Mysore
ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿ ರವರ ಕಾರ್ ಟೈರ್ ಬ್ರಷ್ಟಾಗಿ ಅಪಘಾತವಾಗಿದೆ.

ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಆರ್ ಕೃಷ್ಣಮೂರ್ತಿ ರವರು ತಮ್ಮ ಕ್ಷೇತ್ರದಿಂದ ಮೈಸೂರಿನ ಮನೆಗೆ ಚುನಾವಣಾ ಪ್ರಚಾರ ಮುಗಿಸಿ ರಾತ್ರಿ 11-48 ರ ಸಮಯದಲ್ಲಿ ಕಾರ್ ಟೈರ್ ಬ್ರಷ್ಟಾಗಿ ಅಪಘಾತವಾಗಿದೆ.
ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಹಾಗೂ ಶಾಸಕರ ಆಪ್ತ ಸಹಾಯಕ ಹೊಂಗನೂರು ಚೇತನ್ ಮತ್ತು ವಾಹನ ಚಾಲಕ ಸತೀಶ್ ದೇವರ ಆರ್ಶೀವಾದದಿಂದ ಆಶ್ಚರ್ಯಕರವಾಗಿ ಅಪಾಯದಿಂದ ಪಾರಾಗಿದ್ದಾರೆ. ಎಂದು ಮಾಹಿತಿ ನೀಡಿದ್ದಾರೆ
Mysore
ಜಿಡಿ ಹರೀಶ್‌ಗೌಡ ಸಹಕಾರ ಸಂಘದ ಭ್ರಷ್ಟಾಚಾರ ಮುಚ್ಚಿಹಾಕಲು ಪ್ರತಿಭಟನೆ ಮಾಡುತ್ತಿದ್ದಾರೆ: ಎಚ್.ಪಿ.ಮಂಜುನಾಥ್

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಇವರು ಮಾಡಿರುವ ಭ್ರಷ್ಟಾಚಾರ ಮತ್ತು ಸಹಕಾರ ಪತ್ತಿನ ಸಂಘಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇವರ ಸಂಬಂಧಿಕರುಗಳು ಮಾಡಿರುವ ಹಗರಣಗಳನ್ನು ಮುಚ್ಚಿಕೊಳ್ಳಲು ಶಾಸಕ ಜಿ.ಡಿ.ಹರೀಶ್ ಗೌಡ ಸಾರ್ವಜನಿಕವಾಗಿ ಮೈಸೂರಿನ ಎಂಸಿಡಿಸಿಸಿ ಬ್ಯಾಂಕ್ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ಆರೋಪಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಶಾಸಕ ಜಿ.ಡಿ.ಹರೀಶ್ ಗೌಡ ಅವರೇ ಕಳೆದ 20 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿದ್ದಾರೆ. ಇವರೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದವರು. ಧರ್ಮಾಪುರ ಮತ್ತು ಹನಗೋಡು ಸಹಕಾರ ಪತ್ತಿನ ಸಂಘದಲ್ಲಿ ರೈತರು ಸಾಲ ಮರುಪಾವತಿಸಿದ್ದರು ಸಾಲ ಕೊಡುತ್ತಿಲ್ಲ. ಇದಕ್ಕೆ ಮಾಜಿ ಶಾಸಕರ ಹಸ್ತಕ್ಷೇಪ ಇದೆ. ನಾನು ರೈತರ ವಿರೋಧಿ ಎನ್ನುವ ರೀತಿಯಲ್ಲಿ ಬಿಂಬಿಸಿ ಮಾತನಾಡಿದ್ದಾರೆ. ಇವರು ಪ್ರತಿಭಟನೆ ಮಾಡಿದರೆ ನನ್ನ ಅಭ್ಯಂತರವಿಲ್ಲ ಆದರೆ ಸುಖಾ ಸುಮ್ಮನೆ ನನ್ನನ್ನು ಎಳೆದು ತಂದಿರುವುದು ಸರಿಯಲ್ಲ ಎಂದು ಹೇಳಿದರು.
Mysore
ನಂಜನಗೂಡು ದೊಡ್ಡ ಜಾತ್ರೆ: ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸುವಂತೆ ದರ್ಶನ್ ಧ್ರುವ ಸೂಚನೆ

