Mandya
ಕೊತ್ತತ್ತಿ ಹೋಬಳಿ ವ್ಯಾಪ್ತಿಯಲ್ಲಿ ಶಾಸಕರಿಂದ ₹12 ಕೋಟಿ ವೆಚ್ಚದ ಭೂಮಿ ಪೂಜೆ
ಮಂಡ್ಯ: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ₹12 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ರಮೇಶ್‌ಬಾಬು ಬಂಡಿಸಿದ್ದೇಗೌಡ ಅವರು ಶನಿವಾರ ಚಾಲನೆ ನೀಡಿದರು.
ತಾಲ್ಲೂಕಿನ ಉರಮಾರಕಸಲಗೆರೆ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ₹1.50 ಕೋಟಿ ವೆಚ್ಚದ ಕುಡಿಯುವ ನೀರಿನ ಕಾಮಗಾರಿ, ಗ್ರಾಮದ ಮಂಚಮ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿ, ರೈತರುಗಳಿಗೆ ಕೃಷಿ ಇಲಾಖೆಯಿಂದ ಯಂತ್ರೋಪಕರಣಗಳನ್ನು ವಿತರಿಸಿದರು.

ನೀರಾವರಿ ಇಲಾಖೆ ವತಿಯಿಂದ ₹10 ಕೋಟಿ ವೆಚ್ಚದಲ್ಲಿ ಕೊತ್ತತ್ತಿ ಹೋಬಳಿಯ ಎರಡನೇ ವೃತ್ತದ ವಿವಿಧ ಗ್ರಾಮಗಳಾದ ಲೋಕಸರ, ಹಳುವಾಡಿ, ಟಿ.ಮಲ್ಲಿಗೆರೆ, ಕೋಲಕಾರನದೊಡ್ಡಿ, ಸೂನಗಹಳ್ಳಿ, ಭೂತನಹೊಸೂರು, ಕಬ್ಬನಹಳ್ಳಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಮಾಡುತ್ತಿದ್ದೇವೆ ಎಂದರು.

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ, ಭಾಗ್ಯಜ್ಯೋತಿ ಫಲಾನುಭವಿಗಳ ಬಾಕಿ ಹಣವನ್ನು ಮನ್ನಾ ಮಾಡಿರುವ ಏಕೈಕ ಸರ್ಕಾರ ಕಾಂಗ್ರೆಸ್ ಸರ್ಕಾರ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನಮ್ಮನ್ನು ಕೈಹಿಡಿಯಿರಿ ಎಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸೌಮ್ಯಶ್ರೀ, ಮುಖಂಡರಾದ ನಾಗರಾಜು, ಮರೀಗೌಡ, ಮಧು, ಶಿವಣ್ಣ, ರವಿಕುಮಾರ್, ಸಿದ್ದರಾಮೇಗೌಡ, ಕೆ.ಎಚ್.ನಾಗರಾಜು, ರಮೇಶ ಮಿತ್ರ, ಹೆಮ್ಮಿಗೆ ಸಿದ್ದಪ್ಪ, ಅಂಕರಾಜು, ಶಿವರಾಮ್, ಸುರೇಶ್, ರಾಮಚಂದ್ರ ಭಾಗವಹಿಸಿದ್ದರು.
Mandya
ಹೆಲಿ ಟೂರಿಸಂ ಆರಂಭಿಸುವ ಸಂಬಂಧ ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ
ಮಂಡ್ಯ : ಬೂದನೂರು ಉತ್ಸವದ ಹಿನ್ನೆಲೆ ಚಿಕ್ಕಮಂಡ್ಯದಲ್ಲಿ ಹೆಲಿ ಟೂರಿಸಂ ಆರಂಭಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು..

