State
ಬೆಳ್ಳಂಬೆಳಗ್ಗೆಯೇ ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ – ಈ ನೌಕರರ ಭತ್ಯೆಯಲ್ಲಿ ಬರೋಬ್ಬರಿ 10 ಪಟ್ಟು ಹೆಚ್ಚಳ !!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ನೌಕರರು ಬಹಳ ಕಷ್ಟದಲ್ಲಿದ್ದಾರೆ. ಸರಿಯಾದ ಸಮಯಕ್ಕೆ ವೇತನ ಜಾರಿಯಾಗದೆ ಸಂಕಷ್ಟಕ್ಕೀಡಾಗಿದ್ದಾರೆ. ಆದರೆ ಈ ನಡುವೆ ಸಾರಿಗೆ ನೌಕರರಿಗೆ ಇಲಾಖೆಯು ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.
ಹೌದು, ರಾಜ್ಯ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಅಪಘಾತ ರಹಿತ ಚಾಲನೆಗಾಗಿ ನೀಡುವ ಮಾಸಿಕ ಭತ್ಯೆಯನ್ನು 10 ಪಟ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವಂತಹ ಸಚಿವರು,ಚಿನ್ನದ ಪದಕ ವಿಜೇತರಿಗೆ ಮಾಸಿಕ ಭತ್ಯೆ ಪರಿಷ್ಕರಣೆ ಮಾಡಲಾಗಿದೆ ಎಂದಿದ್ದಾರೆ.
ಯಾರ್ಯಾರ ಭತ್ಯೆ ಹೆಚ್ಚಾಗಲಿದೆ?
• ಚಿನ್ನದ ಪದಕ ವಿಜೇತರಿಗೆ ಮಾಸಿಕ ಭತ್ಯೆ ಪರಿಷ್ಕರಣೆ ಮಾಡಲಾಗಿದ್ದು ಐದು ವರ್ಷಗಳ ಅಪಘಾತ ರಹಿತ ಚಾಲನೆಗಾಗಿ ಬೆಳ್ಳಿ ಪದಕ ವಿಜೇತರಿಗೆ ನೀಡುವ ಮಾಸಿಕ ಭತ್ಯೆ ರೂ 50ನ್ನು ಹತ್ತು ಪಟ್ಟು ಹೆಚ್ಚಿಸಿ ರು.500 ಮಾಸಿಕ ಭತ್ಯೆ ಪಾವತಿಗೆ ಅವಕಾಶ ಮಾಡಲಾಗುವುದು.
• 15 ವರ್ಷಗಳ ಅಪಘಾತ ರಹಿತ ಚಾಲನೆಗಾಗಿ ಮುಖ್ಯ ಮಂತ್ರಿಗಳ ಬಂಗಾರದ ಪದಕ ವಿಜೇತರಿಗೆ ಪ್ರಸ್ತುತ ಇರುವ ರು. 100 ಮಾಸಿಕ ಭತ್ಯೆಯನ್ನು ಹತ್ತು ಪಟ್ಟು ಹೆಚ್ಚಿಸಿ ರು. 1000ಕ್ಕೆ ಹೆಚ್ಚಿಸಲಾಗುವುದು.
• ಪ್ರಸ್ತುತ ಬೆಳ್ಳಿ ಪದಕ ಮತ್ತು ಚಿನ್ನದ ಪದಕ ವಿಜೇತರಾಗಿ ಸೇವೆ ಸಲ್ಲಿಸುತ್ತಿರುವ ಎಲ್ಲ ಚಾಲಕ ಹಾಗೂ ಚಾಲಕ ಜೊತೆಗೆ ನಿರ್ವಾಹಕರಿಗೆ ಪರಿಷೃತ ಪ್ರಶಸ್ತಿ ಭತ್ಯೆ ಅನ್ವಯಿಸಿ ಪಾವತಿಗೆ ಅವಕಾಶ ಮಾಡಲಾಗುವುದು.
ಸೇವೆ ವೇಳೆ ಮೃತಪಟ್ಟರೆ 50 ಲಕ್ಷ ಪರಿಹಾರ!!
