Connect with us

Mandya

ನಾಡಪ್ರಭು ಕೆಂಪೇಗೌಡರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ: ಸಚಿವ ಎನ್.ಚೆಲುವರಾಯಸ್ವಾಮಿ

Published

on

ಮಂಡ್ಯ: ನಾಡಪ್ರಭು ಕೆಂಪೇಗೌಡರವರು ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆಯಿಂದಾಗಿ ಬೆಂಗಳೂರು ಮಹಾನಗರ ಇಂದು ಬಹಳ ಅಚ್ಚುಕಟ್ಟಾಗಿ ನಿರ್ಮಾಣವಾಗಿದೆ. ಅವರ ಉತ್ತಮ ಆಡಳಿತ ಹಾಗೂ ಅಭಿವೃದ್ಧಿಯ ಚಿಂತನೆ ಎಲ್ಲರಿಗೂ ಮಾದರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ತಿಳಿಸಿದರು.

ಅವರು ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶ್ರೀ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಪ್ರತಿ ವರ್ಷವೂ ಸರ್ಕಾರದಿಂದ ವಿವಿಧ ಜಯಂತಿಯನ್ನು ಆಚರಿಸುತ್ತಿದ್ದು, ನಮ್ಮ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ವಿವಿಧ ಮಹನೀಯರು ನೀಡಿದ ಕೊಡುಗೆಗೆ ಗೌರವ ಸಲ್ಲಿಸಿ ಮುಂದಿನ ಪೀಳಿಗೆಗೆ ತಿಳಿಸುವುದು ಜಯಂತಿ ಆಚರಣೆಯ ಉದ್ದೇಶವಾಗಿದೆ ಎಂದರು.

ಬೆಂಗಳೂರು ನಗರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದ್ದೂ, ಇದಕ್ಕೆ ಕಾರಣ ಕೆಂಪೇಗೌಡರವರ ದೂರದೃಷ್ಟಿ ಹಾಗೂ ರೂಪಿಸಿದ ಯೋಜನೆಗಳು ಎಂದರು.

ನಾಡಪ್ರಭು ಕೆಂಪೇಗೌಡರು ತಮ್ಮ ಆಳ್ವಿಕೆಯ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಯನ್ನು ನೋಡಿ ಪ್ರಭಾವಿತರಾಗಿ, ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಬೇಕು ಎಂದು ಪಣತೊಟ್ಟು ಬೆಂಗಳೂರು ನಗರವನ್ನು ನಿರ್ಮಿಸಿದರು. ಅವರ ದೃಷ್ಟಿಕೋನ ಎಲ್ಲಾ ವರ್ಗದ ಜನರಿಗೆ ಒಳಿತು ಹಾಗೂ ಅನುಕೂಲವಾಕರವಾಗಿತ್ತು. ಬೆಂಗಳೂರಿನಲ್ಲಿ ಸಮೃದ್ಧಿಯಾಗಿ ಕೆರೆ ಕಟ್ಟೆಗಳ ನಿರ್ಮಾಣದ ಜೊತೆಗೆ ವ್ಯಾಪಾರಕ್ಕೆ ಉತ್ತಮ ಅವಕಾಶ ಕಲ್ಪಿಸಿದ್ದಾರೆ. ನೂರಾರು ವರ್ಷಗಳ ಕಾಲ ಜನರಿಗೆ ಉಪಯೋಗವಾಗುವಂತೆ ಶ್ರಮಿಸಿದ್ದಾರೆ ಎಂದು ತಿಳಿಸಿದರು.

ಪ್ರತಿಯೊಬ್ಬರಲ್ಲೂ ನಮ್ಮ ದೇಶ, ನಮ್ಮ ನಾಡು ಎಂಬ ಮನೋಭಾವನೆ ಬೆಳೆಯಬೇಕು. ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಇರಬೇಕು. ಸಮಾಜಮುಖಿ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ ಅವರೊಂದಿಗೆ ಕೈ ಜೋಡಿಸಿ ಎಂದರು.

