Education
ಇಂದು ಮದ್ಯಾಹ್ನ KCET ರಿಸಲ್ಟ್ ಬಿಡುಗಡೆ : ಮೊಬೈಲ್ ನಲ್ಲೆ ಪರಿಶೀಲಿಸುವುದು ಹೇಗೆ?

KCET Result 2025 – ಕರ್ನಾಟಕ ರಾಜ್ಯದಾದ್ಯಂತ ಲಕ್ಷಾಂತರ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸಾಗಿ KCET ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇದೀಗ ಇದರ ಫಲಿತಾಂಶದ ಕುರಿತು ಮಾಹಿತಿ ಇಲ್ಲಿದೆ..
ವಿವಿಧ ಸರ್ಕಾರಿ ಅನುದಾನಿತ, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನದ ಪ್ರವೇಶಾತಿಗೆ ಅತೀ ಮುಖ್ಯವಾಗಿ ಬೇಕಾಗಿರುವ KCET ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಇನ್ನೂ ಮದ್ಯಾಹ್ನ ಫಲಿತಾಂಶ ಬಿಡುಗಡೆಯಾಗಲಿದೆ.
KCET ಫಲಿತಾಂಶದ ಕುರಿತು KEA ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನರವರ ಸ್ಪಷ್ಟನೆ ಏನು?
KCET ಫಲಿತಾಂಶದ ಕುರಿತು ಹೇಳಿದ್ದು, ಮೇ 24ನೇ ತಾರೀಕು ಅಂದರೆ ಇಂದು ಮದ್ಯಾಹದ ಒಳಗಾಗಿ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಆದ್ದರಿಂದ ಪರೀಕ್ಷೆ ಬರೆದ ಎಲ್ಲಾ ಅಭ್ಯರ್ಥಿಗಳು ಅಗತ್ಯವಿರುವ ಮಾಹಿತಿಯನ್ನು ತಿಳಿದುಕೊಂಡು ಫಲಿತಾಂಶ ನೋಡಬಹುದು.
ನಿಮ್ಮ KCET ಪರೀಕ್ಷೆಯ ಫಲಿತಾಂಶವನ್ನು ಮೊಬೈಲ್ ನಲ್ಲಿ ಹೀಗೆ ಪರಿಶೀಲಿಸಿ :
ಮೊದಲು KEA-CET ವೆಬ್ಸೈಟ್ ಅಥವಾ. ನಾವು ಕೆಳಗೆ ನೀಡಿರುವ ವೆಬ್ಸೈಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆ ಹಾಗೂ ಇತರೆ ಮಾಹಿತಿ ಭರ್ತಿ ಮಾಡಿ ಫಲಿತಾಂಶ ಪರಿಶೀಲಿಸಬಹುದು.
ವೆಬ್ಸೈಟ್ ಲಿಂಕ್ – https://cetonline.karnataka.gov.in/kea/
Education
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ : ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು

HAL Apprentice Recruitment 2025 – ಬೆಂಗಳೂರಿನ ಮೂಲದ ಸಂಸ್ಥೆಯಾಗಿರುವ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಭಾರತೀಯ ರಕ್ಷಣಾ ಕ್ಷೇತ್ರಕ್ಕೆ ಬೇಕಾಗಿರುವಂತಹ ಸಾಮಗ್ರಿಗಳನ್ನು ಮತ್ತು ಬಿಡಿ ಭಾಗಗಳನ್ನು ತಯಾರಿಸುವ ಸಂಸ್ಥೆಯಾಗಿದೆ.
ಈ ಒಂದು ಪ್ರತಿಷ್ಠಿತ ಸಂಸ್ಥೆಯಲ್ಲಿ ಪ್ರಸ್ತುತ 100ಕ್ಕಿಂತ ಹೆಚ್ಚು ಅಪ್ಪ್ರಂಟಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ವಿವರ ಇಲ್ಲಿದೆ.
ಯಾವ ಯಾವ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ?
• ಟೆಕ್ನಿಷಿಯನ್ ಅಪ್ರಂಟಿಸ್ (ಡಿಪ್ಲೋಮ್) – 34 ಹುದ್ದೆಗಳು
• ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರಂಟಿಸ್ – 61 ಹುದ್ದೆಗಳು
• ಜನರಲ್ ಸ್ಟೀಮ್ ಅಪ್ರೆಂಟಿಸ್ – 32 ಹುದ್ದೆಗಳು
ಈ ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಹತೆಗಳು :
ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಡಿಪ್ಲೋಮಾ ಮುಗಿಸಿರಬೇಕು, ಜನರಲ್ ಸ್ಟೀಮ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದೇ ಪದವಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು ಅದೇ ರೀತಿ ಇಂಜಿನಿಯರಿಂಗ್ ಗ್ರಾಜುವೇಟ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಇಂಜಿನಿಯರಿಂಗ್ ಪದವಿ ಮುಗಿಸಿರಬೇಕು.