ಮೈಸೂರು: ಜಾತ್ರಾ ಮಹೋತ್ಸವದ ಸಿದ್ದತೆ ಬಗ್ಗೆ ಚರ್ಚಿಸಿ, ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮ ಮತ್ತು ಅಗತ್ಯ ತೀರ್ಮಾನಗಳನ್ನು ಕೈಗೊಳ್ಳುವಂತೆ ನಂಜನಗೂಡು ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ತಿಳಿಸಿದರು.
ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಸಭಾಂಗಣದಲ್ಲಿ ಇದೇ ಏಪ್ರಿಲ್ 09-04-2025 ರಂದು ನಡೆಯುವ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೊಡ್ಡ ಜಾತ್ರಾ ಮಹೋತ್ಸವದ ಹಿನ್ನೆಲೆ ಗುರುವಾರ 2 ನೇ ಹಂತದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ, ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜ್, ತಹಸೀಲ್ದಾರ್ ಶಿವಕುಮಾರ್ ಕಾಸನೂರ್ ಅವರು, ನಗರಸಭಾ ಅಧ್ಯಕ್ಷ ಶ್ರೀಕಂಠ ಸ್ವಾಮಿ ಅವರು, ನಗರಸಭೆ ಪೌರಯುಕ್ತ ವಿಜಯ್ ಅವರು, ಎ.ಎಸ್.ಪಿ ಮಲ್ಲೇಶ್ ರವರು, ಇ.ಓ.ಜಗದೀಶ್ ರವರು, ಡಿ.ವೈ.ಎಸ್.ಪಿ ರಘು ಅವರು, ಸೇರಿದಂತೆ ವಿವಿಧ ಗ್ರಾಮದ ಯಜಮಾನರುಗಳು, ಮುಖಂಡರುಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Mysore
ಉತ್ಪನ್ನಗಳಲ್ಲಿ ಗುಣಮಟ್ಟ ಎಂಬುದು ಬಹಳ ಮುಖ್ಯ: ಡಾ. ಪಿ.ಶಿವರಾಜು

ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ. ಪ್ರತಿ ಉತ್ಪನ್ನಗಳು ತನ್ನದೇ ಆದಂತಹ ಗುಣಮಟ್ಟವನ್ನು ಹೊಂದಿರುವುದರಿoದ ಅವುಗಳ ಬಗ್ಗೆ ಹೆಚ್ಚು ಗಮನ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ , ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆ ಅಥವಾ ಕಳಪೆ ಗುಣಮಟ್ಟದಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಇದರಿಂದ ಸಾರ್ವಜನಿಕರಿಗೆ ಏನೆಲ್ಲಾ ಲಾಭ ಆಗುತ್ತದೆ ಎಂಬುದರ ಬಗ್ಗೆ ಇರುವುದರಿಂದ ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.
ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಅಪ್ಲಿಕೇಶನ್ಗಳು ಸಹ ಇರುವುದರಿಂದ ನಿಮ್ಮ ಮೊಬೈಲ್ ಗಳಲ್ಲಿ ಡೌನ್ಲೋಡ್ ಮಾಡಿಕೊಂಡು ಎಫ್.ಎಸ್.ಐ, ಹಾಲ್ ಮಾರ್ಕ್ ನಂತಹ ಯಾವ ಯಾವ ಸ್ಟ್ಯಾಂಡರ್ಡ್ ಮಾರ್ಕ್ ಗಳು ಇರುತ್ತದೆ ಅವುಗಳ ವಿನಾಯಿತಿಯನ್ನು ಪರೀಕ್ಷಿಸಬಹುದು ಎಂದು ತಿಳಿಸಿದರು.
ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.
ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್ಗಳನ್ನು ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.
ಈ ಕಾರ್ಯಗಾರ ಕಾರ್ಯಾಗಾರಕ್ಕೆ ಮಾತ್ರ ಸೀಮಿತವಾಗದೆ ಇದರ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ತಿಳಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಾಡಬೇಕು, ಜೊತೆಗೆ ಇಂತಹ ವಿಷಯಗಳ ಬಗ್ಗೆ ಜನರಿಗೆ ಅನುಕೂಲವಾಗುವಂತೆ ನಿಮ್ಮ ಇಲಾಖೆಯ ನೋಟಿಸ್ ಬೋರ್ಡ್ಗಳಲ್ಲಿ ಕರಪತ್ರಗಳನ್ನು ಸೂಚನಾ ಫಲಕಗಳಿಗೆ ಹಾಕುವುದರ ಮೂಲಕ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಿ ಎಂದು ಹೇಳಿದರು.
ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.
ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.
ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.
-
State24 hours ago
ಅಕ್ರಮ ಮರ ಕಡಿತಲೆಗೆ ಶಿಕ್ಷೆ ಪ್ರಮಾಣ ಹೆಚ್ಚಳ: ಈಶ್ವರ ಖಂಡ್ರೆ ಖಡಕ್ ಸೂಚನೆ
-
Special11 hours ago
ಆಸ್ತಿ ಮಾಲೀಕರಿಗೆ ಸರ್ಕಾರದಿಂದ ಮನೆ ಬಾಗಿಲಿಗೆ ಬರಲಿದೆ ಉಚಿತ ಖಾತಾ : ಸರ್ಕಾರದಿಂದ ವಿನೂತನ ವ್ಯವಸ್ಥೆ
-
State24 hours ago
ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ ಮಾಡಿದ ಸಿಎಂ ಸಿದ್ದರಾಮಯ್ಯ
-
State6 hours ago
ನಂದಿನಿ ಹಾಲು ಮತ್ತಷ್ಟು ದುಬಾರಿ: ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಅನುಮೋದನೆ
-
Hassan7 hours ago
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ಖಂಡಿಸಿ ದೂರು
-
State8 hours ago
ಪತ್ರಿಕೋದ್ಯಮ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ
-
State5 hours ago
Nation First, Party next, Self last: ಯತ್ನಾಳ್ ಹೀಗೇಳಿದ್ದೇಕೆ?
-
Kodagu4 hours ago
ಭೀಕರ ರಸ್ತೆ ಅಪಘಾತ – ಬೈಕ್ ಸವಾರ ದುರ್ಮರಣ