Connect with us

Mysore

ಸಾಲಿಗ್ರಾಮ ಮತ್ತು ಕೆ. ಆರ್.ನಗರ ನೂತನ ಅಧ್ಯಕ್ಷರುಗಳ ನೇಮಕ

Published

on

ಸಾಲಿಗ್ರಾಮ ಮಂಡಲದ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ಸಾ.ರಾ.ತಿಲಕ್ ಮತ್ತು ಕೆ.ಆರ್.ನಗರ ಮಂಡಲದ ಅಧ್ಯಕ್ಷರಾಗಿ ಹೊಸೂರು ಧರ್ಮ ಅವರನ್ನು ನೇಮಿಸಲಾಗಿದೆ.
ಹಲವಾರು ವರ್ಷಗಳಿಂದ ಯುವಕರಾಗಿದ್ದು ಕೊಂಡು ಕೆ.ಆರ್.ನಗರ ಕ್ಷೇತ್ರದ ಬಿಜೆಪಿ ಪಕ್ಷದ ಸಂಘಟನೆಗೆ ದುಡಿದಿರುವ ಇವರುಗಳ ಸೇವೆಯನ್ನು ಮನಗೊಂಡು ಇವರನ್ನು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಈ ಆದೇಶ ಹೊರಡಿಸಿದ್ದಾರೆ.


ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡು ಮಾತನಾಡಿದ ಸಾ.ರಾ.ತಿಲಕ್ ಮತ್ತು ಹೊಸೂರು ಧರ್ಮ ಮಾತನಾಡಿ ನಮ್ಮ ನಾಯಕರಾದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಅವರು ತಮಗೆ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಕ್ಷೇತ್ರದಲ್ಲಿ ಬಿ.ಜೆ.ಪಿ‌.ಪಕ್ಷದ ಸಂಘಟನೆಗೆ ದುಡಿಯುವುದಾಗಿ ತಿಳಿಸಿದರು.
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಬಲವರ್ಧನೆ ಮಾಡುವುದರ ಜೊತೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ದ ಮತ್ತು ವಿವಿದ ಹೋರಾಟಗಳನ್ನು ನಮ್ಮ ಪಕ್ಷದ ಕಾರ್ಯಕರ್ತರ ಜೊತೆಗೂಡಿ ಹೋರಾಟ ಮಾಡುವುದಾಗಿ ಹೇಳಿದರು.

ವರದಿ : ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading
Click to comment

Leave a Reply

Your email address will not be published. Required fields are marked *

Mysore

ಶ್ರೀ ರಾಮ ಸಕ್ಕರೆ ಕಾರ್ಖಾನೆ ಅತೀ ಶೀಘ್ರದಲ್ಲೇ ಪ್ರಾರಂಭ: ಡಿ. ರವಿಶಂಕರ್,

Published

on

ಸಾಲಿಗ್ರಾಮ ತಾಲೂಕು ಚುಂಚನಕಟ್ಟೆಯ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವ ನಿರಾಣಿ ಶುಗರ್ಸ್ ನವರು ಗುತ್ತಿಗೆ ನೊಂದಣಿ ಮಾಡಿ ಕೊಂಡು ಕಾರ್ಖಾನೆ ಆರಂಭಿಸಲಿದ್ದಾರೆ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆಯಲ್ಲಿ‌ ಕಾವೇರಿ ನದಿಗೆ ಬಾಗಿನ‌ ಅರ್ಪಿಸಿ ನಂತರ ಮಾತನಾಡಿದ ಅವರು ಈಗಾಗಲೇ ಕಾರ್ಖಾನೆ   ಆರಂಭಕ್ಕೆ ಕ್ರಮಕೈಗೊಳ್ಳಲು ನಿರಾಣಿ ಶುಗರ್ಸ್ ನವರು ನೊಂದಣಿಗೆ ಕ್ರಮಕೈಗೊಳ್ಳುವಂತೆ ಸಕ್ಕರೆ ಸಚಿವರಿಗೆ ಮನವಿ ಮಾಡಲಾಗಿದ್ದು, ಸದ್ಯದಲ್ಲಿಯೇ ಕಾರ್ಖಾನೆಯ ಆರಂಭದ ಬಗ್ಗೆ ಸಿಹಿ ಸುದ್ದಿ ನೀಡುತ್ತೇನೆ ಎಂದರು.
ಕಳೆದ ಬಾರಿ ಬರಗಾಲದ ಹಿನ್ನಲೆಯಲ್ಲಿ ಇಲ್ಲಿ ಆಯೋಜಿಸಬೇಕಿದ್ದ ಜಲಪಾತ ಉತ್ಸವ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದು, ಅತಿ ಶೀಘ್ರದಲ್ಲಿಯೇ ಕಾರ್ಯಕ್ರಮದ ರೂಪು-ರೇಷೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿ ತಿರ್ಮಾನ ಕೈಗೊಳ್ಳಲಾಗುತ್ತದೆ ಎಂದರು.