ನೌಕರರು ಅಪಘಾತದಲ್ಲಿ ಮೃತಪಟ್ಟಿಲ್ಲಿ ಅವರ ಅವಲಂಬಿತರಿಗೆ ಗರಿಷ್ಠ ರೂ, 50 ಲಕ್ಷ ಮೊತ್ತವನ್ನು ಪಾವತಿಸಲಾಗುತ್ತದೆ. ಅಂದಹಾಗೆ ನೌಕರರು ಸಂಸ್ಥೆಯ ಸೇವೆಯಲ್ಲಿದ್ದಾಗ ಕರ್ತವ್ಯ ನಿರತ, ಖಾಸಗಿ ಅಪಘಾತದಿಂದ ಮೃತಪಟ್ಟಲ್ಲಿ ಮತ್ತು ಅಂಗನ್ಯೂನತೆಗಳಿಗೆ ಒಳಗಾದಲ್ಲಿ ಅವರ ಅವಲಂಬಿತರಿಗೆ, ನೌಕರರಿಗೆ ಗರಿಷ್ಠ ಮೊತ್ತದ ಆರ್ಥಿಕ ಸೌಲಭ್ಯ ಸಿಗುವ ಉದ್ದೇಶದಿಂದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರವರೊಂದಿಗೆ ನೌಕರರಿಗೆ ಸಿ.ಎಸ್.ಪಿ ಯೋಜನೆಯಡಿ ಅಪಘಾತ ವಿಮಾ ಸೌಲಭ್ಯವನ್ನು ಎಸ್.ಬಿ.ಐ ಬ್ಯಾಂಕ್ ಜೊತೆ ಒಪ್ಪಂದ ಮಾಡಿಕೊಂಡು, ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
State
INDvsENG 1st t20: ಟೀಂ ಇಂಡಿಯಾ ಅಲ್‌ರೌಂಡರ್ ಪ್ರದರ್ಶನ; ಸೂರ್ಯ ಬಳಕ್ಕೆ ಮೊದಲ ಜಯ
ಕೊಲ್ಕತ್ತಾ: ಭಾರತ ತಂಡದ ಸಂಘಟಿತ ಬ್ಯಾಟಿಂಗ್ ಹಾಗೂ ಬೌಲಿಂಗ್ ದಾಳಿಗೆ ನಲುಗಿದ ಇಂಗ್ಲೆಂಡ್ ತಂಡ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಅಂತರದಿಂದ ಗೆಲುವು ದಾಖಲಿಸಿದೆ.
ಇಲ್ಲಿನ ಈಡೆನ್ ಗಾರ್ಡೆನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ ಆಲ್‌ಔಟ್ ಆಗಿ 132 ರನ್ ಗಳಿಸಿ ಟೀಂ ಇಂಡಿಯಾಗೆ 133 ರನ್‌ಗಳ ಸಾಧಾರಣ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿ ಭಾರತ ತಂಡ 12.5 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 133 ರನ್ ಗಳಿಸಿ 7 ವಿಕೆಟ್‌ಗಳ ಅಂತರದಿಂದ ಗೆದ್ದು ಬೀಗಿತು.
ಇಂಗ್ಲೆಂಡ್ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರವಾಗಿ ಬೆನ್ ಡಕೆಟ್ ಹಾಗೂ ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಿದರು. ಸಾಲ್ಟ್ ಶೂನ್ಯ ಸುತ್ತಿ ಹೊರನಡೆದರೇ, ಡಕೆಟ್ 4(4) ರನ್ ಗಳಿಸಿ ಇನ್ನಿಂಗ್ಸ್ ಮುಗಿಸಿದರು.
ನಾಯಕ ಜೋಸ್ ಬಟ್ಲರ್ 44 ಎಸೆತ 8 ಬೌಂಡರಿ, 2 ಸಿಕ್ಸರ್ ಸಹಿತ 68 ರನ್ ಗಳಿಸಿದ್ದೇ ತಂಡದ ಪರವಾಗಿ ಗಳಿಸಿದ ಅಧಿಕ ರನ್. ಬಟ್ಲರ್ ಏಕಾಂಕಿ ಹೋರಾಟದ ಫಲವಾಗಿ ಇಂಗ್ಲೆಂಡ್ ನೂರರ ಗಡಿ ದಾಟಿತು.
ಉಳಿದಂತೆ ಹ್ಯಾರಿ ಬ್ರೂಕ್ 17(14), ಲಿವಿಂಗ್‌ಸ್ಟೋನ್ ಡಕ್‌ಔಟ್, ಬೆಥೆಲ್ 7(14), ಓವರ್‌ಟನ್ 2(4), ಆಟ್ಕಿನ್ಸನ್ 2(13), ಜೋಫ್ರಾ ಆರ್ಚರ್ 12(10), ಮಾರ್ಕ್‌ವುಡ್ 1(1) ಹಾಗೂ ಆದಿಲ್ ರಶೀದ್ ಔಟಾಗದೇ 8(11) ರನ್ ಗಳಿಸಿದರು.
ಟೀಂ ಇಂಡಿಯಾ ಪರ ವರುಣ್ ಚಕ್ರವರ್ತಿ 3, ಅರ್ಶದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿ ಮಿಂಚಿದರು.
ಟೀಂ ಇಂಡಿಯಾ ಇನ್ನಿಂಗ್ಸ್: ಈ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ತಂಡಕ್ಕೆ ಆರಂಭಿಕರಾದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಇನ್ನಿಂಗ್ಸ್ ಕಟ್ಟಿದರು. ಸಂಜು ಸ್ಯಾಮ್ಸನ್ 26(20) ರನ್ ಗಳಿಸಿದರೇ, ನಾಯಕ ಸೂರ್ಯಕುಮಾರ್ ಯಾದವ್ ಡಕ್‌ಔಟ್ ಆಗಿ ಹೊರನಡೆದರು.
