Connect with us

Mysore

“ಕುರಿ ಕಾಯೋನು ಮುಖ್ಯಮಂತ್ರಿ ಆಗಿದ್ದು, ಟೀ ಮಾರುವವನು ಪ್ರಧಾನಮಂತ್ರಿಯಾಗಿದ್ದು ಅಂಬೇಡ್ಕರ್ ಕೊಟ್ಟ ಸಂವಿಧಾನ ದಿಂದ”

Published

on

ಹುಣಸೂರು, ಸಂವಿಧಾನ ಇನ್ನು ಮುಂದೆ ನಮ್ಮನ್ನು ಕಾಪಾಡಲು ಇರುತ್ತದೋ ಇಲ್ಲವೋ ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್ ತಿಳಿಸಿದರು.
ಅವರು ಹುಣಸೂರು ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಮತಯಾಚನೆ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಮುಂದೆ ನಮ್ಮನ್ನು ಕಾಪಾಡಲು ಯಾವ ಪಕ್ಷಗಳು ಬರುವುದಿಲ್ಲ ಈ ಚುನಾವಣೆ ಮುಂದಿನ ಭವಿಷ್ಯದ ಚುನಾವಣೆ ಆಗಿದ್ದು ಹೋಗುತ್ತಾ ಹೋಗುತ್ತಾ ನಾವು ಗುಲಾಮಗಿರಿಗೆ ಹೋಗುತ್ತಿದ್ದೇವೆ ಬಿಜೆಪಿ ಸರ್ಕಾರದ ಸುಳ್ಳು ಪ್ರಚಾರದ ವಿರುದ್ಧ ಪ್ರಶ್ನೆ ಮಾಡುವವರನ್ನು ಆರೋಪಿಗಳನ್ನಾಗಿ ಮಾಡಿ ಜೈಲಿಗೆ ಕಳಿಸುತ್ತಿದ್ದಾರೆ ಆದ್ದರಿಂದ ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಸರ್ಕಾರವನ್ನು ನೀವು ಬೆಂಬಲಿಸಬೇಕು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್, ವಕೀಲ ಪುಟ್ಟರಾಜು ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Mysore

ಈ ಬಾರಿ ವಿಜೃಂಭಣೆಯಿಂದ ದಸರಾ ನಾಡಹಬ್ಬ ಆಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಸೋಮವಾರ ನಾಡಹಬ್ಬ ಮೈಸೂರು ದಸರಾ – 2024ರ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಕಳೆದ ಬಾರಿ ಬರಗಾಲದ ಕಾರಣ ಅದ್ದೂರಿಯಾಗಿ ಆಚರಿಸಲು ಆಗಿರಲಿಲ್ಲ. ಈ ಬಾರಿ ರಾಜ್ಯದಾದ್ಯಂತ ಉತ್ತಮ ಮಳೆಯಾಗಿದ್ದು, ಬಹುತೇಕ ಎಲ್ಲಾ ಜಲಾಶಯಗಳು ತುಂಬಿವೆ. ಈ ಹಿನ್ನೆಲೆಯಲ್ಲಿ ದಸರಾವನ್ನು ವಿಜೃಂಭಣೆಯಿಂದ ಜನರ ಹಬ್ಬವನ್ನಾಗಿ ಆಚರಿಸಲು ಮಾಡಲು ತೀರ್ಮಾನಿಸಲಾಗಿದೆ ಎಂದರು.

ಕಳೆದ ವರ್ಷ ದಸರಾ ಆಚರಣೆಗೆ 30 ಕೋಟಿ ರೂಪಾಯಿ ನೀಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ಆಚರಿಸಲು ಅಗತ್ಯ ಅನುದಾನ ಒದಗಿಸಲಾಗುವುದು. ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಟ್ಯಾಬ್ಲೋಗಳು ಹೆಚ್ಚು ಆಕರ್ಷಕ, ಅರ್ಥಗರ್ಭಿತವಾಗಿ ಹಾಗೂ ವೈವಿಧ್ಯಮಯವಾಗಿರಬೇಕು ಎಂದು ಸೂಚಿಸಲಾಗಿದೆ.

