Connect with us

Kodagu

ಕೊಟ್ಟಮುಡಿ ಝೀನತ್ ಯುವಕ ಸಂಘ ಅಧ್ಯಕ್ಷರಾಗಿ ಸೌಕತ್ ಆಯ್ಕೆ

Published

on

ವರದಿ: ಝಕರಿಯ ನಾಪೋಕ್ಲು

ನಾಪೋಕ್ಲು: ಕೊಟ್ಟಮುಡಿಯ ಝೀನತ್ ಯುವಕ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಗುರುವಾರ ಆಯ್ಕೆಮಾಡಲಾಯಿತು.

ನೂತನ ಅಧ್ಯಕ್ಷರಾಗಿ ಕೆ.ಹೆಚ್ ಸೌಕತ್, ಉಪಾಧ್ಯಕ್ಷರಾಗಿ ಹೆಚ್.ಎಂ.ನೌಶಾದ್, ಪ್ರಧಾನ ಕಾರ್ಯದರ್ಶಿಯಾಗಿ ರಹೀಂ, ಸಹ ಕಾರ್ಯದರ್ಶಿಯಾಗಿ ರಶೀದ್, ಕೋಶಾಧಿಕಾರಿಯಾಗಿ ಮುಹಮ್ಮದ್, ಹಂಝ ಪರವಂಡ, ಮಾಧ್ಯಮ ಕಾರ್ಯದರ್ಶಿಯಾಗಿ ರಫೀಕ್ ಆಯ್ಕೆಯಾದರು.

ಸಮಿತಿ ಸದಸ್ಯರಾಗಿ ಪೈಸಲ್ (ಪೈಚು), ರಫೀಕ್ ಪೊಟ್ಟಂಡ, ಸಾದಿಕ್, ರಹೀಮ್ ಪಟ್ಟಮಾಡ, ರಫೀಕ್ ಕೊಟ್ಟಮುಡಿ, ಅಶ್ರಫ್ ಸಿ.ಎಂ, ಮನ್ಸೂರ್ ಕಬಿನಿ, ಬಾಸಿತ್, ಯೂನಸ್, ರಫೀಕ್ ಕೇಮಾಡ್, ಮನ್ಸೂರ್ ಪರವಂಡ ಆಯ್ಕೆಯಾದರು.

Continue Reading

Kodagu

ಕೊಡಗು ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿಯ ಸಭೆ

Published

on

ಮಡಿಕೇರಿ : ಕೊಡಗು ಮಾನವ – ವನ್ಯಪ್ರಾಣಿ ಸಂಘರ್ಷ ಉಪ ಶಮನ (kodagu Man – Animal conflict mitigation foundation) ಪ್ರತಿಷ್ಠಾನ ನಿಧಿಯ ಆಡಳಿತ ಮಂಡಳಿಯ ಸಭೆ ಬೆಂಗಳೂರಿನ ವಿಕಾಸಸೌಧದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕೊಡಗು ಮಾನವ – ವನ್ಯ ಪ್ರಾಣಿ ಸಂಘರ್ಷ ಉಪ ಶಮನ ಪ್ರತಿಷ್ಠಾನ ನಿಧಿಯ ಆಡಳಿತ ಮಂಡಳಿಯ ಸದಸ್ಯರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭಾಗವಹಿಸಿ ಸಭೆಯಲ್ಲಿ ಚರ್ಚೆ ನಡೆಸಿದರು. ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ ಉಪಸ್ಥಿತರಿದ್ದರು.

