Cultural
ಕೆಲ್ಲೂರು ಗ್ರಾಮದ ಶ್ರೀ ಆದಿಶಕ್ತಿ ಗೌರಮ್ಮ ತಾಯಿ ವಿಸರ್ಜನಾ ಮಹೋತ್ಸವ – ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್ ಭೇಟಿ ನೀಡಿ ಭದ್ರತೆ

ಪಿರಿಯಾಪಟ್ಟಣ: ತಾಲೂಕಿನ ಕೆಲ್ಲೂರು ಗ್ರಾಮದ ಶ್ರೀ ಆದಿಶಕ್ತಿ ಗೌರಮ್ಮ ತಾಯಿ ವಿಸರ್ಜನಾ ಮಹೋತ್ಸವ ಅ.14 ಮತ್ತು 15 ರಂದು ನಡೆಯಲಿರುವ ಹಿನ್ನೆಲೆ ಗ್ರಾಮಕ್ಕೆ ಪಿರಿಯಾಪಟ್ಟಣ ಆರಕ್ಷಕ ಠಾಣೆ ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್ ಭೇಟಿ ನೀಡಿ ಭದ್ರತೆ ಪರಿಶೀಲಿಸಿದರು.
ಈ ವೇಳೆ ಗ್ರಾಮದ ಯಜಮಾನರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿ ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್ ಅವರು ಮಾತನಾಡಿ ಜಾತ್ರಾ ಮಹೋತ್ಸವ ದಿನ ಸಾವಿರಾರು ಭಕ್ತಾದಿಗಳು ಸೇರುವ ಹಿನ್ನೆಲೆ ಆರಕ್ಷಕ ಇಲಾಖೆ ವತಿಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ, ವಾಹನ ಸವಾರರು ನಿಗದಿಪಡಿಸಿದ ಪಾರ್ಕಿಂಗ್ ಸ್ಥಳಗಳಲ್ಲಿಯೇ ತಮ್ಮ ವಾಹನಗಳನ್ನು ನಿಲ್ಲಿಸಬೇಕು ಹಾಗು ದಾಸೋಹ ವಿತರಣೆಗೆ ನಿಗದಿಪಡಿಸಿದ ಸ್ಥಳದಲ್ಲಿ ಭಕ್ತಾದಿಗಳು ಪ್ರಸಾದ ಸ್ವೀಕರಿಸಬೇಕು, ಅಮ್ಮನವರ ಮೆರವಣಿಗೆ ಹೊರಡುವ ಸ್ಥಳದಿಂದ ವಿಸರ್ಜನೆಯಾಗುವ ಸ್ಥಳದ ಮಾರ್ಗಗಳಲ್ಲಿ ಆರಕ್ಷಕ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗುವುದು, ಸಂಪ್ರದಾಯದಂತೆ ಅನಾದಿಕಾಲದಿಂದಲೂ ನಡೆದುಕೊಂಡು ಬಂದಿರುವ ಶ್ರೀ ಆದಿಶಕ್ತಿ ಗೌರಮ್ಮ ತಾಯಿಯವರ ವಿಸರ್ಜನ ಮಹೋತ್ಸವವನ್ನು ಈ ಬಾರಿಯೂ ಯಶಸ್ವಿಗೊಳಿಸಲು ಸ್ಥಳೀಯರು ಹಾಗೂ ಭಕ್ತಾದಿಗಳು ಆರಕ್ಷಕ ಇಲಾಖೆಯೊಂದಿಗೆ ಸಹಕರಿಸಿ ಯಾವುದೇ ಅಹಿತಕರ ಘಟನೆ ಜರುಗದಂತೆ ಎಚ್ಚರ ವಹಿಸುವಂತೆ ಮನವಿ ಮಾಡಿ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.
ಈ ಸಂದರ್ಭ ಆರಕ್ಷಕ ಇಲಾಖೆ ಸಿಬ್ಬಂದಿ ನಂಜುಂಡಸ್ವಾಮಿ, ನಾರಾಯಣಶೆಟ್ಟಿ ಹಾಗೂ ಗ್ರಾಮದ ಯಜಮಾನರು ಜನಪ್ರತಿನಿಧಿಗಳು ಮುಖಂಡರು ದೇವಾಲಯ ಹಾಗೂ ದಾಸೋಹ ಸಮಿತಿ ಪದಾಧಿಕಾರಿಗಳು ಗ್ರಾಮಸ್ಥರು ಇದ್ದರು.