ಪರಿಶೀಲನೆ ಸಂದರ್ಭದಲ್ಲಿ ಹೆಲಿಪ್ಯಾಡ್ ವ್ಯವಸ್ಥೆಗೆ ಅಗತ್ಯವಿರುವ ಸ್ಥಳದ ಲಭ್ಯತೆ ಹಾಗೂ ಸೂಕ್ತತೆ, ಸುರಕ್ಷತಾ ಮಾನದಂಡಗಳ ಪಾಲನೆ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಾಹನ ನಿಲುಗಡೆ ವ್ಯವಸ್ಥೆ, ಸಂಚಾರ ನಿರ್ವಹಣೆ, ತುರ್ತು ವೈದ್ಯಕೀಯ ಸೇವೆಗಳ ಸಿದ್ಧತೆ ಹಾಗೂ ಅಗ್ನಿಶಾಮಕ ವ್ಯವಸ್ಥೆಗಳ ಸೌಲಭ್ಯತೆ ಕುರಿತು ಸಮಗ್ರವಾಗಿ ಪರಿಶೀಲನೆ ನಡೆಸಿದರು.
ಸರ್ಕಾರದ ಮಾರ್ಗಸೂಚಿ ಹಾಗೂ ಸಂಬಂಧಿತ ಇಲಾಖೆಗಳ ನಿಯಮಾನುಸಾರ ಅಗತ್ಯ ಅನುಮತಿಗಳನ್ನು ಪಡೆದು ಮುಂದಿನ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Mandya
ಪಾಲಹಳ್ಳಿ ಗ್ರಾಮದ ಕೃಷಿ ಭೂಮಿಯಲ್ಲಿ ಅಕ್ರಮ ನಾಯಿ ಸಾಕಾಣಿಕೆ ಕೇಂದ್ರ: ಕೆ.ಎಸ್. ನಂಜುಂಡೇಗೌಡ
ಶ್ರೀರಂಗಪಟ್ಟಣ: ತಾಲೂಕಿನ ಪಾಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪಲಿಂಗಾಪುರ ಗ್ರಾಮದ ಕೃಷಿ ಭೂಮಿಯಲ್ಲಿ ಅಕ್ರಮವಾಗಿ ನಾಯಿ ಮತ್ತು ಕುದುರೆ ಸಾಕಾಣಿಕೆ ಕೇಂದ್ರವನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಗ್ರಾಮಸ್ಥರು ತಹಶೀಲ್ದಾರ್ ಅವರಿಗೆ ದೂರು ನೀಡಿದರು.
ಕೆಂಪಲಿಂಗಾಪುರ ಗ್ರಾಮದ ಸರ್ವೆ ನಂಬರ್ 32/1 ರ ಕೃಷಿ ಭೂಮಿಯಲ್ಲಿ ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಶೆಡ್ ನಿರ್ಮಿಸಿ, ಸುಮಾರು 30 ರಿಂದ 40 ವಿವಿಧ ತಳಿಗಳ ನಾಯಿಗಳನ್ನು ತಳಿ ಅಭಿವೃದ್ಧಿ ಉದ್ದೇಶಕ್ಕಾಗಿ ಸಾಕಲಾಗುತ್ತಿದೆ. ಇದರಿಂದ ಹೊರಬರುವ ಪ್ರಾಣಿಗಳ ತ್ಯಾಜ್ಯ ಮತ್ತು ಪ್ರಾಣಿಗಳನ್ನು ತೊಳೆದ ನೀರನ್ನು ಪಕ್ಕದ ರೈತರ ಜಮೀನುಗಳಿಗೆ ನೇರವಾಗಿ ಬಿಡುತ್ತಿರುವುದರಿಂದ ಬೆಳೆಗಳು ನಾಶವಾಗುತ್ತಿವೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಾಕಾಣಿಕೆ ಕೇಂದ್ರದ ಮಾಲೀಕರು ನಾಯಿ ಸಾಕಾಣಿಕೆಗೆ ಸಂಬಂಧಿಸಿದಂತೆ ಯಾವುದೇ ಅನುಮತಿ ಪತ್ರ ಅಥವಾ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪತ್ರಗಳನ್ನು ಹಾಜರುಪಡಿಸಿರುವುದಿಲ್ಲ. ಹೊಸದಾಗಿ ಕಟ್ಟಡ ನಿರ್ಮಿಸಲು ಅಥವಾ ತಳಪಾಯ ತೆಗೆದಿರುವ ಜಾಗಕ್ಕೆ ಯಾವುದೇ ಅಧಿಕೃತ ಅನುಮತಿ ಪಡೆದಿರುವ ಬಗ್ಗೆ ದಾಖಲೆಗಳು ಇಲ್ಲದಿರುವುದು ಸ್ಥಳ ಪರಿಶೀಲನೆಯ ವೇಳೆ ಕಂಡುಬಂದಿದೆ.
