Mandya
ಕಾಡು ಹಂದಿ ದಾಳಿಗೆ ವ್ಯಕ್ತಿ ದುರ್ಮರಣ : ಮಿಮ್ಸ್ ಶವಗಾರದ ಎದುರು ಪ್ರತಿಭಟನೆ

ಮಂಡ್ಯ :- ಕಾಡು ಹಂದಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತಿ ಯೊಬ್ಬ ಸಾವನಪ್ಪಿದ ಘಟನೆ ಮಂಡ್ಯ ನಾಗಮಂಗಲ ರಸ್ತೆಯ ಚಿಕ್ಕ ಯಗಟಿ ಬಳಿ ನಡೆದಿದೆ.
ಚಿಂದಗಿರಿದೊಡ್ಡಿ ಗ್ರಾಮದ ಪುಟ್ಟಸ್ವಾಮಿರ ಮಗ ಶಿವ (48) ಸಾವನಪ್ಪಿದ ದುರ್ದೈವಿ ಯಾಗಿದ್ದಾನೆ.
ಗುರುವಾರ ಸಂಜೆ ವೇಳೆ ಚಿಕ್ಕಯಗಟಿ ಬಳಿ ಮಂಡ್ಯ- ನಾಗಮಂಗಲ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದಾಗ ಏಕಾಏಕಿ ಕಾಡು ಹಂದಿ ದಾಳಿ ಮಾಡಿದೆ, ಕೆಳಕ್ಕೆ ಬಿದ್ದ ಶಿವು ಎಡ ತೊಡೆ ಮತ್ತು ಮರ್ಮಾಂಗಕ್ಕೆ ಗುದ್ದಿದ ಪರಿಣಾಮ ತೀವ್ರ ರಕ್ತಸ್ರಾವಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ನಾಗಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು
ಮರಣೋತ್ತರ ಪರೀಕ್ಷೆ ನಡೆಯುವ ಮಿಮ್ಸ್ ಶವಗಾರದ ಬಳಿ ಶುಕ್ರವಾರ ಬೆಳಿಗ್ಗೆ ಜಮಾಯಿಸಿದ ಮೃತನ ಸಂಬಂಧಿಕರು ಹಾಗೂ ಚಿಂದಗಿರಿ ದೊಡ್ಡಿ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಸುದ್ದಿ ತಿಳಿದ ಶಾಸಕ ರವಿಕುಮಾರ ಗಣಿಗ ಸ್ಥಳಕ್ಕೆ ಬರುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆಗೆ ಅವಕಾಶ ಮಾಡಿ ಕೊಟ್ಟರು.

ಮಧ್ಯಾಹ್ನದ ವೇಳೆಗೆ ಶಾಸಕರು ಆಗಮಿಸಿದಾಗ ಅಲೆಮಾರಿ ಬುಡಕಟ್ಟು ಮಹಾಸಭಾ ಮತ್ತು ಮಂಡ್ಯ ಜಿಲ್ಲಾ ಉಳುವ ಸಮಾಜದ ಆಶ್ರಯದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿದ ಸಂಬಂಧಿಕರು ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಒತ್ತಾಯಿಸಿದರು.
ಅಲೆಮಾರಿ ಸಮುದಾಯಕ್ಕೆ ಸೇರಿದ ಮೃತ ವ್ಯಕ್ತಿಯ ಕುಟುಂಬಕ್ಕೆ ಆಸ್ತಿ ಇಲ್ಲ, ಕೂಲಿ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು, ಆದರೆ ದುರಂತದಲ್ಲಿ ಮನೆ ನಿರ್ವಹಣೆ ಮಾಡುತ್ತಿದ್ದ ಶಿವು ಸಾವನಪ್ಪಿರುವುದರಿಂದ ಕುಟುಂಬ ಬೀದಿಗೆ ಬಿದ್ದಂತಾಗಿದೆ, ಅವರ ಬದುಕು ಮೂರಾಬಟ್ಟೆಯಾಗಿದೆ ಎಂದು ಪ್ರತಿಭಟನಾಕಾರರು ಹೇಳಿದರು.