ಇದಲ್ಲದೇ ಚುಂಚನಕಟ್ಟೆ ಗ್ರಾಮವನ್ನು ಮತ್ತಷ್ಟು ಪ್ರವಾಸಿ ತಾಣ ಮಾಡಲು ಆಗಬೇಕಾದ ಅಭಿವೃದ್ದಿಗೆ ಇನ್ನಷ್ಟು ಅನುಧಾನವನ್ನು ಬಿಡುಗಡೆ ಮಾಡಿಸಲು ತಾವು ಬದ್ದರಾಗಿದ್ದು, ರೈತರಿಗೆ ಭತ್ತ ಸೇರಿದಂತೆ ಇನ್ನಿತರ ಬೆಳೆಯ ಬಿತ್ತನೆ ಕಾರ್ಯಕೈಗೊಳ್ಳಲು ಸಮರ್ಪಕ ಬಿತ್ತನೆ ಬೀಜ ವಿತರಣೆಗೆ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆಯವರಿಗೆ ಸೂಚಿಸಿರುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲು ಸ್ವೀಕರಿಸಿದರು. ಇದಕ್ಕು ಮೊದಲು ಶಾಸಕರು ಚುಂಚನಕಟ್ಟೆ ಬಸವನ ವೃತ್ತದಿಂದ ಆಂಜನೇಯ ಸ್ವಾಮಿ ದೇವಾಲಯದವರಿಗೆ ಮಂಗಳ ವಾದ್ಯದೊಂದಿಗೆ ತಮ್ಮ ಪತ್ನಿ ಸುನಿತಾ ಅವರ ಜೊತೆ ಕಳಸ ಹೊತ್ತ ಮಹಿಳೆಯರು ಮತ್ತು ಸಾರ್ವಜನಿಕರ ಜೊತೆಗೆ ತೆರಳಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ ಭಾಗಿನ ಅರ್ಪಿಸಿ ಶ್ರೀರಾಮ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ನರಗುಂದ,   ಗ್ರೇಡ್ 2 ತಹಸೀಲ್ದಾರ್  ಸಣ್ಣರಾಮಪ್ಪ, ದೇವಾಲಯದ ಇಓ ರಘು, ಶಿರಸ್ತೆದಾರ್ ಶಿವಕುಮಾರ್, ಉಪತಹಸೀಲ್ದಾರ್ ಕೆ.ಜೆ.ಶರತ್ ಕುಮಾರ್,  ಎಇಇಗಳಾದ ವಿನುತ್,ರಾಜರಾಮ್, ಈಶ್ವರ್, ಗುರುರಾಜ್,  ಆಯಾಜ್ , ಸಾಲಿಗ್ರಾಮ ಎಸ್ ಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಂಠಿ ಕುಮಾರ್, ಸಿ ಡಿ ಸಿ ಸದಸ್ಯ ಪರಿಶೀತ್,    ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹೇಶ್, ಎಂಸಿ ಮಾಜಿಅಧ್ಯಕ್ಷ ರಮೇಶ್, ತಾ.ಪಂ.ಮಾಜಿ ಅಧ್ಯಕ್ಷ, ಹರದನಹಳ್ಳಿ ಮಂಜಪ್ಪ, ಮಹದೇವಸ್ವಾಮಿ, ಮಾಜಿ ಸದಸ್ಯ ಅಂಕನಲ್ಲಿ ಎ ಟಿ ಗೋವಿಂದೇಗೌಡ , ಮುಖಂಡರಾದ ಪತ್ರ ಬರಹಗಾರ ವಸಂತ, ದಿಡ್ಡಹಳ್ಳಿ ಬಸವರಾಜು, ಲಕ್ಷ್ಮೀಪುರ ಸಣ್ಣಪ್ಪ,  ಕಾಂಗ್ರೆಸ್ ಮಹಿಳಾ ಮುಖಂಡರು ಗಳಾದ ಉಷಾ, ನಯನ  ಶಾಸಕರ ಆಪ್ತಕಾರ್ಯದರ್ಶಿ ಮಹದೇವ್,ಪುನೀತ್, ನವೀನ್ ಇದ್ದರು‌.

