Connect with us

Kodagu

ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಭಾಗಮಂಡಲ ಚುನಾವಣೆ – ಹೊಸೂರು ಸತೀಶ್ ನೇತೃತ್ವದ ತಂಡಕ್ಕೆ ಮತ್ತೆ ಗೆಲುವಿನ ಸಿಹಿ

Published

on

ಮಡಿಕೇರಿ : ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ಭಾಗಮಂಡಲದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಹೊಸೂರು ಸತೀಶ್ ನೇತೃತ್ವದ ತಂಡ ಮತ್ತೆ ಗೆಲುವಿನ ಸಿಹಿ ಕಂಡಿದೆ.

ಸತೀಶ್ ಜೋಯಪ್ಪ ತಂಡ ಪಾರಮ್ಯ ಸಾಧಿಸಿದ್ದು, 2023 ರಿಂದ 2028 ರವರೆಗಿನ ಆಡಳಿತ ಮಂಡಳಿಯ ಚುನಾವಣೆ ನಡೆದಿದೆ.
ತೀವ್ರ ಕುತೂಹಲ ಮೂಡಿಸಿದ್ದ ಈ ಬಾರಿಯ ಚುನಾವಣೆಯಲ್ಲಿ
ಹಾಲಿ ಆಡಳಿತ ಮಂಡಳಿಯ ಮೇಲೆ ಹಗರಣಗಳ ಆರೋಪ ಹೊರಿಸಲಾಗಿತ್ತು. ಆದರೆ ಅದನ್ನು ಸಾಬೀತು ಮಾಡಲು ದೂರುದಾರರು ವಿಫಲವಾಗಿದ್ದರು.

ಭಾಗಮಂಡಲದ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘ ನಿಯಮಿತ ಭಾಗಮಂಡಲದ ನೂತನ ಆಡಳಿತ ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸೋಮವಾರಪೇಟೆ ವಿಭಾಗದಿಂದ ಸಾಮಾನ್ಯ ಕ್ಷೇತ್ರದಿಂದ ಹರಗ ದಿನೇಶ್, ಕೆ ಕೆ ಗೋಪಾಲ .ಮಾಹಿಳಾ ಮೀಸಲು ಕ್ಷೇತ್ರದಿಂದ ಕೆ‌. ಕೆ ಸೌಮ್ಯ ಅವಿರೋಧವಾಗಿ ಆಯ್ಕೆಯಾಗಿದ್ದು ಸೋಮವಾರಪೇಟೆಯಿಂದ ಸರ್ದಿಸಿದ ಹಿಂದುಳಿದ ವರ್ಗದಿಂದ ಬೋಪಣ್ಣ 82ಮತಗಳಿಸಿದರು . ಪ್ರತಿಸ್ಪರ್ಧಿ ಉದಯಕುಮಾರ್ 46 ಮತಗಳಿಸಿ ಸೋಲು ಅನುಭವಿಸಿದರು.
ಸತೀಶ್ ಕುಮಾರ್ ನೇತೃತ್ವದ ಬಿಜೆಪಿ ಬೆಂಬಲಿತರಾಗಿ ಪರಿಶಿಷ್ಟ ಜಾತಿಯಿಂದ ಜಯಂತ್ ತಲಕಾವೇರಿ ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ ಹಿಂದುಳಿದ ವರ್ಗದ
ಕ್ಷೇತ್ರ ದಿಂದ ಅಯ್ಯಣಿರ ಎಂ.ದಿನೇಶ್ ಸ್ಪರ್ದಿಸಿದ್ದು 527 ಗಳಿಸಿ ಆಯ್ಕೆಯಾಗಿದ್ದರೆ ಪ್ರತಿಸ್ಪರ್ಧಿ ಬಿಲ್ಲವರ ಬೈರಪ್ಪ 163 ಮತ ಗಳಿಸಿ ಸೋಲನ್ನು ಅನುಭವಿಸಿದ್ದಾರೆ. ಮಹಿಳಾ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಸ್. ಎನ್.ಕುಸುಮ ಶಿರಕಜೆ 417 ಮತಗಳಿಸಿದರೆ ಪ್ರತಿಸ್ಪರ್ದಿ ಅಮೆ ಜಿ.ಸರೋಜಾ 178 ಮತಗಳಿಸಿ ಸೋಲನ್ನು ಅನುಭವಿಸಿದ್ದಾರೆ.