ಮೃತನ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡಬೇಕು, ಕುಟುಂಬದ ಜೀವನ ಭದ್ರತೆಗಾಗಿ ಮೃತರ ಪುತ್ರ ಶ್ರೀನಿವಾಸ್ ಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕು, ಮೃತನ ಪತ್ನಿ ಅನಾರೋಗ್ಯ ಪೀಡಿತರಾಗಿದ್ದು ಇವರಿಗೆ ಮಾಸಿಕ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.
ಮೃತರ ಸಂಬಂಧಿಕರ ಬೇಡಿಕೆಗೆ ಸ್ಪಂದಿಸಿದ ಶಾಸಕ ರವಿಕುಮಾರ್ ಗಣಿಗ ಅರಣ್ಯ ಇಲಾಖೆ ವತಿಯಿಂದ 15 ಲಕ್ಷ ಪರಿಹಾರ ನೀಡಲಾಗುವುದೆಂದು ಘೋಷಿಸಿದರು.
ಪರಿಹಾರದ ಹಣವನ್ನು ಮೂರು ನಾಲ್ಕು ದಿನಗಳ ನಂತರ ನೀಡಲಾಗುವುದು, ಖಾಯಂ ಸರಕಾರಿ ಉದ್ಯೋಗ ನೀಡಲು ಅವಕಾಶ ಇಲ್ಲದ ಪರಿಣಾಮ, ಯಾವುದಾದರೂ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಉದ್ಯೋಗ ದೊರಕಿಸಿ ಕೊಡುವ ಭರವಸೆ ನೀಡಿದರು.

ಅಷ್ಟೇ ಅಲ್ಲದೆ ಮೃತನ ಕುಟುಂಬಕ್ಕೆ ವೈಯಕ್ತಿಕವಾಗಿ 50 ಸಾವಿರ ಪರಿಹಾರ ನೀಡಿದರು. ಇದೇ ವೇಳೆ ಸಹಾಯಕ ಅರಣ್ಯ ಅಧಿಕಾರಿ ಶಿವರಾಮು ಹಾಜರಿದ್ದರು.
ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಿರಣ್ ಕುಮಾರ್ ಕೊತ್ತಗೆರೆ, ಗೌರವಾಧ್ಯಕ್ಷ ರಾಮ ಶೆಟ್ಟಿ ಹನಕೆರೆ, ರಾಜ್ಯ ಉಪಾಧ್ಯಕ್ಷ ವೆಂಕಟೇಶ್ ರಾಮನಗರ, ಕೃಷ್ಣಕುಮಾರ್ ಗಣಂಗೂರು, ರವಿ ಕೊಡಗಹಳ್ಳಿ, ಟೆಂಪೋ ರಾಮಕೃಷ್ಣ, ಸಂದೀಪ್ ಕೆ. ವಿ ನೇತೃತ್ವ ವಹಿಸಿದ್ದರು.

