ಬೆಂಗಳೂರು/ಮಂಗಳೂರು: ಧರ್ಮಸ್ಥಳ ವಿಚಾರದಲ್ಲಿ ಅಪಪ್ರಚಾರ ಮಾಡಲು ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ ಹರಿದುಬಂದಿದೆ ಎಂಬ ಆರೋಪಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೇಂದ್ರ ಗೃಹ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪತ್ರ ಬರೆದಿರೋ ಬೆನ್ನಲ್ಲೇ ದಾಖಲೆಗಳ ಪರಿಶೀಲನೆ ಮಾಡುವಂತೆ ಜಾರಿ ನಿರ್ದೇಶನಾಲಯಕ್ಕೆ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹೀಗಾಗಿ, ಬೆಂಗಳೂರಿನ ಇ.ಡಿ.ಅಧಿಕಾರಿಗಳು ಈಗ ಯೂಟ್ಯೂಬರ್‌ಗಳ ಆದಾಯದ ಮೂಲ ಕೆದಕಲು ಮುಂದಾಗಿದ್ದಾರೆ.
ಈ ಕುರಿತು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದು, ದೇವಸ್ಥಾನದ ಪಾವಿತ್ರ್ಯತೆ ಉಳಿಸುವ ಸಲುವಾಗಿ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾವುದೇ ವ್ಯಕ್ತಿಗತವಾಗಿ ನಾನು ಪತ್ರ ಬರೆದಿಲ್ಲ ಎಂದಿದ್ದಾರೆ.

ಇನ್ನೂ, ಶಾಸಕ ಭರತ್ ಶೆಟ್ಟಿ ಮಾತಾಡಿ, ಎನ್‌ಐಎ ಅಥವಾ ಇಡಿ ತನಿಖೆಯಾದರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಎಂದು ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಯೂಟ್ಯೂಬರ್ ಸಮೀರ್ ವಿರುದ್ಧ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಎಸ್‌ಪಿಗೆ ದೂರು ನೀಡಿದ್ದಾರೆ. ಮತ್ತೊಂದು ಭಜರಂಗದಳ ಕಾರ್ಯಕರ್ತ ತೇಜಸ್ ಗೌಡ ಸಹ ಡಿಜಿ ಕಚೇರಿಯಲ್ಲಿ ಸಮೀರ್ ವಿರುದ್ಧ ದೂರು ದಾಖಲಿಸಿದ್ದಾರೆ.