- ಬೆಕ್ಕರೆ ಸತೀಶ್ ಆರಾಧ್ಯ
Cultural
ಶ್ರೀರಾಮನ ಚರಿತ್ರೆ ವಿಶ್ವಕ್ಕೆ ಸಾರಿದ ಶ್ರೀಮಹರ್ಷಿ ವಾಲ್ಮೀಕಿ — ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು ನ.15
ಶ್ರೀ ರಾಮನ ಚರಿತ್ರೆಯನ್ನು ವಿಶ್ವಕ್ಕೆ ಸಾರಿದ ಮಹಾನ್ ನಾಯಕ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳು ಪ್ರಜಾಪ್ರಭುತ್ವಕ್ಕೆ ಬಹು ಮುಖ್ಯವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ನಂಜನಗೂಡು ತಾಲೂಕಿನ ಹುರ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ.ಅವುಗಳನ್ನು ಪ್ರತಿಯೊಬ್ಬರು ಸದ್ಬಳಕೆ ಪಡೆದುಕೊಳ್ಳುವ ಮೂಲಕ ಆರ್ಥಿಕ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಸಮಾಜದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವ ಮೂಲಕ ಎಲ್ಲಾ ರೀತಿಯ ಸಹಕಾರ ನೀಡುತ್ತೆನೆ ಎಂದರು.
ಸರ್ಕಾರಿ ಸೌಲಭ್ಯ ಪಡೆಯಲು ಯಾವುದೇ ಜಾತಿಭೇದ ಮಾಡಬೇಡಿ ಸಮಾಜಕ್ಕೆ ನಾವೆಲ್ಲರೂ ಒಂದೇ ಎಂಬ ಸಂದೇಶ ವಾಲ್ಮೀಕಿ ಸಮುದಾಯ ಸಾರಬೇಕು.ಎಲ್ಲರನ್ನೂ ಒಗ್ಗೂಡಿಸುವ ಮೂಲಕ ಯಾವುದೇ ಭಿನ್ನಾಭಿಪ್ರಾಯ ಬಾರದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ ಗ್ರಾಮದ ಎಲ್ಲ ನಾಯಕ ಸಮಾಜದವರನ್ನು ಒಟ್ಟಾಗಿ ಕರೆದೊಯ್ಯುವ ಜವಾಬ್ದಾರಿ ಇರಬೇಕು.ಶ್ರೀ ಮಹರ್ಷಿ ವಾಲ್ಮೀಕಿ ಅವರ ರಾಮಾಯಣದಲ್ಲಿ ಹೆಚ್ಚು ರೂಪಕ ಅಲಂಕಾರ ಬಳಕೆಯಾಗಿರುವುದ್ದರಿಂದ ಕಾಳಿದಾಸ ಕವಿ ಮಹರ್ಷಿ ವಾಲ್ಮೀಕಿ ಅವರನ್ನು ಕವಿಕುಲ ಚಕ್ರವರ್ತಿ ಎಂಬುದಾಗಿಯೋ ವರ್ಣಿಸಿದ್ದಾರೆ ಅಲ್ಲದೇ ಜಗತ್ತಿನ ಶ್ರೇಷ್ಠ ವಿಮಾರ್ಶಕ ಥಾಮಸ್ ಪ್ರಕಾರ ವಾಲ್ಮೀಕಿ ರಾಮಾಯಣ ಜಗತ್ತಿನ ಶ್ರೇಷ್ಠ ಕಾವ್ಯ ಸಂಪತ್ತು ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕುಂಬ್ರಳ್ಳಿ ಸುಬ್ಬಣ್ಣ, ಶ್ರೀ ಕಂಠನಾಯಕ,ತಾ ಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜ್,ನಾಯಕ ಸಂಘದ ತಾಲ್ಲೂಕು ಅದ್ಯಕ್ಷ ಬಂಗಾರನಾಯಕ, ಕಾಂಗ್ರೆಸ್ ಯುವ ಘಟಕದ ಅದ್ಯಕ್ಷ ದೇಬೂರು ಆಶೋಕ್,ಗ್ರಾ ಪಂ ಅದ್ಯಕ್ಷೆ ತಾಯಮ್ಮ,
ದೊರೆಸ್ವಾಮಿನಾಯಕ,ಅಭಿನಂದನ್ ಪಾಟೀಲ್,ಗ್ರಾ ಪಂ ಸದಸ್ಯದೇವನಾಯಕ,ನಾಗನಾಯ್ಕ,ಶ್ರೀಕಂಠಸ್ವಾಮಿ,ಶಿವರಾಜು,ಪ್ರಕಾಶ್,ನಂಜುಂಡಸ್ವಾಮಿ, ಸಿದ್ದು,ಮಹೇಶ್, ಮಹೇಂದ್ರ, ಹಾಗೂ ಕಿಚ್ಚಿನ ಅಭಿಮಾನಿ ಬಳಗದವರು ಹಾಜರಿದ್ದರು.
