Chamarajanagar
ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆಯಲಿ :- ಸುತ್ತೂರು ಶ್ರೀ
ಯಳಂದೂರು :- ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಪಿಸಿಕೊಂಡು ಸಜ್ಜನರೊಂದಿಗೆ ಸಾರ್ಥಕ ಬದುಕನ್ನು ರೂಡಿಸಿಕೊಂಡು ಮಾನವೀಯ ಮೌಲ್ಯಗಳ ನೆಲಗಟ್ಟಿನಲ್ಲಿ ಉತ್ತಮವಾದ ಶಿಕ್ಷಣ ಪಡೆದುಕೊಂಡಾಗ ಉತ್ತಮವಾದದ್ದನ್ನು ಸಾಧಿಸಲು ಸಾಧ್ಯ ಎಂದು ಸುತ್ತೂರು ವೀರ ಸಿಂಹಾಸನ ಮಠದ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳು ಅಭಿಪ್ರಾಯಸಿದರು.
ಪಟ್ಟಣದ ಎಸ್.ಡಿ.ವಿ.ಎಸ್.ವಿದ್ಯಾ ಸಂಸ್ಥೆ ಆವರಣದಲ್ಲಿ ಹಮ್ಮಿಕೊಂಡಿದ್ದ ದುಗ್ಗಹಟ್ಟಿ ವೀರಭದ್ರಪ್ಪ ಅಭಿನಂದನ ಸಮಾರಂಭ ಹಾಗೂ ದುಗ್ಗಹಟ್ಟಿ ಧೀಮಂತ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣವನ್ನು ಪಡೆಯಬೇಕು, ಸಮಾಜದಲ್ಲಿ ಶಿಕ್ಷಣ ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಶಿಕ್ಷಣ ಬಹುಮುಖ್ಯ ಈ ನಿಟ್ಟಿನಲ್ಲಿ ವೀರಭದ್ರಪ್ಪ ರವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನೀಡುವ ನಿಟ್ಟಿನಲ್ಲಿ ಇವರ ಮುಂದಾಲೋಚನೆ, ಇತರರಿಗೆ ಮಾದರಿಯಾಗಲಿ ಎಂದು ತಿಳಿಸಿದರು.
ಸಿದ್ದಗಂಗಾ ಮಠದ ಸಿದ್ದೇಶ್ವರ ಸ್ವಾಮಿಗಳು ಮಾತನಾಡುತ್ತಾ ಕಾಯಕ ಜೀವಿಗಳಾದ ವೀರಭದ್ರಪ್ಪ ರವರು ತಮ್ಮ ಬದುಕಿನ ಉದ್ದಕ್ಕೂ ಕಾಯಕಕ್ಕೆ ಹೆಚ್ಚಿನ ಮಹತ್ವ ನೀಡಿದವರು ಇವರ ಆದರ್ಶ ಜೀವನ ಬದುಕು ಬರಹ ಕುರಿತು ಕೃತಿ ಪ್ರಕಟ ಹೊಂದಿದ್ದು ಕೃತಿಯಲ್ಲಿರುವ ಮೌಲ್ಯಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.
ಶಾಸಕ ಪುಟ್ಟರಂಗಶೆಟ್ಟಿ ಮಾತನಾಡುತ್ತ
ಸ್ವಾತಂತ್ರ್ಯದ ನಂತರದಲ್ಲಿ ಯಳಂದೂರಿನ ಸ್ಥಾನಮಾನ ಕಳೆದು ಹೋಗುವ ಸಂದರ್ಭದಲ್ಲಿ ವೀರಭದ್ರಪ್ಪ ರವರು ಮುಂಚೂಣಿಯಲ್ಲಿ ನಿಂತು ಹೋರಾಡಿದರು. ಬಿಳಿಗಿರಿ ರಂಗನಬೆಟ್ಟಕ್ಕೆ ರಸ್ತೆ ನಿರ್ಮಾಣ, ಕವಿ ಷಡಕ್ಷರ ದೇವ ಗದ್ದಿಗೆ ಜೀರ್ಣೋದ್ಧಾರ, ಸಾಹಿತ್ಯ ಸಾಂಸ್ಕೃತಿಕ ಸಂರಕ್ಷಣೆ, ರೈತ ಪರ ಚಿಂತನೆಗಳನ್ನು ಮೈಗೂಡಿಸಿಕೊಂಡಿರುವವರು ಎಂದು ತಿಳಿಸಿದರು.