ರೈತರು ಬೆಳೆದ ಬೆಳೆ ಮಾರಾಟ ಮಾಡಲು ಸ್ಥಳ ಬೇಕಿತ್ತು, ಬೆಂಗಳೂರಿನಲ್ಲಿ ಸ್ಥಳ ಮಾಡಿಕೊಟ್ಟ ವ್ಯಾಪರಕ್ಕೆ ಉತ್ತಮ ಪೇಟೆಗಳನ್ನು ನಿರ್ಮಾಣ ಮಾಡಿಕೊಟ್ಟವರು ನಾಡಪ್ರಭು ಕೆಂಪೇಗೌಡರು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ತಿಳಿಸಿದರು.

ಸಮುದ್ರಕ್ಕಿಂತ 3500 ಅಡಿ ಎತ್ತರದಲ್ಲಿದ್ದ ಬೆಂಗಳೂರನ್ನು ರಾಜಧಾನಿಯಾಗಿ ಆಯ್ಕೆ
ಮಾಡಿ ಹಲವಾರು ಸೌಲಭ್ಯಗಳನ್ಜು ಒದಗಿಸಿ ಲಕ್ಷಾಂತರ ಜನರು ಜೀವನ ನಡೆಸುವ ರೀತಿ ಸುಂದರವಾಗಿ ನಿರ್ಮಾಣ ಮಾಡಿದ ಹೆಗ್ಗಳಿಕೆ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.

ಪಾಕ್೯ಗಳ ಅಭಿವೃದ್ಧಿಗಾಗಿ ರೂ 2 ಕೋಟಿ ಬಿಡುಗಡೆಯಾಗಿದ್ದು, ರೈಲ್ವೆ ನಿಲ್ದಾಣದ ಹತ್ತಿರ ಇರುವ ಕೆಂಪೇಗೌಡ ಪಾಕ್೯ನ್ನು ಅಭಿವೃದ್ಧಿ ಪಡಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದರು.

ಸಕ್ಕರೆ ಕಾರ್ಖಾನೆಗೆ ಹಿಂದಿನ ವರ್ಷ 50 ಕೋಟಿ ರೂ ಅನುದಾನವನ್ನು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕಾರ್ಖಾನೆಗೆ ಒದಗಿಸಿ ಅಭಿವೃದ್ಧಿಪಡಿಸಿದ್ದಾರೆ. ಈ ವರ್ಷ ಕಾರ್ಖಾನೆ ಉತ್ತಮವಾಗಿ ನಡೆಯುತ್ತದೆ ಎಂದರು.

ಸರ್ಕಾರ ಬೆಂಗಳೂರಿನ ಹತ್ತಿರ ಇನ್ನೊಂದು ವಿಮಾನ ನಿಲ್ದಾಣ ನಿರ್ಮಿಸಲು ಚಿಂತಿಸುತ್ತಿದ್ದು, ಮಂಡ್ಯ ಅಥವಾ ಮದ್ದೂರು ಭಾಗದಲ್ಲಿ ಉತ್ತಮ ಸ್ಥಳವನ್ನು ಗುರುತಿಸಿ ನೀಡಲು ಸಿದ್ಧವಿದ್ದೇವೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೂ ಚರ್ಚಿಸಲಾಗುವುದು ಎಂದರು.

ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಮಾತನಾಡಿ, ಈ ಹಿಂದೆ ರಾಜ ಮಹರಾಜರು ಹಾಗೂ ಮಹಾನ್ ವ್ಯಕ್ತಿಗಳು ಸಮಾಜದಲ್ಲಿ ನಮ್ಮ ಜೀವಿತ ಅವಧಿಯಲ್ಲಿ ಸಮಾಜಕ್ಕೆ ಉಪಯುಕ್ತವಾಗುವ ಕೆರೆ, ಕಟ್ಟೆ, ಕಾಲುವೆ, ಮರ ಗಿಡಗಳನ್ನು ನೆಟ್ಟಿ ಕೊಡುಗೆ ನೀಡಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಭಾವಿಸುತ್ತಿದ್ದರು. ಇಂದಿನ ಜನರು ಸಹ ಸಮಾಜಮುಖಿ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದರು.