Continue Reading

Kodagu

ಶ್ರಮ ಬದುಕಿನಿಂದ ಜೀವನ ಸಮೃದ್ಧ : ಶ್ರೀ ರಂಭಾಪುರಿ ಜಗದ್ಗುರುಗಳು

Published

on

ಬಾಳೆಹೊನ್ನೂರು ಆಗಸ್ಟ್-7 : ಕಷ್ಟಗಳ ನಡುವೆ ಮನುಷ್ಯ ಬಾಳಿ ಬದುಕಿದರೂ ಆದರ್ಶಗಳನ್ನು ಎಂದಿಗೂ ಬಿಡಬಾರದು. ಚಿಂತೆಯಿAದ ಬದುಕು ದುರ್ಬಲ. ಆದರೆ ಶ್ರಮ ಬದುಕಿನಿಂದ ಜೀವನ ಸಮೃದ್ಧಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಗುರುವಾರ ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಶ್ರಾವಣ ಪುರಾಣ ಪ್ರವಚನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಅತಿ ದೊಡ್ಡ ಸಂಪತ್ತು ಎಂದರೆ ಬುದ್ಧಿವಂತಿಕೆ. ಬಲವಾದ ಆಯುಧವೆಂದರೆ ತಾಳ್ಮೆ. ಅತ್ಯಂತ ಉತ್ತಮ ರಕ್ಷಣೆ ಎಂದರೆ ನಂಬಿಕೆ. ಅತ್ಯಂತ ಒಳ್ಳೆಯ ಔಷಧ ಎಂದರೆ ನಗು. ಇವೆಲ್ಲವೂ ಪ್ರಪಂಚದಲ್ಲಿ ದುಡ್ಡಿಲ್ಲದೇ ಸುಲಭವಾಗಿ ಸಿಗುವಂತಹುಗಳು. ಆತುರದ ನಿರ್ಧಾರ ಮನುಷ್ಯನನ್ನು ಬೆಂಕಿಗೆ ತಳ್ಳುತ್ತದೆ. ಅರಿತು ಮಾಡುವ ನಿರ್ಧಾರ ಬದುಕಿಗೆ ಬೆಳಕನ್ನು ತೋರುತ್ತದೆ. ನಂಬಿಕೆ ಮತ್ತು ತಾಳ್ಮೆ ಇದ್ದರೆ ಅದರ ಫಲ ಮುಂದೊAದು ದಿನ ಒಳ್ಳೆಯದನ್ನು ಉಂಟು ಮಾಡುತ್ತದೆ.

ಆಧುನಿಕ ಯುಗದಲ್ಲಿ ಹೆಚ್ಚು ನಾಗರಿಕ ಸೌಲಭ್ಯ ಸಂಪನ್ಮೂಲ ಹೊಂದಿದ್ದರೂ ಜೀವನಕ್ಕೆ ನೆಮ್ಮದಿಯಿಲ್ಲ. ಜಾಗತೀಕರಣ ಉದಾರೀಕರಣ ಮತ್ತು ಖಾಸಗೀಕರಣ ಬೆಳೆದರಷ್ಟೇ ಸಾಲದು. ಅದರೊಂದಿಗೆ ಮನುಷ್ಯನಲ್ಲಿ ಮಾನವೀಯತೆ ಅಂತ:ಕರಣ ಬೆಳೆದು ಬರಬೇಕಾಗಿದೆ. ವಿಜ್ಞಾನ ತಂತ್ರಜ್ಞಾನಗಳ ತೊಳಲಾಟದಲ್ಲಿ ಧರ್ಮ ಸಂಸ್ಕೃತಿ ಮತ್ತು ಆದರ್ಶಗಳು ನಾಶಗೊಳ್ಳಬಾರದು. ಧರ್ಮ ಅರ್ಥ ಕಾಮ ಮತ್ತು ಮೋಕ್ಷ ಎಂಬ ನಾಲ್ಕು ಪುರುಷಾರ್ಥಗಳನ್ನು ಸಂಪಾದಿಸಿಕೊAಡು ಬಾಳುವುದೇ ನಿಜವಾದ ಧರ್ಮವೆಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಬೋಧಿಸಿದ್ದಾರೆ ಎಂದರು.
ಶ್ರೀ ಜಗದ್ಗುರು ರೇಣುಕ ವಿಜಯ ಪುರಾಣ ಪ್ರವಚನ ಮಾಡಿದ ನೆಗಳೂರು ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಬಾಳಿನ ಭಾಗ್ಯೋದಯಕ್ಕೆ ಆದರ್ಶ ಮೌಲ್ಯಗಳ ಪರಿಪಾಲನೆ ಬೇಕು. ಮನುಷ್ಯ ಹುಟ್ಟಿ ಬರುವಾಗ ಪವಿತ್ರ ಹೃದಯದವರಾಗಿರುತ್ತೇವೆ. ಲೌಕಿಕದಲ್ಲಿ ಬೆಳೆದ ಮನಸ್ಸು ಮಲಿನಗೊಂಡ ಬಟ್ಟೆಯಂತಾಗಿದೆ. ಮನದ ಕನ್ನಡಿಯ ಮೇಲೆ ಧೂಳು ಮುಸುಕಿದೆ. ಅಂಟಿದ ಧೂಳು ಜಾಡಿಸಿ ಪರಿಶುದ್ಧಗೊಳಿಸಲು ಗುರುವಿನ ಜ್ಞಾನ ಬೋಧಾಮೃತ ಅವಶ್ಯಕವಾಗಿ ಬೇಕಾಗಿದೆ. ಸುಂದರವಾದ ಉಡುಗೆ ತೊಡುಗೆಗಳಿಂದ ವ್ಯಕ್ತಿತ್ವವನ್ನು ಬದಲಿಸಿಕೊಳ್ಳಬಹುದೇ ವಿನಾ ಬದುಕನ್ನು ಬದಲಿಸಿಕೊಳ್ಳು ಸಾಧ್ಯವಿಲ್ಲ. ಸಂಸ್ಕಾರ ಮತ್ತು ಸಚ್ಚಾರಿತ್ರö್ಯದಿಂದ ಮಾತ್ರ ಬದುಕನ್ನು ಶ್ರೀಮಂತಗೊಳಿಸಲು ಸಾಧ್ಯವಿದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಸಕಲ ಜನತೆಗೆ ಜ್ಞಾನದ ಬೆಳಕು ತೋರಿ ಉದ್ಧರಿಸಿದರು ಎಂದರು.


