Kodagu
ಫೆ. 7ಕ್ಕೆ ಕೆಎಸ್‌ಆರ್‌ಟಿಸಿ ನೂತನ ಬಸ್ಸು ನಿಲ್ದಾಣ ಉದ್ಘಾಟನೆ
ಶನಿವಾರಸಂತೆ: ಶನಿವಾರಸಂತೆಯಲ್ಲಿ ಕೆಎಸ್ಆರ್ಟಿಸಿ ಸಂಸ್ಥೆಯ ಪುತ್ತೂರು ವಿಭಾಗದ ವತಿಯಿಂದ 1 ಕೋಟಿ 5 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಬಸ್ಸು ನಿಲ್ದಾಣದ ಉದ್ಘಾಟನಾ ಸಮಾರಂಭ ಫೆ.7 ರಂದು ಬೆಳಗ್ಗೆ 11.30 ಗಂಟೆಗೆ ನಡೆಯಲಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಬಸ್ಸು ನಿಲ್ದಾಣವನ್ನು ಕೊಡಗು ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಉದ್ಘಾಟಿಸುತ್ತಾರೆ. ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯ ಖಾತೆ ಸಚಿವ ರಾಮಲಿಂಗರೆಡ್ಡಿ, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಮತ್ತು ಗುಬ್ಬಿ ಕ್ಷೇತ್ರ ಶಾಸಕ ಎಸ್.ಆರ್.ಶ್ರೀನಿವಾಸ್, ಮುಖ್ಯ ಮಂತ್ರಿಯವರ ಕಾನೂನು ಸಲಹೆಗಾರ ಮತ್ತು ವೀರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸಭಾ ಸದಸ್ಯ ಅಜಯ್ ಮಾಕನ್, ಎಂಎಲ್‌ಸಿಗಳಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಬೋಜೇಗೌಡ, ಡಾ.ಧನುಂಜಯ್ ಸರ್ಜಿ, ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಶನಿವಾರಸಂತೆ ಗ್ರಾ.ಪಂ.ಅಧ್ಯಕ್ಷೆ ಗೀತ ಹರೀಶ್, ಗ್ಯಾರೆಂಟಿ ಯೋಜನೆಗಳ ಅನುಸ್ಠಾನ ಸಮಮಿತಿ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಜಿ.ಎಂ.ಕಾಂತರಾಜ್, ಸಾರಿಗೆ ಇಲಾಖೆ ಆಡಳಿತ ಅಧಿಕಾರಿ ಡಾ.ಎನ್.ವಿ.ಪ್ರಸಾದ್, ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕ ಡಾ.ಕೆ.ನಂದಿನಿದೇವಿ, ಕೊಡಗು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ಮುಂತಾದವರು ಭಾಗವಹಿಸುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Kodagu
ಸಿಪಿಎಲ್ ಲೋಗೋ ಅನಾವರಣ: ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್‌ಗೆ ಅಧಿಕೃತ ಚಾಲನೆ
ಸಿದ್ದಾಪುರ: ಸಿಜೆ ಬಿಲ್ಡ್‌ವೇರ್ ಪ್ರಸ್ತುತಿಯಲ್ಲಿ ಐಪಿಎಲ್ ಮಾದರಿಯಲ್ಲಿ ಆಯೋಜಿಸಲಾಗಿರುವ ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್ (ಸಿಪಿಎಲ್) ಆವೃತ್ತಿ–1ರ ಅಧಿಕೃತ ಲೋಗೋ ಅನಾವರಣ ಕಾರ್ಯಕ್ರಮವು ನೆಲ್ಯಹುದಿಕೇರಿಯ ಕೋಫಿಯಾ ರೆಸ್ಟೋರೆಂಟ್‌ನಲ್ಲಿ ಬುಧವಾರ ಸಂಜೆ ನಡೆಯಿತು.
ಲೋಗೋ ಅನಾವರಣದ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ನೀಡಲಾಯಿತು.
ಏಪ್ರಿಲ್ 10 11 ಮತ್ತು 12ರಂದು ಸಿದ್ದಾಪುರದ ಪ್ರೌಢಶಾಲಾ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದ್ದು, ಕೊಡಗು ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಯುವಕರಿಗೆ ಕ್ರೀಡಾ ವೇದಿಕೆ ಒದಗಿಸುವ ಉದ್ದೇಶದಿಂದ ಈ ಲೀಗ್ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಸಿಜೆ ಬಿಲ್ಡ್‌ವೇರ್‌ನ ವ್ಯವಸ್ಥಾಪಕ ಪ್ರಿನ್ಸ್, ಸಂಸ್ಥೆ ಸದಾ ಕ್ರೀಡೆ, ಶಿಸ್ತು ಮತ್ತು ಸೌಹಾರ್ದತೆಯನ್ನು ಉತ್ತೇಜಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಯುವ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಿಪಿಎಲ್‌ಗೆ ಬೆಂಬಲ ನೀಡಿದೆ ಎಂದು ತಿಳಿಸಿದರು. ಕ್ರಿಕೆಟ್ ಮೂಲಕ ಸಮುದಾಯದಲ್ಲಿ ಸ್ನೇಹಭಾವ, ಒಗ್ಗಟ್ಟು ಹಾಗೂ ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುವುದು ಸಂಸ್ಥೆಯ ಪ್ರಮುಖ ಉದ್ದೇಶವಾಗಿದೆ ಎಂದರು.