ಈ ನೇಮಕಾತಿಯ ಪ್ರಮುಖ :
ಈ ಹುದ್ದೆಗಳ ನೇಮಕಾತಿಯನ್ನು ನೇರ ಸಂದರ್ಶನದ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವುದು. ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರಂಟಿಸ್ ಹುದ್ದೆಗಳ ನೇಮಕಾತಿಯ ನೇರ ಸಂದರ್ಶನ 29 ಮೇ 2025ರಂದು, ಟೆಕ್ನಿಷಿಯನ್ ಅಪ್ರಂಟಿಸ್ ಹುದ್ದೆಗಳ ನೇರ ಸಂದರ್ಶನ 30 ಮೇ 2025 ರಂದು ಹಾಗೂ ಜನರಲ್ ಸ್ಟ್ರೀಮ್ ಅಪ್ರಂಟಿಸ್ ಹುದ್ದೆಗಳನ್ನು 31 ಮೇ 2025ರಂದು ನಡೆಸಲಾಗುತ್ತದೆ.
ಅರ್ಜಿಯನ್ನು ಹೇಗೆ ಸಲ್ಲಿಸಬೇಕು?
ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನಿಮಗೆ ನಿಗದಿಪಡಿಸಿರುವಂತಹ ದಿನಾಂಕದಂದು ನೇರ ಸಂದರ್ಶನಕ್ಕೆ ಭೇಟಿ ನೀಡಬೇಕು.
ವಿಳಾಸ – Utsava Sadhna Auditorium, Behind Department Of Training And Development Hindustan Aeronautics Limited, Avionics Division, Balanagara, Hyderabad- 500042
ಅಧಿಕೃತ ವೆಬ್‌ಸೈಟ್ – hal-india.co.in
Education
ಮಿಲಿಟರಿ ಶಾಲೆಯಲ್ಲಿ ಪ್ರವೇಶಾತಿಗೆ ಅರ್ಜಿ ಅಹ್ವಾನ : ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು!

Application for RIMC Admission 2025 – ಉತ್ತರಾಖಂಡ ರಾಜ್ಯದ ಡೆಹರಾಡುನಲ್ಲಿರುವಂತಹ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ 2026ರ ಶೈಕ್ಷಣಿಕ ಸಾಲಿಗೆ ಅರ್ಹ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಈ ಮೊದಲು ಇದಕ್ಕೆ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿತ್ತು, ಆದರೆ ಇದನ್ನು ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಇದಕ್ಕೆ ಅರ್ಜಿ ಸಲ್ಲಿಸಲು ಯಾವ ವಿದ್ಯಾರ್ಥಿಗಳು ಅರ್ಹರು? ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತ್ಯಾದಿ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ರಾಷ್ಟ್ರೀಯ ಮಿಲಿಟರಿ ಶಾಲೆಯ ವಿಶೇಷತೆ ಏನು?
ಇದು ಕೇಂದ್ರ ಸರ್ಕಾರದ ಪ್ರತಿಷ್ಠಿತ ಸೇನಾ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದ್ದು ಈ ಶಾಲೆಗೆ ಆಯ್ಕೆಯಾಗುವಂತಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಮತ್ತು ಭಾರತೀಯ ನೌಕಾಪಡೆ ಅಕಾಡೆಮಿಗೆ ಸೇರಲು ವಿದ್ಯಾರ್ಥಿಗಳನ್ನು ಟ್ರೈನ್ ಮಾಡಲಾಗುವುದು.
ಇದೀಗ ಈ ಶಾಲೆಗೆ 8ನೇ ತರಗತಿ ಪ್ರವೇಶಾತಿಗೆ ಪ್ರಸ್ತುತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು?
