Deficiency
ಕಾವೇರಿಗೆ ಧ್ವನಿ ಎತ್ತಿದ ಸುತ್ತೂರು ಶ್ರೀ
ಮೈಸೂರು: ಕಾವೇರಿ ನೀರಿನ ವಿಚಾರದಲ್ಲಿ ಕೊನೆಗೂ ಮೌನ ಮುರಿದ ಸುತ್ತೂರು ಶ್ರೀಗಳು ಪತ್ರಿಕಾ ಪ್ರಕಟಣೆ ಮೂಲಕ ಕಾವೇರಿ ವಿಚಾರದಲ್ಲಿ ತಮ್ಮ ಧ್ವನಿ ಎತ್ತಿದ್ದಾರೆ.
ಪತ್ರದ ವಿವರ: ಕಾವೇರಿ ನೀರಿನ ಸಮಸ್ಯೆ ಮತ್ತೊಮ್ಮೆ ಉಲ್ಬಣಿಸಿದೆ. ಪ್ರತಿವರ್ಷವೂ ಈ ಸಮಸ್ಯೆ ಉಂಟಾಗುತ್ತಲೇ ಇದೆ. ಶತಮಾನಗಳಿಂದ ಇದೊಂದು ಜ್ವಲಂತ ಸಮಸ್ಯೆಯಾಗಿದೆ. ಪ್ರಾರಂಭದ ದಿನಗಳಿಂದಲೂ ತಮಿಳುನಾಡು ತನಗೆ ಅಗತ್ಯವಾದುದಕ್ಕಿಂತ ಹೆಚ್ಚಿನ ನೀರನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗುತ್ತಲೇ ಇದೆ. ಕರ್ನಾಟಕದ ಕಾವೇರಿ ನದಿ ಪಾತ್ರದ ರೈತರು ಸಂಕಷ್ಟಕ್ಕೆ ಒಳಗಾಗುತ್ತಲೇ ಇದ್ದಾರೆ.
ಮೈಸೂರು- ಬೆಂಗಳೂರು ಇತರೆಡೆಗಳಿಗೆ ಕುಡಿಯುವ ನೀರಿಗೂ ಸಮಸ್ಯೆ ತಲೆದೋರುತ್ತಿದೆ. ಇದಕ್ಕೆ ಅಂತಿಮ ಪರಿಹಾರ ಯಾವಾಗ ಎಂಬುದೇ ಪ್ರಶ್ನಾರ್ಥಕವಾಗಿದೆ. ಕರ್ನಾಟಕ ಸರ್ಕಾರವು ಎಲ್ಲ ಸಂದರ್ಭಗಳಲ್ಲಿಯೂ ನೆರೆರಾಜ್ಯದ ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಲೇ ಬಂದಿದೆ. ತನಗೆ ಎಷ್ಟೇ ತೊಂದರೆಗಳಾದರು ನ್ಯಾಯಾಧೀಕರಣ ಮತ್ತು ನ್ಯಾಯಾಲಯಗಳ ತೀರ್ಪುಗಳನ್ನು ಜನಾಭಿಪ್ರಾಯದ ಕಡು ವಿರೋಧದ ನಡುವೆಯೂ ಗೌರವಿಸಿ ಪಾಲಿಸುತ್ತ ಬಂದಿದೆ. ಇದನ್ನು ತಮಿಳುನಾಡಾಗಲಿ ಅಥವಾ ಸಂಬAಧಪಟ್ಟವರು ಯಾರೇ ಆಗಲಿ ದೌರ್ಬಲ್ಯವೆಂದು ಭಾವಿಸಬಾರದು.
ಈ ಸಮಸ್ಯೆಗೆ ಅಂತಿಮ ಪರಿಹಾರದ ಅಗತ್ಯವಿದೆ. ಮಳೆಯನ್ನು ಆಧರಿಸಿ ನೀರಿನ ಸಂಗ್ರಹದ ಆಧಾರದ ಮೇಲೆ ನೀರು ಹಂಚಿಕೆಯ ಬಗೆಗೆ ಪ್ರತಿವರ್ಷವೂ ಕ್ರಮ ತೆಗೆದುಕೊಳ್ಳಬೇಕಾದುದು ಅಗತ್ಯ. ಪ್ರತಿವರ್ಷ ಆಯಾ ಕಾಲಕ್ಕೆ ಸರಿಯಾಗಿ ಮಳೆಯಾದರೆ ಈ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಅನಾವೃಷ್ಟಿಯಾದಾಗಲೆಲ್ಲ ಈ ಸಮಸ್ಯೆ ಸಹಜವಾಗಿ ಉಂಟಾಗುತ್ತಲೇ ಇರುತ್ತದೆ.
