Connect with us

National

ಲಡಾಖ್ ಗಡಿ ಸಂಘರ್ಷ: ಸಂಸತ್‌ನಲ್ಲಿ ಮನೋಜ್‌ರವರ ಅಪ್ರಕಟಿತ ಪುಸ್ತಕ ವಿಚಾರದ ಬಗ್ಗೆ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ

Published

on

ನವದೆಹಲಿ: ಲಡಾಖ್ ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ ನರವಾಣೆ  ಅವರ ಅಪ್ರಕಟಿತ ಪುಸ್ತಕ ವಿಚಾರವನ್ನು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ ಭಾರೀ ಗದ್ದಲವನ್ನು ಸೃಷ್ಟಿ ಮಾಡಿದೆ..

ಸಂಸತ್‌ನಲ್ಲಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ, 2019ರ ಡಿಸೆಂಬರ್‌ನಿಂದ ಏಪ್ರಿಲ್ 2022 ರವರೆಗೆ ಭಾರತದ ಸೇನಾ ಮುಖ್ಯಸ್ಥರಾಗಿ ಎಂ.ಎಂ. ನರವಾಣೆ ಅವರು ಸೇವೆ ಸಲ್ಲಿಸಿದ್ದಾರೆ. ಅವರ ಕುರಿತಾದ ಪುಸ್ತಕ ಪ್ರಕಟಿಸಲು ಕೇಂದ್ರ ಅನುಮೋದನೆ ನೀಡಿಲ್ಲ. 2020ರ ಭಾರತ-ಚೀನಾ ಗಡಿ ಘರ್ಷಣೆಯ ಸಮಯದಲ್ಲಿನ ಮಹತ್ವದ ಅಂಶಗಳು ಪುಸ್ತಕದಲ್ಲಿವೆ. ಚೀನಾ ಆಕ್ರಮಣ, ಉಪಟಳವು ಅದರಲ್ಲಿದೆ. ಇಂತಹ ಪುಸ್ತಕದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದೇ ವೇಳೆ ಮಧ್ಯಪ್ರವೇಶಿಸಿದ ರಾಜನಾಥ್ ಸಿಂಗ್, ಅಪ್ರಕಟಿತ ವಿಷಯ ಸದನದಲ್ಲಿ ಉಲ್ಲೇಖ ಸರಿಯಲ್ಲ ಎಂದು ಹೇಳಿದರು. ಅವರ ಮಾತು ಬೆಂಬಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಿಸಿದರು. ಔಪಚಾರಿಕವಾಗಿ ಪ್ರಕಟಿತ ವಿಷಯವನ್ನು ಪ್ರಸ್ತಾಪಿಸುವಂತೆ ಆಗ್ರಹಿಸಿದ್ದಾರೆ.

ಪತ್ರಿಕೆಗಳು ಹಾಗೂ ಮ್ಯಾಗಜಿನ್‌ಗಳು ಏನು ಬೇಕಾದರೂ ಪ್ರಕಟಿಸಬಹುದು. ಅಧಿಕೃತವಾಗಿ ಪ್ರಕಟವಾಗದ ಮೂಲಗಳನ್ನು ಸಂಸತ್ತಿನ ದಾಖಲೆಯ ಭಾಗವಾಗಲು ಅವಕಾಶ ಕೊಡಬಾರದು ಎಂದು ಹೇಳಿದರು. ಇದರಿಂದ ಸದನದಲ್ಲಿ ಗದ್ದಲ ಹೆಚ್ಚಾಯಿತು. ವಿರೋಧ ಪಕ್ಷದ ಸದಸ್ಯರು, ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಚರ್ಚೆಯನ್ನು ನಿಲ್ಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರ ಮಧ್ಯಪ್ರವೇಶವನ್ನು ಖಂಡನೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಆಕ್ಷೇಪಗಳಿಗೆ ಪ್ರತಿಕ್ರಿಯೆ ನೀಡಿದ ರಾಹುಲ್ ಗಾಂಧಿ ಅವರು, ಜನರಲ್ ನರವಾಣೆ ಅವರ ಪುಸ್ತಕದ ಆಧಾರದ ಮೇಲೆ ಮ್ಯಾಗಜಿನ್‌ನಲ್ಲಿ ಪ್ರಕಟವಾದ ವರದಿಯನ್ನು ತಾವು ಉಲ್ಲೇಖಿಸಿದ್ದಾಗಿ ಸ್ಪಷ್ಟನೆ ನೀಡಿದರು. ತಮ್ಮ ಉಲ್ಲೇಖವು ನಂಬಿಕಸ್ಥ ಮೂಲದ ಮೇರೆಗೆ ಇದ್ದು, ಆಡಳಿತ ಪಕ್ಷದ ಒಬ್ಬ ಸಂಸದರು ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಕಾರಣಕ್ಕೆ ಈ ವಿಷಯವನ್ನು ಪ್ರಸ್ತಾಪಿಸಬೇಕಾಯಿತು ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ವೇಳೆ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಸಹ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದರು. ಚೀನಾ ಸಂಬಂಧಿತ ವಿಷಯ ಅತ್ಯಂತ ಸೂಕ್ಷ್ಮವಾದದ್ದು. ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿಗೆ ಸಂಬಂಧಿಸಿದ ವಿಷಯಗಳ ಮೇಲೆ ಪ್ರತಿಪಕ್ಷ ನಾಯಕನಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ನಂತರ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಗ್ವಾದ ತೀವ್ರಗೊಂಡು, ಘೋಷಣೆಗಳು ಮತ್ತು ಅಡ್ಡಿಪಡಿಸುವಿಕೆಗಳಿಂದ ಸದನದಲ್ಲಿ ಕೆಲಕಾಲ ಗದ್ದಲವುಂಟಾಯಿತು. ಈ ಎಲ್ಲದರ ನಡುವೆಯೂ ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಮುಂದುವರಿಸಿದ್ದಾರೆ.