ಅಕ್ಟೋಬರ್‌ 3ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಿಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡಾ ಆರಂಭಿಸಲು ಸೂಚಿಸಲಾಗಿದ್ದು, ಎಲ್ಲಾ ಮಳಿಗೆಗಳು ಉದ್ಘಾಟನೆಯಂದೇ ಸಜ್ಜುಗೊಳಿಸಲು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ವಸ್ತು ಪ್ರದರ್ಶನದಲ್ಲಿ ಎಲ್ಲ ಇಲಾಖೆಗಳ ಮಳಿಗೆಗಳಲ್ಲಿ ಸರ್ಕಾರದ ಸಾಧನೆಗಳು, ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಕೆಲಸವಾಗಬೇಕು ಎಂದು ಸೂಚಿಸಲಾಗಿದೆ ಎಂದರು.

ಆಗಸ್ಟ್‌ 21 ರಂದು ಬೆಳಿಗ್ಗೆ 10.10 ಗಂಟೆಯಿಂದ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್‌ 3 ರಿಂದ 12ರ ವರೆಗೆ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10ನೇ ದಿನ ಜಂಬೂ ಸವಾರಿ ಏರ್ಪಾಡು ಮಾಡಲಾಗತ್ತದೆ. ಅಕ್ಟೋಬರ್‌ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯ ವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪ್ರವಾಸಿಗರ ಅನುಕೂಲಕ್ಕಾಗಿ ದೀಪಾಲಂಕಾರವನ್ನು ಕಳೆದ ಬಾರಿ ಒಂದು ವಾರ ವಿಸ್ತರಣೆ ಮಾಡಲಾಗಿತ್ತು. ಈ ಬಾರಿಯೂ ದಸರಾ ನಂತರವೂ ದೀಪಾಲಂಕಾರ ಅವಧಿಯನ್ನು ವಿಸ್ತರಿಸಿ 21 ದಿನಗಳ ಕಾಲ ದೀಪಾಲಂಕಾರ ಮಾಡಲು ನಿರ್ಧರಿಸಲಾಗಿದೆ ಎಂದರು.

ಪ್ರವಾಸಿಗರ ನೆರವಿಗಾಗಿ ಟೂರಿಸ್ಟ್‌ ಮಿತ್ರ ಮತ್ತು ಹೋಂ ಗಾರ್ಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಕ ಮಾಡಲಾಗುವುದು. ಪಾರ್ಕಿಂಗ್‌, ಭದ್ರತಾ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಸಿದ್ದತೆಗಳನ್ನು ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ಮೈಸೂರನ್ನು ಕೇಂದ್ರವಾಗಿರಿಸಿಕೊಂಡು KSRTC ಸಹಯೋಗದೊಂದಿಗೆ ಪ್ರವಾಸಿ ಸರ್ಕ್ಯುಟ್‌ ರೂಪಿಸಲಾಗುವುದು ಎಂದು ಹೇಳಿದರು.

ಸಾಂಸ್ಕೃತಿಕ ಕಾರ್ಯಕ್ರಮ, ವಸ್ತು ಪ್ರದರ್ಶನ, ದೀಪಾಲಂಕಾರ, ಆಹಾರ ಮೇಳ ಮತ್ತಿತರ ಕಾರ್ಯಕ್ರಮಗಳನ್ನು ಅತ್ಯಂತ ವ್ಯವಸ್ಥಿತವಾಗಿ, ಅರ್ಥಪೂರ್ಣವಾಗಿ ಆಯೋಜಿಸಬೇಕು. ಸ್ಥಳೀಯರಿಗೆ ಪ್ರೋತ್ಸಾಹ ಕೊಡಬೇಕಾಗಿರುವುದರಿಂದ ಸ್ಥಳೀಯ ಕಲಾವಿದರಿಗೆ ಹೆಚ್ಚು ಅವಕಾಶ ದೊರಕಿಸಬೇಕು. ಇದೇ ವೇಳೆ ದಸರಾಕ್ಕೆ ಹೊಸ ರೂಪು ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲು ಸೂಚನೆ ನೀಡಲಾಗಿದೆ. ದಸರಾ ಉದ್ಘಾಟನೆಗೆ ಯಾರನ್ನು ಆಹ್ವಾನಿಸಬೇಕು ಎಂಬುವುದನ್ನು ಮುಖ್ಯಮಂತ್ರಿ ಅವರ ತೀರ್ಮಾನಕ್ಕೆ ಸಭೆ ನೀಡಿದೆ ಎಂದು ಹೇಳಿದರು

