Connect with us

Kodagu

ಕೊಡವಾಮೆ ಬಾಳೋ ಪಾದಯಾತ್ರೆ: ಮಧ್ಯ ಮಾರಾಟ ನಿಷೇಧ

Published

on

ಮಡಿಕೇರಿ : ಕೊಡವಾಮೆ ಬಾಳೋ ಪಾದಯಾತ್ರೆ ಫೆ.7 ರಂದು ಮಡಿಕೇರಿ ನಗರಕ್ಕೆ ತಲುಪುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚರಿಕಾ ಕ್ರಮವಾಗಿ ಕೊಡಗು ಜಿಲ್ಲಾ ಪೊಲೀಸ್ ಸೂಕ್ತ ಬಂದೋಬಸ್ತ್ ಮಾಡಲಾಗಿದೆ. ಪೊಲೀಸ್ ಇಲಾಖೆಯ ಪ್ರಕಾರ ಪಾದಯಾತ್ರೆಯಲ್ಲಿ ಅಂದಾಜು 15 ರಿಂದ 25 ಸಾವಿರ ಜನ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಕೊಡಗು ಜಿಲ್ಲಾ ಪೊಲೀಸ್ ಹಾಗೂ ಹೊರ ಜಿಲ್ಲೆಗಳ ವಿವಿಧ ಘಟಕದಿಂದ ಅಧಿಕಾರಿ/ಸಿಬ್ಬಂದಿಗಳನ್ನು ಸಹ ನಿಯೋಜಿಸಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕಾಗಿ 1, ಪೊಲೀಸ್ ಅಧೀಕ್ಷಕರು, 1 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 6 ಪೊಲೀಸ್ ಉಪಾಧೀಕ್ಷಕರು, 18 ಪೊಲೀಸ್ ನಿರೀಕ್ಷಕರು, 35 ಪೊಲೀಸ್ ಉಪನಿರೀಕ್ಷಕರು, 55 ಸಹಾಯಕ ಪೊಲೀಸ್ ಉಪನಿರೀಕ್ಷಕರು, 430 ಪೊಲೀಸ್ ಹೆಡ್ ಕಾನ್ಸೆಬಲ್/ಕಾನ್ಸ್ ಟೇಬಲ್ಸ್, 100 ಕೆ.ಎಸ್.ಆರ್.ಪಿ (5 ಪ್ಲಾಟಿನ್) ಹಾಗೂ 70 ಡಿಎಆರ್ಗಳನ್ನು ನೇಮಿಸಲಾಗಿದೆ.
ಇದರೊಂದಿಗೆ 7 ರಂದು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ 06 ರಿಂದ ರಾತ್ರಿ 12 ಘಂಟೆವರೆಗೆ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವವರು ಶಾಂತಿಯುತವಾಗಿ ರಸ್ತೆಯ ಒಂದು ಬದಿಯಲ್ಲಿ ತೆರಳುವುದು. ಪಾದಯಾತ್ರೆಯ ಆಯೋಜಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಆಗಮಿಸುವದರ ವಾಹನಗಳನ್ನು ಪಾರ್ಕಿಂಗ್ ನಿಗಧಿಪಡಿಸಿರುವ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡುವ ಬಗ್ಗೆ ಕ್ರಮ ಕೈಗೊಳ್ಳುವುದು ಹಾಗೂ ಪಾದಯಾತ್ರೆಯೊಂದಿಗೆ ವಾಹನಗಳು ಬರದಂತೆ ನೋಡಿಕೊಳ್ಳಬೇಕು,ಪಾದಯಾತ್ರೆಯಲ್ಲಿನ ಸ್ವಯಂ ಸೇವಕರು ಸಾರ್ವಜನಿಕರಿಗೆ ಹಾಗೂ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು, ಪಾದಯಾತ್ರೆ ಸಮಯದಲ್ಲಿ ಎಲ್ಲಿಯು ರಸ್ತೆ ತಡೆ ಮಾಡದಂತೆ ಸ್ವಯಂ ಸೇವಕರು ನೋಡಿಕೊಳ್ಳಬೇಕು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ನೀಡಿದ್ದಾರೆ.

Continue Reading

Kodagu

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕ ಆಹ್ವಾನ

Published

on

ಮಡಿಕೇರಿ : ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 ಹಾಗೂ 2025 ಸಾಲಿನಲ್ಲಿ ರಚಿಸಲ್ಪಟ್ಟ ಅಯ್ದ ಉತ್ತಮ ಪುಸ್ತಕಗಳಿಗೆ ‘ಮಕ್ಕಳ ಪುಸ್ತಕ ಚಂದಿರ’ ಪ್ರಶಸ್ತಿಯನ್ನು ಪ್ರಧಾನ ಮಾಡುವ ಉದ್ದೇಶದಿಂದ 2024-25ನೇ ಸಾಲಿನ ಅವಧಿಯಲ್ಲಿ ಜನವರಿ ರಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ ಅನುವಾಧಿತ ಕೃತಿ ಮಕ್ಕಳ ಸಾಹಿತ್ಯ ವಿಮರ್ಷ ಕೃತಿ ಒಟ್ಟು ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರ ಒಳಗೊಂಡ ಮನವಿಯೊಂದಿಗೆ ಫೆಬ್ರುವರಿ 20 ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಪುಸ್ತಕ ಪರಿಗಣಿಸಲಾಗುವುದಿಲ್ಲ.
ಉಪ ನಿರ್ದೇಶಕರ ಕಚೇರಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272-228010ಗೆ ಸಂಪರ್ಕಿಸಬಹುದು. ಕೇಂದ್ರ ಕಚೇರಿ ವಿಳಾಸ: ಮಾನ್ಯ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂರವಾಣಿ ಸಂಖ್ಯೆ 0836-2465490 ಹೆಚ್ಚಿನ ಮಾಹಿತಿಗೆ ದೂ.ಸಂ.8050392209, 7204396275, 9448981944 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Continue Reading

