Chikmagalur
ಕೃಷಿ ಜೊತೆಗೆ ಹೈನುಗಾರಿಕೆಗೆ ಉತ್ತೇಜನ ನೀಡಿ
ಚಿಕ್ಕಮಗಳೂರು-ರೈತರ ಉಪ ಕಸುಬಾದ ಹೈನುಗಾರಿಕೆಗೆ ಉತ್ತೇಜನ ನೀಡಲು ಸರ್ಕಾರ ಹೊಸ ಹೊಸ ತಳಿಗಳನ್ನು ಸಂಶೋಧನೆ ಮಾಡಿ ರಾಸುಗಳ ರಕ್ಷಣೆಗೆ ಮುಂದಾಗಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.
ಅವರು ಇಂದು ಸಮೀಪದ ತೇಗೂರು ಗ್ರಾ.ಪಂ ವ್ಯಾಪ್ತಿಯ ನಲ್ಲೂರಿನಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ತಾಲ್ಲೂಕು ಪಂಚಾಯಿತಿ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆರನೇ ಸುತ್ತಿನ ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ರೈತರ ಜೀವನಾಡಿಯಾಗಿರುವ ಪಶುಸಂಗೋಪನೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೆಚ್ಚು ಒತ್ತು ನೀಡಿದ್ದು, ಹೊಸ ಹೊಸ ತಳಿಗಳನ್ನು ಸಂಶೋಧಿಸಿ ರಕ್ಷಣೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ರಾಸುಗಳಿಗೆ ಕಾಲುಬಾಯಿ ರೋಗದ ಲಸಿಕೆಯನ್ನು ಹಾಕಿಸುವ ಮೂಲಕ ಅವುಗಳ ರಕ್ಷಣೆ ಮಾಡಬೇಕೆಂದು ಹೇಳಿದರು.

ಕೃಷಿಯ ಜೊತೆಗೆ ಉಪ ಕುಸುಬಾಗಿ ಹೈನುಗಾರಿಕೆಯನ್ನು ಪ್ರಾರಂಭಿಸಿದರೆ ರೈತರ ಆರ್ಥಿಕ ಮಟ್ಟ ಸುಧಾರಿಸುತ್ತದೆ. ಆದ್ದರಿಂದ ಗೋವುಗಳನ್ನು ಹೊಂದಿರುವ ರೈತರು ಉದಾಸೀನತೆ ತಾಳದೆ ಲಸಿಕೆಯನ್ನು ಹಾಕಿಸುವ ಮೂಲಕ ಕಾಲುಬಾಯಿ ರೋಗ ಸಂಪೂರ್ಣ ನಿಯಂತ್ರಣಕ್ಕೆ ಸಹಕರಿಸಬೇಕೆಂದು ಮನವಿ ಮಾಡಿದರು.
ದೇಶದಲ್ಲೇ ಕರ್ನಾಟಕ ರಾಜ್ಯ ಹಸುಗಳಿಗೆ ಲಸಿಕೆ ಹಾಕುವ ಆರನೇ ಸುತ್ತಿನ ಲಸಿಕಾ ಅಭಿಯಾನವನ್ನು ನಡೆಸುತ್ತಿದೆ. ಮುಂದಿನ ದಿನಗಳಲ್ಲಿ ಮಿಶ್ರ ಬೆಳೆಯ ಜೊತೆಗೆ ಹೈನುಗಾರಿಕೆಯನ್ನು ಮುಂದುವರೆಸುವ ಮೂಲಕ ರೈತರು ಆರ್ಥಿಕವಾಗಿ ಸದೃಢರಾಗಬೇಕೆಂದು ಕರೆನೀಡಿದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ಹಾಲು ಸಂಗ್ರಹವಾಗುತ್ತಿದೆ. ರಾಜ್ಯದಲ್ಲಿ ಅತೀ ಹೆಚ್ಚು ಹಾಲು ಉತ್ಪಾದನೆಯಾಗುತ್ತಿರುವುದರಿಂದ ಕೆಎಂಎಫ್ ಮೂಲಕ ವಿದೇಶಗಳಿಗೆ ಹಾಲನ್ನು ರಫ್ತು ಮಾಡಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗುತ್ತಿದೆ. ಇದು ಸಮರ್ಪಕವಾಗಿ ಆದಾಗ ರೈತರಿಗೆ ಹೆಚ್ಚು ಸಹಾಯಧನ ಸಿಗುತ್ತದೆ ಎಂದು ಹೇಳಿದರು.

