Connect with us

Kodagu

ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕುಶಾಲನಗರದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ನೇಮಕ

Published

on

ಕುಶಾಲನಗರ: ಕುಶಾಲನಗರದ ಮೂಲದ ಹಿರಿಯ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ಅವರನ್ನು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.


ಕುಶಾಲನಗರದ ಪ್ರಮುಖ ಉದ್ಯಮಿ ಎಸ್.ಕೆ. ಸತೀಶ್ ಅವರ ಪುತ್ರರಾಗಿರುವ ನಕುಲ್ ಅವರು ಕೇಂದ್ರ ವಿತ್ತ ಸಚಿವರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅನುಭವ ಹೊಂದಿದ್ದಾರೆ. ಕೇಂದ್ರದಲ್ಲಿ ನೀತಿ ನಿರೂಪಣೆ ಮತ್ತು ಆರ್ಥಿಕ ವಿಚಾರಗಳಲ್ಲಿ ನಿಕಟವಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಇದಕ್ಕೂ ಮೊದಲು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ನಕುಲ್ ಅವರು ಪಾರದರ್ಶಕ ಆಡಳಿತ ಮತ್ತು ಜನಪರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ದಕ್ಷತೆಗೆ ಹೆಸರಾಗಿದ್ದರು. ಅವರ ಕಾರ್ಯವೈಖರಿ ಮತ್ತು ಆಡಳಿತ ಸಾಮರ್ಥ್ಯವನ್ನು ಗಮನಿಸಿಯೇ ಮುಖ್ಯಮಂತ್ರಿಗಳು ಈ ಪ್ರಮುಖ ಜವಾಬ್ದಾರಿಯನ್ನು ವಹಿಸಿದ್ದಾರೆ.

Continue Reading

Kodagu

ಇಂದಿನಿಂದ ಪುಷ್ಯ ಮಳೆ : ಉತ್ತಮ ಮಳೆ ನಿರೀಕ್ಷೆಯಲ್ಲಿ ಜಿಲ್ಲೆಯ ರೈತರು

Published

on

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 18.34 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.94 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 757.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1806.10 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 43.73 ಮಿ.ಮೀ. ಕಳೆದ ವರ್ಷ ಇದೇ ದಿನ 33.05 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1113.85 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2729.85 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 764.82 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1683.85 ಮಿ.ಮೀ. ಮಳೆಯಾಗಿತ್ತು.ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.35 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 12.95 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 781.06 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1732.46 ಮಿ.ಮೀ. ಮಳೆಯಾಗಿತ್ತು.


ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 799.73 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1960.22 ಮಿ.ಮೀ. ಮಳೆಯಾಗಿತ್ತು.ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 16.40 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 330.34 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 924.09 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ 27, ನಾಪೋಕ್ಲು 26.20, ಸಂಪಾಜೆ 63.50, ಭಾಗಮಂಡಲ 58.20, ವಿರಾಜಪೇಟೆ 18.80, ಅಮ್ಮತ್ತಿ 14, ಹುದಿಕೇರಿ 12.20, ಶ್ರೀಮಂಗಲ 11.20, ಪೊನ್ನಂಪೇಟೆ 15, ಬಾಳೆಲೆ 11, ಸೋಮವಾರಪೇಟೆ 21.20, ಶನಿವಾರಸಂತೆ 4, ಶಾಂತಳ್ಳಿ 30, ಕುಶಾಲನಗರ 0.80, ಸುಂಟಿಕೊಪ್ಪ 10 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.65 ಅಡಿಗಳು. ಕಳೆದ ವರ್ಷ ಇದೇ ದಿನ 2857.27 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 4.80 ಮಿ.ಮೀ., ಕಳೆದ ವರ್ಷ ಇದೇ ದಿನ 3.60 ಮಿ.ಮೀ., ಇಂದಿನ ನೀರಿನ ಒಳಹರಿವು 3898 ಕ್ಯುಸೆಕ್, ಕಳೆದ ವರ್ಷ ಇದೇ ದಿನ 5689 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 180 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 3833 ಕ್ಯುಸೆಕ್. ನಾಲೆಗೆ 500 ಕ್ಯುಸೆಕ್.

Continue Reading

Kodagu

“ಭಾಗಮಂಡಲ ಕಾಮಗಾರಿಗೆ ₹3 ಕೋಟಿ: ಪೊನ್ನಣ್ಣ ಕೋರಿಕೆಗೆ ಅನುದಾನ”

Published

on

ಭಾಗಮಂಡಲ : ಕ್ಷಿಣ ಭಾರತದ ಜೀವನದಿ ಎಂದೇ ಖ್ಯಾತವಾಗಿರುವ ಕಾವೇರಿಯ ಸನ್ನಿಧಿ ಭಾಗಮಂಡಲದ ಮೇಲ್ಸೇತುವೆ ಹಾಗೂ ಸುತ್ತಮುತ್ತಲಿನ ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ನವರ ಕೋರಿಕೆ ಮೇರೆಗೆ ಕಾವೇರಿ ನೀರಾವರಿ ನಿಗಮದಿಂದ 3 ಕೋಟಿ ರೂಗಳ ಬರಪೂರ ಅನುದಾನ ಬಿಡುಗಡೆಯಾಗಿದ್ದು ಟೆಂಡರ್ ಪ್ರಕೃಯೆ ಪೂರ್ಣಗೊಂಡು ಕಾಮಗಾರಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ಕಾವೇರಿ ನೀರಾವರಿ ನಿಗಮದಿಂದ ಮಾಹಿತಿ ಲಭ್ಯವಾಗಿದೆ.

