Connect with us

Deficiency

ಕಾವೇರಿಗಾಗಿ ಭುಗಿಲೆದ್ದ ಪ್ರತಿಭಟನೆ : ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

Published

on

ಬೆಂಗಳೂರು : ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ತೀವ್ರಗೊಂಡಿದ್ದು, ಬಸ್ ಗೆ ಅಡ್ಡಲಾಗಿ ಮಲಗಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಹೋರಾಟ ನಿಲ್ಲಲ್ಲ, ಕಾನೂನು ಕೈಗೆ ತೆಗೆದುಕೊಂಡರು ಪರವಾಗಿಲ್ಲ, ಕಾವೇರಿಗಾಗಿ ನಮ್ಮ ಹೋರಾಟ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಪ್ರತಿಭಟನೆ ನಡೆಸಿದ ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲಾ ಕಾರ್ಯಕರ್ತರನ್ನು ಪೊಲೀಸರು ಬಿಎಂಟಿಸಿ ಬಸ್ ನಲ್ಲಿ ತುಂಬಿಕೊಂಡು ಹೋಗಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

Deficiency

ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ

Published

on

ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading

Deficiency

ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು

Published

on

ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.

ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.

ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

Continue Reading

Chikmagalur

ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ

Published

on

ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.

ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.

Continue Reading

Trending

error: Content is protected !!