ಈ ಸಮಾರಂಭದಲ್ಲಿ ಹುಡುಗಿ ಹಿರೇಮಠದ ಸೋಮೇಶ್ವರ ಶಿವಾಚಾರ್ಯರು, ಲಿಂಗದಹಳ್ಳಿ ಹಿರೇಮಠದ ವೀರಭದ್ರ ಶಿವಾಚಾರ್ಯರು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು. ಗುರುಕುಲದ ಕುಲಪತಿ ಸಿದ್ಧಲಿಂಗಯ್ಯ ಹಿರೇಮಠ, ರೇವತಗಾಂವ ವಿಶ್ವನಾಥ ದೇವರು, ದಾವಣಗೆರೆಯ ಮಠದ ಶಿವಾನಂದಯ್ಯ, ಡಾ ಸುಲೋಚನಾ ಮಠದ, ವೀರೇಶ ಪಾಟೀಲ ಉಪಸ್ಥಿತರಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ವಿಠಲಾಪುರ ಹಿರೇಮಠದ ಗಂಗಾಧರಸ್ವಾಮಿ ಇವರಿಂದ ಪ್ರಾರ್ಥನಾ ಗೀತೆ ಜರುಗಿತು. ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕ ವೀರೇಶ ಕುಲಕರ್ಣಿ ನಿರೂಪಿಸಿದರು.
ಬೆಳಿಗ್ಗೆ ಶ್ರೀ ರಂಭಾಪುರಿ ಜಗದ್ಗುರುಗಳವರು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಬಂದ ಭಕ್ತರಿಗೆ ಶುಭ ಹಾರೈಸಿದರು.

