Connect with us

Kodagu

ಕಿಂಡರ್ ಗಾರ್ಟನ್ ಪದವಿ ಪ್ರಧಾನ ಸಮಾರಂಭ

Published

on

ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ೨೦೨೪-೨೫ ಸಾಲಿನ ಕಿಂಡರ್ ಗಾರ್ಟನ್ ವಿಭಾಗದ ಯುಕೆಜಿ ಮಕ್ಕಳ ಪದವಿ ಪ್ರಧಾನ ಸಮಾರಂಭವನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲೆ ಸವಿತ ಎಂ.ಜಿ ವಹಿಸಿದರು. ಮುಖ್ಯ ಅತಿಥಿಗಳಾಗಿ ಚೌರಿರ ರಿಷಿಕಾ ಶ್ಯಾಮ್ಕಿಂಡರ್, ಗಾರ್ಟನ್ ವಿಭಾಗದ ಶಿಕ್ಷಕಿ ವಿನ್ಯಾ ಉತ್ತಪ್ಪ ಸರ್ವರನ್ನು ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿದರು.

ದೀಪ ಬೆಳಗಿಸುವುದರೊಂದಿಗೆ ಸಮಾರಂಭವನ್ನು ಪ್ರಾರಂಭಿಸಲಾಯಿತು. ಚಂದ್ರಾವತಿ ಬಿ.ಎಸ್ ವರದಿ ವಾಚಿಸಿದರು. ಯುಕೆಜಿ ಮಕ್ಕಳಿಗೆ ನೆನಪಿನ ಕಾಣಿಕೆಯೊಂದಿಗೆ ಪದವಿ ಪ್ರಧಾನ ಮಾಡಲಾಯಿತು. ಪುಟಾಣಿಗಳು ತಮ್ಮ ಅನಿಸಿಕೆಯಲ್ಲಿ ತಮ್ಮ ಶಿಕ್ಷಕಿಯರನ್ನು ನೆನಪಿಸಿಕೊಂಡರು. ಮುದ್ದು ಮಕ್ಕಳು ನೃತ್ಯದ ಮೂಲಕ ಎಲ್ಲರ ಮನರಂಜಿಸಿದರು. ಪೋಷಕರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯವರು ಮಾತನಾಡಿ ಶಿಕ್ಷಕರು ಪೋಷಕರು ಮಕ್ಕಳು ಇವರು ಮೂವರು ತ್ರಿಕೋನದಂತೆ ಒಬ್ಬರ ಸಂಬಂಧ ಇನ್ನೊಬ್ಬರೊಂದಿಗೆ ತುಂಬಾ ಗಾಢವಾಗಿರುತ್ತದೆ, ಮಕ್ಕಳ ಲಾಲನೆ ಪಾಲನೆಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ ಎನ್ನುವುದರೊಂದಿಗೆ ಮಾತನ್ನು ಮುಕ್ತಾಯಗೊಳಿಸಿದರು.

ಅಧ್ಯಕ್ಷರ ನುಡಿಯಾಡಿದ ಪ್ರಾಂಶುಪಾಲೆ ಸವಿತ ಎಂ ಜಿ ಪ್ರತಿಯೊಂದು ಮಗುವಿನಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಹೊರಗೆಡಹುವಲ್ಲಿ ಶಿಕ್ಷಕರಪಾತ್ರ ಮಹತ್ವ ದಾಗಿರುತ್ತದೆ ಎಂದರು. ಶಾಲಾ ಆಡಳಿತಾಧಿಕಾರಿ ಎನ್.ಎಪೊನ್ನಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಿಥಿಲ ಪೊನ್ನಪ್ಪ ಕಾರ್ಯಕ್ರಮ ನಿರೂಪಿಸಿ, ಹರ್ಷಿತಾ ಎ.ಎಂಇವರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Continue Reading