ರಾಷ್ಟ್ರೀಯ ಮಿಲಿಟರಿ ಶಾಲೆಗೆ ಎಂಟನೇ ತರಗತಿಗೆ ಪ್ರವೇಶಾತಿ ಪಡೆಯಲು ಮಾನ್ಯತೆ ಪಡೆದ ಶಾಲೆಯಿಂದ ಏಳನೇ ತರಗತಿ ಪೂರ್ಣಗೊಳಿಸಿರಬೇಕು ಹಾಗೂ 11.5 ವರ್ಷದಿಂದ ಗರಿಷ್ಟ 13 ವರ್ಷದ ಒಳಗಿರಬೇಕು.
ಈ ಶಾಲಿಗೆ ವಿದ್ಯಾರ್ಥಿಗಳನ್ನು ಹೇಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೂರು ಹಂತದಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಮೊದಲನೇ ಹಂತದಲ್ಲಿ ಲಿಖಿತಪರೀಕ್ಷೆ ನಂತರದಲ್ಲಿ ಮೌಖಿಕ ಸಂದರ್ಶನ ಹಾಗೂ ಮೂರನೇ ಹಂತದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ಏಪ್ರಿಲ್ 15, 2025 ಆಗಿರುತ್ತದೆ. ಅರ್ಹತೆಗಳನ್ನು ಹೊಂದಿರುವಂತಹ ವಿದ್ಯಾರ್ಥಿಗಳು ಈ ಕೊನೆಯ ದಿನಾಂಕದ ಒಳಗಾಗಿ ತಮ್ಮ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಾರ್ಯಾಲಯವನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.
ಅಥವಾ ಈ ಕೆಳಗಿನ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ವಿಳಾಸ : ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆಎಮ್ ಕರಿಯಪ್ಪ ರಸ್ತೆ ಬೆಂಗಳೂರು
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣ – https://rimc.gov.in
Education
ಮಾ.21 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ: ಡಾ.ಕುಮಾರ

ಮಂಡ್ಯ : ಜಿಲ್ಲೆಯಲ್ಲಿ ಮಾಚ್೯21 ರಿಂದ ಏಪ್ರಿಲ್ 04 ರವರೆಗೆ ನಡೆಯಲಿರುವ ಎಸ್.ಎಸ್.ಎಲ್ ಸಿ ಪರೀಕ್ಷೆಗಳ ಕೆಲಸಗಳು ಯಾವುದೇ ಲೋಪವಿಲ್ಲದೆ ಪಾರದರ್ಶಕವಾಗಿ ನಡೆಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಅವರು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿ, ಈ ಬಾರಿ ಒಟ್ಟು 20,469 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೊಂದಾಯಿಸಿಕೊಂಡಿದ್ದಾರೆ. ಇವರಲ್ಲಿ 10,661 ಗಂಡು ಮಕ್ಕಳು ಹಾಗೂ 9,835 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ ಎಂದರು.
62 ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಮುಖ್ಯ ಶಿಕ್ಷಕರನ್ನು ಪರೀಕ್ಷಾ ಅಧೀಕ್ಷಕರನ್ನು ಹಾಗೂ ಪೇಪರ್ ಕಸ್ಟೋಡಿಯನ್ ಗಳನ್ನು , ಪ್ರತಿ ಬ್ಲಾಕ್ ಗೆ ಒಬ್ಬರೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಪೂರ್ಣ ಪರೀಕ್ಷೆ ವೆಬ್ ಕ್ಯಾಸ್ಟಿಂಗ್
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಲು ಪರೀಕ್ಷೆ ನಡೆಯುವ ಎಲ್ಲಾ ಕೊಠಡಿಗಳಿಗೆ ಸಿ.ಸಿ.ಟಿ.ವಿ ಅಳವಡಿಸಲಾಗುವುದು. ಪರೀಕ್ಷೆಯ ಚಲನ- ಕವನಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾಗುವ ಕಂಟ್ರೋಲ್ ರೂಂನಲ್ಲಿ ಅಧಿಕಾರಿಗಳನ್ನು ನೇಮಿಸಿ ವೀಕ್ಷಿಸಲಾಗುವುದು
ಎಂದರು.
ಮೂಲಭೂತ ವ್ಯವಸ್ಥೆಗಳು
ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಲು ಉತ್ತಮ ಬೆಂಚ್ ಮತ್ತು ಡೆಸ್ಕ್ ಇರುವುದನ್ನು ಖಾತ್ರಿ ಪಡಿಸಿಕೊಳ್ಳಿ. ಮಕ್ಕಳಿಗೆ ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಪರೀಕ್ಷಿಸಿಕೊಳ್ಳಿ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಹಿನ್ನಲೆಯಲ್ಲಿ ಶಿಕ್ಷಕರು ಸಹ ಮೊಬೈಲ್ ನ್ನು ಪರೀಕ್ಷಾ ಕೊಠಡಿಗಳಿಗೆ ತೆಗೆದುಕೊಂಡು ಹೋಗಬಾರದು.
