Mandya
ಶ್ರೀರಾಮನ ಪಟ್ಟಾಭಿಷೇಕ ಹಿನ್ನೆಲೆ ಹೋಳಿ ಆಚರಿಸಿ ಕಾವೇರಿ ನದಿಯಲ್ಲಿ ಸ್ನಾನ
ಶ್ರೀರಂಗಪಟ್ಟಣ: ಪಟ್ಟಣದ ಪೂರ್ಣಯ್ಯ ಬೀದಿಯಲ್ಲಿನ ಶ್ರೀ ಪಟ್ಟಾಭಿ ರಾಮನ ದೇವಾಲಯದಲ್ಲಿ ಶ್ರೀರಾಮನ ಪಟ್ಟಾಭಿಷೇಕದ ಅಂಗವಾಗಿ ವಿಶೇಷ ಪೂಜೆಗಳು ಜರುಗಿ, ಹೋಳಿ ಆಚರಣೆ ಮೂಲಕ ಇಲ್ಲಿನ ನಿವಾಸಿಗಳು ಸಂಭ್ರಮಿಸಿದರು.
ವೇಧ ಬ್ರಹ್ಮ ಡಾ.ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಇಲ್ಲಿನ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪಟ್ಟಾಭಿಷೇಕ ಶಾಸ್ತ್ರೋತ್ರವಾಗಿ ನೆರೆವೇರಿಸಲಾಯಿತು.

ಶ್ರೀರಾಮನ ಪಟ್ಟಾಭಿಷೇಕ ಪೂಜಾ ಕಾರ್ಯಕ್ರಮದಲ್ಲಿ ಬೀದಿಯ ಎಲ್ಲಾ ನಿವಾಸಿಗಳು ಹಾಗೂ ಶ್ರೀ ರಾಮನ ಭಕ್ತರು ಭಾಗವಹಿಸಿ ಸಂಭ್ರಮಿಸಿದರು.
ಬಳಿಕ ಶ್ರೀರಾಮನ ಉತ್ಸವ ಮೂರ್ತಿಯನ್ನು ಪಲ್ಲಕಿಯಲ್ಲಿ ಮೆರವಣಿಗೆ ನಡೆಸಿ ಸಂಭ್ರಮಿಸಿದ ಜನತೆ, ನಂತರ ಬಾಲರಾಮನನ್ನು ತೊಟ್ಟಿಲಲ್ಲಿ ಮಲಗಿಸಿ ಉಯ್ಯಾಲೆ ಮೂಲಕ ಬೀದಿಯಲ್ಲಿ ಮೆರವಣಿಗೆ ನಡೆಸಿ ಸಂಭ್ರಮದ ಹೋಳಿ ಆಚರಣೆ ಮಾಡಿದರು.
Mandya
ಮೂಲ ಸೌಕಾರ್ಯಗಳನ್ನು ಕಲ್ಪಿಸುವಂತೆ ಕೆ.ಎಂ.ಉದಯ್‌ಗೆ ಮನವಿ ಸಲ್ಲಿಸಿದ ಮಹಿಳೆಯರು
ಮದ್ದೂರು: ಕುಡಿಯುವ ನೀರು, ಸರ್ಕಾರಿ ಬಸ್ ಸೇರಿದಂತೆ ಮೂಲ ಸೌಕರ್ಯಗಳನ್ನು ಗ್ರಾಮಕ್ಕೆ ಕಲ್ಪಿಸುವಂತೆ ಶಾಸಕ ಕೆ.ಎಂ.ಉದಯ್‌ಗೆ ಮಹಿಳೆಯರು ಮನವಿ ಸಲ್ಲಿಸಿದರು.
ತಾಲೂಕಿನ ಅಂಕೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಅಭಿವೃದ್ಧಿ ಕಾಮಗಾರಿಗೆ ಆಗಮಿಸಿದ್ದ ವೇಳೆ ಮಹಿಳೆಯರು ಗ್ರಾಮದ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.

ಗ್ರಾಮಕ್ಕೆ ಸರ್ಕಾರಿ ಬಸ್ ಬರೋದಿಲ್ಲ. ಮನೆ ಬಳಕೆ ಹಾಗೂ ವ್ಯವಸಾಯ ಬಳಕೆಗೊಸ್ಕರ 1 ಸಾವಿರ ಅಡಿ ಬೋರ್ವೆಲ್ ಕೊರೆದರು ನೀರು ಬರುತ್ತಿಲ್ಲ. ಪಂಚಾಯಿತಿಯಿಂದ ಕುಡಿಯಲು ಹಾಗೂ ಮನೆ ಬಳಕೆಗೂ ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಬೇಸಿಗೆಗೂ ಮುನ್ನವೇ ಈ ರೀತಿ ತೊಂದರೆಯಾಗುತ್ತಿದ್ದು ನಾವು ಹೇಗೆ ಜೀವನ ಮಾಡೋದು ಎಂದು ಗ್ರಾಮದ ಮಹಿಳೆಯರು ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು.
ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಶಾಸಕ ಕೆ.ಎಂ. ಉದಯ್, ಮೂರು ತಿಂಗಳಲ್ಲಿ ಬನ್ನಹಳ್ಳಿ ಏತ ನೀರಾವರಿ ಯೋಜನೆ ಅಂತಿಮ ಘಟ್ಟಕ್ಕೆ ತಲುಪುತ್ತದೆ. ಹೀಗಾಗಿ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗುವುದು. ಗ್ರಾಮದ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ವೃದ್ಧಿಸಿದಾಗ ಬೋರ್ವೆಲ್ ನಲ್ಲಿ ನೀರು ಹರಿಯಲಿದ್ದು, ಆದಷ್ಟು ಬೇಗ ಕುಡಿಯುವ ನೀರು ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದರು.

ಗ್ರಾಮಕ್ಕೆ ಮೂಲ ಸೌಕರ್ಯ ಹಾಗೂ ಸಾರಿಗೆ ಬಸ್ ಸೌಲಭ್ಯಗಳಿಗೆ ಕೆಲ ದಿನಗಳಲ್ಲೇ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
Mandya
ಪ್ರಪಂಚದಲ್ಲಿ ಶಿಕ್ಷಣಕ್ಕೆ ಅಪಾರವಾದ ಶಕ್ತಿಯಿದೆ: ಕೆ.ಎಂ.ಉದಯ್
ಮದ್ದೂರು: ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಶಕ್ತಿ ಮೀರಿ ಶ್ರಮಿಸುತ್ತಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಅರುವನಹಳ್ಳಿ ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದ ಶಾಲೆಯ 2 ನೂತನ ಕಟ್ಟಡಗಳನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.

ಪ್ರಪಂಚದಲ್ಲಿ ಶಿಕ್ಷಣಕ್ಕೆ ಅಪಾರವಾದ ಶಕ್ತಿಯಿದ್ದು, ಇದನ್ನರಿತು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟು ಸತ್ಪ್ರಜೆಯಾಗುವ ಮೂಲಕ ಪಾಲಕರಿಗೆ ಹಾಗೂ ಶಿಕ್ಷಕರಿಗೆ ಕೀರ್ತಿ ತರಬೇಕೆಂದರು.
ಗ್ರಾಮದಲ್ಲಿ ಶತಮಾನದ ಶಾಲೆ ಎಂಬ ಹೆಗ್ಗಳಿಕೆಗೆ ಪತ್ರವಾಗಿದ್ದ ಶಾಲೆಯ ಕಟ್ಟಡ ಶಿಥಿಲವಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ 2 ಶಾಲಾ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟಿಸಲಾಗಿದೆ ಎಂದರು.
ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲೆ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರು ಸೇರಿದಂತೆ ಎಲ್ಲಾ ರೀತಿಯ ಸವಲತ್ತುಗಳು ಸಿಗುತ್ತದ್ದೆ . ಇದರ ಸದುಪಯೋಗವನ್ನು ಪಾಲಕರು ಮತ್ತು ಶಿಕ್ಷಕರು ಪಡೆದುಕೊಳ್ಳಬೇಕೆಂದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹಲವಾರು ವ್ಯಕ್ತಿಗಳು, ಅಧಿಕಾರಿಗಳು ಹಾಗೂ ವಿವಿಧ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಾಧನೆ ಮಾಡಿದ್ದಾರೆ. ಸರ್ಕಾರಿ ಶಾಲೆ ಎಂಬ ಕೀಳಿರಿಮೆ ಬಿಡಬೇಕು ಎಂದರು.
ಸರ್ಕಾರಿ ಶಾಲೆಗಳಿಗೆ ಈಗಾಗಲೇ ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ನೀಡುವ ಜತೆಗೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದಲ್ಲೂ ಶಿಕ್ಷಣ ಕ್ಷೇತ್ರಕ್ಕೆ ಅಗತ್ಯ ಸಹಕಾರ ನೀಡಲಾಗುತ್ತಿದೆ ಎಂದರು.