ರಾಜ್ಯ ಸ್ಕೌಟ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತರಾದ ಮಾತನಾಡುತ್ತಾ ಪಿ. ಜಿ. ಆರ್. ಸಿಂಧ್ಯಾ ರವರು ಮಾತನಾಡುತ್ತಾ ಹಿಂದುಳಿದ ಗಡಿ ಪ್ರದೇಶದಲ್ಲಿ ಶಿಕ್ಷಣ ಸಂಸ್ಥೆ ತೆರೆದು ಶಿಕ್ಷಣ ನೀಡುವುದು ಸುಲಭದ ಮಾತಲ್ಲ ಈ ನಿಟ್ಟಿನಲ್ಲಿ ವೀರಭದ್ರಪ್ಪನವರ ಸಂಸ್ಥೆಯಲ್ಲಿ ನುರಿತ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಪೋಷಕರ ಸಹಕಾರದಿಂದ ಉತ್ತಮವಾದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯೋನ್ಮುಖ ರಾಗಿರುವ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಹಲವು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶಾಸಕ ಎ. ಆರ್. ಕೃಷ್ಣ ಮೂರ್ತಿರವರು ಮಾತನಾಡುತ್ತಾ ಹಲವು ದೇವಸ್ಥಾನಗಳ ಜೀರ್ಣೋದ್ಧಾರದೊಂದಿಗೆ, ಸಮಾಜಮುಖಿ ಚಟುವಟಿಕೆಗಳಲ್ಲಿ ಸದಾ ಮುಂದಿರುತ್ತಾರೆ ಎಂದು ತಿಳಿಸಿದರು. ಕೃತಿ ಕುರಿತು ಡಾ. ಶರತ್ ಚಂದ್ರ ಸ್ವಾಮಿಗಳು ಮಾತನಾಡಿದರು.

ಶಾಸಕ ಗಣೇಶ್ ಪ್ರಸಾದ್, ಕಾಡ ಅಧ್ಯಕ್ಷ ಮರಿಸ್ವಾಮಿ,ಮಾಜಿ ಶಾಸಕರಾದ, ಜಿ. ಎನ್. ನಂಜುಂಡಸ್ವಾಮಿ, ಪರಿಮಳ ನಾಗಪ್ಪ,ಎಸ್ ಬಾಲರಾಜು, ಚಾಮುಲ್ ಅಧ್ಯಕ್ಷ ನಾಗೇಂದ್ರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿ ಮಲ್ಲು, ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ,ಕಾರ್ಯದರ್ಶಿ ಗಂಗಾಧರ ಸ್ವಾಮಿ,ಖಜಾಂಚಿ ಡಿ.ಜಿ.ರಾಜೇಶ್ ಸದಸ್ಯರಾದ ಪ್ರಮೀಳಾ ಗುರುಪ್ರಸಾದ್,ಗೌರಮ್ಮ ಮಹದೇವಸ್ವಾಮಿ, ಐಟಿಐ ಪ್ರಾಂಶುಪಾಲ ವಿಖ್ಯಾತ್, ಗುರು ಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಯೋಗೇಶ್, ಸದಾಶಿವಮೂರ್ತಿ, ಮೂಡ್ಲಾಪುರ ನಂದೀಶ್,ಅರಕಲವಾಡಿ ಗುರು ಸ್ವಾಮಿ, ತೋಟೇಶ್,ಬಿ.ಕೆ. ರವಿಕುಮಾರ್,ಸಂತೋಷ, ಮಹದೇವಪ್ಪ, ಸೇರಿದಂತೆ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಸಮುದಾಯದ ಮುಖಂಡರುಗಳು ಇತರರು ಇದ್ದರು.
