Connect with us

Location

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಇತ್ಯರ್ಥಗೊಳಿಸಲಿ; ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಕಾವೇರಿ ವಿವಾದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದ್ದು,
ಪ್ರಧಾನಿ ನರೇಂದ್ರ‌ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯ‌ಮಗಳೊಂದಿಗೆ ಮಾತನಾಡಿದ ಅವರು,
ಕಾವೇರಿ ವಿವಾದವನ್ನು ಕೋರ್ಟ್ ಹೊರಗೆ ತೀರ್ಮಾನ ಮಾಡಿಕೊಳ್ಳಲು ಅವಕಾಶ ಇದೆ. ಇದನ್ನೇ ನಾವು ಅನೇಕ ಬಾರಿ ಕೇಳಿದ್ದೇವೆ‌. ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ಮಾನಿ ಪ್ರಧಾನಿ ಎಚ್.ಡಿ.ದೇವೇಗೌಡರೂ ಪತ್ರ ಬರೆದಿದ್ದಾರೆ. ಆದರೆ, ಇಲ್ಲಿಯವರೆಗೂ ಪ್ರಧಾನಿ ನರೇಂದ್ರ ಮೋದಿ‌‌ ಮಧ್ಯ ಪ್ರವೇಶಿಸಿಲ್ಲ.
ಈಗ ಬಿಜೆಪಿ- ಜೆಡಿಎಸ್ ಮೈತ್ರಿ ಆಗಿದೆ.
ಈ ಕಾರಣಕ್ಕಾದರೂ ದೇವೇಗೌಡರ ಮಾತು ಕೇಳ್ತಾರಾ ನೋಡೋಣ ಎಂದು ಹೇಳಿದರು.

ಕಾವೇರಿ ನೀರು ವಿಚಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಪ್ರಧಾನಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ.
ಈಗ ಅವರದು ಬಿಜೆಪಿ ಜತೆಗೆ ಹೊಸ ಪ್ರೇಮ.
ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ.
ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಎಲ್ಲ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು. ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು. ಅವರೇ ವಾದ ಮಾಡಿದ್ದಾರೆ.
ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ.
ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ‌ ಎಂದು ತಿಳಿಸಿದರು.

ಬಂದ್, ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ.ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಪ್ರತಿಭಟನೆ ಹೇಗೆ ಸಂವಿಧಾನಾತ್ಮಕ ಹಕ್ಕು ಹಾಗೆಯೇ ಸಾಮಾನ್ಯ ಜನರಿಗೂ ಹಕ್ಕು ಇರುತ್ತದೆ.
ಹಾಗಾಗಿ ಅವರ ಹಕ್ಕಿಗೆ ಧಕ್ಕೆ ತರಬೇಡಿ.
ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ 144 ಸೆಕ್ಷನ್ ಜಾರಿ ಮಾಡಿದ್ದೇವೆ. ಜನರ ಹಕ್ಕನ್ನು ರಕ್ಷಿಸಿಸುವುದು ಸರ್ಕಾರದ ಕರ್ತವ್ಯ.
ಅದೇ ಕೆಲಸವನ್ನು ನಾವು ಮಾಡಿದ್ದೇವೆ ಎಂದು
144 ಸೆಕ್ಷನ್ ಸಮರ್ಥಸಿಕೊಂಡರು.

ನಾನು ಚಾಮರಾಜನಗರಕ್ಕೆ ಹೋಗೋದೇ ಗಟ್ಟಿ ಆಗೋಕೆ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು.
ನಾನು ಗಟ್ಟಿಯಾಗಿದ್ದೇನೆ, ಗಟ್ಟಿಯಾಗೇ ಇರುತ್ತೇನೆ.
ನೀವು ನನ್ನನ್ನು ವೀಕ್ ಮಾಡಲು ಯತ್ನಿಸುತ್ತೀರ.
ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತೆ ಅನ್ನುವ ಅಪವಾದವೇ ಈಗ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Continue Reading
Click to comment

Leave a Reply

Your email address will not be published. Required fields are marked *

Hassan

MLA ಸಿಮೆಂಟ್ ಮಂಜು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌: ಕಾನೂನು ಕ್ರಮಕ್ಕೆ ಆಗ್ರಹ

Published

on

ಸಕಲೇಶಪುರ: ಆಲೂರು, ಕಟ್ಟಾಯ -ಸಕಲೇಶಪುರ,ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ ಮಾಡಿರುವ ವಿರುದ್ಧ ಕಾನೂನು ಕ್ರಮಕ್ಕೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಹಾಸನ ಜಿಲ್ಲಾಡಳಿತದ ವತಿಯಿಂದ ಶನಿವಾರದಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ  ಸಿಎಂ ಸಿದ್ದರಾಮಯ್ಯ, ಡಿಸಿಎಂ  ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಸಚಿವರು ಶಾಸಕರು ಅಧಿಕಾರಿಗಳು ಆಗಮಿಸಿದ್ದರು.

