Connect with us

Mandya

ಹೊಳಲು ಗ್ರಾಮದಲ್ಲಿ ವಿಜೃಂಭಣೆಯಿಂದ ನೆರವೇರಿದ ಕೆಂಪೇಗೌಡರ 517ನೇ ಜಯಂತಿ

Published

on

ಮಂಡ್ಯ :  ತಾಲೂಕಿನ ಹೊಳಲು ಗ್ರಾಮದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಗ್ರಾಮದ ಕೆಂಪೇಗೌಡರ ಅಭಿಮಾನಿ ಬಳಗ ಹಾಗೂ ಹೊಳಲು ಗ್ರಾಮಸ್ಥರಿಂದ ಶ್ರೀ ದೊಡ್ಡಮ್ಮತಾಯಿ ದೇವಸ್ಥಾನದ ಆವರಣದಲ್ಲಿ ಆಚರಿಸಲಾಯಿತು.ಮೊದಲು ಶ್ರೀ ದೊಡ್ಡಮ್ಮತಾಯಿ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕೆಂಪೇಗೌಡರ ಭಾವಚಿತ್ರಕ್ಕೆ ಮಾಜಿ ಶಾಸಕರಾದ ಎಚ್.ಬಿ.ರಾಮು ರವರು ಪುಷ್ಪಾರ್ಚನೆ ಮಾಡುವ ಮುಖಾಂತರ ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ನಂತರ ಮಾತನಾಡಿದ ಅವರು, ಈ ನಾಡಿನ ಜನತೆಗೆ ಆಶ್ರಯದಾತ ಹಾಗೂ ಈ ನಾಡು ಕಟ್ಟಿದಂತಹ ಅಭಿವೃದ್ಧಿ ಹರಿಕಾರ. ಈ ದಿನ ಅವರ ಹುಟ್ಟು ಹಬ್ಬವನ್ನು ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ. ಅವರು ಮೂಲತಹ ಮಾಗಡಿಯಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಲ್ಲಿ ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿ ರೈತರಿಗೆ ಹಾಗೂ ಬಡವರಿಗೆ ನೆರವಾಗಿದ್ದರು.ಹಾಗೂ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಯುವಕರು ಮುಂದುವರೆಯಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ಮಾಜಿ ಉಪಾಧ್ಯಕ್ಷ ಎಚ್.ಎಲ್. ಶಿವಣ್ಣ ಮಾತನಾಡಿ, ಅವರ ತಾತ ಮೂಲತಹ ತಮಿಳಿನ ಮೂಲದವರಾಗಿದ್ದರು. ಕಾರಣಾಂತರಗಳಿಂದ ಬೆಂಗಳೂರಿಗೆ ಬಂದು ಒಳ್ಳೆಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಈಗಿನ ಬೆಂಗಳೂರಿನಲ್ಲಿ ಸುಮಾರು 64 ಪೇಟೆಗಳನ್ನ ಸೃಷ್ಟಿ ಮಾಡಿದ್ದಾರೆ. ಹಾಗೂ ಬರಿ ಒಕ್ಕಲಿಗರಿಗೆ ಅಲ್ಲಾ ಪ್ರತಿಯೊಂದು ಸಮುದಾಯದವರಿಗೂ ಒಳ್ಳೆಯ ಕೆಲಸಗಳನ್ನು ದೂರ ದೃಷ್ಟಿಯ ಅಭಿವೃದ್ಧಿಯ ಕೆಲಸಗಳನ್ನು ಮಾಡಿ ಹೋಗಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಫ್.ಸಿ ಮಾಜಿ ವ್ಯವಸ್ಥಾಪಕ ವಿಜಯಕುಮಾರ್ ಕೆಂಪೇಗೌಡರ ಜೀವನ ಚರಿತ್ರೆ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಶ್ರೀ ಕೆಂಪೇಗೌಡರ ಅಭಿಮಾನಿ ಬಳಗದ ಅಧ್ಯಕ್ಷ ತಮ್ಮಣ್ಣ ಮಾತನಾಡುತ್ತಾ, ಈ ದಿನ ಅವರ ಹುಟ್ಟುಹಬ್ಬವನ ಸರಳವಾಗಿ ಆಚರಿಸಿದ್ದೇವೆ. ಮುಂದಿನ ವರ್ಷದಿಂದ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನದ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತೇವೆ. ಅದರಿಂದ ಗ್ರಾಮಸ್ಥರು ಸ್ಥಳೀಯ ಸಂಘ ಸಂಸ್ಥೆಯವರು ಸಹಕರಿಸಬೇಕೆಂದು ಮನವು ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಹೆಚ್.ಸಿ. ಹರಿಪ್ರಸಾದ್,ನಾಡಪ್ರಭು ಕೆಂಪೇಗೌಡರ ಅಭಿಮಾನಿ ಬಳಗದ ಉಪಾಧ್ಯಕ್ಷ ರಾಮಕೃಷ್ಣ, ನಟರಾಜ, ಕೆ.ಪಿ.ಕುಮಾರ್, ಕೆ.ಇ.ಬಿ.ನಟರಾಜ್ ಹಾಗೂ ಸ್ಥಳೀಯ ಸಂಘ ಸಂಸ್ಥೆಯ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು. ಜಯಂತಿಯ ಪ್ರಯುಕ್ತ ಎಲ್ಲರಿಗೂ ಸಿಹಿ ವಿತರಿಸಲಾಯಿತು.