Chamarajanagar
ಮೆಕ್ಕೆಜೋಳ ಖರೀದಿಸಲು ನೊಂದಣಿ ಕೇಂದ್ರ ಕಾರ್ಯಾರಂಭ
ಚಾಮರಾಜನಗರ: ಕರ್ನಾಟಕ ಹಾಲು ಮಹಾಮಂಡಳಿಯು (ಕೆಎಂಎಫ್) ರೈತರಿಂದ ನೇರವಾಗಿ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮೂಲಕ ಮೆಕ್ಕೆಜೋಳ ಖರೀದಿಸುತ್ತಿದ್ದು, ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಚಾಮುಲ್) ಸಹಕಾರ ಸಂಘಗಳ ಮೂಲಕವೂ ಖರೀದಿ ಕೇಂದ್ರ ತೆರೆಯಲಾಗಿದೆ.
ಚಾಮರಾಜನಗರದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ನಿಯಮಿತವು ಕರ್ನಾಟಕ ಹಾಲು ಮಹಾಮಂಡಳಿಯ (ಕೆಎಂಎಫ್) ಒಡೆತನದ ಪಶು ಆಹಾರ ಘಟಕಗಳಿಗೆ ಪಶು ಆಹಾರ ಉತ್ಪಾದನೆಗೆ ಅವಶ್ಯವಿರುವ ಮೆಕ್ಕೆಜೋಳವನ್ನು ರಾಜ್ಯ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಲ್‍ಗೆ 2,400 ರೂ. ಗಳಂತೆ (ಮೂಲ ಬೆಲೆ, ಎರಡು ಗೋಣಿಚೀಲದ ಮೊತ್ತ ಮತ್ತು ಸಾಗಾಣಿಕೆ ಮೊತ್ತ ಸೇರಿದಂತೆ) ಗುಣಮಟ್ಟ ನಿಬಂಧನೆಗೊಳಪಟ್ಟು ರೈತರಿಂದ ನೇರವಾಗಿ ಖರೀದಿಸಲು ತೀರ್ಮಾನವಾಗಿರುತ್ತದೆ.

ಅದರಂತೆ ಜಿಲ್ಲೆಯ ರೈತರಿಂದ ಕರ್ನಾಟಕ ಹಾಲು ಮಹಾಮಂಡಳಿಯ ಹಾಸನ ಪಶು ಆಹಾರ ಘಟಕಕ್ಕೆ ನಿಗದಿಪಡಿಸಿದ ದರದಲ್ಲಿ ಮೆಕ್ಕೆಜೋಳ ಖರೀದಿಸಲು ಪ್ರಕ್ರಿಯೆ ಆರಂಭವಾಗಿರುತ್ತದೆ. ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿ ಹಾಗೂ ಒಕ್ಕೂಟದ ನಿಯೋಜಿತ ಅಧಿಕಾರಿಗಳ ಸಮನ್ವಯದೊಂದಿಗೆ ಎನ್‍ಇಎಂಎಲ್ ಸಂಸ್ಥೆ ಅಭಿವೃದ್ಧಿಪಡಿಸಿದ ಇ-ಸಂವೃದ್ಧಿ ಹಾಗೂ ಸರ್ಕಾರದ ಫ್ರೂಟ್ಸ್ ತಂತ್ರಾಂಶದ ಮೂಲಕ ನೋಂದಣಿ ಮಾಡಿ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ನಂತರ ಖರೀದಿಸಲಾಗುವುದು.
ಮೆಕ್ಕೆಜೋಳ ಬೆಳೆದು ಬೆಳೆ ಸಮೀಕ್ಷೆಯಲ್ಲಿ ಮೆಕ್ಕೆಜೋಳ ಬೆಳೆ ಎಂದು ಆರ್.ಟಿ.ಸಿ ವಾರು ನಮೂದಾಗಿರುವ ರೈತರು ಮಾತ್ರ ಯೋಜನೆಗೆ ಅರ್ಹರಾಗಿರುತ್ತಾರೆ. ಯೋಜನೆಯಡಿ ಎಕರೆಗೆ 12 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ ಪ್ರಮಾಣದ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುವುದು. ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಪಾವತಿಸಲಾಗುವುದು.

