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯ ನಡೆಯಲಿದೆ ಪ್ರತಿ ಪಂದ್ಯ ಆರು ಓವರ್ ಗಳಿಗೆ ಸೀಮಿತವಾಗಿರುತ್ತದೆ 9 ತಂಡದ ಆಟಗಾರರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಮುಬಾರಕ್ ಪಠಾಣ್
ಕಸಬಾ ಸೊಸೈಟಿ ಅಧ್ಯಕ್ಷ ಶ್ರೀನಿವಾಸ
ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾಗೇಶ್, ಮುಖಂಡರಾದ ಗಂಗಾಧರ ,ಕೆಂಬಾಳ್ ಚಂದ್ರು ರಾಜಣ್ಣ, ಗೌಸ್, ನಾಲ್ಕು ಪಂಚಾಯಿತಿ ವ್ಯಾಪ್ತಿಗಳಿಂದ ಆಗಮಿಸಿದ್ದ 9 ತಂಡದ ಕ್ರಿಕೆಟ್ ಕ್ರೀಡಾಪಟುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ವರದಿ ದಯಾನಂದ ಶೆಟ್ಟಿಹಳ್ಳಿ

Continue Reading

Hassan

ವಿದೇಶದ ರೈಲು ವ್ಯವಸ್ಥೆ ಕಂಡು ಬೆರಗಾಗಿದ್ದೆ- ಇಂದು ನಮ್ಮೂರಲ್ಲೇ ವಂದೇ ಭಾರತ್ ಸಂಚಾರ: ಶಾಸಕ ಸಿಮೆಂಟ್ ಮಂಜು

Published

on

ಸಕಲೇಶಪುರ: ಸಕಲೇಶಪುರ ರೈಲ್ವೆ ನಿಲ್ದಾಣವನ್ನು ಆಧುನಿಕ ಸೌಲಭ್ಯಗಳೊಂದಿಗೆ ಅಭಿವೃದ್ಧಿಪಡಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಶಾಸಕ ಸಿಮೆಂಟ್ ಮಂಜು ಸಲ್ಲಿಸಿದ್ದ ಮನವಿಗೆ ಫಲ ದೊರೆತಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ₹26.56 ಕೋಟಿ ವೆಚ್ಚದಲ್ಲಿ ನಿಲ್ದಾಣವನ್ನು ಆಧುನೀಕರಿಸಲಾಗಿದ್ದು, ಸಕಲೇಶಪುರದ ರೈಲ್ವೆ ಇತಿಹಾಸದಲ್ಲಿ ಇದೊಂದು ಮಹತ್ವದ ಮೈಲಿಗಲ್ಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.


ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದ ಅಮೃತ್ ಭಾರತ್ ನಿಲ್ದಾಣ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದೇಶದ ರೈಲು ವ್ಯವಸ್ಥೆಯೊಂದಿಗಿನ ತಮ್ಮ ಅನುಭವವನ್ನು ಹಂಚಿಕೊಂಡು, ಸಕಲೇಶಪುರಕ್ಕೆ ದೊರೆತಿರುವ ಆಧುನಿಕ ರೈಲ್ವೆ ಸೌಲಭ್ಯಗಳ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ವಿದೇಶ ಪ್ರವಾಸದ ಸಂದರ್ಭದಲ್ಲಿ ಪ್ಯಾರಿಸ್‌ನಿಂದ ಸ್ವಿಟ್ಜರ್‌ಲ್ಯಾಂಡ್‌ನ ಜ್ಯೂರಿಕ್‌ಗೆ ರೈಲಿನಲ್ಲಿ ಪ್ರಯಾಣಿಸಿದ್ದೆ. ಅಲ್ಲಿನ ಅತ್ಯಾಧುನಿಕ ರೈಲು ವ್ಯವಸ್ಥೆಯನ್ನು ಕಂಡಾಗ ಇಂತಹ ಸೌಲಭ್ಯ ನಮ್ಮ ದೇಶದಲ್ಲೂ ಯಾವಾಗ ದೊರೆಯಬಹುದು ಎಂಬ ಆಲೋಚನೆ ಮೂಡಿತ್ತು. ಆದರೆ ಇಂದು ದೇಶದಲ್ಲಿಯೇ ಅತ್ಯಾಧುನಿಕ ರೈಲು ಸೇವೆಗಳು ಆರಂಭವಾಗಿದ್ದು, ಸಕಲೇಶಪುರದಂತಹ ತಾಲೂಕಿಗೂ ವಂದೇ ಭಾರತ್ ರೈಲು ಸಂಚಾರದ ಸೌಲಭ್ಯ ದೊರೆತಿರುವುದು ಹೆಮ್ಮೆಯ ಸಂಗತಿ ಎಂದರು.

ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುವಾಗ ವಿಮಾನದಲ್ಲಿ ಸಂಚರಿಸಿದ ಅನುಭವವಾಗುತ್ತದೆ. ನಮ್ಮ ಮಕ್ಕಳು, ಯುವಜನರು ಇಂತಹ ಅತ್ಯಾಧುನಿಕ ರೈಲುಗಳಲ್ಲಿ ಪ್ರಯಾಣಿಸುವ ಅವಕಾಶ ಪಡೆದಿರುವುದು ಸಂತಸದ ವಿಚಾರ. ಸಕಲೇಶಪುರ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ರೈಲ್ವೆ ಸಚಿವರು ಹಾಗೂ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರೈಲ್ವೆ, ಸಾರಿಗೆ, ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಶ ಪ್ರಗತಿ ಸಾಧಿಸುತ್ತಿದೆ. ವಿಕಸಿತ ಭಾರತದ ಸಂಕಲ್ಪದೊಂದಿಗೆ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಯುವಜನರಲ್ಲಿ ದೇಶ ಮೊದಲು ಎಂಬ ಮನೋಭಾವ ಬೆಳೆದಾಗ ಮಾತ್ರ ರಾಷ್ಟ್ರದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಬ್ರಿಟಿಷರ ಕಾಲದ ಇತಿಹಾಸ ಹೊಂದಿರುವ ಸಕಲೇಶಪುರ ರೈಲ್ವೆ ನಿಲ್ದಾಣಕ್ಕೆ ಇದೀಗ ಆಧುನಿಕ ಸ್ಪರ್ಶ ದೊರೆತಿದೆ. ಪ್ರಕೃತಿಯ ಸೌಂದರ್ಯದ ನಡುವೆ ಇರುವ ಸಕಲೇಶಪುರದ ಪ್ರವಾಸಿ ಆಕರ್ಷಣೆಗೆ ನಿಲ್ದಾಣದ ಅಭಿವೃದ್ಧಿಯೂ ಹೊಸ ಮೆರುಗು ನೀಡಿದೆ. ನಿಲ್ದಾಣದ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಛಾಯಾಚಿತ್ರಗಳನ್ನು ತೆಗೆಸಿಕೊಳ್ಳಲು ಜನರು ಆಸಕ್ತಿಯಿಂದ ಆಗಮಿಸುವ ವಾತಾವರಣ ನಿರ್ಮಾಣವಾಗಿದೆ ಎಂದರು.

ಸಕಲೇಶಪುರದಿಂದ ಸುಬ್ರಹ್ಮಣ್ಯ ರಸ್ತೆವರೆಗೆ ಸುಮಾರು ₹100 ಕೋಟಿ ವೆಚ್ಚದಲ್ಲಿ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದ ಈ ಭಾಗದ ರೈಲು ಸಂಚಾರ ವ್ಯವಸ್ಥೆ ಮತ್ತಷ್ಟು ಸುಧಾರಿಸಲಿದೆ ಎಂದು ತಿಳಿಸಿದರು.

ಯಶವಂತಪುರದಿಂದ ಬೆಳಿಗ್ಗೆ 7.35ಕ್ಕೆ ಹೊರಡುವ ರೈಲು ವಾರದಲ್ಲಿ ಆರು ದಿನ ಸಂಚರಿಸಲಿದ್ದು, ಬೆಳಿಗ್ಗೆ 10ರಿಂದ 10.30ರ ವೇಳೆಗೆ ಸಕಲೇಶಪುರ ತಲುಪಲಿದೆ. ರಾತ್ರಿ 8.30ರ ಸುಮಾರಿಗೆ ಗೋವಾದ ಮಡಗಾಂವ್ ತಲುಪುವ ನಿರೀಕ್ಷೆಯಿದೆ. ಸುಮಾರು 12ರಿಂದ 13 ಗಂಟೆಗಳಲ್ಲಿ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಲು ಅವಕಾಶವಿದ್ದು, ವಿಮಾನ ಪ್ರಯಾಣಕ್ಕೆ ಹೋಲಿಸಿದರೆ ರೈಲು ಪ್ರಯಾಣದ ವೆಚ್ಚ ಕಡಿಮೆ ಇರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಭವಿಷ್ಯದಲ್ಲಿ ದೇಶದಲ್ಲಿ ಬುಲೆಟ್ ರೈಲು ಸಂಚಾರವೂ ಆರಂಭವಾಗಲಿದ್ದು, ಅದನ್ನು ಕಣ್ತುಂಬಿಕೊಳ್ಳುವ ಅವಕಾಶ ನಮಗೂ ದೊರೆಯಲಿ. ಭಾರತವು ಜಗತ್ತಿನ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಮುಂಚೂಣಿಗೆ ಬರಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.