Mandya
ವಿವಿಧ ಗಣ್ಯರ ಪುತ್ಥಳಿ, ಸರ್ಕಲ್ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಶಾಸಕ ಕೆ.ಎಂ.ಉದಯ್
ಮದ್ದೂರು: ತಾಲೂಕಿನ ನಗರ ವ್ಯಾಪ್ತಿಯ ವಿವಿಧ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಶಾಸಕ ಕೆ. ಎಂ .ಉದಯ್ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮದ್ದೂರು ನಗರದ ಟಿ.ಬಿ. ಸರ್ಕಲ್‌ನಿಂದ ಪೇಟೆಬೀದಿ, ಕೊಲ್ಲಿ ಸರ್ಕಲ್‌ವರೆಗೆ 80 ಅಡಿ ರಸ್ತೆ ಮತ್ತು ಶಿವಪುರದ ಕೊಪ್ಪ ಸರ್ಕಲ್ ಸೇರಿದಂತೆ ನಗರದ ವಿವಿಧ ಪ್ರಮುಖ ಸರ್ಕಲ್‌ಗಳಲ್ಲಿ ಗಣ್ಯರ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ, ಶಿವಪುರದ ಕೊಪ್ಪ ಸರ್ಕಲ್ – ಭಕ್ತ ಕನಕದಾಸರು, ಕೊಲ್ಲಿ ಸರ್ಕಲ್ – ವಿಶ್ವಗುರು ಜಗಜ್ಯೋತಿ ಶ್ರೀ ಬಸವಣ್ಣ, ಹೂವಿನ ಸರ್ಕಲ್ – ಅಮರ ಶಿಲ್ಪಿ ಶ್ರೀ ಜಕಣಚಾರಿ, ಕೆಮ್ಮಣ್ಣು ನಾಲೆ ಸರ್ಕಲ್ – ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್, ಸ್ಟೇಡಿಯಂ ಸರ್ಕಲ್ – ಶ್ರೀ ಶ್ರೀ ಶ್ರೀ ಬಾಲ ಗಂಗಾಧರನಾಥ ಸ್ವಾಮಿಜೀ ಹಾಗೂ ಟಿ.ಬಿ. ಸರ್ಕಲ್ – ನಾಡಪ್ರಭು ಶ್ರೀ ಕೆಂಪೇಗೌಡರು ರವರುಗಳ ಪುತ್ಥಳಿ ಹಾಗೂ ಸರ್ಕಲ್ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಅಯೋಧ್ಯೆಯ ಬಾಲರಾಮನ ಕೆತ್ತನೆಯ ಖ್ಯಾತ ಶಿಲ್ಪಿ ಮೈಸೂರಿನ ಅರುಣ್ ಯೋಗಿರಾಜ್ ರವರ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪರಿಶೀಲನೆಯ ಮೂಲಕ ಯೋಜನೆಯ ವಿನ್ಯಾಸ, ಸ್ಥಳದ ಸೂಕ್ತತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮಗಳಿಗೆ ಅಗತ್ಯ ಮಾರ್ಗದರ್ಶನ ಪಡೆದಿದ್ದಾರೆ.
Mandya
ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
ವರದಿ : ಅಲ್ಲಾಪಟ್ಟಣ ಸತೀಶ್
ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ವಿಕಲಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲುಗೊಂಡಿದೆ.
ಕೆ.ಆರ್.ಪೇಟೆ ತಾಲೂಕಿನ ಪುರ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಗ್ರಾಮದ ರಮ್ಯಾ(26) ದೂರು ನೀಡಿರುವ ಯುವತಿಯಾಗಿದ್ದಾಳೆ. ಅದೇ ಗ್ರಾಮದ ಪಕ್ಕದ ಮನೆಯ ಪೃಥ್ವಿ(27) ಎಂಬಾತ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು,ಅತ್ಯಾಚಾರದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದನು ಎಂದು ದೂರಿನಲ್ಲಿ ತಿಳಿಸಿದ್ದಾಳೆ.

ಮನೆಯಲ್ಲಿ ರಮ್ಯಾ ಒಬ್ಬಳೇ ಇರುವಾಗ ಅತ್ಯಾಚಾರವೆಸಗಿರುವುದಾಗಿ ಹೇಳಲಾಗಿದ್ದು, ಆಕೆ ಗರ್ಭಿಣಿಯಾದ ಬಳಿಕ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎನ್ನಲಾಗಿದೆ.
ಯಾರಿಗಾದರೂ ಹೇಳಿದರೆ ನಿಮ್ಮ ಅಪ್ಪ, ಅಮ್ಮನನ್ನ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಯುವತಿ ತಿಳಿಸಿದ್ದಾಳೆ.
ಅಕ್ಟೋಬರ್ ತಿಂಗಳಲ್ಲಿ ರಮ್ಯಾಗೆ ವಾಂತಿ ಶುರುವಾಗಿದ್ದ ಹಿನ್ನೆಲೆಯಲ್ಲಿ ವೈದ್ಯರ ಬಳಿ ತಪಾಸಣೆ ಮಾಡಲಾಗಿ ವೈದ್ಯರ ಸಲಹೆಯಂತೆ ಸ್ಕ್ಯಾನಿಂಗ್ ಮಾಡಿಸಿದಾಗ ಗರ್ಭಿಣಿಯಾಗಿರುವುದು ದೃಢ ಪಟ್ಡಿದೆ ಎನ್ನಲಾಗಿದೆ.

