Mandya
ಮಹಿಳೆಯರ ಅಸ್ಮಿತೆ ಬರಹದಲ್ಲಿರಲಿ: ಕೆ.ಎಸ್.ಮಂಜುಳಾ

ಮಂಡ್ಯ: ಬರಹಗಳ ಮೂಲಕ ಮಹಿಳೆಯರ ಅಸ್ಮಿತೆ ಉಳಿಸುವ ಕೆಲಸ ಆಗಲಿ ಎಂದು ಮಹಿಳಾ ಚಿಂತಕಿ ಕೆ.ಎಸ್.ಮಂಜುಳಾ ಸಲಹೆ ನೀಡಿದರು.
ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕನ್ನಿಕಾ ಶಿಲ್ಪ ನವೋದಯ ಎಜುಕೇಶನ್ ಟ್ರಸ್ಟ್ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಎಚ್.ಆರ್.ಕನ್ನಿಕಾ ಅವರು ಬರೆದಿರುವ ನಾಲ್ಕು ಕೃತಿಗಳ ಲೋಕಾರ್ಪಣೆ ಮತ್ತು ಮಹಿಳಾ ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಿಕಾ ಅವರು ಇಂದು ನಾಲ್ಕು ಕೃತಿಗಳನ್ನು ಹೊರತಂದಿದ್ದು ಒಂದೊಂದು ಪುಸ್ತಕದಲ್ಲಿ ವೈವಿಧ್ಯತೆಯನ್ನು ಕಾಣಬಹುದಾಗಿದೆ ವಚನಗಳ ಪುಸ್ತಕದಲ್ಲಿ ಮಹಿಳೆಯರಿಗೆ ಉನ್ನತ ಸ್ಥಾನಗಳನ್ನು ನೀಡಿದ್ದಾರೆ ಮಹಿಳೆಯರ ಅಸ್ಮಿತೆಯನ್ನು ಉಳಿಸುವ ಕೆಲಸವನ್ನು ಮಾಡಿದ್ದು ಮಹಿಳೆಯರ ಮೇಲೆ ಇಟ್ಟಿರುವ ಇವರ ಪ್ರೇಮ ಮೆಚ್ಚುವಂತದ್ದು, ಅದೇರೀತಿ ಬರಹಗಳ ಮೂಲಕ ಮಹಿಳೆಯರ ಅಸ್ಮಿತೆ ಉಳಿಸುವ ಕಾರ್ಯ ಆಗಲಿ ಎಂದು ಶ್ಲಾಘಿಸಿದರು.
ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕೀಯರನ್ನು ಗುರುತಿಸಿ ಗೌರವಿಸುತ್ತಿರುವ ಕಾರ್ಯಕ್ರಮಗಳು ಸಮಾಜದಲ್ಲಿ ಹೆಚ್ಚಾಗಿ ನಡೆಯಬೇಕು. ಕನ್ನಿಕಾ ಅವರ ಈ ಸಾಹಿತ್ಯ ಪ್ರೇಮ ಹೀಗೆ ಮುಂದುವರೆಯಲಿ, ಮಕ್ಕಳ ಮನಸ್ಸನ್ನು ಅರಿತು ಪುಸ್ತಕದ ರೂಪದಲ್ಲಿ ಹೊರತಂದಿರುವ ಕೆಲಸವೂ ಸಹ ಮೆಚ್ಚುವಂತದ್ದು ಎಂದರು.
ತೂಬಿನಕೆರೆ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಡಾ.ಎನ್.ಎಸ್.ದೇವಿಕಾ ಮಾತನಾಡಿ, ಈ ಕೃತಿಗಳಲ್ಲಿ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವ ದಾರಿ ಇದೆ. ಆಧುನಿಕ ವಚನಗಳ ಕೃತಿಯಲ್ಲಿ 232 ವಚನಗಳಿವೆ, ಇದು ಮೇಲ್ನೋಟಕ್ಕೆ ಸರಳ ಎನಿಸಿದರು ಕೂಡ ಒಡಲಲ್ಲಿ ಧ್ವನಿ ಸಂಕೀರ್ಣತೆ ತೊಡಗಿಸಿಕೊಂಡಿದೆ ಎಂದರು.
ಕಾಲಭೈರವೇಶ್ವರ ಕೃಪೆ ಪುಸ್ತಕದಲ್ಲಿ ಇವರ ಸಮಸ್ತ ವಚನಗಳು ಕೂಡ ಮೋಸ ವಂಚನೆ ಅನ್ಯಾಯ ಅಕ್ರಮ ದೌರ್ಜನ್ಯ ದಬ್ಬಾಳಿಕೆ ಶೋಷಣೆ ಭ್ರಷ್ಟಾಚಾರಗಳಿಗೆ ಕನ್ನಡಿ ಹಿಡಿದಂತಿದೆ. ಪುಸ್ತಕದ ಉದ್ದಕ್ಕೂ ಜೀವನದ ಮೌಲ್ಯ ಎತ್ತಿ ಹಿಡಿದಿರುವ ಕೃತಿ ಆಶಯವು ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದೆ ಎಂದು ಅಭಿಪ್ರಾಯಪಟ್ಟರು.