Continue Reading

Mysore

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮನವಿ

Published

on

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.


ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ (Outer ring road) ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 4 ಮತ್ತು ಸೆಕ್ಷನ್ 500 ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬAಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ 2018ರ ವಾರ್ಡ್ Delimitaion ನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು, ಪಟ್ಟಣ ಪಂಚಾಯಿತಿಗಳನ್ನು, ಮತ್ತು ನಗರಸಭೆಯನ್ನು ಸೇರಿಸಿಕೊಳ್ಳುಬೇಕಾಗಿದೆ.

1 ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ : 86.31.ಕಿ.ಮೀ
ಹೊಸದಾಗಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿರುವ ಪ್ರದೇಶಗಳು
1 ಹೂಟಗಳ್ಳಿ ನಗರಸಭೆ 29.70 ಚ.ಕಿ.ಮೀ
2 ಶ್ರೀರಾಂಪುರ ಪಟ್ಟಣ ಪಂಚಾಯಿತಿ -17.84 ಚ.ಕಿ.ಮೀ
3 ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ- 22.11 ಚ.ಕಿ.ಮೀ
4 ಕಡಕೋಳ ಪಟ್ಟಣ ಪಂಚಾಯಿತಿ- 34.71 ಚ.ಕಿ.ಮೀ
5 ಬೋಗಾದಿ ಪಟ್ಟಣ ಪಂಚಾಯಿತಿ – 35.50 ಚ.ಕಿ.ಮೀ
6 ಚಾಮುಂಡಿಬೆಟ್ಟಗ್ರಾಮ ಪಂಚಾಯಿತಿ -6.00 ಚ.ಕಿ.ಮೀ
7 ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ- 14.70 ಚ.ಕಿ.ಮೀ
8 ಇಲವಾಲ ಗ್ರಾಮ ಪಂಚಾಯಿತಿ- 20.76 ಚ.ಕಿ.ಮೀ
9 ಆಲನಹಳ್ಳಿ ಗ್ರಾಮ ಪಂಚಾಯಿತಿ -5.69 ಚ.ಕಿ.ಮೀ
ಮೇಲ್ಕಂಡ ಪ್ರದೇಶಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡಿರುವ 2018ರ ವಾರ್ಡ್ Delimitaion ರನ್ವಯ ಹೂಟಗಳ್ಳಿ, ರಮ್ಮನಹಳ್ಳಿ ಹಾಗೂ ಶ್ರೀರಾಂಪುರ ಪ್ರದೇಶದ ಭಾಗಶಃ ಗ್ರಾಮಗಳು ಪಾಲಿಕೆಯ ಎಲ್ಲೆಯೊಳಗೆ ಬರುತ್ತಿದ್ದು, ಸರ್ಕಾರದ ಅಧಿಸೂಚನೆ ಅನ್ವಯ ಪಾಲಿಕೆಯ ವಾರ್ಡ್ ನಂ:1,2,3,4,5,20ರ ಹೆಬ್ಬಾಳು ಪ್ರದೇಶವು ಹೂಟಗಳ್ಳಿ ನಗರಸಭೆಯ ವ್ಯಾಪ್ತಿಗೆ ಸೇರಿರುತ್ತದೆ. ವಾರ್ಡ್ ನಂ: 35ರ ಸಾತಗಳ್ಳಿ ಪ್ರದೇಶವು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ಹಾಗೂ ವಾರ್ಡ್ ನಂ:65ರ ಶ್ರೀರಾಂಪುರ ಪ್ರದೇಶವು ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಸೇರುತ್ತದೆ.