ಬಳಿಕ ಮದುವೆ ಮಾಡುವಂತೆ ಪೃಥ್ವಿ ಮನೆಯವರೊಂದಿಗೆ ಮಾತುಕತೆ ನಡೆದಿದ್ದು, ಮದುವೆಗೆ ಒಪ್ಪಿ ಇದೀಗ ಮದುವೆಯಾಗದೆ ಮೋಸ ಮಾಡಿರುವುದಾಗಿ ಸಂತ್ರಸ್ತೆ ಠಾಣೆಗೆ ದೂರು ನೀಡಿದ್ದಾಳೆ.
ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Mandya
ಶಿಕ್ಷಕರು ತಮ್ಮ ವೃತ್ತಿ ಜೀವನದಲ್ಲಿ ಭವಿಷ್ಯದ ರೂವಾರಿಗಬೇಕು : ರಮೇಶ ರಾಜು
ಮಂಡ್ಯ : ಶಿಕ್ಷಕರು ತಮ್ಮ ವೃತ್ತಿ ಜೀವನದಲ್ಲಿ ಭವಿಷ್ಯದ ರೂವಾರಿಗಳಾದ ಮಕ್ಕಳಿಗೆ ಜ್ಞಾನದ ಜೊತೆಗೆ ಮೌಲ್ಯಗಳು, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಕಲಿಸಿಕೊಡಬೇಕೆಂದು ಎಇಟಿ ಶಿಕ್ಷಣ ಮಹಾವಿದ್ಯಾಲಯದ ಅಧ್ಯಕ್ಷರಾದ ಶಾರದ ರಮೇಶ ರಾಜು ಹೇಳಿದರು.
ನಗರದ ಎಇಟಿ ಮಹಾಶಿಕ್ಷಣ ವಿದ್ಯಾಲಯದ ಕೆಂಪಮ್ಮ ಜೆ.ದೇವಯ್ಯ ಸಭಾಂಗಣದಲ್ಲಿ ಆಯೋಜಿಸಿದ್ದ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳ ಬಿಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳಿಗೆ ಜೀವನ ನೀಡಿದರೆ, ಶಿಕ್ಷಕರು ಆ ಜೀವನಕ್ಕೆ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಅವರ ಜೀವನವನ್ನು ರೂಪಿಸಿ ಸಮಾಜದಲ್ಲಿ ಗೌರವಯುತ ಮೌಲ್ಯಯುತವಾದ ಜೀವನ ನಡೆಸುವಂತೆ ದಾರಿ ತೋರುವ ರೂವಾರಿಗಳು ಎಂದು ಅಭಿಪ್ರಾಯಪಟ್ಟರು.
ಶಿಕ್ಷಕ ವೃತ್ತಿ ತರಬೇತಿ ಪಡೆದು ಸಮಾಜಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಿರುವ ಭವಿಷ್ಯದ ಶಿಕ್ಷಕರುಗಳಿಗೆ ಶುಭ ಕೋರಿದ ಅವರು, ತಾವು ಎಂದಿಗೂ ತಮಗೆ ಜೀವ ನೀಡಿದ ತಂದೆ ತಾಯಿಗಳಿಗೆ ಕೃತಜ್ಞತೆಯಿಂದ ಇರುವ ಮೂಲಕ ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಂಡು ಸದೃಢ ಸಮಾಜ ನಿರ್ಮಾಣಕ್ಕೆ ಕೊಡುಗೆಯನ್ನ ನೀಡಬೇಕು ಎಂದು ಕಿವಿಮಾತು ಹೇಳಿದರು.