Kodagu

ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಮಡಿಕೇರಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2025-26ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ, ಹಾಗೂ ವಿಜ್ಞಾನ ಮತ್ತು ಸಂಶೋಧನೆಗಳಾದ ಯಾವುದಾದರು ಒಂದು ವಿಶೇಷ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರ ಒಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆ. 20 ರೊಳಗೆ ಅಕಾಡೆಮಿಯ ಕೇಂದ್ರ ಕಚೇರಿ ವಿಳಾಸಕ್ಕೆ ಪೋಸ್ಟ್ ಮುಖಾಂತರ ತಲುಪುವಂತೆ ಕಳುಹಿಸುವುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಈಗಾಗಲೇ ಬಾಲಗೌರವ ಪ್ರಶಸ್ತಿ ಪಡೆದವರ ಅರ್ಜಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದಿಲ್ಲ ಈ ಪ್ರಶಸ್ತಿಯ ಅರ್ಜಿ ನಮೂನೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228010ಗೆ ಸಂಪರ್ಕಿಸಬಹುದು.

ಕೇಂದ್ರ ಕಚೇರಿ ವಿಳಾಸ: ಯೋಜನಾಧಿಕಾರಿಗಳು ಚಂದ್ರಿಕಾ ಲೇಔಟ್ ಹಿಂಭಾಗ ಕೆ.ಎಚ್.ಬಿ ಕಾಲೋನಿ ಲಕಮನಹಳ್ಳಿ ಧಾರವಾಡ-580004, ದೂರವಾಣಿ ಸಂಖ್ಯೆ 0836-2465490, ಹೆಚ್ಚಿನ ಮಾಹಿತಿಗೆ ದೂ.ಸಂ. 8050392209, 7204396275, 9448981944 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Continue Reading

Kodagu

ಮಾ. 29ರಂದು ಎಡಪಕ್ಷಗಳ ಐಕ್ಯವೇದಿಕೆ ಜಿಲ್ಲಾ ಸಮಾವೇಶ

Published

on

ಸಿದ್ದಾಪುರ: ಮಡಿಕೇರಿ ಜಿಲ್ಲೆಯ ಎಡಪಕ್ಷಗಳ ಐಕ್ಯವೇದಿಕೆ ಜಿಲ್ಲಾ ಸಮಾವೇಶವನ್ನು ಮಾರ್ಚ್ 29ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಎಡಪಕ್ಷಗಳ ಜಿಲ್ಲಾ ನಾಯಕರು ತಿಳಿಸಿದ್ದಾರೆ.

ಭಾನುವಾರ ಪಟ್ಟಣದ ಸಿದ್ದಾಪುರದಲ್ಲಿ ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್ ಪಕ್ಷಗಳ ಜಿಲ್ಲಾ ನಾಯಕರಿಂದ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಲಾಯಿತು.

ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಖಂಡ ಕೆ.ವಿ. ಸುನೀಲ್ ಮಾತನಾಡಿ, ಬಡಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಎಡಪಕ್ಷಗಳ ಪರ್ಯಾಯ ಐಕ್ಯ ರಾಜಕೀಯ ವೇದಿಕೆ ರೂಪಿಸುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದರು.

ಸಿಪಿಐಎಂಎಲ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ನಿರ್ವಾಣಪ್ಪ ಮಾತನಾಡಿ, ಜಿಲ್ಲೆಯ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ನಿವೇಶನ ಕಲ್ಪಿಸುವಲ್ಲಿ ಹಾಗೂ ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಲ್ಲಿ ಶಾಸಕರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಡಪಕ್ಷಗಳು ಒಗ್ಗಟ್ಟಾಗಿ ಸಮಾವೇಶ ನಡೆಸಿ ಜಂಟಿ ಹೋರಾಟಕ್ಕೆ ಮುಂದಾಗಲಿವೆ ಎಂದು ತಿಳಿಸಿದರು.


ಸಿಪಿಐ(ಎಂ) ಪಕ್ಷದ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮಾತನಾಡಿ, ಎಡಪಕ್ಷಗಳ ಐಕ್ಯವೇದಿಕೆ ರಚನೆಗೆ ಹಲವು ವರ್ಷಗಳಿಂದ ನಡೆಯುತ್ತಿದ್ದ ಪ್ರಯತ್ನ ಇದೀಗ ಸಫಲವಾಗಿದೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ವೇದಿಕೆ ಕಾರ್ಯನಿರ್ವಹಿಸಲಿದೆ. ಮುಂಬರುವ ಚುನಾವಣೆ ಹಾಗೂ ರಾಜಕೀಯ ನಡೆಗಳನ್ನು ಐಕ್ಯವೇದಿಕೆಯ ನೇತೃತ್ವದಲ್ಲಿಯೇ ನಿರ್ಧರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ ಪಕ್ಷದ ರಮೇಶ್ ಮಾಯಮುಡಿ, ಎನ್. ಮಣಿ, ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದ ಜಿಲ್ಲಾಮಂಡಳಿ ಸದಸ್ಯ ಎ.ಸಿ. ಸಾಬು, ಸಿಪಿಐಎಂಎಲ್ ಪಕ್ಷದ ಪ್ರಕಾಶ್, ರವಿ, ಅಣ್ಣಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು

Continue Reading

Trending

error: Content is protected !!