ಇದೀಗ ಉಲ್ಬಣಿಸಿರುವ ಸಮಸ್ಯೆಗೆ ಭಾರತ ಸರ್ಕಾರ, ಸರ್ವೋಚ್ಚ ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಸಮಾಲೋಚಿಸಿ ಕರ್ನಾಟಕ-ತಮಿಳುನಾಡು ಹೊರತಾದ ಹೊರ ರಾಜ್ಯಗಳ ನೀರಾವರಿ ತಜ್ಞರ ಸಮಿತಿ ರಚಿಸಿ, ನೀರಿನ ಸಂಗ್ರಹಣೆಯ ವಾಸ್ತವಾಂಶವನ್ನು ಅಧ್ಯಯನ ಮಾಡಿ ಸಮಸ್ಯೆಗೆ ಪರಿಹಾರ ಸೂಚಿಸುವುದು ಇಂದಿನ ತುರ್ತು ಅಗತ್ಯವಾಗಿದೆ.
ಕರ್ನಾಟಕದ ಜನರ ಕುಡಿಯುವ ನೀರಿಗೆ, ರೈತರ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ಅಗತ್ಯವಾಗುವ ನೀರನ್ನು ಬಳಸಿಕೊಂಡು ನಂತರ ಹೆಚ್ಚಿನ ನೀರನ್ನು ತಮಿಳುನಾಡಿಗೂ ಅನುಕೂಲವಾಗುವಂತೆ ಹರಿಸಲು ಸೂಕ್ತ ಕ್ರಮ ಕೈಗೊಳ್ಳಲು ಸಂಬAಧಪಟ್ಟವರೆಲ್ಲರು ಮುಂದಾಗಬೇಕೆAದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇವೆ.
Deficiency
ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ
ಸಾಲಿಗ್ರಾಮ : ತೆಂಗಿನ ಬೆಳೆ ಕೀಟ ನಿಯಂತ್ರಣ ತರಬೇತಿ ತೋಟಗಾರಿಕೆ ಇಲಾಖೆ ಹಾಗು ತೋಟಗಾರಿಕೆ ಮಹಾವಿದ್ಯಾಲಯ ಇವರ ಸಹ ಬಾಗಿತ್ವದಲ್ಲಿ ತೆಂಗಿನ ಬೆಳೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಮತ್ತು ಪ್ರತ್ಯಕ್ಷಿತೆ ಕಾರ್ಯಕ್ರಮ ವನ್ನು ಮಿರ್ಲೆ ಹೋಬಳಿಯ ಎಲೆಮುದ್ದನಹಳ್ಳಿ ಕೊಪ್ಪಲು ಗ್ರಾಮದ ರೈತ ಪುಟ್ಟಸ್ವಾಮಿಗೌಡ ಅವರ ತೆಂಗಿನತೋಟದಲ್ಲಿ ಅಕ್ಟೋಬರ್ 31 ರ ಮಂಗಳವಾರ ಬೆಳ್ಳಿಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಟಿ. ಎಸ್. ಭಾರತಿ ತಿಳಿಸಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಡಿ. ರವಿಶಂಕರ್ ನೆರವೇರಿಸಳಲಿದ್ದು, ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಉಪ ನಿರ್ದೇಶಕ ಡಾ: ಮಂಜುನಾಥ್ ಅಂಗಡಿ,ಡಾ : ಸುದರ್ಶನ್, ಡಾ : ಮುತ್ತು ರಾಜ್, ಭಾಗವಹಿಸಲಿದ್ದಾರೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತೆಂಗಿನ ಬೆಲೆಯಲ್ಲಿ ಕೀಟ ಮತ್ತು ರೋಗ ನಿಯಂತ್ರಣ ಹಾಗು ಸುಧಾರಿತ ಬೇಸಾಯ ಕ್ರಮಗಳ ಕುರಿತು ತರಬೇತಿ ಪಡೆದುಕೊಳ್ಳುವಂತೆ ಕೊರಿದ್ದಾರೆ.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ
Deficiency
ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು
ಹುಣಸೂರು : ಅಧಿಕಾರಿಗಳು ಹಣ ಮಾಡೋದು ಒಂದೇ ದಾರಿಯಲ್ಲ ರೈತರ ಜೊತೆ ಸರಿಯಾಗಿ ನಡೆದುಕೊಳ್ಳಬೇಕು ಎಂದು ಕೆಲವರು ಆರೋಪಿಸಿದರೆ, ಕೆಲವರು ಸಣ್ಣ ಪುಟ್ಟ ರೈತರ ಮೇಲೆ ನಡೆಯುವ ತೊಂದರೆಗಳನ್ನು ಪ್ರಶ್ನೆಸಿದರೆ ಆ ರೈತರಿಗೆ ಅಧಿಕಾರಿಗಳು ಮಾನಸಿಕವಾಗಿ ತೊಂದರೆ ನೀಡುತ್ತಾರೆ ಆದರೆ ಈಗ ರೈತನಿಗೆ ಶೂ ನಲ್ಲಿ ಹೊಡೆಯಲು ಮುಂದಾಗಿರೋ ಅಧಿಕಾರಿಗೆ ಏನು ಕ್ರಮ ಕೈಗೊಳ್ಳಬೇಕು ಎಂದು ರೈತರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಸಭೆಯಲ್ಲಿ ಹೊರಹಾಕಿದ್ದು ಹೀಗೆ.