ವಿರಾಜಪೇಟೆ ತಾಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಮಾತನಾಡಿ, ಕ್ರಿಶ್ಚಿಯನ್ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ಕೊಡಗು ರೋಮನ್ ಕ್ಯಾಥೋಲಿಕ್ ಕ್ರಿಶ್ಚಿಯನ್ ಪ್ರೀಮಿಯರ್ ಲೀಗ್ ಕ್ರೀಡಾ ಸ್ಪೂರ್ತಿಯ ಜೊತೆಗೆ ಸಹೋದರತ್ವ ಮತ್ತು ಶಿಸ್ತು ಬೆಳೆಸುವ ಉತ್ತಮ ಪ್ರಯತ್ನವಾಗಿದೆ ಎಂದು ಶ್ಲಾಘಿಸಿದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಆಯುಕ್ತ ಜಿಮ್ಮಿ ಸಿಕ್ವೇರಾ ಮಾತನಾಡಿ, ಕ್ರೀಡೆಯ ಮೂಲಕ ಯುವಕರನ್ನು ಸಮಾಜಮುಖಿಯಾಗಿ ರೂಪಿಸುವ ಉದ್ದೇಶದಿಂದ ಆರಂಭವಾದ ಸಿಪಿಎಲ್ ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ CB9 ಉಪಾಧ್ಯಕ್ಷ ಟೋಮಿ ಥಾಮಸ್, ಸಿಪಿಎಲ್ ಅಧ್ಯಕ್ಷ ಜಿಜೋ, ಸಂತ ಜೋಸೆಫ್ ಸೇವಾ ಸಂಘ ಉಪಾಧ್ಯಕ್ಷ ಜೋಷಿ, ಅನುಭವ್ ಕನ್‌ಸ್ಟ್ರಕ್ಷನ್ ವಿಜೇಶ್, ಸೂರ್ಯವರ್ಷಿ ಅಸೋಸಿಯೇಟ್ಸ್ ಜಾನ್ಸನ್, ಟಿ.ಪಿ. ಕನ್‌ಸ್ಟ್ರಕ್ಷನ್ ಅನೀಶ್, ಸಂತ ಜೋಸೆಫ್ ಸೇವಾ ಸಂಘ ಸದಸ್ಯರಾದ ಶಾಜಿ, ವಿನ್ಸಿ, ಜಾನಿ, ರೀಗಲ್ ಹಾಗೂ ಎಸ್‌ಜೆಸಿ ಕ್ರಿಕೆಟರ್ಸ್‌ನ ಯುವಕರು ಉಪಸ್ಥಿತರಿದ್ದರು
Kodagu
ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲೋತ್ಸವ – ಗಣ್ಯರಿಗೆ ಆಹ್ವಾನ
ಪೊನ್ನಂಪೇಟೆ : ಪೊನ್ನಂಪೇಟೆ ತಾಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲೋತ್ಸವವನ್ನು ಫೆಬ್ರವರಿ 22ನೇ ದಿನಾಂಕದಿಂದ 25ನೇ ದಿನಾಂಕದವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಸಮಾರಂಭಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗು ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು, ಜಿಲ್ಲಾ ಉಸ್ತುವಾರಿ ಹಾಗು ಸಣ್ಣ ನೀರಾವರಿ ಸಚಿವರಾದ ಬೋಸರಾಜುರವರನ್ನು ಹಾಗು ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಯವರನ್ನು, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಹಾಗು ಕೊಡಗು ಜಿಲ್ಲಾ ಪಂಚಾಯತಿ ಸದಸ್ಯರು ಕೊಡಗು ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷರಾದ ಬಾನಂಡ ಪ್ರತ್ಯು, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷರಾದ ಆದೇಂಗಡ ವಿನು ಉತ್ತಪ್ಪ, ಉಸ್ತುವಾರಿ ಆದೇಂಗಡ ವಾಸು ಬೆಳ್ಯಪ್ಪನವರು ಮತ್ತು ಆದೇಂಗಡ ಚಿಟ್ಟಿ ರಮೇಶ್’ರವರು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಸಚಿವರಿಗೆ ಶಾಸಕ ಎ.ಎಸ್ ಪೊನ್ನಣ್ಣ ರವರು, ಕಾವೇರಿ ತಾಯಿಯ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದರು.