ಇಂದು ಕೆರೆ ಕಟ್ಟೆಗಳ ನಿರ್ಮಾಣಕ್ಕೆ ಜೆ.ಸಿ.ಬಿ, ಟ್ರಕ್ಟರ್ ಮುಂತಾದ ಆಧುನಿಕ ಯಂತ್ರಗಳಿವೆ. ಆದರೆ ಕೆಂಪೇಗೌಡರು ಸೇರಿದಂತೆ ಬೇರೆ ರಾಜ ಮಹರಾಜರು ಕೆರೆ ನಿರ್ಮಾಣ ಮಾಡಬೇಕದರೆ ಹಾರೆ, ಗುದ್ದಲಿ, ಬಾಂಡಲಿ ಮುಂತಾದ ಅವಶ್ಯಕ ವಸ್ತುಗಳನ್ನು ಕೆರೆ ನಿರ್ಮಾಣಕ್ಕಾಗಿ ಮೊದಲೇ ತಯಾರಿಸಿಕೊಳ್ಳಬೇಕಿತ್ತು. ಸಾವಿರಾರು ಕಾರ್ಮಿಕರ ಶ್ರಮ ಹಾಕಬೇಕಿತ್ತು. ಇಂತಹ ಕೆರೆಗಳನ್ನು ಸಂರಕ್ಷಿಸಿಕೊಳ್ಳಬೇಕು ಎಂದರು.

ಶಾಲಾ ಕಾಲೇಜುಗಳಿಗೆ ಹೋಗಿ ನೀರಿನ ಪ್ರಚಾರ ಮಾಡಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬಹಳ ಉಂಟಾಗುತ್ತದೆ ಆದ್ದರಿಂದ ಈಗಿನಿಂದಲೇ ಕೆರೆ ಕಟ್ಟೆ ಬಾವಿಗಳನ್ನು ಸಂರಕ್ಷಿಸಿ ನೀರನ್ನು ಉಳಿಸಿ ಕೆರೆ ಕಟ್ಟೆಗಳ ಜೀರ್ಣೋದ್ಧಾರ ಮಾಡಬೇಕು ಎಂದು ಹೇಳಿದರು.

ಅಧಿಕಾರಿಗಳು ಕೆರೆಗಳಲ್ಲಿ ವೈಜ್ಞಾನಿಕವಾಗಿ ಹೂಳು ತೆಗೆಯುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ನೀರು ಹಿಡಿದಿಟ್ಟಿಕೊಳ್ಳುವ ಶಕ್ತಿ ಇರುವ ಮಣ್ಣು ನಾಶವಾಗುತ್ತದೆ ಎಂದು ಕಿವಿಮಾತು ಹೇಳಿದರು.

ನಾಡಪ್ರಭು ಕೆಂಪೇಗೌಡರ ಚರಿತ್ರೆ ತಿಳಿಸಿದ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ

ಕೊಮ್ಮೇರಹಳ್ಳಿ ಆದಿಚುಂಚನಗಿರಿ ಶಾಖಾ ಮಠದ ಪುರುಷೋತ್ತಮಾನಂದ ಸ್ವಾಮೀಜಿ ಅವರು ಮಾತನಾಡಿ, ನಾಡಪ್ರಭು ಕೆಂಪೇಗೌಡ ಅವರು ಅವರ ತಂದೆ ಜೊತೆಯಲ್ಲಿ ವಿಜಯನಗರ ಸಾಮ್ರಾಜ್ಯಕ್ಕೆ ಹೋದಾಗ ಅಲ್ಲಿಯ ಐಶ್ವರ್ಯ, ಬೀದಿ ಬೀದಿಗಳಲ್ಲಿ ಇದ್ದಂತಹ ಚಿನ್ನ ಬೆಳ್ಳಿ ಗಳನ್ನು ಮಾರಾಟ, ಸಮೃದ್ಧವಾದ ಆಸ್ತಿಯನ್ನು ಕಂಡು ಇಂತಹ ಒಂದು ನಗರವನ್ನು ನಾನು ನಮ್ಮ ಪ್ರದೇಶದಲ್ಲಿ ಕಟ್ಟಬೇಕು ಎಂದು ಮನದಟ್ಟು ಮಾಡಿಕೊಟ್ಟರು.

ಎಷ್ಟೋ ಪ್ರದೇಶಗಳನ್ನು ನೋಡಿ ಯಾವುದು ಕೂಡ ಸರಿ ಅನಿಸದೆ ಇದ್ದಾಗ ಬೆಂದಕಾಳೂರು ಎಂಬ ಗ್ರಾಮವನ್ನು ಆಯ್ಕೆ ಮಾಡಿಕೊಂಡು ಬೆಂಗಳೂರು ನಿರ್ಮಾಣಕ್ಕೆ ಮುಂದಾಗುತ್ತಾರೆ.

