Connect with us

Hassan

2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ

Published

on

ಬೆಂಗಳೂರು/ಹಾಸನ: ಎತ್ತಿನಹೊಳೆ ನೀರನ್ನು 2027ರ ಅಂತ್ಯದೊಳಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಎಲ್ಲಾ ಅಗತ್ಯ ಕ್ರಮಗಳನ್ನೂ ಕೈಗೊಳ್ಳಬೇಕು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಏತ್ತಿನಹೊಳೆ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಳ್ಳಲು ಈ ಮೂರು ಜಿಲ್ಲೆಗಳ ನೀರಿನ ಸಮಸ್ಯೆಗೆ ಪರಿಹಾರ ನೀಡುವುದೇ ಮುಖ್ಯ ಉದ್ದೇಶ. ಈ ಉದ್ದೇಶ ಈಡೇರಬೇಕಾದರೆ ಬಾಕಿ ಕಾಮಗಾರಿಗಳನ್ನು ತ್ವರಿತಗೊಳಿಸಬೇಕು ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಲಾಯಿತು.

ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಜಂಟಿ ಸಭೆಯಲ್ಲಿ ಕೋಲಾರ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವರಾದ ಎಂಸಿ ಸುಧಾಕರ್ ಹಾಗೂ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಭಾಗಿಯಾಗಿದ್ದರು. ಈ ಸಭೆಯಲ್ಲಿ, “2027ರಲ್ಲಿ ಬೆಂಗಳೂರಿನ ಸುತ್ತಮುತ್ತಲ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ಕುಡಿಯುವ ನೀರು ಹರಿಯುವುದನ್ನು ಖಚಿತಪಡಿಸುವಂತೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಲಾಯಿತು.

ಸಚಿವರ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಸಮೀರ್ ಶುಕ್ಲಾ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ರಾಜೇಶ್ ಅಮ್ಮಿನಭಾವಿ ಹಾಗೂ 3 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಸಿಇಓಗಳು, ಎಸ್ಎಲ್ಓ ಗಳು ಉಪಸ್ಥಿತರಿದ್ದು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೂ ಅಗತ್ಯ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಯ ಗಡಿಯವರೆಗೆ ತರಲು ಕಾಮಗಾರಿ ಪ್ರಗತಿಯಲ್ಲಿದೆ. ಮುಂದೆ ದೊಡ್ಡಬಳ್ಳಾಪುರದಿಂದ ಕುಂದಾಣ ಮಾರ್ಗವಾಗಿ ಒಂದು ಪೈಪ್‌ ಲೈನ್ ಕೋಲಾರ ಹಾಗೂ ಬಂಗಾರಪೇಟೆ ಕಡೆಗೆ, ಮತ್ತೊಂದು ಪೈಪ್‌ ಲೈನ್ ಚಿಂತಾಮಣಿ ಶ್ರೀನಿವಾಸಪುರ ಮಾರ್ಗವಾಗಿ ಮುಳಬಾಗಿಲು ಕಡೆಗೆ ಅಳವಡಿಸಲು ಕೂಡಲೇ ಕಾಮಗಾರಿ ಆರಂಭಿಸಲು ಸಭೆಯಲ್ಲಿ ಸೂಚಿಸಲಾಯಿತು.

