Connect with us

State

KPSC: ಗೆಜೆಟೆಡ್‌ ಪ್ರೊಬೆಷನರಿ ಹುದ್ದೆ ನೇಮಕಾತಿ ಪ್ರಕ್ರಿಯೆಗೆ ಚಾಲನೆ!!!

Published

on

KPSC: 2023-24ನೇ ಸಾಲಿನ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮೀಸಲಾತಿ ನಿಯಮಗಳಂತೆ ವರ್ಗೀಕರಿಸಿ ಪ್ರಸ್ತಾವನೆಯನ್ನು ಶುಕ್ರವಾರ ಕರ್ನಾಟಕ ಲೋಕಸೇವಾ ಆಯೋಗ (KPSC) ಕ್ಕೆ ಕಳುಹಿಸಿದೆ.

ಗ್ರೂಪ್‌ ʼಎʼ ಮತ್ತು ಗ್ರೂಪ್‌ ʼಬಿʼ ಯಲ್ಲಿನ 384 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿ, ಆಯ್ಕೆ ಪ್ರಕ್ರಿಯೆಗೆ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಕೆಪಿಎಸ್ಸಿಗೆ ಪ್ರಸ್ತಾವನೆ ಕಳುಹಿಸಿರುವುದಾಗಿ ವರದಿಯಾಗಿದೆ.

ವಾಣಿಜ್ಯ ತೆರಿಗೆ, ಖಜಾನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಕಂದಾಯ, ಕೌಶಲಾಭಿವೃದ್ಧಿ, ಉದ್ಯಮಶೀಲತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಮಿಕ, ಸಹಕಾರ, ಉದ್ಯಮಶೀಲತೆ ಮತ್ತು ಜೀವನೋಪಾಯ, ಯುವ ಸಬಲೀಕರಣ ಮತ್ತು ಕ್ರೀಡಾ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಸಚಿವಾಲಯ, ಪ್ರವಾಸೋದ್ಯಮ ಸೇರೊ ʼಎʼ ನಲ್ಲಿ 159 ಗ್ರೂಪ್‌ ʼಬಿʼ ನಲ್ಲಿ 225 ಹುದ್ದೆಗಳ ನೇಮಕಾತಿ (ಕಲ್ಯಾಣ ಕರ್ನಾಟಕ ಸೇರಿ) ಗೆ ಸೂಚನೆ ನೀಡಲಾಗಿದೆ.

ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಈ ಮೂಲಕ ಚಾಲನೆ ದೊರಕುವ ಎಲ್ಲಾ ಸಂಭವನೀಯತೆ ಇದೆ.

Continue Reading
Click to comment

Leave a Reply

Your email address will not be published. Required fields are marked *

State

ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿಯಾದ ಸಂಸದ ಬಿ.ವೈ ರಾಘವೇಂದ್ರ

Published

on

ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.

ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.

Continue Reading

State

ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

Published

on

ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್ ಗುಡ್ ಫ್ರೈಡೇ ದಿನಗಳಲ್ಲಿ ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಕರ್ತವ್ಯಕ್ಕೆ ವಿನಾಯಿತಿ,ಸಭಾಧ್ಯಕ್ಷ ಯು ಟಿ ಖಾದರ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ

ಪವಿತ್ರ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರು ಎಸ್ ಎಸ್ ಎಲ್ ಸಿ ಮೌಲ್ಯ ಮಾಪನದ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.ಈ ಬಗ್ಗೆ ಯು ಟಿ ಖಾದರ್ ರವರ ಬಳಿ ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ ಶಿಕ್ಷಕಿಯರು ಸರಕಾರದ ಜೊತೆ ಮಾತುಕತೆ ನಡೆಸಿ ವಿನಾಯಿತಿ ದೊರಕಿಸಿಕೊಡುವಂತೆ ಮನವಿ ಮಾಡಿದ್ದರು.

ಈ ಬಗ್ಗೆ ಶಿಕ್ಷಣ ಇಲಾಖೆಯ ಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳ ಜೊತೆ ಮಾತುಕತೆ ನಡೆಸಿದ ಸಭಾಧ್ಯಕ್ಷ ಯು ಟಿ ಖಾದರ್ ಈಸ್ಟರ್ ಗುಡ್ ಫ್ರೈಡೇ ದಿನಗಳಾದ ಗುರುವಾರ,ಶುಕ್ರವಾರ ಹಾಗೂ ಭಾನುವಾರ ಕರ್ತವ್ಯಕ್ಕೆ ವಿನಾಯಿತಿ ನೀಡುವಂತೆ ಸೂಚನೆ ನೀಡಿದ್ದರು.