ನಂಜನಗೂಡು ಮಹದೇವಸ್ವಾಮಿ ಪಟೇಲ್.
Cultural
ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ

ಆಲೂರು : ನೂರಾರು ವರ್ಷಗಳ ಪುರಾತನ ಕಾಲದ ಶ್ರೀ ನಂಜುಂಡೇಶ್ವರ ಸ್ವಾಮಿ ದೇಗುಲದಲ್ಲಿ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.ತಾಲ್ಲೂಕಿನ ಕಸಬಾ ಹೋಬಳಿ ಸೊಂಪುರ ಗ್ರಾಮದ ಸಮೀಪದಲ್ಲಿರುವ ನಂಜದೇವರ ಕಾವಲಿನಲ್ಲಿ ಸುಕ್ಷೇತ್ರ ನಂಜುಂಡೇಶ್ವರ ದೇವಾಲಯದಲ್ಲಿ 52ನೇ ಹುಣ್ಣಿಮೆ ಮಹೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಬೆಳಗಿನ ಜಾವದಿಂದಲೇ ದೇವಾಲಯ ಶುಚಿಗೊಳಿಸಿ ವಿವಿಧ ಹೂಗಳಿಂದ ಅಲಂಕರಿಸಿ ಪೂಜಾ ವಿಧಿ ವಿಧಾನಗಳು ಪ್ರಾರಂಭವಾಗಿ ವಿವಿಧ ಅಭಿಷೇಕ ಸೇರಿದಂತೆ ಅಲಂಕಾರ ಮಹಾ ಮಂಗಳಾರತಿ ತೀರ್ಥ ಪ್ರಸಾದ ಹಾಗೂ ಅನ್ನಸಂತರ್ಪಣೆ ನಡೆಯಿತು.
ಆಲೂರು ತಾಲೂಕು ಸೇರಿದಂತೆ ಹಲವೆಡೆಗಳಿಂದ ನೂರಾರು ಭಕ್ತರ ದಂಡು ಅಗಮಿಸಿ ಪೂಜಾ ಕಾರ‍್ಯದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.ವಿಶೇಷ ಎಂದರೆ ಭಕ್ತಾಧಿಗಳು ತಮ್ಮ ಇಷ್ಟಾರ್ಥ ಕೋರಿಕೆಗಾಗಿ ಹರಕೆ ಹೊರುತ್ತಿದ್ದು. ಕೋರಿಕೆಗಳು ಈಡೇರಿದ ನಂತರ ಭಕ್ತರು ಪ್ರತಿ ಸೋಮವಾರ, ಶುಕ್ರವಾರ, ಅಮಾವಾಸ್ಯೆ, ಹುಣ್ಣಿಮೆಯ ದಿನಗಳಂದು ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಭಕ್ತಾಧಿಗಳೇ ಸ್ವಯಂ ಪ್ರೇರಿತರಾಗಿ ಹಮ್ಮಿಕೊಳ್ಳುತ್ತ ಬಂದಿದ್ದಾರೆ ಎಂದು ದೇಗುಲ ಟ್ರಸ್ಟ್ ಅಧ್ಯಕ್ಷ ಈರಣ್ಣಯ್ಯ ತಿಳಿಸಿದ್ದಾರೆ.