ಈ ಭಾಗದ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, ಕೆಲವೇ ದಿನಗಳಲ್ಲಿ ಬನ್ನಹಳ್ಳಿ ಏತ ನೀರಾವರಿ ಪೂರ್ಣಗೊಳಿಸಿ ರೈತರಿಗೆ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೂಳಗೆರೆಯ ಬಳಿ ವಿದ್ಯುತ್ ಸಬ್‌ಸ್ಟೇಷನ್ ಒಂದುವರೆ ಎಕರೆ ಜಮೀನಿನಲ್ಲಿ ಸುಮಾರು 16 ಕೋಟಿ ವೆಚ್ಚದಲ್ಲಿ ಶೀಘ್ರವಾಗಿ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಆಗುತ್ತಿರುವ ಸಮಸ್ಯೆ ದೂರವಾಗಿ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಅನುಕೂಲವಾಗಲಿದೆ ಎಂದರು.

ಬಿಇಓ ಧನಂಜಯ ಮಾತನಾಡಿ, ತಾಲೂಕಿನಲ್ಲಿ ಸಕರ್ಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕರು ಹೆಚ್ಚಿನ ಆಸ್ಥೆವಹಸಿ ಅತಿ ಹೆಚ್ಚು ಅನುದಾನ ಬಿಡುಗಡೆ ಮಾಡಿಸಿದ್ದಾರೆ ಎಂದರು.
ಸರ್ಕಾರದ ವತಿಯಿಂದ ತಾಲೂಕಿನಲ್ಲಿ 55 ಶಾಲೆ ಕೊಠಡಿ ನಿರ್ಮಾಣ ಮಾಡಿದ್ದಾರೆ ಜತೆಗೆ ಸಾಧ್ಯವಿರುವ ಕಡೆ ಕೊಠಡಿ ನವೀಕರಣಕ್ಕೆ ಮುಂದಾಗಿರುವುದು ಶ್ಲಾಘನೀಯವೆಂದು ಪ್ರಸಂಸೆ ವ್ಯಕ್ತಪಡಿಸಿದರು.
ತಹಸೀಲ್ದಾರ್ ಪರುಶುರಾಮ್ ಸತ್ತೇಗೆರೆ ಮಾತನಾಡಿ, ಗುಣಾತ್ಮಕ ಶಿಕ್ಷಣ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಇದನ್ನರಿತು ಕಠಿಣ ಪರಿಶ್ರಮಪಟ್ಟು ವ್ಯಾಸಂಗ ಮಾಡಿ ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಮುಖಂಡ ಸಿದ್ದರಾಜು ಮಾತನಾಡಿ, ಗ್ರಾಮದ ಸಮಗ್ರ ಅಭಿವೃದ್ಧಿಗೆ 2 ಕೋಟಿಗೂ ಅಧಿಕ ಅನುದಾನ ಕೊಟ್ಟಿರುವ ಶಾಸಕರಿಗೆ ಗ್ರಾಮಸ್ಥರು ಸದಾ ಋಣಿ ಆಗಿರುವುದಾಗಿ ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಶಾಸಕ ಕೆ.ಎಂ.ಉದಯ್ ಹಾಗೂ ಗಣ್ಯರನ್ನು ಗ್ರಾಮಸ್ಥರು ತೆರೆದವಾಹನಕ್ಕೆ ಪೂರ್ಣಕುಂಭ ಮೆರವಣಿಗೆ ಮೂಲಕ ವೇದಿಕೆ ಬಳಿ ಕರೆದುಕೊಂಡು ಬಂದಿದ್ದು ಗಮನ ಸೆಳೆಯಿತು.
