Mandya
ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಕ.ದ.ಸಂ.ಸ ಕಾರ್ಯಕರ್ತರ ಬಂಧನ
ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ನಗರಕ್ಕೆ ಬೇಟಿ ನೀಡುತ್ರಿರುವ ಹಿನ್ನಲೆಯಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಪ್ಪು ಬಾವುಟ ಬಿಸುತ್ತ ಮುಖ್ಯಮಂತ್ರಿ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಎಚ್ಚೆತ್ತ ಪೊಲೀಸರು ಮುಖ್ಯಮಂತ್ರಿ ಆಗಮನಕ್ಕೆ ಮುನ್ನ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಕೆ ಎಂ ಅನಿಲ್ ಕುಮಾರ್, ಬಿ ಆನಂದ್, ಮಹದೇವು, ಕರಿಯಪ್ಪ ಸೇರಿದಂತೆ 50ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿ ಕರೆದೊಯ್ದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶೋಷಿತ ಸಮುದಾಯಗಳನ್ನು ನಿರಂತರ ವಂಚಿಸುತ್ತಾ ಬಂದಿದ್ದಾರೆ. ರಾಜ್ಯದ ದಲಿತ, ಹಿಂದುಳಿದ ಅಲ್ಪಸಂಖ್ಯಾತ, ಬಹುಜನ ತಳ ಸಮುದಾಯಗಳ ಅಭಿವೃದ್ಧಿಗಾಗಿ ಜನಸಂಖ್ಯೆಗನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಶೇ.75ಕ್ಕೆ ಹೆಚ್ಚಳ ಮಾಡುವುದಾಗಿ ನುಡಿದ ಸಿದ್ದರಾಮಯ್ಯ, ನುಡಿದಂತೆ ನಡೆಯಲಿಲ್ಲ ಏಕೆ ಎಂದು ಪ್ರಶ್ನಿಸಿದರು.

ಶೋಷಿತ ತಳ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿಯ ಹೆಚ್.ಕಾಂತರಾಜು ಆಯೋಗದ ವರದಿಯನ್ನು ಆರು ತಿಂಗಳ ಕಾಲಮಿತಿಯೊಳಗೆ ಜಾರಿಗೊಳಿಸದೆ 10 ವರ್ಷಗಳಿಂದಲೂ ಸ್ವಾರ್ಥ ರಾಜಕಾರಣಕ್ಕೆ ದುರ್ಬಳಕೆ ಮಾಡಿಕೊಂಡು ಅಧಿಕಾರ ಉಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಸಮುದಾಯಗಳಿಗೆ ಮಾಡಿದ ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶೋಷಿತ ತಳ ಸಮುದಾಯಗಳ ಹೆಸರಲ್ಲಿ ಅಧಿಕಾರಕ್ಕೇರಲು ತಾತ್ಕಾಲಿಕ ಪರಿಹಾರಗಳಾಗಿ ಐದು ಗ್ಯಾರಂಟಿಗಳನ್ನು ನೀಡಿದರೇ ಹೊರತು ತಳ ಸಮುದಾಯಗಳಿಗೆ ಭೂಮಿ, ಮನೆ, ಉದ್ಯೋಗ, ಶಿಕ್ಷಣ, ಕಂಪನಿ ಸ್ಥಾಪನೆಯಂತಹ ಅವಕಾಶಗಳನ್ನು ನೀಡಿ ಆಮೂಲಗ್ರ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವಾಗಲಿಲ್ಲ ಎಂದು ಕಿಡಿಕಾರಿದರು.
,ಶೋಷಿತ ತಳ ಸಮುದಾಯಗಳ ಹೆಸರಿಗೊಂದು ಅಭಿವೃದ್ಧಿ ನಿಗಮ ಮಾಡಿದರೇ ಹೊರತು ಆ ನಿಗಮಗಳಿಗೆ ಸಮರ್ಪಕ ಅನುದಾನ ಕಲ್ಪಿಸಿ ನೇರಸಾಲ, ಸ್ವಯಂ ಉದ್ಯೋಗ ಸೃಷ್ಟಿಸಲಿಲ್ಲ. ಅಷ್ಟೇ ಅಲ್ಲದೆ ನಿಗಮಗಳಿಗೆ ನೀಡಿದ ಅಲ್ಪ ಅನುದಾನವನ್ನು ಚುನಾವಣೆಯಲ್ಲಿ ಹೆಂಡ ಹಂಚಲು ಅಕ್ರಮ ಬಳಕೆಗೆ ಅವಕಾಶ ಕೊಟ್ಟು, ಸಮುದಾಯಗಳ ನಿರುದ್ಯೋಗಿಗಳಿಗೆ ಘೋರ ಅನ್ಯಾಯ ಮಾಡಿದ್ದು ಜನರ ಕಣ್ಣ ಮುಂದೆ ಇಲ್ಲವೇ ಎಂದು ಆಕ್ರೋಷ ವ್ಯಕ್ತಪಡಿಸಿದರು.