ಸಹಾಯಕ ಪ್ರಾಧ್ಯಾಪಕಿ ಎಂ.ಕೆಂಪಮ್ಮ ಅವರು ಕನ್ನಡದ ಮರೆಯಲಾಗದ ಮಹಿಳಾ ಮಾಣಿಕ್ಯಗಳು, ಚಿಣ್ಣರ ಚಿಲಿಪಿಲಿ, ಶ್ರೀ ಕಾಲಭೈರವೇಶ್ವರ ಕೃಪೆ, ಮರೆಯಲಾಗದ ಮಹಾನುಭಾವರು ಎಂಬ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಿದರು. ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕೆ.ಶಭಾನಾ, ಬಿ.ಎಸ್.ಅನುಪಮಾ, ಕೆ.ಪಿ.ಅರುಣ ಕುಮಾರಿ, ಭವಾನಿ ಲೋಕೇಶ್, ಎಂ.ಎಸ್.ಅನಿತಾ, ರಾಧಿಕಾ ರಾವ್, ಸುನಿತಾ ನಂದಕುಮಾರ್, ಉಷಾರಾಣಿ, ಉಮಾವತಿ, ಯಶೋಧಾ, ಪಿ.ಅನಿತಾ, ಎಂ.ಜೆ.ಲಕ್ಷ್ಮಿ, ಆಶಾ ಹನಿಯಂಬಾಡಿ, ಕೆ.ಪಿ.ಸೌಮ್ಯಶ್ರೀ ಅವರನ್ನು ಹಾಗೂ ಇದೇ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ವಿ.ಎಸ್.ಶ್ರೀದೇವಿ, ಮುಖಂಡರಾದ ಅಂಜನಾ ಶ್ರೀಕಾಂತ್, ನಾಗರೇವಕ್ಕ, ಸಿ.ಜೆ.ಸುಜಾತ ಕೃಷ್ಣ ಭಾಗವಹಿಸಿದ್ದರು.
Mandya
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ

ಮಂಡ್ಯ: ಪೂರ್ವಿಕರ ಕಾಲದಿಂದಲೂ ಗ್ರಾಮದ ಸ್ಮಶಾನ, ಧನ ಕರುಗಳು ಕುಡಿಯಲು ಕೆರೆಕಟ್ಟೆ ಹಾಗೂ ಜಮೀನುಗಳಿಗೆ ತೆರಳಲು ಬಳಸುತ್ತಿದ್ದ ರಸ್ತೆಗೆ ಅಡ್ಡಲಾಗಿ ರೈತನೋರ್ವ ತಂತಿ ಬೇಲಿ ಹಾಕಿಕೊಂಡಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು ರಸ್ತೆ ಮದ್ಯೆದಲ್ಲಿಯ ಮೃತನ ಶವ ಸುಟ್ಟ ಘಟನೆಗೆ ಸಂವಂಧಿಸಿದಂತೆ ಜನಮಿತ್ರ ಪತ್ರಿಕೆ ಹಾಗೂ ಡಿಜಿಟಲ್ ವರದಿಗೆ ಫಲಶೃತಿ ದೊರೆತಿದೆ.
ಜನಮಿತ್ರ ವರದಿಯಿಂದ ಎಚ್ಚತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಗ್ರಾಮಕ್ಕೆ ದೌಡಾಯಿಸಿ, ರಸ್ತೆಯ ಇಕ್ಕೆಲಗಳ ಇಬ್ಬರೂ ರೈತರಿಂದ ಹತ್ತು, ಹತ್ತು ಅಡಿ ಜಾಗವನ್ನು ಸ್ಮಶಾಬದ ರಸ್ತೆಗೆ ಬಿಡಿಸಿ ಸಫಲತೆ ಕಂಡಿದೆ.
ಜನಮಿತ್ರ ವರದಿಯಿಂದ ಎಚ್ಚೆತ್ತ ತಾಲ್ಲೂಕು ಆಡಳಿತ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ನೇತೃತ್ವದಲ್ಲಿ ಗ್ರಾಮಕ್ಕೆ ತೆರಳಿದ್ದ ಅಧಿಕಾರಿಗಳ ತಂಡ, ಸ್ಮಶಾನ ಹಾಗೂ ಜನ ಜಾನುವಾರುಗಳ ಕುಡಿಯುವ ನೀರಿಗಾಗಿ ತೆರಳುವ ರಸ್ತೆಯ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ್ದಾರೆ.