ಈ ಸಂಬಂಧ ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಛೇರಿಗಳಿಂದ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿರುವ-2018ರ ವಾರ್ಡ್ Delimitaion ನಕ್ಷೆಯನ್ವಯ ಪಾಲಿಕೆಯ ವ್ಯಾಪ್ತಿಯೊಳಗೆ ಸೇರಿರುವ ಪ್ರದೇಶಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಸದರಿ ಕಛೇರಿಗಳಿಂದ ತಿಳಿದುಬಂದಿರುತ್ತದೆ. ಗಡಿರೇಖೆಯು ಸರ್ಕಾರದ ಅಧಿಸೂಚನೆಯಂತೆ ಹಾಗೂ 2018 ವಾರ್ಡ್ Delimitaionನಂತೆ ಸಮಗ್ರ ನಕ್ಷೆ ತಯಾರಿಸಲಾಗಿದೆ. ಅದರಂತೆ ಪಾಲಿಕೆಯ ಹಾಲಿ ವಿಸ್ತೀರ್ಣ 86.31 ಚ.ಕಿ.ಮೀ ಪ್ರದೇಶಕ್ಕೆ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ಓಳಗೊಂಡತೆ ಒಟ್ಟು 187.01ಚ.ಕಿ.ಮೀ ಪ್ರದೇಶವನ್ನು ಪಾಲಿಕೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿ ಪ್ರಸ್ತಾವಿತ ಬೃಹತ್ ಮೈಸೂರು ಮಹಾನಗರ ಪಾಲಿಕೆ ಒಟ್ಟಾರೆ ವಿಸ್ತೀರ್ಣವು 273.32 ಚ.ಕಿ.ಮೀ ಆಗುತ್ತದೆ.
ಮೇಲ್ಕಂಡ ಅಂಶಗಳಲ್ಲಿ ಹಿನ್ನಲೆಯಲ್ಲಿ, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಯೋಜನಾಬದ್ದ ನಗರದ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೆರಿಸುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ.

Continue Reading

Mysore

ಬೆಟ್ಟದಪುರ, ಕುಶಾಲನಗರ ರಸ್ತೆ ಗುಂಡಿಗಳನ್ನು ಮುಚ್ಚಿಸುವಂತೆ ಆಗ್ರಹ

Published

on

ಬೆಟ್ಟದಪುರ ಮತ್ತು ಕುಶಾಲನಗರ ರಸ್ತೆಯ ಗುಂಡಿಗಳನ್ನು ಮುಚ್ಚಿಸಲು ಪಿರಿಯಾಪಟ್ಟಣ ಶಾಸಕರು ಮತ್ತು ಕರ್ನಾಟಕ ರಾಜ್ಯದ ಪಶು ಸಂಗೋಪನ ಸಚಿವರಾದ ಕೆ.ವೆಂಕಟೇಶ್ ರವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ, ಮೈಸೂರು ಮತ್ತು ಕೊಡಗು ಜಿಲ್ಲಾ ಸಂಚಾಲಕ ಡಾ.ಅರುಣ್ ಕುಮಾರ್ ಜಿಲ್ಲಾಧ್ಯಕ್ಷರಾದ ಲೋಕೇಶ್, ತಾಲೂಕು ಅಧ್ಯಕ್ಷರಾದ ಸುಂದರೇ ಗೌಡ ಆಗ್ರಹ.

ಹಲವು ತಿಂಗಳುಗಳಿಂದ ಬೆಟ್ಟದಪುರದಿಂದ ಕುಶಲನಗರಕ್ಕೆ ತೆರಳುವ ಮಾರ್ಗಗಳಾದ ರಾಗಿ ಆಲದ ಮರ, ಚಿಕ್ಕ ನೆರಳೆ, ಹಸುವಿನ ಕಾವಲ್, ಆನಂದನಗರ, ಆವರ್ತಿ ರಸ್ತೆಯು ಸಂಪೂರ್ಣ ಗುಂಡಿ ಬಿದ್ದಿದ್ದು ಇದರ ಸ್ಥಿತಿ ಹೇಳತೀರದು, ಸಾರ್ವಜನಿಕರು ಬೈಕು ಮತ್ತು ಕಾರುಗಳಲ್ಲಿ ಓಡಾಡಲು ದಿನನಿತ್ಯ ಸಂಕಟ ಪಡುವಂತಾಗಿದೆ.

