Chamarajanagar
ಚಿರತೆ ದಾಳಿ : ಬಾಲಕನಿಗೆ ಗಾಯ
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕ ಬಾಲಕನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಇಂದು ಸಂಭವಿಸಿದೆ.
ಚನ್ನಪಟ್ಟಣ ತಾಲೂಕಿನ ಭುವಳ್ಳಿ ಗ್ರಾಮದ ಶ್ರೇಯಸ್(8) ಚಿರತೆ ದಾಳಿಯಿಂದ ಗಾಯಗೊಂಡ ಬಾಲಕ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆಯ ಮೂಲಕ ತೆರಳುವುದು ವಾಡಿಕೆ. ಅದರಂತೆ ಪಾದಯಾತ್ರೆಯ ಮೂಲಕ ಪೊನ್ನಾಚಿ ಕ್ರಾಸ್ ನಿಂದ ತಲುಪಿ ನಂತರ ಮುಂದೆ ಅರಣ್ಯ ಪ್ರದೇಶದಲ್ಲಿ ತೆರಳುತ್ತಿದ್ದಾಗ ಬಾಲಕನೋರ್ವನ ಮೇಲೆ ಚಿರತೆ ದಾಳಿ ಮಾಡಿದೆ ಎಂದು ಪಾದಯಾತ್ರಿಕರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಘಟನೆ ಸ್ಥಳಕ್ಕೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡಿದ್ದ ಬಾಲಕನನ್ನು ಜೊತೆಯಲ್ಲಿದ್ದ ಭಕ್ತಾದಿಗಳು ಬಸ್ಸಿನ ಮೂಲಕ ಮಲೆ ಮಾದೇಶ್ವರ ಬೆಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕರಿಗೆ ಒಂದು ಬೃಹತ್ ಗಾತ್ರದ ಚಿರತೆ ಹಾಗೂ ಒಂದು ಚಿಕ್ಕ ಚಿರತೆ ಕಾಣಿಸಿಕೊಂಡಿದೆ. ಪಾದಯಾತ್ರೆಯ ಮೂಲಕ ತೆರಳುತ್ತಿರುವ ಭಕ್ತಾದಿಗಳು ಅರಣ್ಯ ಪ್ರದೇಶ ಮೂಲಕ ಪಾದಯಾತ್ರೆ ಮಾಡುವ ಬದಲು ಮುಖ್ಯ ರಸ್ತೆಯ ಮೂಲಕ ಪಾದಯಾತ್ರೆ ಮಾಡಿದರೆ ಸುರಕ್ಷತೆ ಇರಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ಲಕ್ಷಾಂತರ ಭಕ್ತಾದಿಗಳು ಅರಣ್ಯದಲ್ಲಿ ಪಾದಯಾತ್ರೆ ಮಾಡುತ್ತಾರೆಂಬ ಮಾಹಿತಿ ಇದ್ದರು ಇನ್ನು ಸಮರ್ಪಕವಾಗಿ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜಿಸದೆ ಇರುವುದರಿಂದ ಮತ್ತೊಮ್ಮೆ ಚಿರತೆ ದಾಳಿ ನಡೆಸಿದೆ ಎಂದು ಪ್ರಜ್ಞಾವಂತ ನಾಗರಿಕರು ಆರೋಪಿಸಿದ್ದಾರೆ. ಇನ್ನು ಮುಂದಾದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಹೆಚ್ಚಿನಗಸ್ತು ಮಾಡುವ ಮೂಲಕ ಭಕ್ತಾದಿಗಳಿಗೆ ಸುರಕ್ಷತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
Chamarajanagar
ಮುತ್ತಿಗೆ ಗ್ರಾಮದಲ್ಲಿ ಹಾವು ಪತ್ತೆ: ಸ್ನೇಕ್ ಚಾಂಪು ತಂಡದಿಂದ ಸುರಕ್ಷಿತವಾಗಿ ಹಿಡಿತ
ಚಾಮರಾಜನಗರ: ತಾಲೂಕಿನ ಮುತ್ತಿಗೆ ಗ್ರಾಮದ ಕೆಂಪೇಗೌಡ ಅವರ ಮನೆಯಲ್ಲಿ ಹಾವು ಕಾಣಿಸಿಕೊಂಡ ಘಟನೆ ಇಂದು ಸಂಭವಿಸಿದೆ.