Kodagu
ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ: ಡಾ. ಜ಼ಮೀರ್ ಅಹಮದ್
ಕುಶಾಲನಗರ: ದೇಶದ ಯುವಜನತೆಯು ಸಂಘಟಿತರಾಗಿ ಕೈ ಜೋಡಿಸಿದಾಗ ಮಾತ್ರ ವ್ಯಸನ ಮುಕ್ತ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯ ಎಂದು ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕರಾದ ಡಾ. ಜ಼ಮೀರ್ ಅಹಮದ್ ಅಭಿಪ್ರಾಯಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಇವರ ವತಿಯಿಂದ ಶ್ರೀ ಸದ್ಗುರು ಪ್ರೌಢಶಾಲೆ, ಕೂಡಿಗೆ ಇಲ್ಲಿ ಆಯೋಜಿಸಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, ಮಾನವೀಯ ಮೌಲ್ಯ, ಸಂಸ್ಕಾರ, ಸನ್ನಡತೆ, ಸಮಾಜದಲ್ಲಿ ಉತ್ತಮ ಗೌರವವನ್ನು ತಂದುಕೊಡುತ್ತದೆ. ಯಾವುದೇ ವ್ಯಕ್ತಿ ವ್ಯಸನಗಳಿಗೆ ಬಲಿಯಾದರೆ ಶಾರೀರಿಕವಾಗಿ ಮತ್ತು ಮಾನಸಿಕವಾಗಿ ಸ್ಥಿಮಿತತೆ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ವಿದ್ಯಾರ್ಥಿ ಸಮುದಾಯವು ಮಾದಕ ಪದಾರ್ಥಗಳ ದಾಸ್ಯಕ್ಕೊಳಗಾಗಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬಾರದು. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ, ಸುಲಭದಲ್ಲಿ ಅದರಿಂದ ಹೊರಬರಲು ಸಾಧ್ಯವಿಲ್ಲ.

ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜವು ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸನ್ನಡತೆಯ ನಾಗರೀಕರಾಗಿ ಬದುಕು ನಡೆಸಬೇಕು. ಮಾದಕ ವಸ್ತುಗಳ ಜಾಲಕ್ಕೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್‍ಯಕ್ರಮಗಳನ್ನು ಕಾಲಕಾಲಕ್ಕೆ ರೂಪಿಸುತ್ತಿರಬೇಕು. ಯಾವುದೇ ರೀತಿಯ ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ನುಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಪುಷ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಯುವ ಸಮುದಾಯದ ಭವಿಷ್ಯ ಹಾಗೂ ದೇಶದ ಅಭಿವೃದ್ಧಿಗೆ ಮಾರಕವಾಗಿರುವ ಮಾದಕ ವಸ್ತುವನ್ನು ದೂರ ಸರಿಸಿ ಉನ್ನತ ಶಿಕ್ಷಣ ಹಾಗೂ ಸದೃಢ ಭವಿಷ್ಯ ರೂಪಿಸಲು ಒತ್ತು ನೀಡಬೇಕು. ವ್ಯಸನದ ದುಷ್ಪರಿಣಾಮಗಳ ಬಗ್ಗೆ ಸಮಾಜಕ್ಕೆ ನೈಜ ಅರಿವು ಮೂಡಿಸಲು ಸಾಧ್ಯವಾದಲ್ಲಿ ಮಾದಕ ವಿರೋಧಿ ದಿನಾಚರಣೆ ಅರ್ಥಪೂರ್ಣವಾಗುವುದು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಚ್ಯುತ್, ಸುಮಲತಾ, ರೇಣುಕಾ, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
-
Politics21 hours agoಆಡಳಿತ- ವಿಪಕ್ಷಗಳ ಜಿದ್ದಾಜಿದ್ದಿಗೆ ಬಲಿಯಾದ ವಿಧಾನ ಪರಿಷತ್ ಕಲಾಪ
-
Special5 hours agoBSNL Recruitment 2026: ಬಿಎಸ್ಎನ್ಎಲ್ನಲ್ಲಿ ಭರ್ಜರಿ ನೇಮಕಾತಿ;ತಿಂಗಳಿಗೆ ₹90,000 ವರೆಗೆ ವೇತನ
-
Hassan24 hours ago2027 ರ ಅಂತ್ಯಕ್ಕೆ ಎತ್ತಿನಹೊಳೆ ನೀರು ಹರಿಸಲು ಕ್ರಮ: ಕೃಷ್ಣ ಬೈರೇಗೌಡ
-
Hassan19 hours agoಪ್ರತ್ಯೇಕ ಪ್ರಕರಣ: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ
-
National23 hours agoಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ಭೂಪೇಂದ್ರ ಯಾದವ್ಗೆ ಎಚ್ಡಿಕೆ ಮನವಿ
-
Chamarajanagar23 hours agoಬೆಳಗಿನ ವೇಳೆ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತರಿಂದ ಪ್ರತಿಭಟನೆ
-
Mysore1 hour agoಪಾರಂಪರಿಕ ತಾಣದಲ್ಲಿ ಧೂಮಪಾನ: ಬಿಗ್ಬಾಸ್ ಸ್ಪರ್ಧಿ ರಜತ್ ವಿರುದ್ಧ ದೂರು
-
Mysore23 hours agoಜಿಲ್ಲಾ ಪೊಲೀಸರಿಂದ ಗೋದಾಮು, ಕೈಗಾರಿಕಾ ಶೋಧ
