Deficiency
ನಾಳೆ ಕರ್ನಾಟಕ ಬಂದ್: ಏನಿರುತ್ತೆ? ಏನಿರಲ್ಲ?
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ರಾಜ್ಯ ಸರ್ಕಾರ ನಿಲ್ಲಿಸಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರಕ್ಕೆ ತಡೆಯೊಡ್ಡುವುದಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಬೆದರಿಕೆ ಹಾಕಿದ್ದಾರೆ.
20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಮೂರನೇ ಬಂದ್ ಇದಾಗಿದೆ. ಮೊದಲನೆಯ ಬಂದ್ ಸೆಪ್ಟೆಂಬರ್ 11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಕರೆ ನೀಡಿದ್ದಾಗಿತ್ತು. ಎರಡನೆಯದು ಸೆಪ್ಟೆಂಬರ್ 26 ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಆಚರಿಸಿತು.

ಕರ್ನಾಟಕ ಬಂದ್ ದಿನ ಏನೇನಿರಲ್ಲ?
ಓಲಾ ಮತ್ತು ಉಬರ್ ಸೇವೆಗಳು
ಆಟೋರಿಕ್ಷಾಗಳು
ಕಾರ್ಮಿಕ ಆಧಾರಿತ ಕೆಲಸಗಳು
ಟ್ರಕ್ ಸಾರಿಗೆ
ಮಾರುಕಟ್ಟೆಗಳು
ಬೀದಿ ವ್ಯಾಪಾರಿಗಳು
ಹೋಟೆಲ್ ಗಳು
ಚಿತ್ರಮಂದಿರಗಳು
ಮಾಲ್ ಗಳು
ಖಾಸಗಿ ಬಸ್ಸುಗಳು
ಬೇಕರಿಗಳು
ಕರ್ನಾಟಕ ಬಂದ್ ದಿನ ಏನೇನಿರುತ್ತವೆ?
ಆಸ್ಪತ್ರೆ
ಔಷಧಾಲಯಗಳು
ಆಂಬ್ಯುಲೆನ್ಸ್ ಸೇವೆಗಳು
ಮೆಟ್ರೋ ಸೇವೆ
ಹಾಲಿನ ಪಾರ್ಲರ್ ಗಳು
ಇನ್ನೂ ನಿರ್ಧಾರವಾಗದೇ ಇರುವುದು.ಶಾಲೆ ಮತ್ತು ಕಾಲೇಜುಗಳು ಬಿಎಂಟಿಸಿ ಮತ್ತು KSRTC ಬಸ್ ಸೇವೆಗಳು
18 ದಿನಗಳ ಕಾಲ ತಮಿಳುನಾಡಿಗೆ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ರಾಜ್ಯಕ್ಕೆ ಮತ್ತೊಮ್ಮೆ ಆದೇಶ ನೀಡಿರುವುದರಿಂದ ಪ್ರತಿಭಟನೆಯು ಬೆಂಗಳೂರು ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಸಾಮಾನ್ಯ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಆದೇಶವನ್ನು ಕರ್ನಾಟಕ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ
ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು
ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ
ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ
ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
State19 hours agoಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ
-
Kodagu23 hours agoದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ
-
Hassan21 hours agoಜಿಲ್ಲಾಧಿಕಾರಿಯ ಆದೇಶವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳಿಂದ ತಹಸೀಲ್ದಾರ್ಗೆ ಮನವಿ
-
Hassan2 hours ago2025-26ರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ : ಫುಟ್ಬಾಲ್ನಲ್ಲಿ ಹಾಸನ ಜಿಲ್ಲೆಗೆ ರನ್ನರ್-ಅಪ್ ಗೌರವ
-
Mysore8 hours agoಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ .
-
Chamarajanagar20 hours agoಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ಜೀವಿತ ಪ್ರಮಾಣ ಪತ್ರ ಸಲ್ಲಿಸಲು ಮನವಿ
-
Hassan55 minutes ago“ರಾಜ್ಯದ ಸಾಲ ₹10 ಲಕ್ಷ ಕೋಟಿ ತಲುಪಲಿದೆ”: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
-
Kodagu22 hours agoಬೇಡು ಹಬ್ಬ : ಮದ್ಯ ಮಾರಾಟ ನಿಷೇಧ