Continue Reading

Mandya

ಮದ್ದೂರಿನಲ್ಲಿ ರೈತ ಹುತಾತ್ಮರ ಸ್ಮರಣೆ: ಪರಿಹಾರ, ಸಾಲಮನ್ನಾಕ್ಕೆ ರೈತ ಸಂಘ ಒತ್ತಾಯ

Published

on

ಮದ್ದೂರು : ನಗರದಲ್ಲಿ 46 ನೇ ವರ್ಷದ ರೈತ ಹುತಾತ್ಮರ ಸ್ಮರಣೆಯನ್ನು ರೈತ ಸಂಘದಿಂದ ಪ್ರೊ. ನಂಜುಂಡಸ್ವಾಮಿರವರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸುವುದರ ಮೂಲಕ ಹಮ್ಮಿಕೊಳ್ಳಲಾಗಿತ್ತು ಬಳಿಕ ರೈತರ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರದ ತಾಲ್ಲೂಕು ಕಚೇರಿಯೆದುರು ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಪ್ರಭುಲಿಂಗು ಮಾತನಾಡಿ ನರಗುಂದ, ನವಲಗುಂದ ರೈತ ಬಂಡಾಯ ಹೋರಾಟ ನಡೆದು 46 ವರ್ಷಗಳು ಕಳೆದಿದ್ದು ಅಂದಿನ ರಾಜ್ಯ ಸರ್ಕಾರವು ರೈತ ಚಳುವಳಿಗಳನ್ನು ಹತ್ತಿಕ್ಕಲು ರೈತರ ಮೇಲೆ ಗೋಲಿಬಾರ್ ನಡೆಸಿದ ಪರಿಣಾಮ ರಾಜ್ಯಾ ದ್ಯoತ 143 ರೈತರು ಬಲಿಯಾಗಿದ್ದರು ಆದ್ದರಿಂದ ಇಂದು ರೈತ ಹುತಾತ್ಮ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.


ರಾಜ್ಯದಲ್ಲಿ ತೀವ್ರ ಬರಗಾಲ ತಲೆದೋರಿದ್ದು ರಾಜ್ಯ ಸರ್ಕಾರವು ಬರಘೋಷಣೆ ಮಾಡಿ ರೈತರಿಗೆ ಎಕರೆಯೊಂದಕ್ಕೆ 50 ಸಾವಿರ ಪರಿಹಾರ ನೀಡಬೇಕು,ಈ ಹಿನ್ನೆಲೆಯಲ್ಲಿ ರೈತರು ಬ್ಯಾಂಕ್ ಗಳು, ಸಹಕಾರ ಸಂಘಗಳಿಂದ ಪಡೆದಿರುವ ಕೃಷಿ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಅಷ್ಟೇ ಅಲ್ಲದೇ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ತುಂಬಾ ವಿಳಂಬವಾಗುತ್ತಿರುವುದರ ಬಗ್ಗೆ ಸೂಕ್ತ ಕ್ರಮವಹಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಶಿವಕುಮಾರ ಬಿರಾದಾರ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ವೇಳೆ ರೈತ ಸಂಘದ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಸೊ. ಸಿ. ಪ್ರಕಾಶ್,ಅಣ್ಣೂರು ಮಹೇಂದ್ರ, ಬೋರಯ್ಯ,ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

Mandya

ಸೋನಮ್ ವಾಂಗ್‌ಚುಕ್ ಬಂಧನ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಪ್ರತಿಭಟನೆ