ಬೆಂಗಳೂರು ನಗರ ವನ್ನು ನಿರ್ಮಿಸಿ 4 ದಿಕ್ಕಿನಲ್ಲೂ 4 ಗೋಪುರಗಳನ್ನು ಕಟ್ಟಿಸುತ್ತಾರೆ ನಾಡಿನ ಎಲ್ಲಾ ಜನರಿಗೂ ಎಲ್ಲಾ ಜನಾಂಗದ ಬಂಧುಗಳಿಗೂ 54 ಪೇಟೆ ಗಳನ್ನು ನಿರ್ಮಾಣ ಮಾಡುತ್ತಾರೆ.

ಆ ಪೇಟೆಗಳಲ್ಲಿ ಆಯಾ ಜನಾಂಗದವರು ವ್ಯವಹಾರ ವ್ಯಾಪಾರ ಮಾಡುವುದಕ್ಕೆ ಅನುವು ಮಾಡಿ ಕೊಟ್ಟರು ಮತ್ತು ಸರ್ವರಿಗೂ ಸುಖ ಬಾಳು ಸರ್ವರಿಗೂ ಸಮ ಬಾಳು ನೀಡಿದರು.

ಜನರಿಗೆ ನೀರು ಒದಗಿಸಲು ನೂರಾರು ಕೆರೆ ಕಟ್ಟೆ ಬಾವಿಗಳನ್ನು ಮಾಡಿದರು, ಎಲ್ಲಾ ಜನರಿಗೂ ದೇವಾಲಯಗಳನ್ನು ನಿರ್ಮಾಣ ಮಾಡಿದರು. ಜನರಿಗೆ ಓಡಾಡುವುದಕ್ಕೆ ವಾಯು ವಿಹಾರಕ್ಕಾಗಿ ವಿವಿಧ ಪಾರ್ಕ್ ನ್ನು ಕೂಡ ನಿರ್ಮಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮಾಜಸೇವೆ/ಸಂಘಟನೆಯ ವಿಭಾಗ- ಜ್ಯೋತಿ ನಾಗಣ್ಣಗೌಡ, ರೈತ ಚಳುವಳಿ ನಾಯಕರಾದ- ಎ.ಎಮ್. ಕೆಂಪುಗೌಡ, ಸಮಾಜ ಸೇವೆ/ಯುವ ಸಂಘಟನೆಯ- ತಗ್ಗಳ್ಳಿ ವೆಂಕಟೇಶ್, ರಕ್ತದಾನ ಶಿಬಿರ ಸಂಘಟನೆ- ಎನ್ ಕೆ ಯುವ ಬ್ರಿಗೇಡ್, ಕ್ರೀಡಾ ಕ್ಷೇತ್ರ- ಅರವಿಂದ್ ಎ ಅವರಿಗೆ ಸನ್ಮಾನ ಮಾಡಲಾಯಿತು.

ಬಳಿಕ ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ ಅಂಗವಾಗಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ-ಮದ್ದೂರು ತಾಲೂಕು ಪೂರ್ಣ ಪ್ರಜ್ಞಾ ಕಾನ್ವೆಂಟ್ ಶಾಲೆಯ ಲಿಖಿತಾರಾಜು, ದ್ವಿತೀಯ ಬಹುಮಾನ-ಪಾಂಡವಪುರ ತಾಲೂಕು ಎಲ್ ಕೆ ಆರ್ ಸಿಬಿಎಸ್ಸಿ ಶಾಲೆಯ ಪ್ರಜ್ಞಾ, ತೃತೀಯ ಬಹುಮಾನ- ಮಂಡ್ಯ ಉತ್ತರ ವಲಯದ ದೊಡ್ಡಗರುಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಆಶಾ ಅವರಿಗೆ ಬಹುಮಾನ ವಿತರಿಸಲಾಯಿತು.

ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಪ್ರಥಮ ಬಹುಮಾನ- ಶ್ರೀರಂಗಪಟ್ಟಣ ತಾಲೂಕು ಅರಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೀಪಿಕಾ ಜಿ.ಕೆ, ದ್ವಿತೀಯ ಬಹುಮಾನ- ಮದ್ದೂರು ತಾಲೂಕು ಶಿವಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಿಶನ್ ಸಿ.ಎನ್ ಅವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಕ್ ತನ್ವಿರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎನ್ ಯತೀಶ್, ಅಪರ ಜಿಲ್ಲಾಧಿಕಾರಿ ಡಾ..ಹೆಚ್.ಎಲ್. ನಾಗರಾಜು, ಉಪವಿಭಾಗಾಧಿಕಾರಿ ಶಿವಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್. ಉದಯಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾಶಿವಲಿಂಗಯ್ಯ ಅವರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mandya

ಜ.23 ರಂದು ಬೃಹತ್ ರಕ್ತದಾನ ಶಿಬಿರ : ನಟರಾಜ್

Published

on

ಮಂಡ್ಯ: ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಭಾಷ್‌ ಚಂದ್ರಬೋಸ್ ಅವರ ೧೨೮ನೇ ಜನ್ಮದಿನದ ಸ್ಮರಣಾರ್ಥ ನಿರಂತರ ೨೪ ಗಂಟೆಗಳ ಕಾಲ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜನವರಿ ೨೩ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೀವಧಾರೆ ಟ್ರಸ್ಟ್‌ನ ನಟರಾಜ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಸ್ಟ್‌ನ ವತಿಯಿಂದ ಇದುವರೆಗೂ ೩೪೪ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು, ೪೩ ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ಯೋಧರ ಆಸ್ಪತ್ರೆಯನ್ನೂ ಒಳಗೊಂಡಂತೆ ಸರ್ಕಾರಿ ರಕ್ತನಿಧಿ ಕೇಂದ್ರಗಳಿಗೆ ನಿರಂತರವಾಗಿ ಕಾಲಕಾಲಕ್ಕೆ ಸಂಗ್ರಹಿಸಿದ ರಕ್ತ ಒದಗಿಸುತ್ತಿದೆ ಎಂದರು.

ಜನವರಿ ೨೩ರ ಬೆಳಿಗ್ಗೆ ೦೮ ಪ್ರಾರಂಭವಾಗುವ ರಕ್ತದಾನ ಶಿಬಿರ ಜನವರಿ ೨೪ರ ಬೆಳಿಗ್ಗೆ ೦೮ ಗಂಟೆ ವರೆಗೂ ನಡೆಯಲಿದೆ. ರಕ್ತದಾನ ಶಿಬಿರ ಸಂಬಂಧ ೧೨೮ ಹಳ್ಳಿಗಳಿಗೆ ಭೇಟಿ ಪ್ರಚಾರ ಮಾಡಲಾಗಿದೆ. ಜನವರಿ ೧೮ರಂದು ನಗರದ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ಮೂಲಕ ಪ್ರಚಾರ ಮಾಡಲಾಗಿದೆ. ಟ್ರಸ್ಟ್‌ನಿಂದ ನಡೆಯುವ ೩೪೫ನೇ ರಕ್ತದಾನ ಶಿಬಿರದಲ್ಲಿ ೧೫೦೦ ಯುನಿಟ್ ಸಂಗ್ರಹವಾಗುವ ನಿರೀಕ್ಷೆಯಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಕಾರ್ಯಕ್ರಮದಲ್ಲಿ ಬೆಳಗಿನ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿಯ ಊಟದ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರಿ ಆಸ್ಪತ್ರೆಯಿಂದ ರಕ್ತ ಸಂಗ್ರಹಿಸಲು ವೈದ್ಯ ಸಿಬ್ಬಂದಿಗಳು ೩ ಪಾಳಯದಲ್ಲಿ ಕಾರ್ಯನಿರ್ವಹಿಸಲಿದ್ದು, ಸರ್ಕಾರಿ ಆಸ್ಪತ್ರೆಯಿಂದ ೧೫೦ ಹಾಸಿಗೆ ವ್ಯವಸ್ಥೆಯನ್ನು ಒದಗಿಸಲಾಗುವುದು. ಸಂಗ್ರಹವಾದ ರಕ್ತವನ್ನು ಸೈನಿಕ ಆಸ್ಪತ್ರೆಗೆ ಬೇಕಾಗಿರುಷ್ಟು ತಲುಪಿಸಲಾಗುವುದು. ಉಳಿದ ಎಲ್ಲ ರಕ್ತವನ್ನು ಸರ್ಕಾರಿ ರಕ್ತ ನಿಧಿ ಕೇಂದ್ರ ಹಾಗೂ ಅಗತ್ಯವಿರುವ ಆಸ್ಪತ್ರೆಗಳಿಗೆ ನೀಡಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಗಣೇಶ್, ಅಭಿ, ಮಹದೇವ, ಉದಯ್, ರವಕುಮಾರ್, ಕುಮಾರ್, ಅನ್ವೇಶ್ ಇದ್ದರು.