Kodagu

ಡಿ. 21ರಿಂದ ವಿ.ಬಾಡಗದಲ್ಲಿ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ: ಹೈಪ್ಲೈಯರ್ಸ್ ತಂಡದ ವತಿಯಿಂದ ಪಂದ್ಯಾವಳಿ ಆಯೋಜನೆ

Published

on

ಪೊನ್ನಂಪೇಟೆ : ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ವಿಯೋಮನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅವರ            ಸಹ ಪ್ರಾಯೋಜಕತ್ವದಲ್ಲಿ 4ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಹೈಪ್ಲೈಯರ್ಸ್ ಕಪ್-2025 ಅನ್ನು ಇದೇ ಡಿ.21ರಿಂದ 25ರವರೆಗೆ ಆಯೋಜಿಸಲಾಗಿದೆ. ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ ಈ ಹಾಕಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ವಿ. ಬಾಡಗ ಹೈಪ್ಲೈಯರ್ಸ್ ತಂಡದ ಅಧ್ಯಕ್ಷರಾದ ಅಮ್ಮಣಿಚಂಡ ರಂಜು ಪೂಣಚ್ಚ ಅವರು ತಿಳಿಸಿದ್ದಾರೆ.

ಈ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕೌಟುಂಬಿಕ ಹಾಕಿ ಪಂದ್ಯಾವಳಿಯು ವಿ. ಬಾಡಗ ಗ್ರಾಮದಲ್ಲಿ 4ನೇ ಭಾರಿಗೆ ಜರುಗುತ್ತಿದೆ. ವಿ.ಬಾಡಗದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಒಟ್ಟು 5 ದಿನಗಳ ಕಾಲ ನಡೆಯುವ ಈ ಹಾಕಿ ಪಂದ್ಯಾವಳಿಗಾಗಿ ಈಗಾಗಲೇ ಸಿದ್ಧತೆಗಳು ಆರಂಭಗೊಂಡಿರುವುದಾಗಿ ರಂಜು ಪೂಣಚ್ಚ ಮಾಹಿತಿ ನೀಡಿದರು.

ಕುಟುಂಬ ತಂಡಗಳಲ್ಲಿ ಗರಿಷ್ಠ 4 ಅತಿಥಿ ಆಟಗಾರರು ಭಾಗವಹಿಸಬಹುದಾಗಿದೆ. ಆದರೆ ಅತಿಥಿ ಆಟಗಾರರು ಕಡ್ಡಾಯವಾಗಿ ಕೊಡವ ಆಟಗಾರರಾಗಿರಬೇಕು. ವಿಜೇತ ತಂಡಗಳಿಗೆ ಆಕರ್ಷಕ ನಗದು ಬಹುಮಾನ ಮತ್ತು ಕೊಡವ ಸಾಂಪ್ರದಾಯಿಕ ಪಾರಿತೋಷಕಗಳನ್ನು ನೀಡಿ ಗೌರವಿಸಲಾಗುವುದು ಎಂದು ತಿಳಿಸಿರುವ ರಂಜು ಪೂಣಚ್ಚ, ಕ್ರೀಡಾ ಪ್ರೇಮಿಗಳ ಆರ್ಥಿಕ ನೆರವಿನಿಂದ ಕಳೆದ ಮೂರು ವರ್ಷ ಪಂದ್ಯಾವಳಿ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಸಂಪೂರ್ಣವಾಗಿ ದಾನಿಗಳ ನೆರವಿನಿಂದಲೇ ಪಂದ್ಯಾವಳಿ ಜರುಗಲಿದ್ದು, ಗ್ರಾಮಸ್ಥರು ಮತ್ತು ಪ್ರಾಯೋಜಕರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶಗಳಲ್ಲಿ ಹಾಕಿ ಪಂದ್ಯಾವಳಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಈ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗುತ್ತಿದೆ. ಈ ಕಾರಣಕ್ಕಾಗಿಯೇ ಹೈ ಫ್ಲೈಯರ್ಸ್ ಎಂಬ ಕ್ರೀಡಾ ಸಂಸ್ಥೆಯನ್ನು ಕಳೆದ 3 ವರ್ಷಗಳ ಹಿಂದೆ ಹುಟ್ಟು ಹಾಕಲಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಹಾಕಿ ಪಂದ್ಯಾವಳಿಯನ್ನು ನಿರಂತರವಾಗಿ ಆಯೋಜಿಸುವುದರಿಂದ ಹಾಕಿ ಕ್ರೀಡೆಗೆ ಮತ್ತಷ್ಟು ಉತ್ತೇಜನ ದೊರೆತಂತಾಗುತ್ತದೆ. ಅಲ್ಲದೆ, ಗ್ರಾಮೀಣ ಮಟ್ಟದ ಕ್ರೀಡಾಕೂಟಗಳಿಂದ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಂತಾಗುತ್ತದೆ ಎಂದು ರಂಜು ಪೂಣಚ್ಚ ವಿವರಿಸಿದರು.

