Connect with us

Hassan

ಕ್ಷುಲ್ಲಕ ಕಾರಣಕ್ಕೆ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ‌ ಹಲ್ಲೆ

Published

on

ಹಾಸನ: ಬೇಲೂರು–ಹಾಸನ ಮುಖ್ಯರಸ್ತೆಯ ಹಗರೆ ಸಮೀಪ ರಸ್ತೆ ಸಂಚಾರ ವಿಚಾರವಾಗಿ ಆರಂಭವಾದ ಕ್ಷುಲ್ಲಕ ಗಲಾಟೆ ವಿಕೋಪಕ್ಕೆ ತಿರುಗಿ, ಕೆಎಸ್‌ಆರ್‌ಟಿಸಿ ಬಸ್‌ನ ಗಾಜುಗಳನ್ನು ದುಷ್ಕರ್ಮಿಗಳು ಪುಡಿ ಮಾಡಿರುವ ಘಟನೆ ಮಂಗಳವಾರ ನಡೆದಿದೆ.

ಬೇಲೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ್ನು ಹಗರೆ ಸಮೀಪ ಸುಮಾರು ಒಂದು ಕಿಲೋಮೀಟರ್ ದೂರದಲ್ಲೇ ಕಾರೊಂದರ ಚಾಲಕ ಹಾಗೂ ಆತನೊಂದಿಗೆ ಇದ್ದವರು ಅಡ್ಡಗಟ್ಟಿ, ಅನಗತ್ಯವಾಗಿ ರಸ್ತೆ ತಡೆದು ಗಲಾಟೆ ನಡೆಸಿದ್ದಾರೆ ಎನ್ನಲಾಗಿದೆ.

ಈ ವೇಳೆ ಬಸ್ ಚಾಲಕನೊಂದಿಗೆ ಮಾತಿನ ಚಕಮಕಿ ನಡೆದು, ಏಕಾಏಕಿ ಆಕ್ರೋಶಗೊಂಡ ಗುಂಪು ಬಸ್‌ನ ಗಾಜುಗಳನ್ನು ಒಡೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದೆ.

ಘಟನೆಯಿಂದ ಆತಂಕಕ್ಕೊಳಗಾದ ಪ್ರಯಾಣಿಕರು ಹಾಗೂ ಬಸ್ ಸಿಬ್ಬಂದಿ ತಕ್ಷಣವೇ ಬಸ್‌ನ್ನು ಹಗರೆ ಪೊಲೀಸ್ ಠಾಣೆಯ ಸಮೀಪಕ್ಕೆ ಕೊಂಡೊಯ್ದು ನಿಲ್ಲಿಸಿದ್ದಾರೆ. ಸದ್ಯ ಬಸ್ ಠಾಣೆಯ ಮುಂಭಾಗದಲ್ಲೇ ನಿಂತಿದ್ದು, ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಈ ಘಟನೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ತೀವ್ರ ಪರದಾಟ ಅನುಭವಿಸಿದ್ದು, ಸಾರ್ವಜನಿಕ ರಸ್ತೆಯಲ್ಲಿ ಈ ರೀತಿಯ ಅರಾಜಕತೆ ಪ್ರದರ್ಶಿಸಿ ಸರ್ಕಾರಿ ಬಸ್‌ಗೆ ಹಾನಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಾಹಿತಿ ಪಡೆದ ಹಗರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Continue Reading

Hassan

ಹಾಸನ: ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಕಾರು – ಸಂಪೂರ್ಣ ಭಸ್ಮ

Published

on

ಹಾಸನ: ನಗರದ ಹೊರವಲಯದ ದೇವೇಗೌಡ ನಗರದಲ್ಲಿ ನಿನ್ನೆ ತಡರಾತ್ರಿ ನಿಲ್ಲಿಸಿದ್ದ ಕಾರೊಂದು ದಿಢೀರ್‌ ಬೆಂಕಿಗೆ ಆಹುತಿಯಾದ ಘಟನೆ ಸಂಭವಿಸಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಸ್ಕೋಡಾ ಕಂಪನಿಯ KA-05 MA-7692 ನೋಂದಣಿ ಸಂಖ್ಯೆಯ ಕಾರು ಕ್ಷಣಾರ್ಧದಲ್ಲೇ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಅಪಾರ ಆಸ್ತಿ ನಷ್ಟ ಉಂಟಾಗಿದೆ.