Continue Reading

Mandya

ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿವರ್ಷ ಒಂದು ತಾಲ್ಲೂಕಿಗೆ ಅಂದಾಜು ರೂ 220 ಕೋಟಿ : ಎನ್ ಚಲುವರಾಯಸ್ವಾಮಿ

Published

on

ಮಂಡ್ಯ : ಹಲವಾರು ವಿರೋಧಗಳ ನಡುವೆ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಯಿತು. ಈ ಯೋಜನೆಯಿಂದ ಪ್ರತಿ ತಾಲ್ಲೂಕಿಗೆ ಒಂದು ವರ್ಷದಲ್ಲಿ ಸುಮಾರು 220 ಕೋಟಿ ರೂ ನೀಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ಅವರು ಮದ್ದೂರು ತಾಲ್ಲೂಕಿನ ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ಯಾರಂಟಿ ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಟುವಂತಿಲ್ಲ‌. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗುತ್ತದೆ ಎಂದರು.

ಸಮಸ್ಯೆ ಪರಿಹಾರವಾದ ನಂತರ ಪರಿಹಾರವಾಗಿದೆ ಎಂದು ಯಾರು ಅಭಿನಂದನೆ ಸಲ್ಲಿಸುವುದಿಲ್ಲ. ಹೊಸ ಸಮಸ್ಯೆಗಳ ಪರಿಹಾರಕ್ಕೆ ಅರ್ಜಿ ಸಲ್ಲಿಕೆಯಾಗುತ್ತದೆ‌. ಸಾರ್ವಜನಿಕರ ಕೆಲಸ ಮಾಡುವುದು ಜನಪ್ರತಿನಿಧಿಗಳ ಕೆಲಸ ಎಂಬ ಮನೋಭಾವನೆಯನ್ನು ಬೆಳಸಿಕೊಳ್ಳಬೇಕು ಎಂದರು.

ಕರ್ನಾಟಕ ರಾಜ್ಯ ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮಗಳಿಗೆ ಸಂಗ್ರಹಿಸುವ ಫಲಾನುಭವಿಗಳ ವಿವರಗಳ ಬಗ್ಗೆ ಬೇರೆ ರಾಜ್ಯಗಳು ಮೆಚ್ಚುಗೆ ವ್ಯಕ್ತಪಡಿಸಿ, ವಿವರ ಸಂಗ್ರಹಿಸಲು ರೂಪಿಸಿರುವ ತಂತ್ರಜ್ಞಾನ ವನ್ನು ಹಂಚಿಕೊಳ್ಳುವಂತೆ ಮನವಿ ಸಲ್ಲಿಸಿರುವುದು ಹರ್ಷದಾಯಕ ವಿಷಯವಾಗಿದೆ ಎಂದರು.

ಕೊಪ್ಪ ಹೋಬಳಿಯಲ್ಲಿ ಇದು ಎರಡನೇ ಬಾರಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸ್ವೀಕರಿಸುವ ಕುಂದು ಕೊರತೆ ಅರ್ಜಿಗಳನ್ನು ಕಾನೂನು ಚೌಕಟ್ಟಿನಲ್ಲಿ ಪರಿಹರಿಸಲಾಗುವುದು ಎಂದರು.

ಕೊಪ್ಪದಲ್ಲಿ ಬೇಡಿಕೆ ಇರುವ ಪೊಲೀಸ್ ಠಾಣೆ ನಿರ್ಮಾಣ, ನಾಡ ಕಚೇರಿ ಹಾಗೂ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಇದಲ್ಲದೇ ಪಂಚಾಯಿತಿ ಕಚೇರಿ ಹಾಗೂ ಗ್ರಂಥಾಲಯ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಸುಮಾರು 1 ಕೋಟಿ ವೆಚ್ಚವಾಗಲಿದೆ ಎಂದರು.