ಪರೀಕ್ಷೆ ನಡೆಯುವ ದಿನದಂದು
ಕೆ.ಎಸ್.ಆರ್.ಟಿ.ಸಿ ಬಸ್ ಗಳು ಸರಿಯಾದ ಸಮಯದಲ್ಲಿ ನಿಗದಿಪಡಿಸಿರುವ ರೀತಿ ಟ್ರಿಪ್ ಗಳಲ್ಲಿ ಸಂಚರಿಸಬೇಕು. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದರು.
ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ, ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಇರುವುದಿಲ್ಲ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಈ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ ದಿನಗಳಂದು ಜೆರಾಕ್ಸ್ ಅಂಗಡಿಗಳು ಹಾಗೂ ಸೈಬರ್ ಸೆಂಟರ್ ಗಳು ತೆರೆಯಲು ಅವಕಾಶವಿರುವುದಿಲ್ಲ ಎಂದರು.
ಆರೋಗ್ಯ ಇಲಾಖೆ ಅವರು ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗತ್ಯ ಔಷಧಿಗಳು ಹಾಗೂ ಒ.ಆರ್. ಎಸ್ ಗಳನ್ನು ವ್ಯವಸ್ಥೆ ಮಾಡಿಕೊಳ್ಳಲು ತಿಳಿಸಿದರು.
ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಿ
ವಿದ್ಯಾರ್ಥಿಗಳೊಂದಿಗೆ ಮುಖ್ಯ ಶಿಕ್ಷಕರು ಸಂಪರ್ಕದಲ್ಲಿದ್ದು, ಅವರಲ್ಲಿ ಪರೀಕ್ಷೆಯ ಬಗ್ಗೆ ಯಾವುದೇ ಭಯ ಬೇಡ. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಸಜ್ಜುಗೊಳಿಸಿ. ಯಾವುದಾದರೂ ಪರೀಕ್ಷಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಇದ್ದರೆ ಪರಿಹರಿಸಿ ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ ಸ್ವಾಮಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮೇಗೌಡ, ಡಯಟ್ ಪ್ರಾಂಶುಪಾಲ ಪುರುಷೋತ್ತಮ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
State15 hours ago
GST ನೋಟಿಸ್: ನಗದು ವ್ಯವಹಾರದತ್ತ ಮುಖ ಮಾಡಿದ ವರ್ತಕರು; ಗೊಂದಲಗಳಿಗೆ ತೆರಿಗೆ ಇಲಾಖೆ ಕೊಟ್ಟ ಸ್ಪಷ್ಟನೆ, ಸೂಚನೆಗಳೇನು..?
-
Mandya10 hours ago
ಡಿಸಿಎಂ ಡಿ.ಕೆ.ಶಿವಕುಮಾರ್ ಎಸ್ಕಾರ್ಟ್ ವಾಹನ ಪಲ್ಟಿ : ಇಬ್ಬರಿಗೆ ಗಾಯ
-
Chamarajanagar16 hours ago
ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು
-
Chamarajanagar10 hours ago
ಸುರೇಶ್ ಎನ್. ಋಗ್ವೇದಿ ಅವರಿಗೆ ವಿಪ್ರ ವಿಕಾಸ ಪ್ರಶಸ್ತಿ
-
Mysore12 hours ago
ನಾವು ನಿಮ್ಮ ಬಳಿ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ ನಿಮ್ಮ ಋಣ ತೀರಿಸಲು ಬಂದಿದ್ದೇವೆ – ಡಿ.ಕೆ.ಶಿವಕುಮಾರ್
-
Special15 hours ago
ನಿಸ್ವಾರ್ಥ ಸೇವೆಯ ಆಯುರ್ವೇದ ತಜ್ಞ ವೈದ್ಯ ಡಾ.ಗುರುಬಸವರಾಜ
-
Kodagu11 hours ago
ಕೊಡಗು ಸೇರಿ ರಾಜ್ಯದ ಮಲೆನಾಡಿನಲ್ಲಿ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ
-
Chamarajanagar10 hours ago
ಹಸುಗೂಸನ್ನು ರಸ್ತೆ ಬದಿಯಲ್ಲಿ ಬಿಟ್ಟು ಹೋದ ಪೋಷಕರು