ಗ್ರಾ.ಪಂ. ಅಧ್ಯಕ್ಷ ಕೆಂಪರಾಜು, ಸದಸ್ಯರಾದ ಮಾದೇಶ್ ಜಯರಾಮ್, ಮುಖಂಡರಾದ ಶ್ರೀನಿವಾಸ ಗೌಡ, ನಾಗರಾಜು, ಎ.ವಿ.ಗಿರೀಶ, (ಕೆಡಿಪಿ) ಸದಸ್ಯ ಸಿದ್ದರಾಜು, ಬಿಳಿಗೌಡ,ವೆಂಕಟೇಶ, ದೊಡ್ಡಿಸಿದ್ದಯ್ಯಾ, ಗೋವಿಂದ ರಾಜು, ಪದ್ಮಮ್ಮ, ಎಸ್ಡಿಎಂಸಿ ಅಧ್ಯಕ್ಷ ಅಶೋಕ ಹಾಗೂ ಗ್ರಾಮಸ್ಥರು ಹಾಜರಿದ್ದರು
Mandya
ಫೆ.15ಕ್ಕೆ ಭೈರವೈಕ್ಯ ಶ್ರೀಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ : ಬಸವರಾಜ್
ಮಂಡ್ಯ: ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಆಶ್ರಯದಲ್ಲಿ ಹಾಗೂ ಮಠದ ಪೀಠಾಧ್ಯಕ್ಷ ಡಾ.ನಿಶ್ಚಲಾನಂದನಾಥ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಭೈರವೈಕ್ಯ ಶ್ರೀಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರ ಅಭಿನಂದನಾ ಗ್ರಂಥ ಲೋಕಾರ್ಪಣೆ ಮತ್ತು ವಿವಿಧ ಸಾಮಾಜಿಕ ಸೇವಾ ಕಾರ್‍ಯಕ್ರಮಗಳನ್ನು ಫೆ.14 ಮತ್ತು 15 ರಂದು ಕೆಂಗೇರಿಯಲ್ಲಿನ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಬ್ರಿಗೇಡ್‌ನ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಾವಯವ ಸಂತೆ, ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ, ಉಚಿತ ಆರೋಗ್ಯ ತಪಾಸಣಾ ಶಿಬಿರ, ಸರ್ವ ಜನಾಂಗದ ವಧು-ವರರ ಮುಖಾ-ಮುಖಿ ಅನ್ವೇಷಣೆ, ಹಾಗೂ ಮಲೆನಾಡು ಗಿಡ್ಡಗಳ ಉಚಿತ ವಿತರಣೆ ಮಾಡಲಾಗುವುದು ಎಂದರು.

ಫೆ.14 ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭವು ನಡೆಯಲಿದ್ದು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ.ಡಾ.ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ, ಕೈಲಾಸಾಶ್ರಮ ಮಹಾ ಸಂಸ್ಥಾನದ ಶ್ರೀ ಜಯೇಂದ್ರಪುರಿ ಮಹಾಸ್ವಾಮೀಜಿ ಘನ ಸಾನಿಧ್ಯವನ್ನು ಹಾಗೂ ಚಂದ್ರವನ ಆಶ್ರಮದ ಶ್ರೀಡಾ.ತ್ರಿನೇಂದ್ರ ಮಹಾಂತ ಶಿವಯೋಗಿ ಸ್ವಾಮೀಜಿ, ಸಾಲೂರು ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಕುಂಚಟಿಗರ ಮಹಾಸಂಸ್ಥಾನ ಮಠದ ಹನುಮಂತನಾಥ ಮಹಾಸ್ವಾಮೀಜಿ, ಸಾಯಿ ಸಂಸ್ಥಾನದ ಗುರುಮೂರ್ತಿ ಗುರೂಜಿ ಸಾನಿಧ್ಯ ವಹಿಸುವರು.
ಕಂದಾಯ ಸಚಿವ ಕೃಷ್ಣಬೈರೇಗೌಡ ಕಾರ್‍ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅಧ್ಯಕ್ಷತೆ ವಹಿಸುವರು. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂಸ್ಮರಣಾ ಗ್ರಂಥ ಲೋಕಾರ್ಪಣೆ ಮಾಡಲಿದ್ದು, ಕುಣಿಗಲ್ ಶಾಸಕ ಮಲೆನಾಡು ಗಿಡ್ಡಗಳ ವಿತರಣೆ ಮಾಡುವರು, ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಸಾವಯವ ಸಂತೆಯನ್ನು, ಮಾಜಿ ಸಚಿವ, ಶಾಸಕ ಎಸ್.ಟಿ.ಸೋಮಶೇಖರ್ ಆರೋಗ್ಯ ತಪಾಸಣಾ ಶಿಬಿರ, ಮಂಡ್ಯ ಶಾಸಕ ಪಿ.ರವಿಕುಮಾರ್ ಗೌಡ ಅವರು ರಾಜ್ಯ ಮಟ್ಟದ ಸರ್ವ ಜನಾಂಗದ ವಧು ವರರ ಸಮಾವೇಶ ಉದ್ಘಾಟಿಸಲಿದ್ದಾರೆ. ವೇದಿಕೆಯಲ್ಲಿ ಹಲವು ಗಣ್ಯರು ಭಾಗವಹಿಸಲಿದ್ದು, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂಕೇಗೌಡರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಹೇಳಿದರು.