ಕಾರು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ, ಅದಾಗಲೇ ಕಾರು ಸಂಪೂರ್ಣವಾಗಿ ಭಸ್ಮವಾಗಿತ್ತು.

ಘಟನೆಯ ಮಾಹಿತಿ ಪಡೆದ ಹಾಸನ ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ.


ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಕಾರಣಗಳಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಹೆಚ್ಚಿನ ತನಿಖೆಯ ನಂತರವೇ ಸ್ಪಷ್ಟತೆ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆ ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Continue Reading

Hassan

ರಸ್ತೆ ಬದಿಯಲ್ಲಿ ಎಸೆದಿರುವ ಬೈಬಲ್ ಹಾಗೂ ಕ್ರೈಸ್ತ ಕರಪತ್ರಗಳು

Published

on

ಹಾಸನ : ಹಾಸನ ಮಾರ್ಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡು ಸಾಗುತ್ತಿರುವ ಸಹಸ್ರಾರು ಭಕ್ತರ ಮಾರ್ಗಮಧ್ಯೆ, ಧಾರ್ಮಿಕ ಸೌಹಾರ್ದಕ್ಕೆ ಧಕ್ಕೆ ತರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಇಬ್ಬೀಡು ಸಮೀಪ, ಬೈಬಲ್ ಹಾಗೂ ಕ್ರೈಸ್ತ ಧರ್ಮ ಪ್ರಚಾರಕ್ಕೆ ಸಂಬಂಧಿಸಿದ ಕರಪತ್ರಗಳನ್ನು ದಾರಿಯುದ್ದಕ್ಕೂ ಎಸೆದಿರುವ ದುರುಳರ ಕೃತ್ಯ ಪಾದಯಾತ್ರಿಗಳ ಆಕ್ರೋಶಕ್ಕೆ ಕಾರಣವಾಗಿದೆ.

‘ದೇವರನ್ನು ತಿಳಿಯುವುದೇ ಹೇಗೆ’ ಎಂಬ ಶೀರ್ಷಿಕೆಯೊಂದಿಗೆ ಬೈಬಲ್ ಕುರಿತು ಪ್ರಚಾರ ಮಾಡುವ ಕರಪತ್ರಗಳು ರಸ್ತೆ ಬದಿಗಳಲ್ಲಿ ಹರಡಿರುವುದನ್ನು ಗಮನಿಸಿದ ಪಾದಯಾತ್ರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಂತಿಪೂರ್ಣವಾಗಿ ಧಾರ್ಮಿಕ ನಂಬಿಕೆಯಿಂದ ಪಾದಯಾತ್ರೆ ಕೈಗೊಂಡಿರುವ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ರೀತಿಯಲ್ಲಿ ಇಂತಹ ಕೃತ್ಯ ಎಸಗಿರುವುದು ಖಂಡನೀಯವೆಂದು ಪಾದಯಾತ್ರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಕಿಡಿಗೇಡಿಗಳನ್ನು ಪತ್ತೆಹಚ್ಚುವಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

Hassan

ಹಾಸನದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ : ಬಿಜೆಪಿ ಮುಖಂಡ ದೇವರಾಜೆ ಗೌಡ ಆರೋಪಗಳಿಗೆ ತೀವ್ರ ಖಂಡನೆ

Published

on

ಹಾಸನ: 09/09/2096ರಂದು ಬಿಜೆಪಿ ಮುಖಂಡ ದೇವರಾಜೆ ಗೌಡ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶಣ್ಣರ ವಿರುದ್ಧ ಮಾಡಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರವಾಗಿವೆ ಎಂದು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಜಿಲ್ಲಾಧ್ಯಕ್ಷ ವಿನೋದ್ ಕುಮಾರ್ ಹೆಚ್.ಆರ್ ಅವರು ಖಂಡಿಸಿದರು.