ಮೆಕ್ಕೆಜೋಳ ಮಾರಾಟ ಮಾಡಲು ಆಸಕ್ತ ರೈತರು ಚಾಮರಾಜನಗರದ ಜಿಲ್ಲಾ ಹಾಲು ಒಕ್ಕೂಟದ ವ್ಯಾಪ್ತಿಯ ತಾಲೂಕು ಉಪ ಕಚೇರಿಗಳನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಚಾಮುಲ್ ಮೊ.ಸಂ. 6366824213, ಚಾಮರಾಜನಗರ ಮತ್ತು ಯಳಂದೂರು ಮೊ.ಸಂ. 9945828993, ಗುಂಡ್ಲುಪೇಟೆ ಮೊ.ಸಂ. 9606098335, ಹನೂರು ಮೊ.ಸಂ 9740576484, ಕೊಳ್ಳೇಗಾಲ ಮೊ.ಸಂ. 6366824224 ಸಂಪರ್ಕಿಸುವಂತೆ ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ರಾಜ್‍ಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Chamarajanagar
ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ: ತಾಲೂಕಿನ ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಂಪ್ಯೂಟರ್, ಆರ್ಟ್ ಮತ್ತು ಕ್ರಾಫ್ಟ್, ನೃತ್ಯ ಮತ್ತು ಸಂಗೀತ ಹಾಗೂ ಇಂಗ್ಲೀಷ್ ವಿಷಯಕ್ಕೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಡಿ.7 ರಿಂದ ಡಿ.11ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ವಿದ್ಯಾರ್ಹತೆ ಉಳ್ಳವರು ತಮ್ಮ ಸ್ವ ವಿವರದೊಂದಿಗೆ ನೇರವಾಗಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 8310434085, 9886824852, 9036375844 ಸಂಪರ್ಕಿಸಬಹುದೆಂದು ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Chamarajanagar
ಆರೋಗ್ಯಕ್ಕೆ ಮೊಲದ ಆದ್ಯತೆ ನೀಡಿ: ಕಾಗಲವಾಡಿ ಚಂದ್ರು ಸಲಹೆ
ಚಾಮರಾಜನಗರ: ರೋಟರಿ ಸಂಸ್ಥೆ ವತಿಯಿಂದ ನಗರದಲ್ಲಿ ಇಂದು ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಅರವಿಂದ ಕಣ್ಣಿನ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ 300 ಮಂದಿ ತಪಾಸಣೆ ಮಾಡಿಸಿಕೊಂಡರು. 170 ಮಂದಿ ಶಸ್ತ್ರಚಿಕಿತ್ಸೆಗೆ ಆಯ್ಕೆಯಾಗಿದ್ದು, ಅವರನ್ನು ಕೊಯಮತ್ತೂರಿನ ಅರವಿಂದ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಶಿಬಿರದಲ್ಲಿ ವ್ಯವಸ್ಥೆ ಮಾಡಲಾಯಿತು.
ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು ಮಾತನಾಡಿ, ಆರೋಗ್ಯಕ್ಕೆ ಮೊಲದ ಆಧ್ಯತೆ ನೀಡಬೇಕು. ಪಂಚೇಂದ್ರಿಯಗಳಲ್ಲಿ ಕಣ್ಣು ಪ್ರಮುಖವಾದ ಅಂಗವಾಗಿದೆ. ಕಣ್ಣುಗಳನ್ನು ರಕ್ಷಿಸಿಕೊಳ್ಳವುದರ ಮೂಲಕ ಅಂಧತ್ವ ನಿವಾರಣೆ ಮಾಡಿಕೊಳ್ಳಬೇಕಿದೆ ಎಂದರು.