ಫೆ.15 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಮಹಾಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ, ಯಾದವ ಮಹಾಸಂಸ್ಥಾನ ಮಠದ ಶ್ರೀಕೃಷ್ಣಯಾದವನಂದ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವಿಶ್ವಮಾನವ ಕೇಂದ್ರದ ಶ್ರೀ ಪುರುಷೋತ್ತಮಾನಂದನಾಥ ಮಹಾಸ್ವಾಮೀಜಿ, ಶ್ರೀರಾಮಕೃಷ್ಣ ಸೇವಾ ಕೇಂದ್ರದ ಶ್ರೀನಾದಾನಂದನಾಥ ಸ್ವಾಮೀಜಿ, ಭಕ್ತಮುನೇಶ್ವರ ಕ್ಷೇತ್ರದ ಶ್ರೀರಂಗನಾಥಸ್ವಾಮೀಜಿ ಘನ ಸಾನಿಧ್ಯ ವಹಿಸುವರು.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರ್‍ಯಕ್ರಮ ಉದ್ಘಾಟಿಸುವರು. ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಅಶ್ವಥ್ ನಾರಾಯಣ ಅವರು ಕಂದಾಯ ಕಳಕಳಿ ಆವೃತ್ತಿ-2 ಕೃತಿಯ ಲೋಕಾರ್ಪಣೆ ಮಾಡುವರು. ಕೃತಿಯ ಕುರಿತು ವರಪ್ರಸಾದ್ ರೆಡ್ಡಿ ಮಾತನಾಡುವರು. ಸಂಸದ ಡಾ.ಸಿ.ಎನ್.ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಮಹಾರಾಷ್ಟ್ರ ಮ್ಯಾರಿಟೈಮ್‌ನ ಸಿಇಓ ಪ್ರದೀಫ್ ಪ್ರಭಾಕರ್ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಯುವ ಬ್ರಿಗೇಡ್‌ನ ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತಗೌಡ, ಸಂಘಟನಾ ಪೋಷಕರಾದ ಡಿ.ಸಿ.ರಾಜೇಂದ್ರ ಪ್ರಸಾದ್, ವೆಂಕಟೇಶ್ ಇದ್ದರು.
-
Mandya16 hours agoನದಿಯ ಪಾವಿತ್ರ್ಯತೆ ಮತ್ತು ಪರಿಸರ ರಕ್ಷಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಿ : ಅಸ್ಥಿ ವಿಸರ್ಜನೆಯ ಜೊತೆಗೆ ಬಟ್ಟೆ ಮತ್ತು ಪೂಜಾ ಸಾಮಗ್ರಿ ಬಿಡುವುದು ಸಂಪೂರ್ಣ ನಿಷೇಧ – ಡಿಸಿ
-
Special8 hours agoಉಚಿತ PSI ಕೋಚಿಂಗ್: ಪರೀಕ್ಷೆ ಇಲ್ಲದೆ ಆಯ್ಕೆ!!
-
State9 hours agoಲೈಂಗಿಕ ದೌರ್ಜನ್ಯ ಕೇಸ್: ಮಂಡ್ಯ ರಮೇಶ್, ಸಾಧು ಕೋಕಿಲ ವಿರುದ್ದದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
-
Hassan10 hours agoಗೋಮಾತೆ ಎಂದಿಗೂ ಕೈ ಬಿಡುವುದಿಲ್ಲ: ಸದಾಶಿವ ಶಿವಾಚಾರ್ಯ ಸ್ವಾಮೀಜಿ
-
Mysore8 hours agoಫೆ. 13ಕ್ಕೆ ನಂಜನಗೂಡು, ತಾಂಡವಪುರದಲ್ಲಿ ರೈತ ಸ್ನೇಹ ಮುಖಾಮುಖಿ ಚರ್ಚೆ : ಕಾರ್‍ಯಕ್ರಮ ವಿಶೇಷತೆ ಕುರಿತು ವಿದ್ಯಾಸಾಗರ್ ಸುದ್ದಿಗೋಷ್ಠಿ
-
National9 hours agoರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯದ ಬಗ್ಗೆ ಪುನಃ ಧ್ವನಿ ಎತ್ತಿದ ಮಾಜಿ ಪ್ರಧಾನಿ ಎಚ್ಡಿಡಿ
-
Mysore17 hours agoಪ್ರಧಾನಿ ವಿರುದ್ದ ಸಿಎಂ ಹೇಳಿಕೆ ರಾಜಕೀಯ ಪ್ರೇರಿತ: ಡಾ. ಹೇಮಾ ನಂದೀಶ್
-
Mysore19 hours agoಯಾತ್ರಿಕರಿಂದ ಮಹದೇಶ್ವರ ಬೆಟ್ಟದ ಸ್ವಚ್ಛತೆಗೆ ಧಕ್ಕೆ ಆಗದಂತೆ ಕ್ರಮಕ್ಕೆ ಮನವಿ