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹೇಶಣ್ಣರು ಒಮ್ಮೆ ನಗರಸಭೆ ಸದಸ್ಯರಾಗಿದ್ದ ಸಂದರ್ಭದಲ್ಲಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂಬ ದೇವರಾಜೆ ಗೌಡ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.

ಮಹೇಶಣ್ಣರು 2004ರಲ್ಲಿ ಪ್ರತಿ ಅಡಿಗೆ ರೂ.100ರಂತೆ ನಿವೇಶನವನ್ನು ಖರೀದಿಸಿದ್ದು, ಬ್ಯಾಂಕ್ ಸಾಲ ಪಡೆದು ಕಷ್ಟಪಟ್ಟು ದುಡಿದು ಮನೆ ಕಟ್ಟಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಅಕ್ರಮ ಆಸ್ತಿಯನ್ನು ಅವರು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಹೆಚ್.ಕೆ. ಮಹೇಶಣ್ಣರು ಕಳೆದ 35 ವರ್ಷಗಳಿಂದ ರಾಜಕಾರಣದಲ್ಲಿ ಸಕ್ರಿಯರಾಗಿದ್ದು, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿಯೇ ಅವರ ಮನೆ ಮುಂದೆ ನಿಂತು ದೇವರಾಜೆ ಗೌಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಕಾಯುತ್ತಿದ್ದ ಇತಿಹಾಸವನ್ನು ಮರೆತಿದ್ದಾರೆ ಎಂದು ಟೀಕಿಸಿದರು. ಇಡೀ ಹಾಸನ ತಾಲೂಕು ಮತ್ತು ಜಿಲ್ಲೆಗೆ ದೇವರಾಜೆ ಗೌಡರ ರಾಜಕೀಯ ಹಿನ್ನೆಲೆ ಚೆನ್ನಾಗಿ ಗೊತ್ತಿದೆ ಎಂದರು.

ದೇವರಾಜಿಂಗೌಡರು ಆರ್.ಟಿ.ಐ ಹೆಸರಿನಲ್ಲಿ ಅಧಿಕಾರಿಗಳನ್ನು ಹೆದರಿಸಿ ಹಣ ವಸೂಲಿ ಮಾಡುವವರಾಗಿದ್ದು, ಇತ್ತಿಚೆಗೆ ಯಾವುದೇ ದಾಖಲೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು. 2023–24ರ ಚುನಾವಣಾ ನಾಮಪತ್ರದಲ್ಲಿ ದೇವರಾಜೆ ಗೌಡರು 85 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿರುವುದಕ್ಕೆ ಸ್ಪಷ್ಟನೆ ನೀಡಬೇಕೆಂದು ಸವಾಲು ಹಾಕಿದರು. 2013–14ರಲ್ಲಿ ಅವರ ಬಳಿ ಏನೂ ಇಲ್ಲದ ಸ್ಥಿತಿಯಿಂದ ಇಷ್ಟು ಆಸ್ತಿ ಹೇಗೆ ಬಂತು ಎಂಬುದನ್ನು ಜನತೆಗೆ ತಿಳಿಸಬೇಕೆಂದರು.

ಶೀಘ್ರದಲ್ಲೇ ದೇವರಾಜೆ ಗೌಡರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗುವುದು. ಮಹೇಶಣ್ಣರ ವಿರುದ್ಧ ಮಾಡಿದ ಆರೋಪಗಳನ್ನು ಸಾಬೀತುಪಡಿಸದಿದ್ದರೆ ಬಹಿರಂಗವಾಗಿ ಕ್ಷಮೆ ಕೇಳಬೇಕಾಗುತ್ತದೆ ಎಂದು ವಿನೋದ್ ಕುಮಾರ್ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎ.ಆರ್.ಕೆ., ಪ್ರವೀಣ್ ಕಾಡ, ಗುರು ಆಗಿಲೆ, ನೀಜ್ ಅಹ್ಮದ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Continue Reading

Trending

error: Content is protected !!