Connect with us

State

ಪತ್ರಕರ್ತ ಪ್ರಭುಲಿಂಗ ನೀಲೂರೆ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Published

on

ಬೆಂಗಳೂರು: ವಿಜಯ ಕರ್ನಾಟಕ ಉಪ ಸಂಪಾದಕರಾಗಿ ಕಲಬುರ್ಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಭುಲಿಂಗ ನೀಲೂರೆ(52) ಅವರು ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರಿಯರು ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಉಷಾಕಿರಣ, ವಿಜಯವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸದ್ಯ ವಿಜಯಕರ್ನಾಟಕ ಪತ್ರಿಕೆಯಲ್ಲಿದ್ದರು. ಕಲಬುರ್ಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಕೆಯುಡಬ್ಲೂೃಜೆ ಸಂತಾಪ:

ಕ್ರೀಯಾಶೀಲ ಪತ್ರಕರ್ತರಾಗಿದ್ದ ಪ್ರಭುಲಿಂಗ ನೀಲೂರೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂೃಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು, ಸಾಹಿತಿ, ಸಂಘಟಕನನ್ನು ಕಳೆದುಕೊಂಡಂತಾಗಿದೆ ಎಂದು ಶೋಕಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ತಗಡೂರು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Continue Reading

Special

ಗೃಹಲಕ್ಷ್ಮಿ ಯೋಜನೆಯಲ್ಲಿ 1.04 ಲಕ್ಷ ಅನರ್ಹ ಫಲಾನುಭವಿಗಳ ಪತ್ತೆ: ಸರ್ಕಾರದಿಂದ ಪರಿಶೀಲನೆ!

Published

on

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹರಿಗೆ ಹಣ ಪಾವತಿಯಾಗಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸುಮಾರು 1.04 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲು ಸರ್ಕಾರ ಕ್ರಮ ಕೈಗೊಂಡಿದೆ. ಯೋಜನೆಯ ದುರುಪಯೋಗದಿಂದ ಸುಮಾರು ₹100 ಕೋಟಿ ಸಾರ್ವಜನಿಕ ಹಣ ಅನರ್ಹ ಖಾತೆಗಳಿಗೆ ಜಮೆಯಾಗಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಕೆ ಪರಿಶೀಲನೆ?
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಆದೇಶಿಸಿದೆ. ಮೃತ ವ್ಯಕ್ತಿಗಳ ಹೆಸರಿನಲ್ಲಿ, ಅರ್ಹತೆ ಕಳೆದುಕೊಂಡವರ ಹೆಸರಿನಲ್ಲಿ ಅಥವಾ ತಪ್ಪು ದಾಖಲೆಗಳ ಆಧಾರದ ಮೇಲೆ ಕೆಲವರು ಯೋಜನೆಯ ಪ್ರಯೋಜನ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪರಿಶೀಲನೆ ನಡೆಸಲಾಗುತ್ತಿದೆ.

ಈಗಾಗಲೇ ನಡೆದ ಕ್ರಮಗಳು:
ಹಿಂದೆಯೂ ಸರ್ಕಾರ ವಿವಿಧ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಅನರ್ಹ ಫಲಾನುಭವಿಗಳನ್ನು ಪತ್ತೆಹಚ್ಚಿತ್ತು. ಕೆಲವು ಸಂದರ್ಭಗಳಲ್ಲಿ ಮೃತ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗಿರುವುದು ಕಂಡುಬಂದಿದ್ದು, ಆ ಹಣವನ್ನು ವಾಪಸ್ ಪಡೆಯುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳು ಮಾಸಿಕ ಪರಿಶೀಲನೆ ವ್ಯವಸ್ಥೆಯನ್ನು ಬಲಪಡಿಸಿದ್ದಾರೆ.

ಅರ್ಹ ಫಲಾನುಭವಿಗಳಿಗೆ ಯಾವುದೇ ತೊಂದರೆ ಇಲ್ಲ:
ಸರ್ಕಾರ ಸ್ಪಷ್ಟಪಡಿಸಿರುವಂತೆ, ಈ ಕ್ರಮದ ಉದ್ದೇಶ ಯೋಜನೆಯ ಸೌಲಭ್ಯವನ್ನು ಕೇವಲ ಅರ್ಹ ಮಹಿಳೆಯರಿಗೆ ತಲುಪಿಸುವುದಾಗಿದೆ. ನಿಜವಾದ ಫಲಾನುಭವಿಗಳ ಪಾವತಿಗೆ ಯಾವುದೇ ಅಡ್ಡಿಯಾಗುವುದಿಲ್ಲ. ಅರ್ಹತೆ ಹೊಂದಿರುವ ಮಹಿಳೆಯರು ತಮ್ಮ ದಾಖಲೆಗಳು ಸರಿಯಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಯೋಜನೆಯ ಪಾರದರ್ಶಕತೆಗೆ ಒತ್ತು:
ಸರ್ಕಾರ ವಿವಿಧ ಇಲಾಖೆಗಳ ಮಾಹಿತಿಯನ್ನು ಒಟ್ಟುಗೂಡಿಸಿ ಏಕೀಕೃತ ಡೇಟಾಬೇಸ್ ನಿರ್ಮಿಸಲು ಯೋಜಿಸಿದೆ. ಇದರ ಮೂಲಕ ಫಲಾನುಭವಿಗಳ ಮಾಹಿತಿ ಪರಿಶೀಲನೆ ಸುಲಭವಾಗಲಿದ್ದು, ಭವಿಷ್ಯದಲ್ಲಿ ಅನರ್ಹರಿಗೆ ಸೌಲಭ್ಯ ಸಿಗುವುದನ್ನು ತಡೆಯಲು ನೆರವಾಗಲಿದೆ.