ಮನೆಯೊಳಗೆ ಹಾವು ಇರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ತಕ್ಷಣ ಚಾಮರಾಜನಗರದ ಸ್ನೇಕ್ ಚಾಂಪು ಅವರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಸ್ನೇಕ್ ಚಾಂಪು ತಂಡದವರು ಸ್ಥಳಕ್ಕೆ ಧಾವಿಸಿ, ಹಾವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಲಾಯಿತು. ಈ ಕಾರ್ಯಾಚರಣೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಗೋ ಮಹದೇವಸ್ವಾಮಿ ಮಾತನಾಡಿ, ನಮ್ಮ ಗ್ರಾಮದೊಳಗೆ ಅಥವಾ ಸುತ್ತಮುತ್ತ ಎಲ್ಲಿಯಾದರೂ ಹಾವು ಕಂಡುಬಂದರೆ ಭಯಪಡದೇ ತಕ್ಷಣ ತಿಳಿಸಿ. ಹಾವುಗಳನ್ನು ಸುರಕ್ಷಿತವಾಗಿ ಹಿಡಿದು ಜನರ ಪ್ರಾಣ ರಕ್ಷಿಸುವುದು ನಮ್ಮ ಸಮಾಜ ಸೇವೆಯ ಭಾಗ ಎಂದು ತಿಳಿಸಿದರು.
Chamarajanagar
ಕೌಶಲ್ಯಾಧಾರಿತ ತರಬೇತಿಗೆ ಹೆಚ್ಚು ಆದ್ಯತೆ ನೀಡಿ: ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ
ಸಿಇಟಿ ಆನ್‌ಲೈನ್ ಉಚಿತ ತರಬೇತಿ, ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ
ಚಾಮರಾಜನಗರ: ಪ್ರಸ್ತುತ ದಿನಮಾನಗಳಲ್ಲಿ ಸಮಾಜದಲ್ಲಿ ಏನಾದರೂ, ಬದಲಾವಣೆ ಕಾಣುವಂತಾಗಿದ್ದರೆ ಅದು ಶಿಕ್ಷಣದಿಂದ ಮಾತ್ರ ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ಸಿಇಟಿ ಉಚಿತ ಆನ್‌ಲೈನ್ ತರಬೇತಿ ಹಾಗೂ ಎಂಎಸ್‌ಐಎಲ್ ವತಿಯಿಂದ ಸಿಇಟಿ ಪುಸ್ತಕ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಮ್ಮ ಕುಟುಂಬದಲ್ಲಿ ಸಹೋದರರು ಶಿಕ್ಷಣಕ್ಕೆ ಆದ್ಯತೆ ಕೊಡಲಿಲ್ಲ, ನಾನು ಮಾತ್ರ ಓದಲೇಬೇಕು ಎಂಬ ಹಠತೊಟ್ಟು, ಉನ್ನತ ಶಿಕ್ಷಣ ಪಡೆಯುವ ಮೂಲಕ ಇಂದು ಉನ್ನತಮಟ್ಟದಲ್ಲಿ ನಿಂತಿದ್ದೇನೆ. ಇದಕ್ಕೆಲ್ಲ ಶಿಕ್ಷಣ ಕಾರಣ ಎಂದರು. ಇಂದು ವೈದ್ಯಕೀಯ ಶಿಕ್ಷಣ, ಎಂಜಿನಿಯರಿಂಗ್ ಪ್ರವೇಶ ಪಡೆಯಬೇಕಾದರೆ ಸಿಇಟಿ. ನೀಟ್, ಜೆಇಇ ತರಬೇತಿ ಪಡೆಯಲೇಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಕೇವಲ ಶಿಕ್ಷಣ ಪಡೆದರೆ ಸಾಲದು, ವಿವಿಧ ಕೌಶಲ್ಯಾಧಾರಿತ ತರಬೇತಿ ಪಡೆಯಬೇಕು, ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾವಸಾಹತು ಪ್ರದೇ಼ಶ಼ದಲ್ಲಿ ವಿವಿಧ ಪ್ರತಿಷ್ಠಿತ ಕೈಗಾರಿಕೆಗಳು ಸ್ಥಾಪನೆಯಾಗಿದ್ದು, ತರಬೇತಿಗೆ ತಕ್ಕ ಉದ್ಯೋಗಪಡೆಯಬಹುದಾಗಿದೆ ಎಂದರು.

ಚೂಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಬಹುತೇಕ ವ್ಯಾಸಂಗ ಮಾಡುವವರು ಬಡವರ್ಗದ ವಿದ್ಯಾರ್ಥಿಗಳೇ ಆಗಿದ್ದಾರೆ, ಸರ್ಕಾರದಿಂದ ಸಿಗಬಹುದಾದ ಸೌಲಭ್ಯಗಳನ್ನು ಪಡೆದುಕೊಂಡು, ತಾವು ಅಂದುಕೊಂಡ ಗುರಿಮುಟ್ಟಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಜಯಕುಮಾರ್, ನಾರಾಯಣ, ಕೇಶವನ್, ನಿವೃತ್ತ ಪ್ರಾಂಶುಪಾಲ ಸೋಮಣ್ಣ, ಸಂಪನ್ಮೂಲವ್ಯಕ್ತಿಗಳಾದ ಮಾದೇಶ್, ದೀಪಕ್, ಮಲ್ಲಿಕಾರ್ಜುನ್, ಚೂಡಾ ಸದಸ್ಯ ರಾಜೇಂದ್ರ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎ.ಎಸ್.ಗುರುಸ್ವಾಮಿ ಹಾಗೂ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
Chamarajanagar
ಚಿರತೆ ದಾಳಿ: ಹಸು ಬಲಿ ಗ್ರಾಮಸ್ಥರಲ್ಲಿ ಆತಂಕ
ಚಾಮರಾಜನಗರ: ತಾಲೂಕಿನ ಇರಸವಾಡಿ ಗ್ರಾಮದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ಸಂಭವಿಸಿದೆ.
ಭಾನುವಾರ ತಡ ರಾತ್ರಿಯಲ್ಲಿ ಗ್ರಾಮದ ರಂಗಸ್ವಾಮಿ ಶೆಟ್ಟಿ ಅವರ ಕೊಟ್ಟಿಗೆಗೆ ನುಗ್ಗಿದ ಚಿರತೆ, ಹಸುವಿನ ಹಿಂದಿನ ಭಾಗವನ್ನು ಸಂಪೂರ್ಣವಾಗಿ ತಿಂದು ಬಲಿ ಪಡೆದಿದೆ.

ಬೆಳಗಿನ ಜಾವ ವಿಷಯ ತಿಳಿದು ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕ ಉಂಟಾಗಿದೆ. ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿಸಿದೆ.
ಚಿರತೆ ಮರುದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಗಸ್ತು ಹೆಚ್ಚಿಸಬೇಕು ಹಾಗೂ ಚಿರತೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
-
Mandya23 hours agoಕೆರೆ ಒತ್ತುವರಿ ತೆರವುಗೊಳಿಸದಿದ್ದರೆ ಶಿಸ್ತು ಕ್ರಮ: ಸಮಯ ನಿಗದಿಗೊಳಿಸಿ ಸೂಚನೆ ನೀಡಿದ ಡಿಸಿ ಡಾ.ಕುಮಾರ
-
Hassan21 hours agoರಾಷ್ಟ್ರೀಯ ಹೆದ್ದಾರಿ -75ರಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಲತಾಕುಮಾರಿ ಆದೇಶ
-
Mysore4 hours agoರಾಜ್ಯದಲ್ಲಿ ಯತೀಂದ್ರ ಸೇಲ್ಸ್ ಟ್ಯಾಕ್ಸ್ ಕಡ್ಡಾಯ: ಪ್ರತಾಪ್ ಸಿಂಹ ಆರೋಪ
-
Mandya21 hours agoಫೆ.13 ರಿಂದ 19 ರವರೆಗೆ ಪ್ರಜಾಪಿತ ಬ್ರಹ್ಮ ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ 90ನೇ ಮಹಾಶಿವರಾತ್ರಿ ಮಹೋತ್ಸವ
-
Mandya22 hours agoಜಿಲ್ಲೆಯ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಿ : ಮನೋಜ್ ಕುಮಾರ್ ಮೀನಾ
-
Mysore19 hours agoಇಲಾಖೆಗಳ ಸಮನ್ವಯದೊಂದಿಗೆ ಮಾಜಿ ಸೈನಿಕರ ಕುಂದುಕೊರತೆ ನಿವಾರಣೆ: ಜಿ.ಲಕ್ಷ್ಮೀಕಾಂತ್ ರೆಡ್ಡಿ
-
Special18 hours agoಸ್ತ್ರೀ ಶಕ್ತಿ ಪ್ಯಾಕೇಜ್: ಮಹಿಳೆಯರಿಗೆ ಭದ್ರತೆಯಿಲ್ಲದೇ 10 ಲಕ್ಷದವರೆಗೆ ಸಾಲ!
-
Mysore18 hours agoಸೋಲು ಗೆಲುವು ಸಾಮಾನ್ಯ, ಸಮನಾಗಿ ಸ್ವೀಕರಿಸಿ : ಕ್ರೀಡಾಪಟುಗಳಿಗೆ ಸಂಸದ ಸುನಿಲ್ ಬೋಸ್ ಕರೆ