Published

on

ಮಂಡ್ಯ : ಸೋನಮ್ ವಾಂಗ್‌ಚುಕ್ ಅವರ ಬಲವಂತದ ಬಂಧನ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗವನ್ನು ಖಂಡಿಸಿ, ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನಶಕ್ತಿ, ಅಖಿಲ ಭಾರತ ವಕೀಲರ ಒಕ್ಕೂಟ ಹಾಗೂ ಕರ್ನಾಟಕ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಕೀಲ ಬಿ.ಟಿ. ವಿಶ್ವನಾಥ್, ಯಾವುದೇ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದರೆ ಚುನಾವಣೆಗಳು ಹಾಗೂ ಸಾಂಸ್ಥಿಕ ವ್ಯವಸ್ಥೆಗಳಷ್ಟೇ ಅಲ್ಲ, ಜನರ ಸಕ್ರಿಯ ಭಾಗವಹಿಸುವಿಕೆಯೂ ಅಗತ್ಯವಾಗಿದೆ. ಶಾಂತಿಯುತ ಪ್ರತಿಭಟನೆ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಹತ್ತಿಕ್ಕುವುದು ಖಂಡನೀಯ ಎಂದರು.

ನೀಟ್ ಪರೀಕ್ಷೆ ನಡೆಸುವಲ್ಲಿ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದ್ದು, ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆಳವಣಿಗೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದೂ ಒತ್ತಾಯಿಸಿದರು.

ಕರ್ನಾಟಕ ಜನಶಕ್ತಿಯ ಸಿದ್ದರಾಜು ಮಾತನಾಡಿ, ಕೇಂದ್ರ ಸರ್ಕಾರ ಜನರ ಹಿತಾಸಕ್ತಿಗಿಂತ ಬೇರೆ ವಿಚಾರಗಳಿಗೆ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದರು. ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ವಿದ್ಯಾರ್ಥಿಗಳ ಜೀವಹಾನಿಯಾಗಿರುವುದು ಅತ್ಯಂತ ದುಃಖಕರ ಸಂಗತಿ. ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ ಮಾತನಾಡಿ, ವಿದ್ಯಾರ್ಥಿಗಳ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಯಾವುದೇ ಸ್ಪಂದನೆ ನೀಡಿಲ್ಲ. ಬದಲಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣ ತಜ್ಞ ಹಾಗೂ ಪರಿಸರವಾದಿ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಬಂಧಿಸಲಾಗಿದೆ. ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಪ್ರಯೋಗಿಸಿರುವುದು ಅಮಾನವೀಯ ಮತ್ತು ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಲಾಠಿ ಚಾರ್ಜ್ ಹಾಗೂ ಟಿಯರ್ ಗ್ಯಾಸ್ ಬಳಕೆಗೆ ಆದೇಶ ನೀಡಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ಬಡ ಹಾಗೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿರುವ ನೀಟ್ ಪರೀಕ್ಷಾ ಪದ್ಧತಿಯನ್ನು ರದ್ದುಗೊಳಿಸಬೇಕು.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಹಾಗೂ ಸೋನಮ್ ವಾಂಗ್‌ಚುಕ್ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು. ಮೃತಪಟ್ಟ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ವಕೀಲರಾದ ಕಿಶೋರ್, ಅರ್ಜುನ್, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕೌಸಲ್ಯ, ಚೇತನ್ ಕುಮಾರ್, ಲಕ್ಷ್ಮಿ, ಆಕಾಶ್, ಸುಚಿತ್, ವಿನಯ್, ಕಾರ್ತಿಕ್, ಚಂದ್ರಶೇಖರ್ ಜಿ., ಕರ್ನಾಟಕ ಜನಶಕ್ತಿಯ ಶಿವಣ್ಣ, ನಿಂಗಮ್ಮ, ಕುಮಾರ, ಕಂದನ್, ಮಣಿ ಸೇರಿದಂತೆ ಹಲವು ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಇದ್ದರು.

Continue Reading

Mandya

ಪ್ರಬುದ್ಧ ಭಾರತ’ ನಿರ್ಮಾಣಕ್ಕೆ ರಾಜ್ಯ ಸರಕಾರ ಮುಂದಾಗಬೇಕು : ವೆಂಕಟಗಿರಿಯಯ್ಯ

Published

on

ಮಂಡ್ಯ: ಸಂವಿಧಾನದ ಆಶಯಗಳನ್ನು ಜಾರಿ ಮಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸಿನ `ಪ್ರಬುದ್ಧ ಭಾರತ’ ನಿರ್ಮಾಣಕ್ಕೆ ರಾಜ್ಯ ಸರಕಾರ ಮುಂದಾಗಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮಾನತೆಯ ಸ್ವಾತಂತ್ರ್ಯವನ್ನು ಸ್ಥಾಪಿಸಿಕೊಳ್ಳುವಂತೆ ಡಾ.ಬಿ.ಆರ್.ಅಂಬೇಡ್ಕರ್ ಕರೆ ನೀಡಿದ್ದರು. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮನುವಾದಿ ಮನಸ್ಥಿತಿ ಮತ್ತು ಸಂವಿಧಾನ ವಿರೋಧಿ ನೀತಿಯಿಂದ ಶೋಷಿತ ಸಮುದಾಯಗಳು ಹಿಂದೆಯೇ ಉಳಿದಿವೆ ಎಂದರು.

ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಹಾಗೂ ರೈತರು ಸ್ವಾತಂತ್ರö್ಯ ಹೀನರಾಗಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮಾನೆತೆಗಾಗಿ ಸಮರಾಂದೋಲನ ನಡೆಸಲೇಬೇಕಾದ ಅನಿವಾರ್ಹತೆ ಎದುರಾಗಿದೆ. ಭಾರತೀಯ ಮೂಲ ನಿವಾಸಿಗಳಿಗೆ ನಿಜವಾದ ಸ್ವಾತಂತ್ರ್ಯ ಒದಗಿಸಲು ಸರಕಾರಗಳು ಮುಂದಾಗಬೇಕಿದೆ ಎಂದು ಒತ್ತಾಯಿಸಿದರು.

ಎಸ್ಸಿಪಿ, ಟಿಎಸ್ಪಿ ಯೋಜನೆಯ ಆಶಯಕ್ಕೆ ವಿರುದ್ಧವಾದ ಕಲಂ 7(ಸಿ) ತೆಗೆಯಬೇಕು. ಅನ್ಯ ಯೋಜನೆಗಳಿಗೆ ಬಳಕೆಯಾದ 2.14 ಲಕ್ಷ ಕೋಟಿ ರೂ.ಗಳನ್ನು ಕ್ರೂಢೀಕರಿಸಿ ಎಸ್ಸಿ,ಎಸ್ಟಿ ಕುಟುಂಬಕ್ಕೆ ತಲಾ 25 ಲಕ್ಷ ಅನುದಾನವಾಗಿ ಘೋಷಿಸಬೇಕು. ಎಸ್ಸಿ,ಎಸ್ಟಿ ಭೂಮಿಗಳ ವರ್ಗಾವಣೆ ನಿಷೇಧ ಕಾಯ್ದೆಗೆ ತಿದ್ದುಪಡಿ ಮಂಡಿಸಬೇಕು. ಜಾತಿ ಸಮೀಕ್ಷಾ ವರದಿ ಬಿಡುಗಡೆ ಮಾಡಿ, ಶೇ.75ರ ಮೀಸಲಾತಿ ನೀತಿ ಜಾರಿ ಮಾಡಬೇಕು. ಎಸ್ಸಿ,ಎಸ್ಟಿ ದೌರ್ಜನ್ಯ ಕಾಯ್ದೆ ತಿದ್ದುಪಡಿ ಜಾರಿ ಮಾಡಬೇಕು. ಸರಕಾರಿ ಸೇವೆಯಲ್ಲಿ ಹೊರಗುತ್ತಿಗೆ ಪದ್ಧತಿ ರದ್ದು ಮಾಡಬೇಖು. ರೋಸ್ಟರ್ ಪದ್ದತಿಯಲ್ಲಿ ಇಲಾಖಾವಾರಿ ನೇಮಕಾತಿ, ಬ್ಯಾಕ್‌ಲಾಗ್ ಹುದ್ದೆ ತುಂಬುವುದು ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡಿದರು.

ಮುಂಗಾರು ಮಳೆ ಕ್ಷೀಣಿಸಿದ್ದು, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ಎಕರೆಗೆ ಕನಿಷ್ಠ 50 ಸಾವಿರ ರೂ.ಗಳ ಪರಿಹಾರ ಹಾಗೂ ರೈತರ ಸಾಲಮನ್ನಾ ಘೋಷಿಸಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಒದಗಿಸಲು ತುರ್ತು ಕ್ರಮ ಕೈಗೊಂಡು ರಕ್ಷಣೆಗೆ ಮುಂದಾಗಬೇಕೆAದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ, ಮಹಿಳಾ ಜಿಲ್ಲಾಧ್ಯಕ್ಷೆ ಜಿ.ಸುಶ್ಮಿತ, ತಾಲೂಕು ಅಧ್ಯಕ್ಷರಾದ ಮುತ್ತರಾಜು, ಸ್ವಾಮಿ, ಕುಮಾರ್, ಹೋಬಳಿ ಅಧ್ಯಕ್ಷ ಚಂದ್ರು, ಸಿ.ಅಶ್ವತ್ ಇದ್ದರು.

Continue Reading

Trending

error: Content is protected !!