ಪ್ರಾಣಿಗಳ ಮಲಮೂತ್ರ ಹಾಗೂ ತೊಳೆದ ನೀರು ರೈತರ ಜಮೀನುಗಳಿಗೆ ಮತ್ತು ಕಿರು ಕಾಲುವೆಗಳಿಗೆ ಸೇರುತ್ತಿದ್ದು, ನೀರನ್ನು ಶುದ್ಧೀಕರಿಸಲು ಯಾವುದೇ ಕ್ರಮ ಕೈಗೊಂಡಿಲ್ಲದಿರುವುದು ಪಂಚಾಯಿತಿ ವರದಿಯಲ್ಲಿ ಸದರಿ ಜಾಗವು ಸಂಪೂರ್ಣವಾಗಿ ರೆವಿನ್ಯೂ ಜಾಗವಾಗಿರುವುದರಿಂದ ಇಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಪಾಲಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಹಶೀಲ್ದಾರ್ ಅವರಿಗೆ ವರದಿ ಸಲ್ಲಿಸಿದ್ದಾರೆ. ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಈ ವೇಳೆ ಗ್ರಾಮಸ್ಥರಾದ ಕೃಷ್ಣಣ್ಣ, ಪಾಲಹಳ್ಳಿ ಚಂದ್ರು, ವಿನಯ್ , ಜಗದೀಶ್, ಕೇಶವ, ನಂದೀಶ್, ರಾಜು, ಪ್ರಸನ್ನ ಸೇರಿದಂತೆ ಇತರರು ಇದ್ದರು.
Mandya
ಮೂಲ ಸೌಕಾರ್ಯಗಳನ್ನು ಕಲ್ಪಿಸುವಂತೆ ಕೆ.ಎಂ.ಉದಯ್‌ಗೆ ಮನವಿ ಸಲ್ಲಿಸಿದ ಮಹಿಳೆಯರು
ಮದ್ದೂರು: ಕುಡಿಯುವ ನೀರು, ಸರ್ಕಾರಿ ಬಸ್ ಸೇರಿದಂತೆ ಮೂಲ ಸೌಕರ್ಯಗಳನ್ನು ಗ್ರಾಮಕ್ಕೆ ಕಲ್ಪಿಸುವಂತೆ ಶಾಸಕ ಕೆ.ಎಂ.ಉದಯ್‌ಗೆ ಮಹಿಳೆಯರು ಮನವಿ ಸಲ್ಲಿಸಿದರು.
ತಾಲೂಕಿನ ಅಂಕೇಗೌಡನದೊಡ್ಡಿ ಗ್ರಾಮದಲ್ಲಿ ಬುಧವಾರ ಅಭಿವೃದ್ಧಿ ಕಾಮಗಾರಿಗೆ ಆಗಮಿಸಿದ್ದ ವೇಳೆ ಮಹಿಳೆಯರು ಗ್ರಾಮದ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.