ಅದರಂತೆ ಶಿಕ್ಷಣ ಇಲಾಖೆಯು ಕ್ರಿಶ್ಚಿಯನ್ ಸಮುದಾಯದ ಶಿಕ್ಷಕ/ಶಿಕ್ಷಕಿಯರಿಗೆ ಈಸ್ಟರ್,ಗುಡ್ ಫ್ರೈಡೇ ದಿನಗಳಲ್ಲಿ ವಿನಾಯಿತಿ ನೀಡಿ ಉಳಿದ ದಿನಗಳಲ್ಲಿ ಹಾಜರಾಗಲು ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮಾಹಿತಿ ನೀಡಿದ್ದಾರೆ.

Continue Reading

State

ಸಿದ್ದರಾಮಯ್ಯ ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುತ್ತಿದ್ದಾರೆ: ಆರ್‌.ಅಶೋಕ್‌

Published

on

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಕಾಂತರಾಜು ವರದಿ ಬಗ್ಗೆ ನಾಡಿನ ಜನತೆಗೆ ಅನುಮಾನ ಇರುವ ಕಾರಣ, ಇನ್ನಾದರೂ ಒಣ ಪ್ರತಿಷ್ಠೆ ಮತ್ತು ಸ್ವಹಿತಾಸಕ್ತಿ ಬದಿಗಿಟ್ಟು ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆಶೋಕ್ ಅವರು, ಎಲ್ಲರೂ ಒಪ್ಪುವಂತಹ ವೈಜ್ಞಾನಿಕ ಸಮೀಕ್ಷೆ ನಡೆಸಿ ಹೊಸ ವರದಿ ಪಡೆಯಲು ತಮ್ಮ ತಕರಾರೇನು? ಸಿಎಂ ಸಿದ್ದರಾಮಯ್ಯನವರು ಪ್ರಾಮಾಣಿಕ ಮತ್ತು ಪಾರದರ್ಶಕ ನಿರ್ಧಾರ ತೆಗೆದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಆಗಿದೆ ಎನ್ನಲಾದ ಅಧಿಕಾರ ಹಂಚಿಕೆ ಒಪ್ಪಂದವನ್ನು ಹೇಗಾದರೂ ಮಾಡಿ ಮುಂದೂಡಲು, ಅಧಿಕಾರ ಹಂಚಿಕೆ ಒಪ್ಪಂದದಿಂದ ತಪ್ಪಿಸಿಕೊಳ್ಳಲು ಜಾತಿ ಜನಗಣತಿ ವರದಿಯನ್ನು ತಂತ್ರವಾಗಿ ಬಳಸಿಕೊಳ್ಳಲಾಗುತ್ತಿದೆಯೇ?. ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ತಾವು ಈ ವರದಿ ಜಾರಿ ಬಾಣ ಬಿಟ್ಟಿರುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲೇ ಚರ್ಚೆ ನಡೆಯುತ್ತಿದೆ. ಇದರ ಬಗ್ಗೆ ಏನು ಹೇಳುತ್ತೀರಿ? ಎಂದು ಪ್ರಶ್ನೆಸಿದ್ದಾರೆ.

ಜಾತಿಗಣತಿಯನ್ನ ರಾಜಕೀಯ ದಾಳವಾಗಿ ಬಳಸುವುದು ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ತಳ ಸಮುದಾಯಗಳಿಗೆ ಮಾಡುವ ಅಪಮಾನವಲ್ಲವೇ? ಸಾಮಾಜಿಕ ನ್ಯಾಯವೆಂಬ ಪವಿತ್ರ ಪರಿಕಲ್ಪನೆಯನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ಆತ್ಮವಂಚನೆಯಲ್ಲವೇ? ಜಾತಿ ಜನಗಣತಿ ವರದಿಯ ದತ್ತಾಂಶಗಳು ಮಾಧ್ಯಮಗಳಲ್ಲಿ ಸೋರಿಕೆಯಾಗಲು ಕಾರಣವೇನು? ಇದು ಸರ್ಕಾರದ ಲೋಪವೋ ಅಥವಾ ಉದ್ದೇಶಪೂರ್ವಕವಾಗಿಯೇ ವರದಿಯ ಅಂಕಿ-ಅಂಶಗಳನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಲಾಗುತ್ತಿದೆಯೇ? ಕೇವಲ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಜನಾಂಗಕ್ಕೆ ಸೇರಿದ ಉಪಜಾತಿಗಳನ್ನು ಬೇರ್ಪಡಿಸಲಾಗಿದೆ. ಇದೇ ಮಾನದಂಡ ಮುಸ್ಲಿಂ, ಕ್ರಿಶ್ಚಿಯನ್ ಧರ್ಮಗಳಿಗೆ ಏಕೆ ಅನುಸರಿಸಿಲ್ಲ? ಇದರ ಹಿಂದಿನ ಹುನ್ನಾರ ಏನು? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Continue Reading

Trending

error: Content is protected !!