State
ಕೆ.ವಿಕ್ರಮ್ ರಾವ್ ಅವರಿಗೆ ಕೆಯುಡಬ್ಲ್ಯೂಜೆ ನುಡಿನಮನ

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ, ಕ್ರಿಯಾಶೀಲ ಸಂಘಟಕರಾಗಿ ಸೇವೆ ಸಲ್ಲಿಸಿದ್ದ ಕೆ.ವಿಕ್ರಮರಾವ್ ಅವರಿಗೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಬೆಂಗಳೂರು ಘಟಕದ ಸತ್ಯನಾರಾಯಣ, ನರೇಂದ್ರ ಪಾರಿಕಟ್, ದೇವರಾಜ್, ಶರಣು, ಹಿರಿಯ ಪತ್ರಕರ್ತರಾದ ರಾಯಚೂರು ವೆಂಕಟಸಿಂಗ್, ಚನ್ನಬಸವ, ಯಾದಗಿರಿ ಸಂಜೀವ ರಾವ್ ಕುಲಕರ್ಣಿ, ಸ್ತ್ರೀಜಾಗೃತಿ ಶೋಭಾ, ಶಶಿಕಲಾ, ಶಂಭುಲಿಂಗ ಮತ್ತಿತರರು ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
State
ರಾಜ್ಯ ಕಾನೂನು ಸುವ್ಯವಸ್ಥೆ ಬಗ್ಗೆ ವಿಡಿಯೋ ಸಂವಾದ ನಡೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಏರ್ಪಟ್ಟಿದ್ದು, ರಾಜ್ಯ ಹಾಗೂ ರಾಜ್ಯದ ಜನತೆಯ ಸುರಕ್ಷತೆಗಾಗಿ ಇಂದು ಸಿಎಂ ಸಿದ್ದರಾಮಯ್ಯ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ನಾಗರೀಕರ ರಕ್ಷಣಾ ಕಾರ್ಯಚಟುವಟಿಕೆಗಳ ಕುರಿತು ಇಂದು ರಾಜ್ಯದ ಹಿರಿಯ ಪೋಲಿಸ್ ಅಧಿಕಾರಿಗಳು, ಎಲ್ಲಾ ಮಹಾನಗರಗಳ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಸಲಹೆ ಸೂಚನೆಗಳನ್ನುನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು ಎಂದಿದ್ದಾರೆ.
State
ಈ ಬಾರಿ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: “ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ.15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮನವಿ ಮಾಡಿದ್ದಾರೆ.
“ನನ್ನ ಜನ್ಮದಿನದ ಹೆಸರಿನಲ್ಲಿ ಯಾರೊಬ್ಬರೂ ಸಂಭ್ರಮಾಚರಣೆ ಮಾಡಬಾರದು. ಅಂದು ನಾನು ಊರಿನಲ್ಲಿ ಇರುವುದಿಲ್ಲ. ಅಂದು ನನ್ನನ್ನು ಭೇಟಿ ಮಾಡಲು ಯಾರೂ ನನ್ನ ನಿವಾಸ, ಕಚೇರಿಗೆ ಬರುವುದು ಬೇಡ. ಯಾರೂ ಅನ್ಯತಾ ಭಾವಿಸಬಾರದು. ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು” ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ವಿನಂತಿ ಮಾಡಿದ್ದಾರೆ.
ಜನ್ಮದಿನದ ಶುಭ ಕೋರುವ ಫ್ಲೆಕ್ಸ್, ಬ್ಯಾನರ್ ಗಳನ್ನು ಹಾಕುವುದಾಗಲಿ, ಜಾಹೀರಾತುಗಳನ್ನು ನೀಡುವುದಾಗಲಿ ಮಾಡಬಾರದು ಎಂದು ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
“ದೇಶದ ಐಕ್ಯತೆ, ಸಾರ್ವಭೌಮತೆ ರಕ್ಷಣೆಗೆ ನಾವು ಯೋಧರ ಜತೆ ನಿಲ್ಲಬೇಕು. ಅವರು ಸುರಕ್ಷಿತವಾಗಿ ಈ ಹೋರಾಟವನ್ನು ಗೆದ್ದು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋಣ” ಎಂದು ತಿಳಿಸಿದ್ದಾರೆ.
State
ಭಾರತ-ಪಾಕ್ ಉದ್ವಿಗ್ನತೆ: ರಾಜ್ಯ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ: ಜಿ.ಪರಮೇಶ್ವರ್

ಬೆಂಗಳೂರು: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಬಿಗಿ ಭದ್ರತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದರಿಂದ ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮೇ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಯುದ್ಧದ ಪರಿಸ್ಥಿತಿ ಇರುವ ಕಾರಣ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ. ಈ ವೇಳೆ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಯಾವ ಸಂದರ್ಭದಲ್ಲಿ ಏನಾಗುತ್ತೋ ತಿಳಿದಿಲ್ಲ. ಹೀಗಾಗಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಕೋಸ್ಟಲ್ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ.
-
Kodagu7 hours ago
ಸಹೋದರರ ಮೇಲೆ ಗುಂಡಿನ ದಾಳಿ.
-
Kodagu5 hours ago
ಲಾಂಗ್ ತೋರಿಸಿ ಯುವಕರಿಗೆ ಬೆದರಿಕೆ : ಸಬ್ ಇನ್ಸ್ ಪೆಕ್ಟರ್ ಮತ್ತು ಎ.ಎಸ್.ಐ ಸಸ್ಪೆಂಡ್
-
Chamarajanagar6 hours ago
ಎನ್ಎಸ್ಎಸ್ ಸ್ಕೌಟ್ಸ್ ಅಂಡ್ ಗೈಡ್ಸ್ ಹಾಗೂ ಕ್ರೀಡಾ ಸಮಿತಿಗಳ ಸಮಾರೋಪ ಸಮಾರಂಭ
-
Mandya6 hours ago
ಮೇ.20 ರಂದು ಮನ್ ಮುಲ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ
-
Hassan3 hours ago
ಆಪರೇಷನ್ ಸಿಂಧೂರದಲ್ಲಿ ಮಡಿದವರಿಗೆ ಕದಂಬ ಸೈನ್ಯ ಕನ್ನಡ ಸಂಘಟನೆಯಿಂದ ಶ್ರದ್ಧಾಂಜಲಿ
-
Mandya3 hours ago
ಮೇ 26 ರಿಂದ 29 ರವರೆಗೆ ಜಿಲ್ಲೆಯಲ್ಲಿ ಉಪ ಲೋಕಾಯುಕ್ತರ ಕಾರ್ಯಕ್ರಮ: ಬಿ.ಸಿ. ಶಿವಾನಂದಮೂರ್ತಿ
-
Mysore2 hours ago
ಆಪರೇಷನ್ ಸಿಂಧೂರ ಮೂಲಕ ಮೃತರಿಗೆ ನ್ಯಾಯ ಕೊಡಲಾಗಿದೆ : ಸಂಸದ ಯದುವೀರ್
-
Kodagu2 hours ago
ಕೊಡಗು ಜಿಲ್ಲಾ ವಿಶೇಷ ಚೇತನರ ಸಂಘದ ಮಹಾಸಭೆ : ಪದಾಧಿಕಾರಿಗಳ ಆಯ್ಕೆ