ಜಿಲ್ಲೆಗೆ ಪ್ರತ್ಯೇಕ ಡೈರಿ ಸ್ಥಾಪನೆ ಬಗ್ಗೆ ಸರ್ಕಾರ ಈಗಾಗಲೇ ಸಂಬಂಧಿಸಿದ ಇಲಾಖೆಗೆ ಸರ್ವೆ ಮಾಡಲು ಸೂಚನೆ ನೀಡಿದೆ. ಹೆಚ್ಚು ಹಾಲು ಉತ್ಪಾದನೆಯಾದ ವರದಿ ಬಂದರೆ ಪ್ರತ್ಯೇಕ ಡೈರಿ ಸ್ಥಾಪನೆ ಮಾಡುತ್ತೇವೆ ಎಂದು ಭರವಸೆ ನೀಡಿದ ಅವರು, ನಗರದಲ್ಲಿ ಬಿಡಾಡಿ ದನಗಳ ನಿಯಂತ್ರಣಕ್ಕೆ ಕ್ರಮ ವಹಿಸಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ. ಮೋಹನ್‌ಕುಮಾರ್ ಮಾತನಾಡಿ, ಎಲ್ಲಾ ರಾಸುಗಳಿಗೆ ವ್ಯಾಕ್ಸಿನ್ ಹಾಕಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು. ಹಿಂದೆ ಕಾಲುಬಾಯಿ ರೋಗ ಹೆಚ್ಚಾಗಿ ಬರುತ್ತಿತ್ತು, ಇಲಾಖೆ ಈಗ ಲಸಿಕೆ ನೀಡುತ್ತಿರುವುದರಿಂದ ನಿಯಂತ್ರಣದಲ್ಲಿದೆ. ಮುಂದಿನ ೧೫ ದಿನಗಳಲ್ಲಿ ರಾಷ್ಟ್ರೀಯ ಜನಗಣತಿ ಮಾಡುತ್ತೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಪಶು ವೈದ್ಯಾಧಿಕಾರಿ ಡಾ. ಹೇಮಂತ್‌ಕುಮಾರ್, ತೇಗೂರು ಗ್ರಾ.ಪಂ ಅಧ್ಯಕ್ಷೆ ರಾಧ, ಉಪಾಧ್ಯಕ್ಷೆ ಜಯಶ್ರೀ, ಸದಸ್ಯ ಪವನ್, ಶಾಂತಕುಮಾರ್, ಜಯರಾಜ್ ಅರಸ್, ಡಾ. ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.
Chikmagalur
ಜನಸಂಪರ್ಕ ಸಭೆ: ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ
ಚಿಕ್ಕಮಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ 4 ರಿಂದ 6 ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು 2,012 ಕೋಟಿ ರೂ. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು ೮೨೯ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ 496 ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.27 ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.

ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ 49 ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ನಮ್ಮ ಜಿಲ್ಲೆಯಲ್ಲಿ 8,92,290 ಅರ್ಜಿಗಳು ಸ್ವೀಕೃತಿಯಾಗಿವೆ. ಸುಮಾರು ಶೇ.10 ರಿಂದ 12 ರಷ್ಟು ಅರ್ಜಿಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಇದಕ್ಕೆ ತಂತ್ರಾಂಶದಲ್ಲಿನ ಸಮಸ್ಯೆಗಳು ಕಾರಣವಾಗಿದೆ. ಅದನ್ನು ಸರಿಪಡಿಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮಲ್ಲಿ 94 ಸಾವಿರ ಪೌತಿ ಖಾತೆಗಳಿದ್ದವು. ಅವುಗಳಲ್ಲಿ ಇದುವರೆಗೆ 22 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದಲ್ಲದೆ ತಂತ್ರಾಂಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಶೇ.58 ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಅವುಗಳಲ್ಲಿ ಪೋಡಿ ಪ್ರಕರಣಗಳು, ದಾರಿಗೆ ಸಂಬಂಧಿಸಿದ ಅರ್ಜಿಗಳು, ಆರ್‌ಟಿಸಿ ಸರಿಪಡಿಸುವಿಕೆ ಪ್ರಕರಣಗಳು ಪ್ರಮುಖವಾದವು ಎಂದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Chikmagalur
‘ಮಾದರಿ ಗ್ರಾಮ’ ಪಿ.ಹೊಸಹಳ್ಳಿಯಲ್ಲಿ 50 ಲಕ್ಷ ವೆಚ್ಚದ ವಿದ್ಯುತ್ ಉನ್ನತೀಕರಣಕ್ಕೆ ಚಾಲನೆ
ಶ್ರೀರಂಗಪಟ್ಟಣ : ತಾಲೂಕಿನ ವ್ಯಾಪ್ತಿಯಲ್ಲಿ ‘ಮಾದರಿ ಗ್ರಾಮ’ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಿ.ಹೊಸಹಳ್ಳಿ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ವಿದ್ಯುತ್ ಮೂಲ ಉನ್ನತೀಕರಣಕ್ಕೆ ಚಾಲನೆ ಶಾಸಕ ರಮೇಶ್ ಬಂಡಿಸಿದ್ದೇಗೌಡ ಭೂಮಿಪೂಜೆ ಮೂಲಕ ಚಾಲನೆ ನೀಡಿದರು.
ಗ್ರಾಮವನ್ನು ಉನ್ನತೀಕರಿಸಿ, ಉನ್ನತೀಕರಿಸಿದ ಗ್ರಾಮವನ್ನಾಗಿಸಲು ಈ ಗ್ರಾಮದ ಜೊತೆಗೆ ಐದು ಗ್ರಾಮಗಳ ಮೂಲಭೂತ ಸೌಲಭ್ಯಗಳನ್ನು ಉನ್ನತೀಕರಿಸುತ್ತಿರುವುದಾಗಿ ಅವರು ತಿಳಿಸಿದರು.

ಪ್ರತೀ ಗ್ರಾಮಗಳಿಗೆ ತಲಾ 50 ಲಕ್ಷ ರೂ.ಗಳಂತೆ ತುರ್ತಾಗಿ ಅವಶ್ಯಕತೆಯಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಗುತ್ತಿಗೆದಾರರು ಗುಣಮಟ್ಟದ ಕೆಲಸ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಈ ಯೋಜನೆಯಲ್ಲಿ ಶಿಥಿಲವಾಗಿರುವ ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವುದು, ಅಗತ್ಯವಿರುವ ಕಡೆಗೆ ಹೊಸ ಕಂಬಗಳನ್ನು ಹಾಗೂ ಪರಿವರ್ತಕಗಳನ್ನು ಅಳವಡಿಸಲು, ವೋಲ್ಟೇಜ್ ಗುಣಮಟ್ಟವನ್ನು ಹೆಚ್ಚಿಸುವುದು, ವಿದ್ಯುತ್ ಅಡಚಣೆಯನ್ನು ಆದಷ್ಟು ಕನಿಷ್ಠ ಮಟ್ಟಕ್ಕೆ ಇಳಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದರು.

ಜೊತೆಗೆ ಶ್ರೀರಂಗಪಟ್ಟಣ ವ್ಯಾಪ್ತಿಯ ರೈತರಿಗೆ ಉತ್ಕ್ರುಷ್ಟ ಗುಣಮಟ್ಟದ ಹಾಗೂ ಅಡಚಣೆ ರಹಿತ 3 – ಫೇಸ್ ವಿದ್ಯುತ್ ಸರಬರಾಜು ನೀಡಲು ಅನುಕೂಲವಾಗುವಂತೆ ಒಟ್ಟು 55 ಕೋಟಿ ವೆಚ್ಚದಲ್ಲಿ ತಲಾ 2 ಪಂಪ್ ಸೆಟ್ ಗಳಿಗೆ ಪ್ರತ್ಯೇಕ 25kva ಅಳವಡಿಸುವ ಪ್ರಗತಿಯಲ್ಲಿರುವುದಾಗಿ ತಿಳಿಸಿದರು.