ರೋಟರಿ ಸಂಸ್ಥೆಯು ಪ್ರತಿ ತಿಂಗಳು ಮೊದಲನೆಯ ಭಾನುವಾರ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಅಯೋಜಿಸುತ್ತಿದ್ದು, ಸಾರ್ವಜನಿಕರು ಹೆಚ್ವಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದದ್ದು ತುಂಬಾ ಸಂತಸವಾಗಿದೆ ಎಂದರು. ಈ ಶಿಬಿರದಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಚಂದ್ರಶೇಖರ್, ಧನುಷ್ ಅವರಿಗೆ ಕನ್ನಡಕ ವಿತರಿಸಲಾಯಿತು.
ರೋಟರಿ ಸಂಸ್ಥಾಪಕ ಸದಸ್ಯರಾದ ಶ್ರೀನಿವಾಸಶೆಟ್ಟಿ, ಕೆ.ಎಂ.ಮಹಾದೇವಸ್ವಾಮಿ, ಸುರಬಿ ನಾಗರಾಜು, ಪ್ರಭಾಕರ್, ಸಿ.ಎ.ನಾರಾಯಣ್, ಸುರೇಶ್, ಅಂಕಶೆಟ್ಟಿ, ಎಲ್.ನಾಗರಾಜು, ಎ.ಶ್ರೀನಿವಾಸನ್, ರೂಪೇಶ್, ಮಹಾದೇವಸ್ವಾಮಿ, ಅಬ್ದುಲ್ ಅಜೀಜ್ ದೀನಾ, ರಾಜುವರ್ಗೀಸ್, ಡಾ.ಪರಮೇಶ್ವರಪ್ಪ, ಸವಿತಾ,
ಪಿಆರ್‌ಒ ವಿಜಯಕಾಂತ್ ಇತರರು ಹಾಜರಿದ್ದರು.
-
Mysore14 hours agoಉದ್ಯಮಿ ಅಪಹರಿಸಿ ಕೋಟಿ ರೂ.ಗಳಿಗೆ ಡಿಮ್ಯಾಂಡ್: ನಾಲ್ವರ ಬಂಧನ
-
Mysore17 hours agoಬಸ್ ನಿಲ್ದಾಣಕ್ಕೆ ಕಾರು ಡಿಕ್ಕಿ: ಚಾಲಕನಿಗೆ ಗಂಭೀರ ಗಾಯ
-
Special12 hours agoಮಹಿಳೆಯರಿಗೆ ದೊಡ್ಡ ಅವಕಾಶ! ಅಂಗನವಾಡಿಯ 571 ಹುದ್ದೆಗಳಿಗೆ ಅರ್ಜಿ ಅಹ್ವಾನ.
-
Hassan16 hours agoHKS PUC ಕಾಲೇಜಿನಲ್ಲಿ ಜರುಗಿದ ರಾಜ್ಯಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ ಸಮಾರೋಪ ಸಮಾರಂಭ
-
Chikmagalur17 hours agoಕಾಫಿನಾಡಲ್ಲಿ ನಿಲ್ಲದ ಕಾಡಾನೆ ದಾಳಿ: ಕಾರ್ಮಿಕ ಗಣಪತಿ ಪ್ರಾಣಾಪಾಯದಿಂದ ಪಾರು
-
Chikmagalur18 hours agoಗ್ರಾ.ಪಂ.ಸದಸ್ಯ ಗಣೇಶ್ ಕೊಲೆ ಪ್ರಕರಣ: ಐವರ ಬಂಧನ, ಮೂವರಿಗಾಗಿ ತೀವ್ರ ಶೋಧ
-
State19 hours agoನಾಳೆಯಿಂದ ಚಳಿಗಾಲದ ಅಧಿವೇಶನ: ಸುವರ್ಣಸೌಧದಲ್ಲಿ ಸುತ್ತ ಹೈ ಆಲರ್ಟ್ 6,000 ಪೊಲೀಸ್ ಭದ್ರತೆ
-
Mysore23 hours agoಕೊಲ್ಕತ್ತಾದ ಮೈಸೂರು ಉದ್ಯಾನಕ್ಕೆ 10ನೇ ಚಾಮರಾಜ ಒಡೆಯರ್ ನಾಮಫಲಕ ಅಳವಡಿಸಲು ಪತ್ರ