ಇತ್ತ ಆರಂಭದಿಂದಲೇ ಭರ್ಜರಿಯಾಗಿ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ ಭರ್ಜರಿ 8 ಸಿಕ್ಸರ್‌ಗಳ ಸಹಾಯದಿಂದ 79 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಜೊತೆಯಾದ ತಿಲಕ್ ವರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಕ್ರಮವಾಗಿ 19 ಹಾಗೂ 3 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
ಇಂಗ್ಲೆಂಡ್ ಪರ ಜೋಫ್ರಾ ಆರ್ಚರ್ ಎರಡು, ಆದಿಲ್ ರಶೀದ್ ಒಂದು ವಿಕೆಟ್ ಕಬಳಿಸಿದರು.
State
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಎರಡು ಪ್ರತ್ಯೇಕ ಅಪಘಾತದಲ್ಲಿ ಮೃತರಾದವರ ಕುಟುಂಬಕ್ಕೆ ಸರ್ಕಾರದ ವತಿಯಿಂದ 3ಲಕ್ಷ ಪರಿಹಾರ ಘೋಷಿಸಲಾಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು.
ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು. ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದು ಸಿಎಂ ಆಫ್ ಕರ್ನಾಟಕ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಪರಿಹಾರ ಘೋಷಿಸಿದ್ದಾರೆ.
State
ಮುಡಾ ಸೈಟು ಮುಟ್ಟುಗೋಲು: ಸಿಎಂ ಸಿದ್ದರಾಮಯ್ಯ ಏನಂದ್ರು?
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 50:50 ಅನುಪಾತದಲ್ಲಿ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ (ಜಾರಿ ನಿರ್ದೇಶನಾಲಯ) ಮುಡಾ ಸೈಟುಗಳನ್ನು ಮುಟ್ಟುಗೋಲು ಹಾಕಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಮೊದಲ ಬಾರಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಇಡಿ ಅಧಿಕಾರಿಗಳ ಮಾಧ್ಯಮ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ. 50:50 ಸೈಟುಗಳನ್ನು ಮುಟ್ಟುಗೋಲು ಹಾಕಿದ್ದೇವೆ ಎನ್ನುತ್ತಾರೆ. ಕೇವಲ ರಾಜಕೀಯ ಉದ್ದೇಶದಿಂದ ತನಿಖೆ ಮಾಡುತ್ತಿದ್ದಾರೆ. ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಟಾಂಗ್ ಕೊಟ್ಟರು.
ಇಡಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿರುವುದು ಬಿಜೆಪಿ. ಇದೊಂದು ರಾಜಕೀಯ ಉದ್ದೇಶಪೂರಿತವಾದ ಪಿತೂರಿ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
-
Chamarajanagar20 hours ago
Hannur|ಒಂದೇ ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ಜಟಾಪಟಿ
-
Hassan23 hours ago
Hassan| ಕಾಡಾನೆ ದಾಳಿಗೆ ಕಾರ್ಮಿಕ ಬ*ಲಿ
-
State15 hours ago
ಯಲ್ಲಾಪುರ, ಸಿಂಧನೂರಿನಲ್ಲಿ ಭೀಕರ ಅಪಘಾತ: ಮೃತರ ಕುಟುಂಬಕ್ಕೆ 3ಲಕ್ಷ ಪರಿಹಾರ ಘೋಷಿಸಿದ ಸಿಎಂ
-
Chamarajanagar12 hours ago
ಜ.23ರಂದು ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
-
National - International15 hours ago
ಪನಾಮಾ ಕಾಲುವೆ ವಿವಾದ: ಟ್ರಂಪ್ ಹೇಳಿಕೆ ತಿರಸ್ಕರಿಸಿದ ಪನಾಮಾ ಅಧ್ಯಕ್ಷ ಜೋಸ್ ರೌಲ್
-
National - International13 hours ago
ರಾಜ್ಯದಲ್ಲಿ ಪ್ರತ್ಯೇಕ ಎರಡು ಕಡೆ ಅಪಘಾತ: ಮೃತರಿಗೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ
-
Hassan18 hours ago
ಕಾಡಾನೆ ದಾಳಿಯಿಂದ ವೃದ್ದ ಸಾ*ವು ಪ್ರಕರಣ
-
Kodagu12 hours ago
ಸಾರ್ವಜನಿಕರಿಗೆ ಪಂಗನಾಮ ಹಾಕಿದ್ದ ಫರ್ನೀಚರ್ ಅಂಗಡಿ ಮಾಲೀಕನ ಬಂಧನ