ಈ ವೇಳೆ ಚೆಸ್ಕಾಂ ಎಇಇ ಮಂಜುನಾಥ ಪ್ರಸಾದ್, ಗುತ್ತಿಗೆದಾರ ಐ ಕಾಂ ಇನ್ಫ್ರಾ ಪ್ರೈ ಲಿ. ನ ಅರುಣ್ ಕುಮಾರ್, ಗ್ರಾ.ಪಂ.ಅಧ್ಯಕ್ಷ ಚಲುಚರಾಜು, ಪಿಡಿಓ ಶಶಿಕಲಾ, ಸದಸ್ಯ ಸಾಗರ್, ಮುಖಂಡರಾದ ಪುಟ್ಟರಾಮಣ್ಣ, ಕೃಷ್ಣಮೂರ್ತಿ ಸೇರಿದಂತೆ ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.
Chikmagalur
ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
ಚಿಕ್ಕಮಗಳೂರು : ಜಿಲ್ಲೆ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನನ್ನು ಕಳೆದ ರಾತ್ರಿ ಹತ್ಯೆ ಮಾಡಲಾಗಿದೆ.
ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.
ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಸಂಜಯ್ ದಾಖಲಾಗಿದ್ದು, ಮಿಧುನ್ ವರಾರಿಯಾಗಿದ್ದಾನೆ. ಚಿಕ್ಕಮಗಳೂರಿನ ನಲರಾಯಪಟ್ಟಣದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ದತ್ತ ಜಯಂತಿ ಮುಗಿದ ಹಿನ್ನೆಲೆ ಸಖರಾಯಪಟ್ಟಣ ಬಸ್ ನಿಲ್ದಾಣ ಬಳಿ ಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ನನ್ನು ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮ್ಮೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ದುಷ್ಕರ್ಮಿಗಳು ಗಣೇಶ್ ಗೌಡ ಎಂಬುವವರನ್ನು ಹತ್ಯೆ ಮಾಡಿದ್ದಾರೆ.
ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಗಲಾಟೆಯಲ್ಲಿ ಭಾಗಿಯಾದ ಒಬ್ಬರು ಜಿಲ್ಲಾಪತ್ರೆಗೆ ದಾಖಲಾಗಿದ್ದಾರೆ.
-
State18 hours agoಡಿವೈಡರ್ಗೆ ಕಾರ್ ಡಿಕ್ಕಿ, ಹೊತ್ತಿ ಉರಿದ ಕಾರಿನೊಳಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನ
-
Hassan14 hours agoನಗರದ ಇಂಜಿನಿಯರ್ ಕಾಲೇಜು ಆವರಣದಲ್ಲಿ ಸರ್ಕಾರಿ ಸೇವೆಗಳ ಸಮರ್ಪಣ ಸಮಾವೇಶ
-
Hassan17 hours agoಅಂಬೇಡ್ಕರ್ ತತ್ತ್ವ, ಸಿದ್ಧಾಂತಗಳು ಶಾಶ್ವತ: ಸಂಸದ ಶ್ರೇಯಸ್ ಪಟೇಲ್
-
Mandya13 hours agoಡಾ.ಬಿ.ಆರ್.ಅಂಬೇಡ್ಕರ್ ರವರ 69ನೇ ಪರಿನಿರ್ವಾಣ ದಿನ: ಮಾಲಾರ್ಪಣೆ ಮಾಡಿದ ಕೇಂದ್ರ ಸಚಿವ ಎಚ್ಡಿಕೆ
-
Chikmagalur20 hours agoಬ್ಯಾನರ್ ತೆರವು ವಿಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಹ*ತ್ಯೆ
-
Hassan18 hours agoಸಿಎಂ, ಡಿಸಿಎಂ ಇಂದು ಹಾಸನ ಜಿಲ್ಲಾ ಪ್ರವಾಸ
-
Mysore18 hours agoಡ್ರೋನ್ ಕ್ಯಾಮರದ ರೆಕ್ಕೆ ತಗಲಿ ಶಾಸಕ ಅನಿಲ್ ಚಿಕ್ಕಮಾದು ಮುಖಕ್ಕೆ ಗಾಯ
-
Mysore12 hours agoಡಿ.14ರಂದು ‘ಮೈಸೂರು ಭವಿಷ್ಯದ ಅಭಿವೃದ್ಧಿ’ ಸಾರ್ವಜನಿಕ ಸಂವಾದ