Cultural
ಬ್ರಹ್ಮ ಕುಮಾರೀಸ್ ಈಶ್ವರಿ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ರಕ್ಷಾಬಂಧನ

ಮಂಡ್ಯ: ನಗರದ ಬನ್ನೂರು ರಸ್ತೆಯಲ್ಲಿರುವ ಬ್ರಹ್ಮ ಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯದ ವತಿಯಿಂದ ಪತ್ರಕರ್ತರ ಸಂಘದಲ್ಲಿ ಸೋಮವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು .ಪತ್ರಕರ್ತರಿಗೆ ರಾಕಿ ಕಟ್ಟುವ ಮೂಲಕ ಕಾರ್ಯಕ್ರಮಕ್ಕೆ ಬ್ರಹ್ಮ ಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಬಿ.ಕೆ.ಶ್ವೇತ ಚಾಲನೆ ನೀಡಿದರು.ನಂತರ ಬಿ.ಕೆ.ಶಾರದಾ ಅವರು ಮಾತನಾಡಿ, ನನ್ನ ಕರ್ಮ ನನ್ನನ್ನು ರಕ್ಷಣೆ ಮಾಡುತ್ತದೆ. ಪರಮಾತ್ಮನು ರಕ್ಷಿಸುತ್ತಾನೆ ಎಂದರು.ಸಮಾಜದಲ್ಲಿ ಕಾಮ, ಕ್ರೋಧ, ಮದ, ಮತ್ಸರಗಳು ಅತಿಯಾಗಿದೆ. ಹಾಗಾಗಿ ಪಂಚಕರ್ಮಗಳಿಂದ ನಮಗೆ ರಕ್ಷಣೆ ಬೇಕಿದೆ ಎಂದು ತಿಳಿಸಿದರು.
ಎಲ್ಲಾ ಆತ್ಮಗಳು ಒಳ್ಳೆಯ ಆತ್ಮಗಳಾಗಿದೆ. ಆದರೆ ಆತ್ಮದಲ್ಲಿನ ನಕರಾತ್ಮಕ ಭಾವನೆ ಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆ ಶಕ್ತಿಯನ್ನು ಪಡೆದುಕೊಳ್ಳಬೇಕು ಎಂದರು. ವಿದ್ಯಾದೇವತೆ ಸರಸ್ವತಿಗೆ ಪರಮಾತ್ಮನ ಜ್ಞಾನವಿದೆ. ಹಾಗಾಗಿ ಆಕೆಯನ್ನು ವಿದ್ಯಾದೇವಿ ಎಂದು ಪೂಜಿಸುತ್ತೇವೆ ಎಂದು ತಿಳಿಸಿದ ಅವರು, ಆಧ್ಯಾತ್ಮಿಕ ಜ್ಞಾನವಿಲ್ಲದೆ ನಾವು ಏನನ್ನು ಸಾಧಿಸಲು ಆಗುವುದಿಲ್ಲ. ಈ ಜ್ಞಾನವಿದ್ದಲ್ಲಿ ವಿಕಾರಗಳಿಂದ ಮುಕ್ತಿ ಪಡೆಯಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಬಿಕೆ ಗೀತಾಂಜಲಿ, ಬಿಕೆ ಯಶೋಧ, ಬಿ.ಕೆ.ಪ್ರಶಾಂತ್ ಉಪಸ್ಥಿತರಿದ್ದರು.
-
Chamarajanagar21 hours ago
ಕಾಂಗ್ರೆಸ್ ಗೆ ಭರ್ಜರಿ ಗೆಲುವು
-
Uncategorized20 hours ago
ಕಾಡಾನೆ ಸೆರೆ ಕಾರ್ಯಾಚರಣೆ ಯಶಸ್ವಿ: ಪುಂಡಾನೆ ಸೆರೆ ಹಿಡಿದ ಕ್ಯಾಪ್ಟನ್ ಪ್ರಶಾಂತ್ ಅಂಡ್ ಟೀಮ್
-
Chamarajanagar22 hours ago
ಕಾರು ಅಪಘಾತ ಇಬ್ಬರು ಸ್ಥಳದಲ್ಲೇ ಮೃತ
-
Chikmagalur23 hours ago
ಹತ್ತು ಲಕ್ಷ ಮೌಲ್ಯದ 11 ಬೈಕ್ ಕದ್ದಿದ್ದ ಕಳ್ಳನ ಬಂಧನ
-
National - International13 hours ago
ಪಾಕ್ನ 90 ಮಂದಿ ಸೈನಿಕರನ್ನು ಹತ್ಯೆ ಮಾಡಿದ್ದೇವೆ ಎಂದ ಬಲೂಚ್ ಲಿಬರೇಶನ್ ಆರ್ಮಿ
-
Chamarajanagar15 hours ago
ತಲೆಯಲ್ಲಿ ಕೂದಲಿಲ್ಲ ಎಂದು ನಿಂದಿಸಿದ ಪತ್ನಿ: ಮನನೊಂದ ಪತಿ ಆತ್ಮ*ಹತ್ಯೆ
-
Kodagu15 hours ago
ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಬಾಲಕಿ ಮೃ*ತ
-
Mandya18 hours ago
ಮಳವಳ್ಳಿ ವಸತಿ ಶಾಲೆಯ ದುರ್ಘಟನೆ : ಎಚ್ಡಿಕೆ ಕಳವಳ