Connect with us

Kodagu

ಕೊಡಗು ಎನ್.ಐ.ಎಂ.ಎ ಗೆ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

Published

on

ಮಡಿಕೇರಿ: ಕೊಡಗು ಜಿಲ್ಲೆಯ ನಿಮಾ 2022-24 ಸಾಲಿನಲ್ಲಿ ತೋರಿದ ಸರ್ವಾಂಗೀಣ ಚಟುವಟಿಕೆಗಳಿಗೆ ರಾಜ್ಯದ 34 ಶಾಖೆಗಳ ಪೈಕಿ ಪ್ರಥಮ ಸ್ಥಾನವನ್ನು ಪಡೆದ ಹಿರಿಮೆಗೆ ಪಾತ್ರವಾಯಿತು.

ರಾಣಿಬೆನ್ನೂರು ನಲ್ಲಿ ನಡೆದ ಎನ್.ಐ.ಎಂ.ಎ ರಾಜ್ಯ ಸಮಿತಿ ಸಭೆಯಲ್ಲಿ ಕೊಡಗು ಜಿಲ್ಲೆಯ ನಿಮಾ, ಪ್ರಥಮ ಸ್ಥಾನ ಪಡೆದುಕೊಂಡಿರುವ ಅಧಿಕೃತ ಘೋಷಣೆ ಮಾಡಲಾಯಿತು.

ಕೊಡಗು ಜಿಲ್ಲೆಯಿಂದ ರಾಜ್ಯ ಪ್ರತಿನಿಧಿಗಳಾದ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಶ್ಯಾಮ ಪ್ರಸಾದ್ ಪಿ.ಎಸ್ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷ ಡಾ.ರಾಜಾರಾಮ.ಎ.ಆರ್.ಜಿಲ್ಲೆಯ ಪರವಾಗಿ ಪ್ರಶಸ್ತಿ ಪಡೆದುಕೊಂಡರು.

ಕೊಡಗು ಜಿಲ್ಲೆಯ ನೀಮಾ ಮಹಿಳಾ ಘಟಕ ಕೂಡ ಮಹಿಳಾ ವಿಭಾಗದಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.

25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಇರುವ ಕೊಡಗು ನೀಮಾ ಈ ವರ್ಷದಲ್ಲಿ ಸಾರ್ವಜನಿಕರಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ನಿಮಾ ಕೊಡಗು ಘಟಕದ ಅಧ್ಯಕ್ಷ ಡಾ. ರಾಜಾರಾಂ ತಿಳಿಸಿದ್ದಾರೆ.

Continue Reading

Kodagu

ಸುಂಟ್ಟಿಕೊಪ್ಪ: ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ?

Published

on

ಮಡಿಕೇರಿ: ಸುಂಟಿಕೊಪ್ಪ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಮುಂದಿನ ಮೂರು ದಿನಗಳೊಳಗೆ, ತಮ್ಮ ಹಿತೈಷಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಅನೂಪ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅನೂಪ್ ಕುಮಾರ್, ನಾನು ಕಳೆದ ಹಲವು ವರ್ಷಗಳಿಂದ ಯುವ ಕಾಂಗ್ರೆಸ್ ಕಾರ್ಯರ್ತನಾಗಿ ನಂತರ ಸುಂಟಿಕೊಪ್ಪ ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದೇನೆ. ಅದಲ್ಲದೇ ಸುಂಟಿಕೊಪ್ಪ ಭಾಗದಲ್ಲಿ ಯುವಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದು ಯುವ ಕಾಂಗ್ರೆಸ್ ಬಲಪಡಿಸುವ ಕೆಲಸ ಮಾಡಿದ್ದೇನೆ.

ಆದರೆ ಕಿಡಿಗೇಡಿಗಳ ಗುಂಪೊಂದು ನನ್ನ ಮೇಲೆ ಹಲ್ಲೆ ಮಾಡಿದ ಸಂದರ್ಭ, ಸುಂಟಿಕೊಪ್ಪ ಠಾಣೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಲತೀಫ್ ಸುಂಟಿಕೊಪ್ಪ ಮತ್ತು ಸಿಸಿಬಿ ವಿರಾಜಪೇಟೆ ತಂಡದ ಯುವಕರು ಹೊರತುಪಡಿಸಿ ಯಾರು ಕೂಡ ನನ್ನ ಬೆಂಬಲಕ್ಕೆ ನಿಂತಿಲ್ಲ.

ಘಟನೆಯ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಸುಂಟ್ಟಿಕೊಪ್ಪ ನಗರ ಕಾಂಗ್ರೆಸ್ ನಾಯಕರ ಗಮನಕ್ಕೆ ತಂದರು ಕೂಡ, ನನ್ನ ಬೆಂಬಲಕ್ಕೆ ನಿಲ್ಲದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅನೂಪ್ ಕುಮಾರ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖಂಡರ ಈ ಧೋರಣೆಯಿಂದ ಬೇಸತ್ತು ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮುಂದಿನ ಮೂರು ದಿನಗಳಲ್ಲಿ ನಿರ್ಧಾರ ತಿಳಿಸುವುದಾಗಿ ಅನೂಪ್ ಕುಮಾರ್ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಅನೂಪ್ ಕುಮಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಜನಸೇವೆಗೆ ಸದಾ ಸಿದ್ಧನಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡಿದ್ದ ಯುವ ಕಾಂಗ್ರೆಸ್ ಆಂತರಿಕ ಚುನಾವಣೆಯಲ್ಲಿ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ಅನೂಪ್ ಕುಮಾರ್ ಸ್ಪರ್ಧಿಸಿದ್ದರು. ಅದಲ್ಲದೇ ಅನೂಪ್ ಕುಮಾರ್ ಅವರ ಗೆಲುವು ಕೂಡ ಬಹುತೇಕ ಖಚಿತಗೊಂಡಿತ್ತು. ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುವ ಮುನ್ನ ಅನೂಪ್ ಕುಮಾರ್ ಅವರ ರಾಜೀನಾಮೆ ನೀಡಲು ಮುಂದಾಗಿರುವುದು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

ಸುಂಟಿಕೊಪ್ಪ ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಅನೂಪ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದರು.