ಸಹಕಾರ ಸಂಘದ ಮೂಲಕ ರೂ 1 ಕೋಟಿ ಸಾಲ

ಕೊಪ್ಪ ಹಾಗೂ ಸುತ್ತಮುತ್ತಲಿನ 16 ಹಳ್ಳಿಗಳ ಕೃಷಿ ಪತ್ತಿನ ಸಹಕಾರ ಸಂಘ ಹಲವಾರು ಕಾರಣಗಳಿಂದ ಕೆಲಸ ಸ್ಥಗಿತಗೊಳಿಸಿತ್ತು. ಇದನ್ನು ಸರಿಪಡಿಸಿ ರೈತರು ಹಾಗೂ ಮಹಿಳೆಯರಿಗೆ ಆರ್ಥಿಕವಾಗಿ ಸದೃಢರಾಗಲು ಬಡ್ಡಿ ರಹಿತವಾಗಿ 1 ಕೋಟಿ ರೂ ವರೆಗೆ ಸಾಲ ನೀಡಲಾಗಿದೆ. ಇದಕ್ಕೆ ನಬಾಡ್೯ ವಿಧಿಸುವ ಬಡ್ಡಿಯನ್ನು ಸರ್ಕಾರ ಭರಿಸುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಜೊತೆಗೆ ಹೈನುಗಾರಿಕೆ ಕೃಷಿ ಸಂಬಂಧಿಸಿದ ಇಲಾಖೆಗಳ ಮೂಲಕ ಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ ಸುಮಾರು 2000 ಫಲಾನುಭವಿಗಳಿಗೆ 1.96 ಕೋಟಿ ರೂ ಸಹಾಯಧನ ನೀಡಲಾಗಿದೆ ಎಂದರು.

ಪೌತಿ ಖಾತೆ ಆಂದೋಲನಕ್ಕೆ ಸಂಬಂಧಿಸಿದಂತೆ ಕಳೆದ ಒಂದುವರೆ ತಿಂಗಳಿನಿಂದ ಕೊಪ್ಪ ವ್ಯಾಪ್ತಿಯಲ್ಲಿ 1275 ಅರ್ಜಿ ಸ್ವೀಕರಿಸಿ ಸುಮಾರು 443 ಪೌತಿ ಖಾತೆ ಮಾಡಿಕೊಡಲಾಗಿದೆ. ಪೌತಿ ಖಾತೆ ಮಾಡಿಸಿಕೊಳ್ಳಲು ರೈತರು ಸಹ ಆಸಕ್ತಿ‌ ತೋರಿಸಿ ಮುಂದೆ ಬರಬೇಕು. ದಾಖಲೆ, ಆರ್.ಟಿ.ಸಿ ಗಳು ಸರಿಯಿದ್ದರೆ ಮಾತ್ರ ಬ್ಯಾಂಕ್ ಅಥವಾ ಸೊಸೈಟಿಗಳಿಂದ ಸಾಲ ಪಡೆಯಲು ಸಾಧ್ಯ ಎಂದರು.

ರೈತರ ಭೂಮಿ ಹಾಗೂ ಇನ್ನಿತರೆ ದಾಖಲೆಗಳನ್ನು ಕಂದಾಯ ಇಲಾಖೆ ಡಿಜಟಲ್ ಮಾಡುವ ಭೂ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ 36 ಲಕ್ಷ ದಾಖಲೆಗಳನ್ನು ಡಿಜಟಲೀಕರಣ ಮಾಡಲಾಗಿದೆ ಎಂದರು.

ಕಂದಾಯ ಇಲಾಖೆಯಲ್ಲಿ ಜನಪರ ಕೆಲಸಗಳು ನಡೆಯುತ್ತಿದ್ದು, ಸುಮಾರು 67 ಲಕ್ಷ ಪೌತಿ ಖಾತೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ಕೋಟ್೯ ಪ್ರಕರಣಗಳನ್ನು ಒಂದು ವರ್ಷದಲ್ಲಿ 16000 ವಿಲೇವಾರಿ ಮಾಡಲಾಗಿದೆ. 18 ಲಕ್ಷ ಆರ್.ಟಿ.ಸಿ ಗಳಿಗೆ ಆಧಾರ್ ಜೋಡಣೆ ಕೆಲಸ ಮಾಡಲಾಗಿದೆ ಎಂದರು.