ಅವರು ಹುಣಸೂರು ತಾಲೂಕಿನ ಚಿಲ್ಕುಂದ ಗ್ರಾಮದ ತಂಬಾಕು ಮಂಡಳಿಯ ರೈತ ಭವನದಲ್ಲಿ ಪ್ಲಾಟ್ ಫಾರಂ ನಂಬರ್ 62ರ ಹರಾಜು ಅಧೀಕ್ಷಕ ಬ್ರಿಜ್ ಭೂಷಣ್ ವಿರುದ್ಧ ರೈತರು ಸೋಮವಾರ ಸಭೆ ಸೇರಿ ಚರ್ಚಿಸಿ ನಿರ್ಣಯ ಕೈಗೊಂಡು ತಂಬಾಕು ಮಂಡಳಿಯ ಅಧಿಕಾರಿ ಒಬ್ಬ ತಂಬಾಕು ರೈತನಿಗೆ ಶೂ ನಿಂದ ಹೊಡೆಯಲು ಮುಂದಾಗಿರುವುದು ರೈತ ಕುಲಕ್ಕೆ ಅವಮಾನ ಆ ಅಧಿಕಾರಿಯನ್ನು ಕರ್ನಾಟಕ ರಾಜ್ಯದಿಂದ ವರ್ಗಾವಣೆ ಮಾಡಬೇಕು, ಹಾಗೂ ಆತ ಸಭೆಯಲ್ಲಿ ಕ್ಷಮೆ ಕೇಳಬೇಕು ಜೊತೆಗೆ ಈ ವಿಷಯಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳು ವಿಚಾರಣೆ ಕೈಗೊಳ್ಳಬೇಕು ಎಂದು ಸಭೆಯಲ್ಲಿ ತೀರ್ಮಾನ ಕೈಗೊಂಡು ಈ ನಿರ್ಣಯವನ್ನು ಸಭೆಯಲ್ಲಿ ಸರ್ವ ಸದಸ್ಯರಿಂದ ಒಪ್ಪಿಗೆ ಪಡೆದ ಗೊಬ್ಬರ ಕಮಿಟಿಯ ಅಧ್ಯಕ್ಷ ಅಣ್ಣೂರು ಕಾಳೇಗೌಡ ಈ ನಿರ್ಣಯವನ್ನು ಓದಿ ತಿಳಿಸಿದರು.
ಈ ನಿರ್ಣಯದ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲು ಆರ್.ಎಂ. ಓ ಲಕ್ಷ್ಮಣ್ ರಾವ್ ರವರಿಗೆ ನೀಡಿದರು. ಕಾರ್ಯಕ್ರಮದಲ್ಲಿ ತಂಬಾಕು ಮಂಡಳಿಯ ಉಪಾಧ್ಯಕ್ಷ ಬಸವರಾಜಪ್ಪ, ಸದಸ್ಯರಾದ ವಿಕ್ರಂ ಗೌಡ ,ದಿನೇಶ್ , ಗೊಬ್ಬರ ಕಮಿಟಿಯ ಉಪಾಧ್ಯಕ್ಷ ಮಂಜುನಾಥ್ ಕೆರೆಗೋಡು, ಕಾರ್ಯದರ್ಶಿ ಮರಿಗೌಡ, ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಡಿಎಸ್ಎಸ್ ಸಂಚಾಲಕ ರಾಮಕೃಷ್ಣ ಅತ್ತಿಕುಪ್ಪೆ, ಪ್ರಭಾಕರ್, ಮೋದೂರು ಶಿವಣ್ಣ, ದೇವರಾಜ್, ಉಂಡವಾಡಿ ಚಂದ್ರೇಗೌಡ, ರವಿಕುಮಾರ್, ನವೀನ್, ಅಗ್ರಹಾರ ರಾಮೇಗೌಡ ಸೇರಿದಂತೆ ಸಾವಿರಾರು ರೈತರು ಭಾಗವಹಿಸಿದ್ದರು.

Chikmagalur
ಧಾರಾಕಾರ ಮಳೆಗೆ ಎರಡು ಮನೆಗಳಿಗೆ ಹಾನಿ
ಚಿಕ್ಕಮಗಳೂರು : ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.
ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ
ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿದ್ದು. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಲಾಗಿದೆ.
-
State19 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan16 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan18 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya14 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur21 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan20 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore19 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore13 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