Continue Reading

National

ಅಯೋಧ್ಯೆ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ರಾಜಕೀಯ ಮಾಡದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ

Published

on

ನವದೆಹಲಿ: ಅಯೋಧ್ಯೆಯ ರಾಮ ಮಂದಿರಕ್ಕೆ ಸಂಬಂಧಿಸಿದ ದೇಣಿಗೆ ಕಳ್ಳತನ ಆರೋಪದ ತನಿಖೆಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐಗೆ ವಹಿಸಬೇಕೆಂದು ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ರಾಜಕೀಯಗೊಳಿಸದಂತೆ ಎಚ್ಚರಿಕೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ್ ಅವರ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸ್ಥಿತಿಗತಿ ವರದಿ ಸಲ್ಲಿಸಿದ್ದು, ಪ್ರಕರಣದಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ವರದಿಯನ್ನು ಪರಿಶೀಲಿಸಿದ ಪೀಠವು ತನಿಖೆಯ ಸ್ವರೂಪದ ಬಗ್ಗೆ ಪ್ರಶ್ನಿಸಿತು. ಆರೋಪಗಳ ಸತ್ಯಾಸತ್ಯತೆ ಪತ್ತೆಹಚ್ಚಲು ಎಸ್‌ಐಟಿ ತನಿಖೆ ನಡೆಸಲಾಗಿದ್ದು, ಪ್ರಸ್ತುತ ಪೊಲೀಸ್ ತನಿಖೆ ಮುಂದುವರಿದಿದೆ ಎಂದು ಮೆಹ್ತಾ ಹೇಳಿದರು.

ಸುಪ್ರೀಂ ಕೋರ್ಟ್ ಎಸ್‌ಐಟಿ ತನಿಖೆಯನ್ನು ಮುಂದುವರಿಸಬಹುದೆಂದು ಸೂಚಿಸಿ, ಅದನ್ನು ಹಿರಿಯ ಅಧಿಕಾರಿಗಳನ್ನು ಒಳಗೊಂಡಂತೆ ಪುನರ್‌ರಚಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಸ್ಥಿತಿಗತಿ ವರದಿಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಕೆಲವು ದಿನಗಳ ಕಾಲಾವಕಾಶ ಬೇಕಿದ್ದು, ಮುಂದಿನ ವಿಚಾರಣೆಯನ್ನು ಜುಲೈ 27ರಂದು ನಡೆಸಲಾಗುವುದು ಎಂದು ಪೀಠ ತಿಳಿಸಿದೆ.

Continue Reading

National

ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

Published

on

ನವದೆಹಲಿ,ಜು.: ಸಂಸತ್ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಲಿದೆ. ಆಗಸ್ಟ್ 13 ರವರೆಗೆ ಒಟ್ಟು 19 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಹಲವು ಪ್ರಮುಖ ಮಸೂದೆಗಳ ಮಂಡನೆಯಾಗಲಿದೆ.


ದೇಶದ ವಿವಿಧ ವಿಷಯಗಳ ಕುರಿತು ಆಡಳಿತಾರೂಢ ಎನ್‌ಡಿಎ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ವಾಗ್ವಾದಗಳು ನಡೆಯುವ ಸಾಧ್ಯತೆಯಿದೆ. ಅಧಿವೇಶನ ಶುರುವಾಗುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದಿನಿಂದ ಆಗಸ್ಟ್ 13 ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಪರಿಶೀಲನೆಗಾಗಿ ಎಂಟು ಪ್ರಮುಖ ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರೆನ್ ರಿಜಿಜು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.

ಅಯೋಧ್ಯೆ ರಾಮಮಂದಿರದಲ್ಲಿನ ದೇಣಿಗೆ ಕಳ್ಳತನದ ಆರೋಪ, ನೀಟ್-ಯುಜಿ (NEET-UG) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಎಥೆನಾಲ್ ಮಿಶ್ರಣಕ್ಕೆ ಸಂಬಂಧಿಸಿದ ವಿವಾದಗಳು ಅಧಿವೇಶನದ ಆರಂಭದಿಂದಲೇ ಪ್ರಮುಖವಾಗಿ ಚರ್ಚೆಯಾಗುವ ನಿರೀಕ್ಷೆಯಿದೆ.