ಇಂಟರ್‌ಸಿಟಿ ರೈಲು ವಿಸ್ತರಣೆಗೆ ಮನವಿ

ಬೆಂಗಳೂರಿನಿಂದ ಹಾಸನಕ್ಕೆ ಸಂಚರಿಸುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೆ ವಿಸ್ತರಿಸುವಂತೆ ಈಗಾಗಲೇ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ರೈಲು ನಿಲುಗಡೆಗೆ ಹೆಚ್ಚುವರಿ ರೈಲು ಮಾರ್ಗದ ಅವಶ್ಯಕತೆ ಇದ್ದು, ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರೈಲ್ವೆ ಇಲಾಖೆಯ ಶಮದ್ ಹಮೀದ್, ಬಿಜೆಪಿ ಹಿರಿಯ ಮುಖಂಡ ರಾಮಚಂದ್ರೇಗೌಡ, ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿಯ ನಾರಾಯಣ ಆಳ್ವ, ಹಿಂದೂ ಹಿತ ರಕ್ಷಣಾ ವೇದಿಕೆಯ ರಘು ಸಕಲೇಶಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜ್‌ಕುಮಾರ್, ತಾಲೂಕು ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಬಬಿತಾ ವಿಶ್ವನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

Hassan

ಪ್ರೀತಂ ಜೆ. ಗೌಡ ಜನ್ಮದಿನ: ನಾಳೆ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮ

Published

on

ಹಾಸನ: ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಪೌರಕಾರ್ಮಿಕರು ಹಾಗೂ ಸೈನಿಕರಿಗೆ ಸನ್ಮಾನ,  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರ ಜನ್ಮದಿನದ ಅಂಗವಾಗಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಅಭಿಮಾನಿಗಳ ಬಳಗ ಹಾಗೂ ಬಿಜೆಪಿ ಯುವ ಮೋರ್ಚಾ ವತಿಯಿಂದ ನಾಳೆ (ನ.14) ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಮಿತ್ ಗೌಡ ತಿಳಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಹೇಮಾವತಿ ಪ್ರತಿಮೆ ಸಮೀಪದ ಕಾರ್ ಶೆಡ್‌ನಲ್ಲಿ ಬೆಳಿಗ್ಗೆ ಕಾರ್ಯಕ್ರಮಗಳು ಆರಂಭವಾಗಲಿದ್ದು, ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ದೇಶದ ಸೈನಿಕರು ಹಾಗೂ ಪೌರಕಾರ್ಮಿಕರನ್ನು ಸನ್ಮಾನಿಸಲಾಗುವುದು. ನಿರ್ಗತಿಕರಿಗೆ ಕಂಬಳಿ ಮತ್ತು ಊಟ ವಿತರಣೆ, ಸರ್ಕಾರಿ ಶಾಲಾ ಮಕ್ಕಳಿಗೆ ಹಾಗೂ ಅಂಧ ಮಕ್ಕಳಿಗೆ ಶಾಲಾ ಸಾಮಗ್ರಿಗಳನ್ನು ವಿತರಿಸಲಾಗುವುದು. ವಯೋವೃದ್ಧರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.


ಹಾಸನಾಂಬ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ನಗರವನ್ನು ಸ್ವಚ್ಛವಾಗಿಡಲು ಶ್ರಮಿಸಿದ ಪೌರಕಾರ್ಮಿಕರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆಯನ್ನು ಗುರುತಿಸಿ ಗೌರವಿಸಲಾಗುವುದು. ಕಳೆದ ಐದು ವರ್ಷಗಳಿಂದ ಪ್ರೀತಂ ಜೆ. ಗೌಡ ಅಭಿಮಾನಿಗಳ ಬಳಗವು ಜನ್ಮದಿನದ ಅಂಗವಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದೆ. ಪ್ರತಿವರ್ಷ ವಿಭಿನ್ನ ಪರಿಕಲ್ಪನೆಯೊಂದಿಗೆ ಸೇವಾ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು. ಇದರೊಂದಿಗೆ ಹಾಸನ ಜಿಲ್ಲೆಯ ವಿವಿಧ ಗ್ರಾಮಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅನ್ನದಾಸೋಹ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಭಿಮಾನಿಗಳು ತಮ್ಮ ಶಕ್ತ್ಯಾನುಸಾರ ಆಯೋಜಿಸಿದ್ದಾರೆ ಎಂದು ಮಾಹಿತಿ ನೀಡಿದರು.


ಹಾಸನ ವಿಧಾನಸಭಾ ಕ್ಷೇತ್ರದ ಜನತೆ, ಜಿಲ್ಲೆಯ ಪ್ರೀತಂ ಜೆ. ಗೌಡ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಅಮಿತ್ ಗೌಡ, ಪ್ರಧಾನ ಕಾರ್ಯದರ್ಶಿ ಮನು ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿತು, ಯುವ ಮೋರ್ಚಾ ನಗರಾಧ್ಯಕ್ಷ ರಾಕೇಶ್ ಎಚ್. ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ ಬಿ. ವೇದಾವತಿ ಸೇರಿದಂತೆ ಟೀಂ ಪ್ರೀತಂ ಜೆ. ಗೌಡ ಸದಸ್ಯರು ಉಪಸ್ಥಿತರಿದ್ದರು.

Continue Reading

Trending

error: Content is protected !!