ರಸ್ತೆಯ ಎರಡೂ ಬದಿಯಲ್ಲಿನ ರೈತರಾದ ಅಂಧಾನಿಗೌಡ ಹಾಗೂ ಯಶೋಧಮ್ಮ ರವರಿಂದ ತಲಾ ಹತ್ತು ಹತ್ತು ಅಡಿ ಜಾಗವನ್ನು ಸ್ಮಶಾನದ ರಸ್ತೆಗೆ ಬಿಟ್ಟುಕೊಡುವಂತೆ ಮನವಲೈಸಿದ್ದಾರೆ.
ತಾಲ್ಲೂಕು ಆಡಳಿತದ ಮದ್ಯಸ್ಥಿಕೆಯಿಂದಾಗಿ ಇದೀಗ ಹೆಬ್ಬಾಡಿಹುಂಡಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಜನಮಿತ್ರ ಪತ್ರಿಕೆ ಹಾಗೂ ಜನಮಿತ್ರ ಡಿಜಿಜಿಟಲ್ ನ್ಯೂಸ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
Mandya
ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಸಚಿವ ಚೆಲುವರಾಯಸ್ವಾಮಿ

ನಾಗಮಂಗಲ : ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಆ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಸಚಿವ ಚೆಲುವರಾಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯ ಮುಂಬಾಗದಲ್ಲಿ ಅಂಗವಿಕಲರಿಗೆ 2024 -25 ನೇ ಸಾಲಿನ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ತ್ರಿಚಕ್ರ ವಾಹನ ಸಮಾರಂಭದಲ್ಲಿ ಭಾಗವಹಿಸಿ ಸುಮಾರು 25 ಫಲಾನುಭವಿಗಳಿಗೆ ವಾಹನ ವಿತರಣೆ ಮಾಡುತ್ತ ಮಾತನಾಡಿದರು.
ಅಂಗವಿಕಲರು ದಿನನಿತ್ಯದ ತಮ್ಮ ವ್ಯವಹಾರಿಕ ಕಾರ್ಯನಿಮಿತ್ತ ಕೆಲಸಗಳಿಗೆ ತ್ರಿಚಕ್ರ ವಾಹನ ಬಳಸುವ ಮುಖಾಂತರ ಸರ್ಕಾರದ ಇಂತಹ ಸೌವಲತ್ತುಗಳನ್ನು ಸದುಪಯೋಗ ಮಾಡಿಕೊಂಡು ಇತರೆ ಚಟುವಟಿಕೆಗಳಲ್ಲಿ ಈ ವಾಹನಗಳನ್ನು ಬಳಸದಂತೆ ತಮ್ಮ ಸ್ವಂತ ವಾಹನಗಳಾಗಿ ಬಳಸಿಕೊಳ್ಳುವ ಮುಖಾಂತರ ಸರ್ಕಾರದ ಯೋಜನೆಗಳನ್ನು ಪಡೆದು ಅನುಕೂಲ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಶ್ ಕೃಷಿ ವಿವಿ ಆಡಳಿತ ಮಂಡಳಿ ನಿರ್ದೇಶಕರಾದ ದಿನೇಶ್. ಎಚ್ ಟಿ ಕೃಷ್ಣೆ ಗೌಡ. ಪುರಸಭಾ ಅಧ್ಯಕ್ಷರು ಗಣ್ಯರು ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.
Mandya
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ

ಮಂಡ್ಯ : ಈ ಚಿತ್ರದಲ್ಲಿರುವ ವ್ಯಕ್ತಿ ಇಂದು (ಮಾ.14) ರಂದು ಮಂಡ್ಯ ರೈಲು ನಿಲ್ದಾಣದಲ್ಲಿ ರೈಲುಗಾಡಿಯಿಂದ ಬಿದ್ದು ಗಾಯಗೊಂಡಿರುತ್ತಾರೆ.
ಸದರಿಯವರ ಹೆಸರು ಮತ್ತು ವಿಳಾಸ ಪತ್ತೆಯಾಗಿರುವುದಿಲ್ಲ ಯಾವುದಾದರೂ ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ, ಅಥವ ಇವರ ಬಗ್ಗೆ ಮಾಹಿತಿ ಗೊತ್ತಿದ್ದಲ್ಲಿ ಮಾಹಿತಿ ನೀಡಲು
ರೈಲ್ವೆ ಹೊರ ಉಪ ಠಾಣೆ ಮಂಡ್ಯ ಕೋರಿದೆ.
-
Mandya7 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan15 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya11 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu12 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Kodagu8 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ
-
Mandya9 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan14 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu10 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