ಈ ಪೈಪ್‌ ಲೈನ್‌ಗಳು ಒಟ್ಟು 261.90 ಕಿ.ಮೀ. ದೂರು ಅಳವಡಿಸಬೇಕಿದೆ. ಪೈಪ್‌ ಲೈನ್ ಅಳವಡಿಸಲು ಅಗತ್ಯವಿರುವ ಭೂ ಸ್ವಾಧೀನವನ್ನು ಕೂಡಲೇ ಮಾಡಲು ಭೂ ಸ್ವಾಧೀನ ಅಧಿಕಾರಿಗಳಿಗೆ ಸೂಚಿಸಲಾಯಿತು. ಭೂ ಸ್ವಾಧೀನ ಆದೇಶ ಹೊರಡಿಸಿದ ಭಾಗದಲ್ಲಿ ಪೈಪ್‌ ಲೈನ್ ಅಳವಡಿಕೆಯನ್ನು ಕೂಡಲೇ ಆರಂಭಿಸಲು ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಮುಂದುವರೆದು, ಕುಡಿಯುವ ನೀರು ಒದಗಿಸಬೇಕಾದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನೀರು ಶುದ್ದೀಕರಣ ಘಟಕ ಹಾಗೂ ಗ್ರಾಮಗಳಿಗೆ ನೀರು ತಲುಪಿಸುವ ಪೈಪ್‌ ಲೈನ್ಗಳನ್ನು ಅಳವಡಿಸಲು ಅಂದಾಜು ಪಟ್ಟಿ ಹಾಗೂ ಪ್ರಸ್ತಾವನೆಗಳನ್ನು ಕೂಡಲೇ ತಯಾರಿಸಿ ಅನುಮೋದನೆಗೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಒಟ್ಟಾರೆ 2027ರ ಅಂತ್ಯಕ್ಕೆ ನೀರನ್ನು ಈ ಮೂರೂ ಜಿಲ್ಲೆಗಳಿಗೆ ತಲುಪಿಸಲು ಮತ್ತು ನೀರನ್ನು ಶುದ್ದೀಕರಿಸಿ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಂಬಂಧಿತ ಎಲ್ಲಾ ಇಲಾಖೆಗಳು ಸಮನ್ವಯದಿಂದ ಮತ್ತು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ತೀರ್ಮಾನಿಸಲಾಯಿತು.

Hassan

ವಿಧಾನಸೌಧದಲ್ಲಿ ಕಾರ್ಯಕಲಾಪ ವೀಕ್ಷಿಸಿದ ಎನ್.ಕೆ. ಗಣಪಯ್ಯ ಕಿವುಡ, ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು

Published

on

ಹಾಸನ: ಸಕಲೇಶಪುರದ ಕೌಡಹಳ್ಳಿಯಲ್ಲಿರುವ ಎನ್.ಕೆ. ಗಣಪಯ್ಯ ಕಿವುಡ ಮತ್ತು ಮೂಗ ಮಕ್ಕಳ ರೋಟರಿ ಶಾಲೆಯ ವಿದ್ಯಾರ್ಥಿಗಳು ಮಂಗಳವಾರ ವಿಧಾನಸೌಧದಲ್ಲಿ ನಡೆದ ಸದನದ ಕಾರ್ಯಕಲಾಪ ವೀಕ್ಷಿಸಿದರು.


ಈ ಸಂದರ್ಭದಲ್ಲಿ  ಶಾಸಕ ಸಿಮೆಂಟ್ ಮಂಜು ಅವರು ಮಕ್ಕಳನ್ನು ಆತ್ಮೀಯವಾಗಿ ಸ್ವಾಗತಿಸಿ ಸದನದ ವೀಕ್ಷಣೆಗೆ ಅನುವು ಮಾಡಿಕೊಟ್ಟರು.

Continue Reading

Hassan

ಹಾಸನ ಮಹಾನಗರ ಪಾಲಿಕೆ ವಾರ್ಡ್ ಪುನರ್ ವಿಂಗಡಣೆ: ಕರಡು ಪ್ರಕಟ

Published

on

ಹಾಸನ: ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಪ್ರಕಾರ, 2011 ರ ಜನಗಣತಿ ಆಧಾರದ ಮೇರೆಗೆ ಹಾಸನ ಮಹಾನಗರ ಪಾಲಿಕೆಗೆ ವಾರ್ಡ್‌ಗಳನ್ನು ಪುನರ್ ವಿಂಗಡಣೆ ನಿಗದಿ ಪಡಿಸಿ ರಾಜ್ಯ ಸರ್ಕಾರ ಕರಡನ್ನು ಪ್ರಕಟಿಸಿದೆ.

ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದೆ ನಗರಸಭೆ ಅವಧಿಯಲ್ಲಿ ಇದ್ದಷ್ಟೇ ಅಂದರೆ 35 ವಾರ್ಡ್‌ಗಳೇ ಈಗಲೂ ಮುಂದುವರಿದಿವೆ.
ಆದರೆ ಹಾಸನ ಮಹಾನಗರ ಪಾಲಿಕೆಯಾದ ನಂತರ ಎಲ್ಲ 35 ವಾರ್ಡ್‌ಗಳ ವ್ಯಾಪ್ತಿ ಮತ್ತು ವಿಸ್ತೀರ್ಣ ಹಿಗ್ಗಿದೆ.

ಇದೀಗ ಆಯಾ ವಾರ್ಡ್‌ಗಳಿಗೆ ಸಂಬಂಧಿಸಿದ ಗಡಿ ವ್ಯಾಖ್ಯಾನ(ಚೆಕ್ಕುಬಂದಿ) ನಿಗದಿಪಡಿಸಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಈ ಮೂಲಕ ಹಾಸನ ಮಹಾನಗರ ಪಾಲಿಕೆಯ ಕರಡು ವಾರ್ಡ್‌ವಾರು ಕ್ಷೇತ್ರ ಪುನರ್‌ವಿಂಗಡಣಾ ಮಾಹಿತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ.


ಈ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ೧೫ ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಈ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು, ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ದಾಖಲೆಗಳೊಂದಿಗೆ ನಿಗದಿತ ದಿನಾಂಕಕ್ಕೆ ಮೊದಲು ಹಾಸನ ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಬೇಕೆಂದು ಮಂಜುನಾಥ್ ಅವರು ಸೂಚಿಸಿದ್ದಾರೆ.

Continue Reading

Hassan

ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ಆರೋಪ: ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡ

Published

on

ಆಲೂರು: ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆಂಚಮ್ಮನಹೊಸಕೋಟೆ ಗ್ರಾಮದಲ್ಲಿ ಯುವಕರ ಗುಂಪೊಂದು ಎಸ್‌ಡಿಪಿಐ ಮುಖಂಡನ ಮೇಲೆ ಹಲ್ಲೆ ನಡೆಸಿರುವ ಘಟನೆ  ನಡೆದಿದೆ.

ಮುನೀರ್ ಹಲ್ಲೆಗೊಳಗಾದ ಎಸ್‌ಡಿಪಿಐ ಮುಖಂಡನಾಗಿದ್ದು ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸಿದ ಯುವಕರು.

ಇಂದು ಬೆಳಿಗ್ಗೆ ಕೆಂಚಮ್ಮನ ಹೊಸಕೋಟೆ ಗ್ರಾಮದಲ್ಲಿ ಹಾಸಿಗೆ ರಿಪೇರಿ ಮಾಡುವ ಕಾರ್ಮಿಕ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಆತನನ್ನು ಅಡ್ಡಗಟ್ಟಿದ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ನಡೆಸುತ್ತಿದ್ದಾರೆ. ಇದನ್ನು ಕಂಡ ಮುನೀರ್ ಹಾಸಿಗೆ ರಿಪೇರಿ ಮಾಡುವವರ ರಕ್ಷಣೆಗೆ ಬಂದಿದ್ದು ಮುನೀರ್ ಮೇಲೂ ಭುವನೇಶ್ ಹಾಗೂ ಅಕ್ಷಯ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮುನೀರ್ ಕೆಂಚಮ್ಮನ ಹೊಸಕೋಟೆ ಉಪಪೊಲೀಸ್ ಠಾಣೆಗೆ ದೂರು ಕೊಡಲು ಹೋಗಿದ್ದು ಅಲ್ಲಿ ಯಾರು ಇಲ್ಲದ‌ ಕಾರಣ ಕಾಯುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಭುವನೇಶ್ ಹಾಗೂ ಅಕ್ಷಯ್ ಉಪಪೊಲೀಸ್ ಠಾಣೆಯಿಂದ ಹೊರಗೆಳೆದು ಪುನಃ ಮುನೀರ್ ಮೇಲೆ ಹಲ್ಲೆ ನಡೆಸಿದ್ದಾರೆ.‌

ಹಲ್ಲೆಗೊಳಗಾದ ಮುನೀರ್ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆಲೂರು ಪೊಲೀಸ್ ಠಾಣೆಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

Continue Reading

Trending

error: Content is protected !!