ಚರ್ಚೆಗೆ ನಿಗದಿಯಾಗಿರುವ ಪ್ರಮುಖ ಮಸೂದೆಗಳಲ್ಲಿ ‘ವಿದೇಶಿ ಕೊಡುಗೆ (ನಿಯಂತ್ರಣ) ತಿದ್ದುಪಡಿ ಮಸೂದೆ, 2026’ ಸೇರಿದ್ದು, ಇದರ ಚರ್ಚೆಗೆ ನಾಲ್ಕು ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಹಾಗೆಯೇ, ‘ಆದಾಯ ತೆರಿಗೆ (ತಿದ್ದುಪಡಿ) ಮಸೂದೆ, 2026’ ರ ಕುರಿತು ಲೋಕಸಭೆಯಲ್ಲಿ ಮೂರು ಗಂಟೆಗಳ ಕಾಲ ಚರ್ಚೆ ನಡೆಯಲಿದೆ.

 

Continue Reading

National

ಮೆಸ್ಸಿಯ ಕೊನೆಯ ವಿಶ್ವಕಪ್ ಕನಸು ಭಗ್ನ’ : ಸ್ಪೇನ್‌ಗೆ ವಿಶ್ವಕಪ್, ಅರ್ಜೆಂಟೀನಾ ಸೋಲು

Published

on

ನ್ಯೂಯಾರ್ಕ್: ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿಯ ಕೊನೆಯ ವಿಶ್ವಕಪ್ ಗೆಲ್ಲುವ ಕನಸು ಈಡೇರಲಿಲ್ಲ. 2026ರ ಫಿಫಾ ವಿಶ್ವಕಪ್ ಫೈನಲ್‌ನಲ್ಲಿ ಸ್ಪೇನ್ ವಿರುದ್ಧ ಅರ್ಜೆಂಟೀನಾ 1-0 ಗೋಲುಗಳ ಅಂತರದಲ್ಲಿ ಸೋತು, ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ವಿಫಲವಾಯಿತು. ಹೆಚ್ಚುವರಿ ಸಮಯದ 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ಬಾರಿಸಿದ ಏಕೈಕ ಗೋಲು ಸ್ಪೇನ್‌ಗೆ ವಿಶ್ವಕಪ್ ಕಿರೀಟ ತಂದುಕೊಟ್ಟಿತು.

ಪಂದ್ಯದ ಆರಂಭದಿಂದಲೇ ಸ್ಪೇನ್ ಚೆಂಡಿನ ಮೇಲೆ ಹಿಡಿತ ಸಾಧಿಸಿ ಅರ್ಜೆಂಟೀನಾ ಮೇಲೆ ನಿರಂತರ ಒತ್ತಡ ಹೇರಿತು. ಮೆಸ್ಸಿ ನೇತೃತ್ವದ ಅರ್ಜೆಂಟೀನಾ ಕೆಲ ಅವಕಾಶಗಳನ್ನು ಸೃಷ್ಟಿಸಿದರೂ, ಸ್ಪೇನ್‌ನ ಸಂಘಟಿತ ರಕ್ಷಣೆಯನ್ನು ಭೇದಿಸಲು ಸಾಧ್ಯವಾಗಲಿಲ್ಲ. ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಸ್ ಹಲವು ಅದ್ಭುತ ಸೇವ್‌ಗಳನ್ನು ಮಾಡಿ ತಂಡವನ್ನು ಪಂದ್ಯದಲ್ಲಿ ಉಳಿಸಿದ್ದರು.

ನಿಗದಿತ 90 ನಿಮಿಷಗಳಲ್ಲಿ ಯಾವುದೇ ತಂಡ ಗೋಲು ದಾಖಲಿಸದ ಕಾರಣ ಪಂದ್ಯ ಹೆಚ್ಚುವರಿ ಸಮಯಕ್ಕೆ ಸಾಗಿತು. 106ನೇ ನಿಮಿಷದಲ್ಲಿ ಫೆರಾನ್ ಟೊರೆಸ್ ನಿರ್ಣಾಯಕ ಗೋಲು ಬಾರಿಸಿ ಸ್ಪೇನ್‌ಗೆ ಮುನ್ನಡೆ ತಂದುಕೊಟ್ಟರು. ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಸಮಬಲ ಸಾಧಿಸಲು ಹೋರಾಡಿದರೂ ಯಶಸ್ವಿಯಾಗಲಿಲ್ಲ.

ಈ ಗೆಲುವಿನೊಂದಿಗೆ ಸ್ಪೇನ್ 2010ರ ಬಳಿಕ ಎರಡನೇ ಬಾರಿ ಫಿಫಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮತ್ತೊಂದೆಡೆ, ಮೆಸ್ಸಿಗೆ ಇದು ವಿಶ್ವಕಪ್‌ನಲ್ಲಿ ಕೊನೆಯ ಪಂದ್ಯವಾಗುವ ಸಾಧ್ಯತೆ ಇದ್ದು, ಮತ್ತೊಮ್ಮೆ ಟ್ರೋಫಿ ಎತ್ತುವ ಅವರ ಕನಸು ಭಗ್ನಗೊಂಡಿತು.

Continue Reading

Trending

error: Content is protected !!