ಮೇಲ್ಸೇತುವೆ ಆವರಣದ ಸುಧಾರಣೆಗಳು,ನೀರು ಹರಿಯುವ ಪೈಪ್ ಗಳ ಸುಧಾರಣೆ,ಮೇಲ್ಸೇತುವೆ ಕೆಳಗೆ ಕಾಂಕ್ರೀಟ್ ಕಾಮಗಾರಿ,ಕನ್ನಿಕೆ ನದಿಗೆ ಪಾದಚಾರಿ ಸೇತುವೆ,ಕಾವೇರಿ ನದಿಗೆ ಪಾದಚಾರಿ ಸೇತುವೆ ಕಾಮಗಾರಿಗಳು ಉಲ್ಲೇಖಿತ ಅನುದಾನದಲ್ಲಿ ನಡೆಯಲಿದ್ದು ಬೆಂಗಳೂರಿನ ಪ್ರಥಮ ದರ್ಜೆ ಗುತ್ತಿಗೆದಾರ ಕೆ.ರೋಹಿತ್ ರವರು ಗುತ್ತಿಗೆ ಪಡೆದಿದ್ದು ,2026 ರ ಅಕ್ಟೋಬರ್ ಅಂತ್ಯದ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ನಿಗಮದ ಆದೇಶದಲ್ಲಿ ಸೂಚಿಸಲಾಗಿದೆ.

Continue Reading

Kodagu

ಎಐ ಮೂಲಕ ಗುಣಾತ್ಮಕ ಶಿಕ್ಷಣ

Published

on

ಸೋಮವಾರಪೇಟೆ: ಕೃತಕ ಬುದ್ದಿಮತ್ತೆಯ ಬಳಕೆಯಿಂದ ಮಕ್ಕಳು ತಮ್ಮ ಕಲಿಕಾ ಮಟ್ಟವನ್ನು ಸುಧಾರಿಸಿಕೊಳ್ಳುವುದರೊಂದಿಗೆ ತಮ್ಮ ವೃತ್ತಿ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ಉದ್ಯಮಿ ಗಿರೀಶ್ ಮಲ್ಲಪ್ಪ ಅಭಿಪ್ರಾಯಿಸಿದರು.ತಾಲೂಕಿನ ನೇರುಗಳಲೆ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ತಾನು ಕಲಿತ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸತ್ಪ್ರಜೆಗಳಾಗಬೇಕೆಂಬ ಉದ್ದೇಶದಿಂದ ೫ ಲಕ್ಷ ರೂ.ಗಳ ವೆಚ್ಚದಲ್ಲಿ ಎಐ ಗೆ ಸಂಬಂದಿಸಿದ ಮೊಬೈಲ್ ಹಾಗೂ ವೆಬ್ ಆಪ್ನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಶಾಲಾ ಮಕ್ಕಳು ಇನ್ನು ಮುಂದೆ ಎಐ ಮೂಲಕ ಗುಣಾತ್ಮಕ ಶಿಕ್ಷಣವನ್ನು ಪಡೆಯಬೇಕೆಂದು ಶುಭ ಹಾರೈಸಿದರು. ವಿದ್ಯಾರ್ಥಿಗಳು ಪ್ರತಿ ವಿಷಯದ ಸಾಕಷ್ಟು ಅಂಶಗಳನ್ನು ಕಲಿಯಲು ಅವಕಾಶವಿದ್ದು ಪ್ರತಿಯೋರ್ವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು.


ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಮಾತನಾಡಿ, ಶಿಕ್ಷಕರು ಕೂಡ ಎಲ್ಬಿಎ ಹಾಗೂ ಘಟಕ ಪರೀಕ್ಷೆಗಳನ್ನು ತರಗತಿಗಳಲ್ಲಿ ಅಯೋಜಿಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿ ಅಲ್ಲೇ ಮೌಲ್ಯಮಾಪನ ಮಾಡಲು ಸಹಕಾರಿಯಾಗಿದೆ ಎಂದರು.

ಇದೇ ಸಂದರ್ಭ ದಾನಿಗಳಾದ ಗಿರೀಶ್ ಮಲ್ಲಪ್ಪ, ಅಭಿಯಂತರ ಸೈಜನ್ ಕೆ ಪೀಟರ್, ಗ್ರಾಮದ ಪ್ರಮುಖರಾದ ಕೆ.ಎನ್.ಪಾಪಯ್ಯ ಅವರನ್ನು ಸನ್ಮಾನಿಸಲಾಯಿತು. ಆಪ್ನ ಬಳಕೆ ಹಾಗೂ ಕಾರ್ಯನಿರ್ವಹಣೆ ಕುರಿತು ಉಪೇಂದ್ರ ಕುಮಾರ್ ಅವರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ, ಅಂಕುರಂ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಬೋಜೇಗೌಡ, ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಮತ್ತಿತರರು ಇದ್ದರು.

Continue Reading

Trending

error: Content is protected !!