ಗೋಷ್ಠಿಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಕ್ರೀಡಾ ಕಾರ್ಯದರ್ಶಿ ಕುಪ್ಪಂಡ ದಿಲನ್ ಬೋಪಣ್ಣ ಮಾತನಾಡಿ, ಹಾಕಿ ಕೂರ್ಗ್ ಸಂಸ್ಥೆಯ ಅಧೀನದಲ್ಲಿ ನಡೆಯಲಿರುವ ಈ ಹಾಕಿ ಪಂದ್ಯಾವಳಿಯು ಹಾಕಿ ಕರ್ನಾಟಕ ಸಂಸ್ಥೆಯ ನಿಯಮಾವಳಿಗೆ ಬದ್ಧವಾಗಿ ನಾಕ್ ಔಟ್ ಮಾದರಿಯಲ್ಲಿ ನಡೆಯಲಿದೆ. ಕಳೆದ ಬಾರಿ ಆಯೋಜಿಸಿದ್ದ ಈ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ಒಟ್ಟು 18 ಕುಟುಂಬ ತಂಡಗಳು ಭಾಗವಹಿಸಿದ್ದವು. ಈ ಬಾರಿ 20ಕ್ಕೂ ಹೆಚ್ಚಿನ ತಂಡಗಳನ್ನು ನಿರೀಕ್ಷಿಸಲಾಗಿದೆ. ಈಗಾಗಲೇ 12 ಕುಟುಂಬ ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ಆಸಕ್ತ ಕುಟುಂಬ ತಂಡಗಳು ಪಂದ್ಯಾವಳಿಗೆ ಹೆಸರು ನೋಂದಾಯಿಸಲು ಇದೇ ಡಿಸೆಂಬರ್ 15ರಂದು ಕೊನೆಯ ದಿನವಾಗಿರುತ್ತದೆ. ಡಿ. 16ರಂದು ಪಂದ್ಯಾವಳಿಯ ಟೈಸ್ ಅನ್ನು ಅಂತಿಮಗೊಳಿಸಲಾಗುವುದು. ಪಂದ್ಯಾವಳಿಯ ಕುರಿತ ಹೆಚ್ಚಿನ ಮಾಹಿತಿಗಾಗಿ 9481883738 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಂಸ್ಥೆಯ ಸಲಹಾ ಸಮಿತಿ ಅಧ್ಯಕ್ಷರಾದ ಮಳವಂಡ ಗಿರೀಶ್ ಮುದ್ದಯ್ಯ, ಕಾರ್ಯದರ್ಶಿ ಮಚ್ಚಾರಂಡ ಪ್ರವೀಣ್ ತಿಮ್ಮಯ್ಯ, ಕೋಶಾಧಿಕಾರಿ ಚೇಮಿರ ನಂದಾ ನಂಜಪ್ಪ ಉಪಸ್ಥಿತರಿದ್ದರು.

