Connect with us

Chikmagalur

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್, ಹಲವರಿಗೆ ಗಾಯ

Published

on

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾವೇರಿ ಬಸ್ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ.

ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಸಂಚರಿಸುತ್ತಿದ್ದ ಕಾವೇರಿ ಬಸ್ ಬೆಳೆಗಿನ ಜಾವ ಮೂಡಿಗೆರೆಯ ಬಿಳಗುಳ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿದ್ದು, ಬಸ್ ಜಖಂಗೊಂಡಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಸ್ಥಳಕ್ಕೆ ಮೂಡಿಗೆರೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ ಮತ್ತು 112 ಪೊಲೀಸರು ಧಾವಿಸಿ ಸ್ಪಂದಿಸಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ‌.

Continue Reading
Click to comment

Leave a Reply

Your email address will not be published. Required fields are marked *

Chikmagalur

ರಸ್ತೆಯಲ್ಲಿ ಕಾಡು ಕೋಣ ಪ್ರತ್ಯಕ್ಷ, ಆತಂಕದಲ್ಲೇ ಜನರ ಓಡ

Published

on

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ‌ ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಉಪಟಳ ಮುಂದುವರಿದಿದ್ದು. ಕಳಸ ತಾಲೂಕಿನ ಹಳುವಳ್ಳಿಯಿಂದ ತುಂಬಿಕುಡಿಗೆ ಸಂಪರ್ಕ‌ ಕಲ್ಪಿಸುವ‌ರಸ್ಯೆಯಲ್ಲಿ ಮುಜೆಖಾನ್ ಗ್ರಾಮದ ಸಮೀಪ ರಸ್ತೆಯಲ್ಲಿ ಒಂಟಿ‌ ಕಾಡು ಕೋಣವೊಂದು ಕಾಣಿಸಿಕೊಂಡಿದ್ದು. ವಾಹನ‌ಸವಾರರ ಮೊಬೈಲ್‌ನಲ್ಲಿ‌ ದೃಶ್ಯ ಸೆರೆಯಾಗಿದ್ದು.‌ ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ, ಕಾಡುಕೋಣ ಓಡಿಸುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Continue Reading

Chikmagalur

ಬಾಬಾ ಬುಡನ್ ಗಿರಿ ರಸ್ತೆಯಲ್ಲಿ ಗುಡ್ಡ ಕುಸಿತ

Published

on

ಚಿಕ್ಕಮಗಳೂರು ‌: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇಂದು ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 6 ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷನೆ ಮಾಡಲಾಗಿದೆ.
ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗದಲ್ಲಿ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರ ವಾಹನಗಳು ಸಂಚಾರ ಮಾಡುತ್ತಿದ್ದು, ಮಳೆ ಹೆಚ್ಚಾದ್ರೆ ಒಂದು ಭಾಗದ ಗುಡ್ಡವೇ, ಕುಸಿದು ಬೀಳುವ ಆತಂಕ ಶುರುವಾಗಿದೆ.

Continue Reading

Chikmagalur

ಕೆ‌ಎಸ್‌ಆರ್‌ಟಿಸಿ ‌ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾ*ವು

Published

on

ಚಿಕ್ಕಮಗಳೂರು : ಕೆ‌ಎಸ್‌ಆರ್‌ಟಿಸಿ ಬಸ್ – ಬೈ ನಡುವೆ‌ ಮುಖಾಮುಖಿ ಡಿಕ್ಕಿ‌ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್‌‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಕೆ‌ಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ‌ ನಡೆದಿದೆ.

ಕಡೂರು ಪಟ್ಟಣದ ಸುಭಾಷ್ ನಗರದ ನಿವಾಸಿ 21 ವರ್ಷದ ಹುಸೇನ್ ಮೃತ ದುರ್ದೈವಿಯಾಗಿದ್ದು.‌ ಬಸ್ ನಿಲ್ದಾಣದಿಂದ ಬಸ್ ಹೊರಬರುವಾಗ‌ ಈ ಅವಘಡ ಸಂಭವಿಸಿದೆ. ಘಟನೆ ಕುರಿತಂತೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

Trending

error: Content is protected !!