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನು Hassan News ಹಾಸನ್ ನ್ಯೂಸ್ ಫೇಸ್ಬುಕ್ ಪೇಜ್ ನಲ್ಲಿ ಬಿತ್ತರಿಸಲಾಗಿತ್ತು. ಸದರಿ ಪೇಜ್ ನಲ್ಲಿ vasanth kumar ಎಂಬ ಹೆಸರಿನ ಫೇಸ್ ಬುಕ್ ಖಾತೆಯುಳ್ಳ ವ್ಯಕ್ತಿಯು  ಶಾಸಕರ ವಿರುದ್ಧ “ಸಿಮೆಂಟ್ ಮಂಜಣ್ಣ ಹುಟ್ಟು ಕಳ್ಳನ್ ಮಗ” ಎಂದು ಕಾಮೆಂಟ್ ಮಾಡಿದ್ದು ಈ ರೀತಿಯ ಕಾಮೆಂಟ್ ನಿಂದ ಶಾಸಕರ ಘನತೆಗೆ ಧಕ್ಕೆ ಯಾವುದರ ಜೊತೆಗೆ ಕ್ಷೇತ್ರದ ಜನತೆಗೆ ಹಾಗೂ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದು ಕಾಮೆಂಟ್ ಮಾಡಿದ ವ್ಯಕ್ತಿಯನ್ನು ಪತ್ತೆ ಮಾಡಿ ಬಂಧಿಸಿ ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ನಗರ ಠಾಣೆಗೆ ಬಾಳ್ಳುಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎಂ. ಎಸ್. ಶಿವಕುಮಾರ್ ದೂರು ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳಗೋಡು ಮಹಾ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಮುಖಂಡರಾದ ನವೀನ್ ಶೆಟ್ಟಿ. ಕಿಟ್ಟಿ ಪುಟ್ಟರಾಜು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Continue Reading

Chamarajanagar

ಡಿ. 9, 10 ರಂದು ನಗರದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮ

Published

on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಕಲಾ ಪ್ರತಿಭೋತ್ಸವ ಕಾರ್ಯಕ್ರಮವನ್ನು ಡಿ.9 ಮತ್ತು 10 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ.ಮಾದೇಗೌಡ, ಕೆ. ವಿವೇಕಾನಂದ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ, ಮೈಸೂರು ವಿಭಾಗದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Continue Reading

Chamarajanagar

ಮಹಾಪರಿನಿರ್ವಾಣ ದಿನ: ಮೊಂಬತ್ತಿ ಮೆರವಣಿಗೆ

Published

on

ಚಾಮರಾಜನಗರ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಮೊಂಬತ್ತಿ ಮೆರವಣಿಗೆ ನಡೆಯಿತು.

ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ ರಾಜಗಿರಿ ಬುದ್ಧವಿಹಾರ, ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದ ಸಹಯೋಗದಲ್ಲಿ ಹಾಗೂ ಗ್ರಾಮದ ಯಜಮಾನರುಗಳ ಮಾರ್ಗದರ್ಶನದಲ್ಲಿ ಇಂದು ಸಂಜೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇಣದ ಬತ್ತಿ ಮೆರವಣಿಗೆ ನಡೆಸಲಾಯಿತು.

ಸಂವಿಧಾನ ಪೀಠಿಕೆಯನ್ನು ವಾಚನ ಮಾಡಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೊಂಬತ್ತಿ ಮೆರವಣಿಗೆ ಚಾಲನೆ ನೀಡಲಾಯಿತು.

ಇದೇ ಸಂದರ್ಭದಲ್ಲಿ ಗ್ರಾಮದ ಯಜಮಾನರು, ಗ್ರಾಮ ಪಂಚಾಯಿತಿ ಸದಸ್ಯರು, ರಾಜಗಿರಿ ಬೌದ್ಧವಿಹಾರದ ಉಪಾಸಕರು, ಗ್ರಾಮದ ಮುಖಂಡರು, ಯುವಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Continue Reading

Trending

error: Content is protected !!