ಒಟ್ಟಾರೆ, ಗೃಹಲಕ್ಷ್ಮಿ ಯೋಜನೆಯ ಪಾರದರ್ಶಕತೆ ಮತ್ತು ಸಾರ್ವಜನಿಕ ಹಣದ ಸಮರ್ಪಕ ಬಳಕೆಯನ್ನು ಖಚಿತಪಡಿಸಲು ಸರ್ಕಾರ ಈ ಮಹತ್ವದ ಪರಿಶೀಲನಾ ಅಭಿಯಾನವನ್ನು ಆರಂಭಿಸಿದೆ.

Continue Reading

Politics

ಕಾಂಗ್ರೆಸ್ ಹೈಕಮಾಂಡ್ ಸಿಎಂ ಬದಲಾವಣೆಗೆ ನಿರ್ಧಾರ: ವಿಜಯೇಂದ್ರ ವ್ಯಂಗ್ಯ

Published

on

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಂಡಿದೆ ಎಂದು ವ್ಯಂಗ್ಯವಾಡಿದರು.

ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, “ಯಾರು ಸಿಎಂ ಆಗುತ್ತಾರೆ ಅನ್ನೋದು ಮುಖ್ಯವಲ್ಲ. ಸಿಎಂ ಸಿದ್ದರಾಮಯ್ಯ ಅವರು 10 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯವನ್ನು ಕಾಂಗ್ರೆಸ್ ಹೈಕಮಾಂಡ್ ಸ್ವತಃ ಒಪ್ಪಿಕೊಂಡಿದೆ. ನಿನ್ನೆ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರ ಮಾಡಿದೆ. ಆಂತರಿಕ ಕಚ್ಚಾಟದಿಂದ ಆಡಳಿತ ಸಂಪೂರ್ಣ ಕುಸಿದಿದೆ” ಎಂದು ಆರೋಪಿಸಿದರು.

ಇನ್ನೂ ಉಪಚುನಾವಣೆ ಫಲಿತಾಂಶಗಳನ್ನು ಸರ್ಕಾರದ ಸಾಧನೆಯ ಮಾನದಂಡವೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದ ಅವರು, “ಉಪಚುನಾವಣೆಯಲ್ಲಿ ಗೆದ್ದರೂ ಸಿಎಂ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಶೀಘ್ರದಲ್ಲೇ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ ಇದೆ” ಎಂದು ಹೇಳಿದರು.

ವಿಜಯೇಂದ್ರ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Politics

ಸಿಎಂ ಬದಲಾವಣೆ ಕುರಿತು ಸುರ್ಜೇವಾಲ ಸ್ಪಷ್ಟನೆ

Published

on

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಡೆಯುತ್ತಿರುವ ಊಹಾಪೋಹಗಳಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಪ್ರ   ಅವರು ಹೇಳಿದಂತೆ, ಸದ್ಯಕ್ಕೆ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಮತ್ತು ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ. ನಿರ್ಧಾರವಾದರೆ ಅದನ್ನು ಅಧಿಕೃತವಾಗಿ ತಿಳಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಈ ಹಂತದಲ್ಲಿ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂದು ತಿಳಿಸಿರುವ ಅವರು, ಮುಖ್ಯಮಂತ್ರಿ ತಮ್ಮ ಎರಡನೇ ಅವಧಿಯಲ್ಲಿ ಮುಂದುವರೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಹಲವು ಮುಖ್ಯಮಂತ್ರಿಗಳ ಜೊತೆ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ ಎಂದೂ ಅವರು ಹೇಳಿದ್ದಾರೆ.

ಒಟ್ಟಿನಲ್ಲಿ, ಸಿಎಂ ಬದಲಾವಣೆ ಕುರಿತ ಚರ್ಚೆಗಳು ಕೇವಲ ಊಹಾಪೋಹಗಳಾಗಿದ್ದು, ಈ ಕ್ಷಣದಲ್ಲಿ ಯಾವುದೇ ಬದಲಾವಣೆ ನಿರ್ಧಾರವಾಗಿಲ್ಲ ಎಂದು ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.

Continue Reading

Trending

error: Content is protected !!