ಕಳೆದ ದಿನಗಳಲ್ಲಿ ಅತಿ ಹೆಚ್ಚು ಮಳೆಯಾದ ಸಂದರ್ಭದಲ್ಲಿ ಗುಂಡಿಗಳಲ್ಲಿ ನೀರು ತುಂಬಿಕೊಂಡು ರಸ್ತೆಯೇ ಕಾಣಿಸುವುದಿಲ್ಲ
ಬೈಕ್ ಸವರಾರರು ಬಿದ್ದು ಅನಾಹುತಗಳಾದರೆ ಇದರ ಹೊಣೆ ಯಾರು?

ಸಾರ್ವಜನಿಕರಿಗೆ ಓಡಾಡಲು ತುಂಬಾ ಕಷ್ಟದ ಪರಿಸ್ಥಿತಿ ಎದುರಾಗುತ್ತಿದೆ. ಈ ರಸ್ತೆಯ ಮಾರ್ಗದಲ್ಲಿ ಕಲ್ಲಿನ ಕ್ವಾರೇ ಗಳಿದ್ದು ದಿನನಿತ್ಯ ಡಸ್ಟ್ ಮತ್ತು ಕಲ್ಲುಗಳನ್ನು ತುಂಬುಕೊಂಡು ಈ ರಸ್ತೆಯಲ್ಲಿ ಅತಿ ಹೆಚ್ಚು ಲಾರಿಗಳು ಸಂಚರಿಸುತ್ತವೆ ಇದರಿಂದಲೂ ರಸ್ತೆಯ ಹಾಳಾಗಿದ್ದು ಇದಕ್ಕೆ ಸಚಿವರು ಕಡಿವಾಣ ಹಾಕಬೇಕಾಗಿದೆ.

ಈ ರಸ್ತೆಯು ಕುಶಲನಗರ ಕ್ಕೆ ತಲುಪುವ ಮುಖ್ಯ ರಸ್ತೆಯಾಗಿದ್ದು ರೈತರು ಸಾರ್ವಜನಿಕರು ದಿನನಿತ್ಯ ಓಡಾಡುವಂತಹ ರಸ್ತೆಆಗಿದೆ
ಈಗಾಗಲೇ ಹಲವಾರು ಬೈಕ್ ಸವಾರರು ಬಿದ್ದು ಕೈಕಾಲು ಗಳನ್ನ ಮುರಿದು ಕೊಂಡಿದ್ದಾರೆ

ಅದರಿಂದ ರೈತರಿಗೆ,ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡುವ ದೃಷ್ಟಿಯಿಂದ ಸಚಿವರು ಬೇಗ ಸ್ಪಂದನೆ ಮಾಡಿ ತಕ್ಷಣ ಅಧಿಕಾರಿಗಳಿಗೆ ಹೇಳಿ ಗುಂಡಿಗಳನ್ನು ಮುಚ್ಚಿಸಬೇಕು ಇಲ್ಲವಾದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪಿರಿಯಾಪಟ್ಟಣದ ಸಚಿವರ ಕಚೇರಿಯಲ್ಲಿ ಪ್ರತಿಭಟನೆ ಮಾಡ ಬೇಕಾಗುತ್ತದೆ ಎಂದು ಮೈಸೂರು ಮತ್ತು ಕೊಡಗು ಜಿಲ್ಲಾ ಸಂಚಾಲಕ ಡಾ.ಅರುಣ್ ಕುಮಾರ್ ಹೇಳಿದ್ದಾರೆ.

Continue Reading

Trending

error: Content is protected !!