ನಂತರ ನಡೆದ ಸಾಮಾನ್ಯ ವರ್ಗದ ನಿರ್ದೇಶಕ ರ ಎರಡನೇ ಹಂತದ ಮತ ಎಣಿಕೆಯಲ್ಲಿ ಬಿಜೆಪಿ ಬೆಂಬಲಿತ ರಾಗಿ ಹೊಸೂರು ಸತೀಶ್ ಕುಮಾರ್ ನೇತೃತ್ವದಲ್ಲಿ ಸ್ಪರ್ಧಿಸಿದ ಸತೀಶ್ ಕುಮಾರ್ (457)ಕುದುಕುಳಿ ಅಶ್ವತ್ 402 ಮತ ಪಡೆದರು. ದೇವಂಗೋಡಿ ಬಾಸ್ಕರ 370 ಮತ,ಕೆದಾಂಬಾಡಿ ಯು.ಮೋಹನ 360, ಮತ,ಪಾಣತ್ತಲೆ ಎ.ಲೋಕನಾಥ್.411, ಶಿರಕಜೆ.ಎಂ.
ಲೋಕ ಪ್ರಕಾಶ419, ಪೊಡನೋಳನ ಸಿ.ವಿಠಲ374 ಮತಗಳನ್ನು ಪಡೆದು ಪ್ರತಿಸ್ಪರ್ಧಿ ಗಳಾದ ಕೋಡಿ ಮೋಟಯ್ಯ 215,
ಕೆದಾಂಬಾಡಿ ಚೇತನ್ 136, ಬಾರಿಕೆ ನಿರಂಜನ್ 126, ಅಮೆ ಮಾದಪ್ಪ 158, ಕೆದಾಂಬಾಡಿ ಟಿ.ರಮೇಶ್ 185, ಚೆದುಕಾರು ರವಿ150, ದೇವಂಗೋಡಿ ವೇಗೆಂದ್ರ 123 ರವರನ್ನು ಪರಾಭವ ಗೊಳಿಸಿದರು..

Continue Reading
Click to comment

Leave a Reply

Your email address will not be published. Required fields are marked *

Kodagu

ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯ ಮೇಲೆ ದಾಳಿ ಮಾಡಲು ಮುಂದಾದ ಕಾಡಾನೆ*

Published

on

ಮಡಿಕೇರಿ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಲು ಯತ್ನಿಸಿರುವ ಘಟನೆ ಗುರುವಾರ ಬೆಳಗ್ಗೆ 7.20ರ ಸಮಯದಲ್ಲಿ

ವಿರಾಜಪೇಟೆ ತಾಲೂಕು, ಚಂಬೆಬೆಳ್ಳೂರು ಗ್ರಾಮದ ಪುದುಕೋಟೆ ಭದ್ರಕಾಳಿ ದೇವಾಲಯದ ಕೆಳಗಿನ ಸಿಮೆಂಟ್ ರಸ್ತೆಯಲ್ಲಿ ನಡೆದಿದೆ.


ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ಜಿ.ಟಿ. ಚಂಗಪ್ಪ ಎಂಬುವವರು ಕಾಲೇಜಿಗೆ ತೆರಳಲು ಬಸ್ ಗಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ದಿಢೀರ್ ಎದುರಾದ ಕಾಡನೆ ಆತನನ್ನು ಬೆನ್ನಟ್ಟಿದೆ. ಚಂಗಪ್ಪ ಓಡಿ ಕಾಡಾನೆಯ ಹಿಡಿತದಿಂದ ತಪ್ಪಿಸಿಕೊಂಡಿದ್ದಾನೆ. ಆದರೆ ಓಡುವ ಸಂದರ್ಭ ಸಿಮೆಂಟ್ ರಸ್ತೆಗೆ ಬಿದ್ದು ಗಾಯಗಳು ಉಂಟಾಗಿವೆ ಅಲ್ಲದೇ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದಿದೆ. ವಿಷಯ ಅರಿತು ಸ್ಥಳಕ್ಕೆ ಆಗಮಿಸಿದ ಅರಣ್ಯ ಸಿಬ್ಬಂದಿಗಳು ಆತನನ್ನು ವಿರಾಜಪೇಟೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ.


ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳು ಬೀಡು ಬಿಟ್ಟಿವೆ. ಮರಿ ಆನೆಗಳೊಂದಿಗೆ ಮೂರಕ್ಕೂ ಹೆಚ್ಚು ಆನೆಗಳು ಈ ಭಾಗದಲ್ಲಿ ಸಂಚರಿಸುತ್ತಾ ಜನರಿಗೆ ಭೀತಿಯನ್ನು ಹುಟ್ಟಿಸುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಕೂಡಲೇ ಇಲ್ಲಿರುವ ಆನೆಗಳನ್ನು ಕಾಡಿಗೆ ಅಟ್ಟುವ ಕೆಲಸ ಆಗಬೇಕೆಂದು ಗ್ರಾಮಸ್ಥರು ಸಂಬಂಧಿಸಿದವರನ್ನು ಒತ್ತಾಯಿಸಿದ್ದಾರೆ.
ಎಸಿಎಫ್ ನೆಹರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕರ ತೆರಳಿ ಘಟನೆ ಕುರಿತು ಮಾಹಿತಿ ಪಡೆದು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Continue Reading

Kodagu

ನಾಲ್ ನಾಡ್ ಹಾಕಿ ಪಂದ್ಯಾವಳಿ ಮುಂದೂಡಿಕೆ

Published

on

ನಾಪೋಕ್ಲು: ನಾಲ್ ನಾಡ್ ಹಾಕಿ ಕ್ಲಬ್ ವತಿಯಿಂದ ಅಪ್ಪಚೆಟ್ಟೋಳಂಡ ಕುಟುಂಬಸ್ಥರ ಪ್ರಾಯೋಜಕತ್ವದಲ್ಲಿ ಮೆ 22 ರಿಂದ ನಾಪೋಕ್ಲು ಬಳಿಯ ಬಲ್ಲಮಾವಟಿ ನೇತಾಜಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಸಲು ಉದ್ದೇಶಿಸಿರುವ ನಾಲ್ ನಾಡ್ ವ್ಯಾಪ್ತಿಯ ಅಂತರಗ್ರಾಮ ಹಾಕಿ ಪಂದ್ಯಾಟ ಮತ್ತು ಮಹಿಳೆಯರ ಹಗ್ಗಜಗ್ಗಾಟವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ.


ಪಂದ್ಯಾಟಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕ್ರೀಡಾಭಿಮಾನಿಗಳು ಮತ್ತು ನೋಂದಾಯಿತ ತಂಡಗಳು ಬದಲಿಸಲಾದ ದಿನಾಂಕವನ್ನು ಗಮನಿಸಿ ಸಹಕರಿಸುವಂತೆ ನಾಲ್’ನಾಡ್ ಹಾಕಿ ಕ್ಲಬ್ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Kodagu

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

Published

on

ಕೊಡಗಿನಲ್ಲಿ ಬೃಹತ್ ಗಾತ್ರದ ಕಾಡುಕೋಣ(ಕಾಟಿ) ಭೇಟೆ

539 ಕೆ.ಜಿ ಕಾಡುಕೋಣ ಮಾಂಸ ಸೇರಿ ಓರ್ವನ ಬಂಧನ.

ಎಮ್ಮೆಮಾಡು ನಿವಾಸಿ ಹ್ಯಾರಿಸ್(42) ಬಂಧಿತ ಆರೋಪಿ

ಬೆನ್ನಟ್ಟುವ ಸಂಧರ್ಭ ಜೊತೆಗಿದ್ದ ಮತ್ತೊಬ್ಬ ಆರೋಪಿ ಮೂಸ ಪರಾರಿ.

ಕೊಡಗು ಜಿಲ್ಲೆ ಮಾದಪುರ ಸಮೀಪದ ನಂದಿಮೊಟ್ಟೆಯಲ್ಲಿ ನಡೆದ ಘಟನೆ‌.

ಮಡಿಕೇರಿ ವಲಯ ಅರಣ್ಯ ಅಧಿಕಾರಿಗಳಿಂದ ನಡೆದ ಕಾರ್ಯಚರಣೆ.

ತಡರಾತ್ರಿ ಅಪ್ಪಂಗಳದಲ್ಲಿ ವಾಹನವನ್ನ ಬೆನ್ನಟಿ ಹಿಡಿದ ಅರಣ್ಯ ಅಧಿಕಾರಿಗಳು.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು .

ಬಂಧಿತರಿಂದ ಎರಡು ಕತ್ತಿ ಹಾಗೂ ಪಿಕಪ್ ವಾಹನ ವಶಕ್ಕೆ.

Continue Reading

Trending

error: Content is protected !!