ಇತಿಹಾಸದಲ್ಲೇ ಮೊದಲ ಬಾರಿಗೆ ನಿರಂತರ 154 ದಿನಗಳು ಕೆ.ಆರ್.ಎಸ್ ನಲ್ಲಿ ನೀರು ತುಂಬಿರುವುದು ಸಂತೋಷದ ವಿಷಯವಾಗಿದೆ. ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಲು ಕ್ರಮ ವಹಿಸಲಾಗಿದೆ ಬೆಳಗಳಿಗೆ ಕಟ್ಟು ಪದ್ಧತಿಯಲ್ಲಿ ನೀರು ಹರಿಸಲು ಪ್ರಾರಂಭಿಸಲಾಗಿದೆ. ರೈತರು ಬಿತ್ತನೆ ಕೆಲಸಗಳನ್ನು ಪ್ರಾರಂಭಿಸುವಂತೆ ತಿಳಿಸಿದರು.

ರೈತರಿಗೆ ಹೆಚ್ಚು ಉಪಯುಕ್ತವಾಗಲಿ ಎಂದು ರೈತರು ಹೆಚ್ಚಿರುವ ಜಿಲ್ಲೆ ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ನಲ್ಲಿ ಪ್ರಾರಂಭಿಸಲಾಗುವುದು. ಇಲ್ಲಿ ಕೃಷಿ ತಜ್ಞರು ರೈತರಿಗೆ ಹಲವಾರು ಉಪಯುಕ್ತ ಮಾಹಿತಿಯನ್ನು ನೀಡಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಕೊಪ್ಪದಲ್ಲಿ ಆಯೋಜಿಸಲಾಗಿದ್ದು, ಈ ಹಿಂದೆ ಸ್ವೀಕೃತವಾರ ಕುಂದು ಕೊರತೆ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ.

ಕಂದಾಯ ಇಲಾಖೆ ಚುರುಕಾಗಿ ಕೆಲಸ ನಿರ್ವಹಿಸುತ್ತಿದ್ದು, ಸ್ವಯಂ ಪ್ರೇರಿತವಾಗಿ ಪೌತಿ ಖಾತೆ ಆಂದೋಲನ, ಪೋಡಿ ದುರಸ್ತಿ, ಆಧಾರ ಸೀಡಿಂಗ್ ಕೆಲಸಗಳನ್ನು ಮನೆ ಮನೆಗೆ ಭೇಟಿ ನೀಡಿ ದಾಖಲೆ ಸಂಗ್ರಹಿಸಿಕೊಂಡು ಮಾಡಿಕೊಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಜೋಗಿಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ಉಪವಿಭಾಗಾಧಿಕಾರಿ ಶಿವ ಮೂರ್ತಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಕೊಪ್ಪದಲ್ಲಿ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡ ಉದ್ಘಾಟನೆ

Published

on

ಮಂಡ್ಯ : ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕೊಪ್ಪದಲ್ಲಿ ನಿರ್ಮಿಸಲಾಗಿದ್ದ ನೂತನ ವ್ಯವಸಾಯ ಸೇವಾ ಸಹಕಾರ ಸಂಘ ಕಟ್ಟಡವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೆಳೆದ ಐದು ವರ್ಷದಿಂದ ದುರಸ್ಥಿಯಲ್ಲಿ ಇದ್ದ ಕೊಪ್ಪ ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡವನ್ನು ಕೆಡವಿ, ರೈತರಿಗೆ ಸಾರ್ವಜನಿಕರು ಅನುಕೂಲವಾಗುವಂತೆ
ನೂತನ ಕಟ್ಟಡ ನಿರ್ಮಿಸಿರುವುದು ಸಂತಸ ಎಂದು ಹೇಳಿದರು.

ಇದೇ ವೇಳೆ ವ್ಯವಸಾಯ ಸಂಘದ ಸದಸ್ಯರು ವಿವಿಧ ಬೇಡಿಕೆಗಳನ್ನು ಕೃಷಿ ಸಚಿವರ ಮುಂದಿಟ್ಟರು. ಮುಂದಿನ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಜೋಗಿ ಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂತೋಷ್, ಕೆ, ಆರ್ ಪೇಟೆ ಮಾಜಿ ಶಾಸಕ ಚಂದ್ರಶೇಖರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Trending

error: Content is protected !!