ಮಾಜಿ ರಾಷ್ಟ್ರಪತಿಗಳು ಹೇಳಿರುವ ಹಾಗೆ ಜೀವನ ಮತ್ತು ಸಮಯ ವಿಶ್ವದ ಬಹುದೊಡ್ಡ ಶಿಕ್ಷಕರಾಗಿದ್ದು, ನೂತನ ಶಿಕ್ಷಕ ಮಿತ್ರರು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ತಮ್ಮ ತಮ್ಮ ಜೀವನದಲ್ಲಿ ಎಂದೂ ದಾರಿ ತಪ್ಪದೆ ಸಮಯವನ್ನು ಸದುಪಯೋಗಪಡಿಸಿಕೊಂಡು ತಾವು ಅಭಿವೃದ್ಧಿ ಹೊಂದುವ ಜೊತೆಗೆ ಮುಂದಿನ ತಲೆಮಾರಿನ ಮಕ್ಕಳನ್ನು ಸರಿದಾರಿ ತೋರುವ ಜವಾಬ್ದಾರಿ ಇದೆ ಎಂದು ಅಭಿಪ್ರಾಯಪಟ್ಟರು.
ಕಾಲೇಜು ಪ್ರಾಂಶುಪಾಲ ಡಾ. ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದಂತಹ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ವೇಳೆ ಸಹಾಯಕ ಪ್ರಾಧ್ಯಾಪಕರುಗಳಾದ ಎಚ್. ಪಿ.ಧರ್ಮೇಶ್, ಮೋಹನ್ ದಾಸ್, ಸುಕೇಶ್ ದಯಾನಂದ್, ರಕ್ಷಿತಾ, ಶ್ರೀದೇವಿ, ಶಿವ ನಾಗೇಂದ್ರ ಪ್ರಸಾದ್, ವಾಣಿ ಸೇರಿದಂತೆ ಇತರರು ಹಾಜರಿದ್ದರು.
-
Hassan13 hours agoಒಳ್ಳೆಯ ಕೆಲಸ ಬ್ಯಾಂಕ್ ಠೇವಣಿಯಂತೆ; ಸಮಯ ಬಂದಾಗ ಫಲ ನೀಡುತ್ತದೆ: ರವಿಕುಮಾರ್ ಬಲ್ಲೇನಹಳ್ಳಿ
-
Kodagu12 hours agoಅನಧಿಕೃತ ಹೋಸ್ಟೇಗಳಿಗೆ ಕಡಿವಾಣ ನಿಟ್ಟಿನಲ್ಲಿ ವಾರ್ಡ್ವಾರ್ ಸಮಿತಿ ರಚನೆ: 15 ದಿನಗಳೊಳಗೆ ಪೊಲೀಸರಿಂದ ದಲ್ಲಾಳಿಗಳ ವಿರುದ್ದ ಕ್ರಮ
-
Hassan20 hours agoಟಿಕೆಟ್ ಪರಿಶೀಲನೆ ವೇಳೆ ಭೀಕರ ಅಪಘಾತ: ಲಾರಿ ಗುದ್ದಿ KSRTC ಟಿಕೆಟ್ ತನಿಖಾಧಿಕಾರಿ ಸ್ಥಳದಲ್ಲೇ ಸಾ*ವು
-
State8 hours agoರಾಹುಲ್, ಖರ್ಗೆ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಹೈಕಮಾಂಡೇ: ಬಿ.ವೈ.ವಿಜಯೇಂದ್ರ
-
State13 hours agoಡಾ.ಜಿ.ಪರಮೇಶ್ವರ್ ಈ ರಾಜ್ಯದ ಸಿಎಂ ಆಗಲಿ ಎಂಬುದು ನನ್ನ ವೈಯಕ್ತಿಕ ಆಸೆ: ವಿ.ಸೋಮಣ್ಣ
-
Mandya11 hours agoವಿಕಲಚೇತನ ಯುವತಿ ಮೇಲೆ ಅತ್ಯಾಚಾರ ಆರೋಪ : ದೂರು ದಾಖಲು
-
Hassan11 hours agoರೋಟರಿ ಬೆಂಗಳೂರು ದಕ್ಷಿಣದಿಂದ MCE ಕಾಲೇಜಿನ 51 ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ
-
Kodagu11 hours agoಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಭೆ : ಸುಸಜ್ಜಿತ ಫೈರಿಂಗ್ ರೇಂಜನ್ನು ನಿರ್ಮಾಣ ಮಾಡಲು ನಿರ್ಧಾರ