Continue Reading

Kodagu

ಅಡ್ಮಿನ್‌ಗಳ ವಿರುದ್ಧ ಕಾಂಗ್ರೆಸ್ ದೂರು: ಬಿಜೆಪಿ ತೀವ್ರ ಅಸಮಾಧಾನ

Published

on

ಮಡಿಕೇರಿ: ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಂತೆ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ನಡೆದ ಚರ್ಚೆಗೆ ಸಂಬಂಧಿಸಿದಂತೆ ಗ್ರೂಪ್ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ದೂರು ನೀಡಿರುವುದು ಖಂಡನೀಯವೆಂದು ಕೊಡಗು ಜಿಲ್ಲಾ ಬಿಜೆಪಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ದೇಶದಲ್ಲಿ ಸ್ವಚ್ಛ ಭಾರತ್ ಅಭಿಯಾನ ಹೆಚ್ಚು ಪರಿಣಾಮಕಾರಿಯಾಗಿದೆ. ಆದರೆ ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾ.ಪಂ ಕಟ್ಟಡದಲ್ಲಿರುವ ಶೌಚಾಲಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇದನ್ನು ಮನಗಂಡು “ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು” ಎಂಬ ವಾಟ್ಸ್ಆಪ್ ಗ್ರೂಪ್ ನಲ್ಲಿ ಚರ್ಚೆ ನಡೆದಿದೆ. ಶೌಚಾಲಯದ ಫೋಟೋಕ್ಕೆ ಸ್ಥಳೀಯ ಶಾಸಕರ ಫೋಟೋವನ್ನು ಎಡಿಟ್ ಮಾಡಿ ಹಾಕಿದರು ಎಂಬ ಕಾರಣಕ್ಕೆ ವಾಟ್ಸ್ಆಪ್ ಗ್ರೂಪ್ ನ ಅಡ್ಮಿನ್ ಗಳ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರಕರಣ ದಾಖಲಿಸಿರುವುದನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡದೆ ಇದ್ದಾಗ ಆ ಕ್ಷೇತ್ರದ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡಲಾಗಿದೆ. ಶಾಸಕರು ಸಮಸ್ಯೆಯ ಬಗ್ಗೆ ಗಮನಹರಿಸಿ ಶೌಚಾಲಯವನ್ನು ಶುಚಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕಾಗಿತ್ತು. ಶಾಸಕರ ಫೋಟೋ ಹಾಕಿದ್ದರಿಂದ ತೇಜೋವಧೆ ಆಗಿದ್ದರೆ ಪ್ರಕರಣ ದಾಖಲಿಸಲಿ. ಅದನ್ನು ಬಿಟ್ಟು ಚರ್ಚೆ ಮಾಡಿದ ಗ್ರೂಪ್ ಅಡ್ಮಿನ್ ಗಳ ವಿರುದ್ಧವೇ ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಿರುವುದು ಸರಿಯಲ್ಲವೆಂದು ಹೇಳಿದ್ದಾರೆ.

ಆಡಳಿತ ಪಕ್ಷ ಪೊಲೀಸ್ ಇಲಾಖೆಯನ್ನು ತಮ್ಮ ಪರ ಕೆಲಸ ಮಾಡುವಂತೆ ಒತ್ತಾಯಿಸಿ ಈ ರೀತಿ ಪ್ರಕರಣ ದಾಖಲು ಮಾಡುವುದನ್ನು ತಕ್ಷಣ ನಿಲ್ಲಿಸಬೇಕು. ಪೊಲೀಸರು ಕೂಡ ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸದೆ ಕಾನೂನಿಗೆ ಗೌರವ ನೀಡಿ ಕರ್ತವ್ಯ ನಿರ್ವಹಿಸಬೇಕೆಂದು ನಾಪಂಡ ರವಿ ಕಾಳಪ್ಪ ಒತ್ತಾಯಿಸಿದ್ದಾರೆ.

Continue Reading

Kodagu

ತಾಳತ್ತಮನೆ : ಫೆ.11 ಮತ್ತು 12 ರಂದು ಶ್ರೀ ದುರ್ಗಾ ಭಗವತಿ ದೇವಾಲಯದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

Published

on

ಮಡಿಕೇರಿ: ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವವು ಫೆ.11 ಮತ್ತು 12 ರಂದು ನಡೆಯಲಿದೆ.
ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ.
ಫೆ.11 ರಂದು ರಂದು ಸಂಜೆ 5 ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ 6 ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, 7.30 ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ.
ಫೆ.12 ರಂದು ಬೆಳಿಗ್ಗೆ 10 ಗಂಟೆಯಿAದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ 4.30 ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿAದ ಭಜನಾ ಕಾರ್ಯಕ್ರಮ, ಸಂಜೆ 6 ಗಂಟೆಗೆ ರಂಗಪೂಜೆ, 7 ಗಂಟೆಯಿAದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.

Continue Reading

Trending

error: Content is protected !!