Mandya
ಫೆ.13ಕ್ಕೆ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರ ರಾಜಗೋಪುರ ಲೋಕಾರ್ಪಣೆ : ಶ್ರೀ ಸೋಮೇಶ್ವರನಾಥ ಸ್ವಾಮೀಜಿ
ನಾಗಮಂಗಲ : ತಾಲೂಕಿನ ಹಾಲತಿ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದ ಮಹಾದ್ವಾರದ ನೂತನ ರಾಜಗೋಪುರ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮ ವು ಫೆಬ್ರವರಿ 13ರಂದು ನಡೆಯಲಿದೆ ಎಂದು ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಸೋಮೇಶ್ವರನಾಥ ಸ್ವಾಮೀಜಿಗಳು ತಿಳಿಸಿದರು
ಅವರು ತಾಲೂಕಿನ ಶಾಖಾಮಠದಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿ, ಶ್ರೀ ಮಠವು ಆಯೋಜನೆ ಮಾಡಿರುವ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಜಿಯವರ ದಿವ್ಯ ಆಶೀರ್ವಾದಗಳೊಂದಿಗೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ದೇವಾಲಯದ ಮಹಾ ದ್ವಾರದ 64 ಅಡಿಯ ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕುಂಭಾಭಿಷೇಕ ಕಾರ್ಯಕ್ರಮವನ್ನು ಇದೇ ತಿಂಗಳು ಫೆ. 13ರಂದು ಶುಕ್ರವಾರ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಲಿದ್ದಾರೆ.

ಇದೇ ಸಮಾರಂಭದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಾಂಕ 11. 12. ರಂದು ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಫೆ.12 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪೂಜಾ ಕಾರ್ಯಕ್ರಮಗಳಲ್ಲಿ ಅಕ್ಕಪಕ್ಕದ ಗ್ರಾಮದಿಂದ ಸುಮಾರು 60 ಗ್ರಾಮ ದೇವತೆಗಳು ಸೇರಲಿವೆ.
ಸಮಾರಂಭಕ್ಕೆ ನಾಡಿನ ಗಣ್ಯರು ಮುಖ್ಯಸ್ಥರು ಧಾರ್ಮಿಕ ಭಕ್ತರು ಆಗಮಿಸಲಿದ್ದಾರೆ. ಫೆ.13 ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೂತನ ಗೋಪುರ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವ ಜರಗಲಿದೆ.

ಭಕ್ತಾದಿಗಳು ಇದೇ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ತಿಳಿಸಿದರು.
Mandya
ಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
ಮಂಡ್ಯ: ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಫೆ.13 ರಿಂದ 19ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 9 ರವರೆಗೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿಶ್ವ ವಿದ್ಯಾಲಯದ ಮುಖ್ಯಸ್ಥರಾದ ಶಾರದ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ದೇವರ ಆದ್ಯಾತ್ಮ ಭಾವದ ಆಚರಣೆ ಮಹಾಶಿವರಾತ್ರಿಯ ಅಂಗವಾಗಿ ಕಾರ್ಯಕ್ರಮ ಯೋಜನೆ ಮಾಡಲಾಗಿದೆ ಎಂದರು.

ಏಳು ದಿನ ನಡೆಯಲಿರುವ ಕಾರ್‍ಯಕ್ರಮದಲ್ಲಿ 21 ಅಡಿ ಎತ್ತರದ ಶಿವಲಿಂಗ, ಭೂಲ್ ಬುಲಯ್ಯ, ಸ್ವರ್ಗ, ಮೈಂಡ್ ಸ್ಪಾ, ಉದ್ಬವಲಿಂಗ, ಸಹಸ್ರಲಿಂಗಗಳು ಆಕರ್ಷಣೆಯಾಗಲಿವೆ ಎಂದು ಹೇಳಿದರು.
ಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ವಿಜಯಲಕ್ಷ್ಮಿ ಹಾಜರಿದ್ದರು.
Mandya
ಅನಿರ್ದಿಷ್ಟಾವಧಿ ಧರಣಿ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು
ಮದ್ದೂರು: ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವುದನ್ನು ಖಂಡಿಸಿ ಸೋಮವಾರ ಬೆಂಗಳೂರು ಮೈಸೂರು ಹೆದ್ದಾರಿಯ ಸರ್ವೆ ರಸ್ತೆ ತಡೆ ನಡೆಸುತ್ತಿದ್ದ 80 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮದ್ದೂರು ನಗರಸಭೆಗೆ ಗೆಜ್ಜಲಗೆರೆ ಗ್ರಾ.ಪಂ. ಸೇರ್ಪಡೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮದ ಗ್ರಾ.ಪಂ.ಕಚೇರಿಯ ಮುಂದೆ ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಡೆಸುತ್ತಿದ್ದರು.

ಧರಣಿ ಪ್ರತಿಭಟನೆಯು 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಸೋಮವಾರ ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಗ್ರಾಮಸ್ಥರು ಮೈಸೂರು ಬೆಂಗಳೂರು ಸವರ್ಿಸ್ ಹೆದ್ದಾರಿಯಲ್ಲಿ ಸಂಚಾರ ತಡೆ ಮಾಡಿ ಪ್ರತಿಭಟನೆಯನ್ನು ನಡೆಸುತ್ತಿದರು.
ಎತ್ತಿನಗಾಡಿ ಹಾಗೂ ಜಾನುವಾರುಗಳೊಂದಿಗೆ ಗ್ರಾಮಸ್ಥರು ಆಗಮಿಸಿ ಮಹಾತ್ಮ ಗಾಂಧೀಜಿ ಭಾವಚಿತ್ರದೊಂದಿಗೆ ಹೆದ್ದಾರಿಯಲ್ಲೇ ಕುಳಿತು ರಾಜ್ಯ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಹಾಗೂ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೂ ಮೊದಲು ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿರವರು ರಸ್ತೆ ತಡೆಯನ್ನು ಕೈಬಿಡಲು ಪ್ರತಿಭಟನಾ ಕಾರರನ್ನು ಮನವೊಲಿಸಲು ಪ್ರಯತ್ನಿಸಿದರಾದರೂ ಪ್ರಯೋಜವಾಗಲಿಲ್ಲ. ನಂತರ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ರೈತ ಪರ ಹೋರಾಟಗಾತಿ ಸುನಂದಾ ಜಯರಾಮು, ಲಿಂಗಪ್ಪಾಜಿ, ಶಂಕರ್, ಜಿ.ಪಿ.ಯೋಗೇಶ್, ವೀರಪ್ಪ, ಚಂದ್ರಶೇಖರ, ಗೌರಮ್ಮ, ಜಯಮ್ಮ ಸೇರಿದಂತೆ ಸುಮಾರು 80 ಕ್ಕೂ ಹೆಚ್ಚು ಪ್ರತಿಟನಾಕಾರರನ್ನು ವಶಕ್ಕೆ ಪಡೆದು 3 ವಾಹನಗಳಲ್ಲಿ ಮಂಡ್ಯದ ಪೊಲೀಸ್ ಠಾಣೆಗೆ ಕರೆದೋಯ್ದರು.
ಪ್ರತಿಭಟನೆಯಲ್ಲಿ ಹಿನ್ನೆಲೆಯಲ್ಲಿ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತ ಪರ ಹೋರಾಟಗಾತಿ ಸುನಂದಾ ಜಯರಾಮ್ ಮಾತನಾಡಿ, ನಗರಸಭೆಗೆ ಗೆಜ್ಜಲಗೆರೆ ಗ್ರಾಮವನ್ನು ಸೇರ್ಪಡೆ ಮಾಡಿರುವ ಕ್ರಮ ಖಂಡಿಸಿ ಗ್ರಾಮಸ್ಥರು ನಿರಂತರವಾಗಿ 50 ದಿನಗಳ ಹೋರಾಟವನ್ನು ನಡೆಸುತ್ತಿದ್ದರೂ, ಸಕರ್ಾರದ ಯಾವುದೇ ಪ್ರತಿನಿಧಿಗಳು ಅಧಿಕಾರಿಗಳು ರೈತರ, ಗ್ರಾಮಸ್ಥರು ಆಶೋತ್ತರಗಳಿಗೆ ಸ್ಪಂದಿಸದೆ ನಿರ್ಲಕ್ಷ ಮಾಡಿದ್ದಾರೆ ಎಂದು ಆರೋಪಿಸಿದರು.