ಸಿದ್ದರಾಮಯ್ಯರನ್ನು ಅಧಿಕಾರದಿಂದ ಕೆಳಗಿಸುವ ಪ್ರಯತ್ನ ಫಲಿಸದು:
ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರನ್ನು ಸಿ.ಎಂ.ಸ್ಥಾನದಿಂದ ಕೆಳ ಗಿಳಿಸಲು ಬಿ.ಜೆ.ಪಿ.ಮತ್ತು ಜೆಡಿಎಸ್ ಪಕ್ಷಗಳು ಮುಂದಾಗಿದ್ದು ಇದು ಫಲಗೂಡುವುದಿಲ್ಲ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಚುಂಚನಕಟ್ಟೆಯಲ್ಲಿ ಕಾವೇರಿ ನದಿಗೆ ಬಾಗಿನ ಅರ್ಪಿಸಿ ನಂತರ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಉತ್ತಮವಾಗಿ ಆಡಳಿತ ನಡೆಸುತ್ತಿದ್ದು ಇವರನ್ನು‌ ಕೆಳಗಿಸಲು ನಡೆಸಿರುವ ಹುನ್ನಾರಕ್ಕೆ ರಾಜ್ಯಪಾಲರು ಸಹಕಾರ ಕೊಡಬಾರದು ಅದರ ವಿರುದ್ದ ಕಾಂಗ್ರೇಸ್ ಪಕ್ಷ ಹೋರಾಟ ಮಾಡಲಿದ್ದು ಈ ಹೋರಾಟದಲ್ಲಿ ತಾವು ಸಕ್ರಿಯವಾಗಿ ಭಾಗವಹಿಸುವುದಾಗಿ ತಿಳಿಸಿದರು.

ವರದಿ :ಎಸ್ ಬಿ ಹರೀಶ್ ಸಾಲಿಗ್ರಾಮ

Continue Reading

Mysore

ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ಆಗಮನ

Published

on


ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಆಗಸ್ಟ್‌ 5-
ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.

ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ.
ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.


ಗೃಹಲಕ್ಷ್ಮಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Continue Reading

Kodagu

ಕೊಯನಾಡಿನಲ್ಲಿ ಬೈಕ್ ಅಪಘಾತ ಸವಾರರಿಬ್ಬರ ಸಾವು

Published

on

ಸಂಪಾಜೆ ಸಮೀಪದ ಕೊಯನಾಡುನಲ್ಲಿ ಬೈಕ್ ಅಪಘಾತ ದಿಂದ ಬೈಕ್ ಸವಾರ‌ ಮತ್ತು ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. .ಇಬ್ಬರು ಮೈಸೂರು ಮೂಲದವರಾಗಿದ್ದಾರೆ.
ದುರ್ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಇಂದು ಬೆಳಗ್ಗೆ ಅಪಘಾತ ನಡೆದಿರುವುದು ಸ್ಥಳೀಯರ ಗಮನಕ್ಕೆ ಒಂದು ಪೊಲೀಸರಿಗೆ ತಿಳಿಸಿದ್ದಾರೆ..
ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಇಬ್ಬರ ಮೃತ ದೇಹ ಚರಂಡಿಯಲ್ಲಿ ಪತ್ತೆಯಾಗಿದೆ. ರಾತ್ರಿ ಬೈಕ್ ರಸ್ತೆಯ ಡಿ ವೈಡರ್ ಗೆ ಗುದ್ದಿ ಈ ಘಟನೆ ಸಂಭವಿಸಿದೆ.

Continue Reading

Trending

error: Content is protected !!