Continue Reading

Kodagu

ಏಕವಚನ ಬಳಕೆ : ಸಿಎಂ ನಡೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಆಕ್ಷೇಪ

Published

on

ಮಡಿಕೇರಿ: ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರ ಕುರಿತು ಏಕವಚನ ಪ್ರಯೋಗ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆ ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿಯ ಮಹಿಳಾ ಮೋರ್ಚಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಅವರು ಮುಖ್ಯಮಂತ್ರಿಗಳು ಕೇಂದ್ರದ ಮಹಿಳಾ ಸಚಿವರ ಕುರಿತು ಏಕವಚನ ಬಳಕೆ ಮಾಡುವ ಮೂಲಕ ಸಚಿವ ಸ್ಥಾನಕ್ಕೆ ಮತ್ತು ಸಚಿವರ ಹಿರಿತನಕ್ಕೆ ಅಗೌರವ ತೋರಿದ್ದಾರೆ. ಮಹಿಳೆಯರನ್ನು ದೇವತೆಗಳೆಂದು ಪರಿಗಣಿಸಿ ಗೌರವಿಸುವ ಈ ನಾಡಿನಲ್ಲಿ ಮುಖ್ಯಮಂತ್ರಿಯೊಬ್ಬರು ತಮ್ಮ ಘನತೆಗೆ ಮತ್ತು ನಾಡಿನ ಸಂಸ್ಕೃತಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ತಾವು ಅಧಿಕಾರದಲ್ಲಿದ್ದ ಅವಧಿಯಲ್ಲೆಲ್ಲ ಹಲವು ಭಾರಿ ಏಕವಚನ ಪ್ರಯೋಗಿಸಿ ಹಿರಿಯರು ಹಾಗೂ ಮಹಿಳೆಯರಿಗೆ ಮುಜುಗರ ಉಂಟು ಮಾಡಿದ್ದಾರೆ. ಇವರ ನಡೆಯ ಕುರಿತು ಆಕ್ಷೇಪಗಳು ವ್ಯಕ್ತವಾದರೂ ತಪ್ಪನ್ನು ತಿದ್ದಿಕೊಳ್ಳುವ ಬದಲು ’ನಾನು ಗ್ರಾಮೀಣ ಸೊಗಡಿನವನು’ ಎಂದು ಸಮರ್ಥಿಸಿಕೊಳ್ಳುತ್ತಲೇ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಗಳು ಗ್ರಾಮೀಣ ಸೊಗಡಿನವರೇ ಆಗಿದ್ದರೆ ತಮ್ಮ ಪಕ್ಷದ ಅಧಿನಾಯಕ ಹಾಗೂ ನಾಯಕಿಯ ಕುರಿತು ಕೂಡ ಏಕವಚನ ಬಳಸಲಿ ಎಂದು ಅನಿತಾ ಪೂವಯ್ಯ ಸವಾಲು ಹಾಕಿದ್ದಾರೆ.

ಇನ್ನು ಮುಂದಾದರೂ ಮಹಿಳೆಯರಿಗೆ ಮತ್ತು ಅವರು ಹೊಂದಿರುವ ಹುದ್ದೆಗೆ ಗೌರವ ನೀಡುವ ಮೂಲಕ ಮುಖ್ಯಮಂತ್ರಿಗಳು ತಮ್ಮ ಘನತೆಯನ್ನು ಉಳಿಸಿಕೊಳ್ಳಲಿ. ಇದೇ ವರ್ತನೆ ಮುಂದುವರೆದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Continue Reading

Kodagu

ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಸಿಎಂರೊಂದಿಗೆ ಸಂವಾದ ನಡೆಸಿದ ಎ.ಎಸ್‌.ಪೊನ್ನಣ್ಣ

Published

on

ಬೆಳಗಾವಿ/ಮಡಿಕೇರಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ.

ಈ ಅಧಿವೇಶನದಲ್ಲಿ  ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದ್ದಾರೆ.

Continue Reading

Trending

error: Content is protected !!