ಇದರ ವಿರುದ್ಧವಾಗಿ ಗೆಜ್ಜಲಗೆರೆ ಹೆದ್ದಾರಿಯಲ್ಲಿ ಸರ್ವಿಸ್ ರಸ್ತೆ ತಡೆಯಲು ಗ್ರಾಮಸ್ಥರು ಒಗ್ಗಟ್ಟಿನಿಂದ ಹೋರಾಟ ಮಾಡಲು ಹೊರಟಾಗ ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತ ಅವಕಾಶ ಮಾಡಿಕೊಡದೆ ರೈತರ ಹೋರಾಟವನ್ನು ದಿಕ್ಕು ತಪ್ಪಿಸುವ ಸಲುವಾಗಿ ರೈತರನ್ನು, ಮಹಿಳೆಯರು ಮತ್ತು ಗ್ರಾಮಸ್ಥರನ್ನು ಭಯಭೀತರನ್ನಾಗಿ ಮಾಡುವ ಉದ್ದೇಶದಿಂದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸುಮಾರು 80 ಕ್ಕೂ ಹೆಚ್ಚು ಗ್ರಾಮಸ್ಥರನ್ನು ಬಂಧಿಸಿರುವುದು ಖಂಡನೀಯವೆಂದು ಆಕ್ರೋಶ ವ್ಯಕ್ತಪಡಿಸಿದರು.
ಗೆಜ್ಜಲಗೆರೆ ಗ್ರಾಪಂಯನ್ನು ಮದ್ದೂರು ನಗರಸಭೆಯಿಂದ ಕೈ ಬಿಡುವತನಕ ಅನಿರ್ದಿಷ್ಟಾವಧಿ ಧರಣಿ ಪ್ರತಿಭಟನೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಹಾಗೂ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ಸಿಪಿಐ ನವೀನ್ ಕುಮಾರ್ ನೇತೃತ್ವದಲ್ಲಿ ನೂರಾರು ಮಂದಿ ಪೊಲೀಸ್ ಸಿಬ್ಬಂದಿ ಬಂದೋಬಸ್ತ್ನಲ್ಲಿ ಭಾಗವಹಿಸಿದರು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಂದ್ರಶೇಖರ್, ಲಿಂಗಪ್ಪಾಜಿ, ಮುದ್ದೇಗೌಡ್ರು, ಕೆ.ಬೊರೇಗೌಡ, ವಿರೇಶ್, ಗುರುಮೂತರ್ಿ, ಮಂಜಣ್ಣ, ಜಗದೀಶ್, ರಾಮಲಿಂಗಯ್ಯ, ಯೋಗೇಶ್ ಸೇರಿದಂತೆ ಇತರರು ಇದ್ದರು.
-
Mandya6 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Mandya7 hours agoಬೂದನೂರು ಗ್ರಾಮ ಪಂಚಾಯತಿಗೆ ನೇಮಕವಾಗಿರುವ ಆಡಳಿತಾಧಿಕಾರಿಗೆ ಗ್ರಾಮಸ್ಥರಿಂದ ಭವ್ಯ ಸ್ವಾಗತ
-
Hassan8 hours agoಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಎಚ್ಡಿಕೆ ಅಭಿಮಾನಿಗಳಿರುವ ಕ್ಷೇತ್ರ: ನಿಖಿಲ್ ಕುಮಾರಸ್ವಾಮಿ
-
Chamarajanagar14 hours agoಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
-
Mysore12 hours agoಹಣ್ಣುಗಳ ಮಹತ್ವ, ಪೌಷ್ಟಿಕಾಂಶದ ಬಗ್ಗೆ ಅರಿವು ಮೂಡಿಸಿದ ರವಿ ಮಹದೇವ್
-
Mandya5 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Special1 hour agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mandya4 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