Continue Reading

Kodagu

ಕಾಡಾನೆ ದಾಳಿ : ಬೃಹತ್ ಪ್ರತಿಭಟನೆಗೆ ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿ ನಿರ್ಧಾರ

Published

on

ಮಡಿಕೇರಿ: ಚೆಂಬು ಗ್ರಾಮ ವ್ಯಾಪ್ತಿಯ ದಬ್ಬಡ್ಕ-ಚೆಂಬು ಮತ್ತು ಊರುಬೈಲು ಚೆಂಬು ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಚೆಂಬು ಸಾರ್ವಜನಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಸಚಿನ್ ಕೆದಂಬಾಡಿ ಹಾಗೂ ಕಾರ್ಯದರ್ಶಿ ಪುಂಡರೀಕ ಅರಂಬೂರು ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿದಿನ ಕೃಷಿಕರ ತೋಟಗಳಿಗೆ ಕಾಡಾನೆಗಳು ನುಗ್ಗಿ ಅಡಿಕೆ, ತೆಂಗು, ಬಾಳೆ ಮತ್ತಿತರ ಕೃಷಿ ಫಸಲನ್ನು ತಿಂದು ಅಪಾರ ನಷ್ಟ ಉಂಟು ಮಾಡುತ್ತಿದ್ದು, ಕೃಷಿಕರ ಬದುಕೇ ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ಕಳೆದ ಕೆಲವು ದಿನಗಳಿಂದ ಒಂಟಿಸಲಗವೊಂದು ಗ್ರಾಮದಲ್ಲೇ ಬೀಡುಬಿಟ್ಟಿದ್ದು, ಜನ ಆತಂಕದಲ್ಲೇ ದಿನದೂಡುವಂತಾಗಿದೆ. ವಿದ್ಯಾರ್ಥಿಗಳು ಶಾಲೆಗೆ ತೆರಳಲು ಭಯ ಪಡುವಂತ್ತಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಈಗಾಗಲೇ ಗ್ರಾಮಸ್ಥರು ಸಮಿತಿಯೊಂದನ್ನು ರಚಿಸಿಕೊಂಡು ಕಾಡಾನೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಮತ್ತು ಗ್ರಾಮದಲ್ಲಿರುವ ಕಾಡಾನೆಯನ್ನು ಕಾಡಿಗೆ ಅಟ್ಟಬೇಕೆಂದು ಒತ್ತಾಯಿಸಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆದರೆ ಮನವಿಗೆ ಯಾವುದೇ ಸ್ಪಂದನೆ ದೊರೆತ್ತಿಲ್ಲ.


ಒಂಟಿ ಸಲಗವೊಂದು ಈ ಪ್ರದೇಶಕ್ಕೆ ಲಗ್ಗೆ ಇಟ್ಟಿದ್ದು, ಶಿವಪ್ಪ ಎಂಬುವವರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಶಾಸಕರ ಆಪ್ತರಾದ ಸಂಕೇತ್ ಪೂವಯ್ಯ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಕಾಡಾನೆ ದಾಳಿಯ ಸಮಸ್ಯೆಗೆ ಶಾಶ್ವತ ಪರಿಹಾರ ಸೂಚಿಸದೆ ಕೇವಲ ಮೃತಪಟ್ಟ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳುತ್ತಿರುವುದು ಖಂಡನೀಯ. ಕಾಡಾನೆ ದಾಳಿಯನ್ನು ತಡೆಗಟ್ಟಲು ಪರಿಹಾರ ಹುಡುಕುವ ಬದಲು ಸತ್ತಮೇಲೆ ಹೋಗಿ ಸಾಂತ್ವನ ಹೇಳುವುದು ಕಣ್ಣೊರೆಸುವ ತಂತ್ರವಾಗಿದೆ ಎಂದು ಸಚಿನ್ ಕೆದಂಬಾಡಿ ಹಾಗೂ ಪುಂಡರೀಕ ಅರಂಬೂರು ಟೀಕಿಸಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಂದಿನ ೪೮ ಗಂಟೆಗಳಲ್ಲಿ ಕಾಡಾನೆ ಹಿಡಿಯಲು ಅನುಮತಿ ಕೊಡಿಸುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಈ ಹಿನ್ನೆಲೆ ಗ್ರಾಮಸ್ಥರು ಆ.೧೦ರ ವರೆಗೆ ಕಾಲಾವಕಾಶ ನೀಡಿದ್ದು, ಆ.೧೧ ರಂದು ಸಂಪಾಜೆ ವಲಯ ಅರಣ್ಯಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

Continue Reading

Trending

error: Content is protected !!