ಗ್ರಾಮಕ್ಕೆ ಸರ್ಕಾರಿ ಬಸ್ ಬರೋದಿಲ್ಲ. ಮನೆ ಬಳಕೆ ಹಾಗೂ ವ್ಯವಸಾಯ ಬಳಕೆಗೊಸ್ಕರ 1 ಸಾವಿರ ಅಡಿ ಬೋರ್ವೆಲ್ ಕೊರೆದರು ನೀರು ಬರುತ್ತಿಲ್ಲ. ಪಂಚಾಯಿತಿಯಿಂದ ಕುಡಿಯಲು ಹಾಗೂ ಮನೆ ಬಳಕೆಗೂ ಸಮರ್ಪಕವಾಗಿ ನೀರು ಬಿಡುತ್ತಿಲ್ಲ. ಬೇಸಿಗೆಗೂ ಮುನ್ನವೇ ಈ ರೀತಿ ತೊಂದರೆಯಾಗುತ್ತಿದ್ದು ನಾವು ಹೇಗೆ ಜೀವನ ಮಾಡೋದು ಎಂದು ಗ್ರಾಮದ ಮಹಿಳೆಯರು ಸಮಸ್ಯೆಗಳ ಬಗ್ಗೆ ಶಾಸಕರ ಗಮನ ಸೆಳೆದರು.
ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಶಾಸಕ ಕೆ.ಎಂ. ಉದಯ್, ಮೂರು ತಿಂಗಳಲ್ಲಿ ಬನ್ನಹಳ್ಳಿ ಏತ ನೀರಾವರಿ ಯೋಜನೆ ಅಂತಿಮ ಘಟ್ಟಕ್ಕೆ ತಲುಪುತ್ತದೆ. ಹೀಗಾಗಿ ಈ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ ನೀಡಲಾಗುವುದು. ಗ್ರಾಮದ ಕೆರೆಗಳಿಗೆ ನೀರು ತುಂಬಿಸಿ ಅಂತರ್ಜಲ ವೃದ್ಧಿಸಿದಾಗ ಬೋರ್ವೆಲ್ ನಲ್ಲಿ ನೀರು ಹರಿಯಲಿದ್ದು, ಆದಷ್ಟು ಬೇಗ ಕುಡಿಯುವ ನೀರು ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದರು.

ಗ್ರಾಮಕ್ಕೆ ಮೂಲ ಸೌಕರ್ಯ ಹಾಗೂ ಸಾರಿಗೆ ಬಸ್ ಸೌಲಭ್ಯಗಳಿಗೆ ಕೆಲ ದಿನಗಳಲ್ಲೇ ಪರಿಹಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
-
Special18 hours agoಉಚಿತ PSI ಕೋಚಿಂಗ್: ಪರೀಕ್ಷೆ ಇಲ್ಲದೆ ಆಯ್ಕೆ!!
-
State19 hours agoಲೈಂಗಿಕ ದೌರ್ಜನ್ಯ ಕೇಸ್: ಮಂಡ್ಯ ರಮೇಶ್, ಸಾಧು ಕೋಕಿಲ ವಿರುದ್ದದ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್
-
Kodagu5 hours agoಮಡಿಕೇರಿ ಪೊಲೀಸ್ ಕಾನ್ಸ್ಟೇಬಲ್ ಸಂದೀಪ್ ನಿಧನ
-
Hassan4 hours agoರಾಜ್ಯದಲ್ಲಿ ಆರೋಗ್ಯ ಹಕ್ಕಿನ ಕಾಯ್ದೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
-
Hassan20 hours agoಗೋಮಾತೆ ಎಂದಿಗೂ ಕೈ ಬಿಡುವುದಿಲ್ಲ: ಸದಾಶಿವ ಶಿವಾಚಾರ್ಯ ಸ್ವಾಮೀಜಿ
-
National19 hours agoರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯದ ಬಗ್ಗೆ ಪುನಃ ಧ್ವನಿ ಎತ್ತಿದ ಮಾಜಿ ಪ್ರಧಾನಿ ಎಚ್ಡಿಡಿ
-
Chamarajanagar24 hours agoಮಲೆ ಮಹದೇಶ್ವರ ಬೆಟ್ಟದ ಮಹಾಶಿವರಾತ್ರಿ ಜಾತ್ರೆಗೆ ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧ: ಡಿಸಿ ಆದೇಶ
-
Hassan2 hours agoಗುತ್ತಿಗೆ-ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರು ಎದುರು ಪ್ರತಿಭಟನೆ
