Mandya
ಲಿಫ್ಟ್‌ನಲ್ಲಿ ಸಿಲುಕಿದ ಗೋವಾ ಮುಖ್ಯಮಂತ್ರಿ, ಯುವರಾಜರು
ಮಂಡ್ಯ: ನಗರದ ಅಮರಾವತಿ ಹೋಟೆಲ್‌ನಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಯದುವೀರ್ ಒಡೆಯರ್, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವು ಮುಖಂಡರು ಲಿಫ್ಟ್‌ನಲ್ಲಿ ಸಿಲುಕಿದ ಘಟನೆ ಗುರುವಾರ ನಡೆಯಿತು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಂಡ್ಯ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಸುದ್ದಿಗೋಷ್ಠಿ ಮುಗಿಸಿಕೊಂಡು ನಿರ್ಗಮಿಸುವ ವೇಳೆ, ಲಿಫ್ಟ್ ಬಳಸಿಕೊಂಡಿದ್ದಾರೆ, ಈ ಹಿನ್ನಲೆಯಲ್ಲಿ ಹೆಚ್ಚು ಜನರು ಲಿಫ್ಟ್‌ನಲ್ಲಿ ಇದ್ದುದ್ದರಿಂದ ಈ ಅವಘಡ ಸಂಭವಿಸಿದೆ.

ತಕ್ಷಣ ಎಚ್ಚೆತ್ತ ಹೋಟೆಲ್ ತಾಂತ್ರಿಕ ಸಿಬ್ಬಂದಿಯು ಲಿಫ್ಟ್ ಬಾಗಿಲು ಓಪನ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ, ಕೇವಲ ಐದು ನಿಮಿಷದಲ್ಲಿ ಲಿಫ್ಟ್ ಸರಿ ಮಾಡಲಾಗಿದ್ದು, ಯದುವೀರ್ ಒಡೆಯರ್, ಸಿ.ಎಸ್.ಪುಟ್ಟರಾಜು ಸೇರಿದಂತೆ ಅಲ್ಲಿದ್ದವರು ನಿಟ್ಟುಸಿರು ಬಿಟ್ಟಿದ್ದಾರೆ.
Mandya
ಹುಟ್ಟಿನಿಂದಲೇ ಬರುವ ಖಾಯಿಲೆಗಳನ್ನು ಆರಂಭದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲು ಕ್ರಮವಹಿಸಿ: ಕೆ.ಆರ್.ನಂದಿನಿ



Mandya
ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಜಿ.ಪಂ. ಸಿಇಒ ಭೇಟಿ
ಮಂಡ್ಯ : ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಅಪೌಷ್ಠಿಕ ಮಕ್ಕಳನ್ನು ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆ ಮಾಡುವ ಮೂಲಕ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಂತೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಸೂಚಿಸಿದರು.
ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿನ ಅಪೌಷ್ಠಿಕ ಮಕ್ಕಳ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅವರು, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಕರೆತರಲು ಮಕ್ಕಳ ತಾಯಂದಿರಿಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಈವರೆಗೆ ಪೌಷ್ಠಿಕಾಂಶ ಪುನರ್ವಸತಿ ಕೇಂದ್ರಕ್ಕೆ ಎಷ್ಟು ಮಕ್ಕಳು ದಾಖಲಾಗಿದ್ದಾರೆ, ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಹೊರಬಂದಿದ್ದಾರೆ ಎಂಬುದರ ಬಗ್ಗೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಮುಂದಿನ ಸಭೆಯಲ್ಲಿ ಅಂಕಿ- ಅಂಶಗಳೊಂದಿಗೆ ವರದಿ ನೀಡಬೇಕು. ಮಕ್ಕಳು ಹಾಗೂ ತಾಯಿಂದಿರಿಗೆ 14 ದಿನ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ತಿಳಿಸಿದರು.
ಪೌಷ್ಠಿಕಾಂಶ ಪುನರ್ವಸತಿ ಕೇಂದ್ರದಲ್ಲಿ ಮಕ್ಕಳಿಗೆ ಹಾಗೂ ತಾಯಂದಿರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆರಿಂದ ವ್ಯಾಪಕ ಅರಿವು ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸಿಇಓ ಅವರು ಸೂಚಿಸಿದರು.

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಯಾಮ್ (ವಿಪರೀತ ಕಡಿಮೆ ತೂಕ ಮಕ್ಕಳು) ಮತ್ತು ಮ್ಯಾಮ್ (ಸಾಧಾರಣ ತೂಕದ ಮಕ್ಕಳು) ಮಕ್ಕಳನ್ನು ಗುರುತಿಸಿ ಮಕ್ಕಳನ್ನು ಎನ್ ಆರ್ ಸಿ ಕೇಂದ್ರಕ್ಕೆ ಕರೆತರುವಂತಹ ಜವಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವಂತೆ ಆಯಾ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೂಚಿಸಬೇಕು ಎಂದು ತಿಳಿಸಿದರು.
ಅಪೌಷ್ಠಿಕ ಮಕ್ಕಳನ್ನು ಸ್ಕ್ರೀನಿಂಗ್ ಮಾಡಿ ಸ್ಯಾಮ್ ಹಾಗೂ ಮ್ಯಾಮ್ ಗುರುತಿಸಲಾಗುತ್ತಿದೆ ಆದರೆ ತಾಯಿ ಹಾಗೂ ಮಕ್ಕಳನ್ನು ಒಪ್ಪಿಸಿ ಎನ್ ಆರ್ ಸಿ ಗೆ ಕರೆತರಲು ಕಷ್ಟವಾಗುತ್ತಿದೆ ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಎಲ್ಲರು ಒಟ್ಟಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಪ್ರತಿ ಸೋಮವಾರ ಕ್ಷೇತ್ರ ಭೇಟಿ ನೀಡುತ್ತಿದ್ದು, ಆ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ತಮ್ಮ ವ್ಯಾಪ್ತಿಯಲ್ಲಿ ಎಷ್ಟು ಮಕ್ಕಳು ಅಪೌಷ್ಠಿಕತೆಯಿಂದ ಬಳಲುತ್ತಿದ್ದಾರೆ ಹಾಗೂ ಎಷ್ಟು ಮಕ್ಕಳನ್ನು ಎನ್ ಆರ್ ಸಿ ಗೆ ದಾಖಲಿಸಲಾಗಿದೆ ಎಂಬ ಬಗ್ಗೆ ಪ್ರಸ್ತುತಪಡಿಸಲು ಕೋರಿದರು.

ಎನ್ ಆರ್ ಸಿ ಯಲ್ಲಿ ದಾಖಲಾಗಿರುವ ಸ್ಯಾಮ್ ಮತ್ತು ಮ್ಯಾಮ್ ಮಕ್ಕಳ ತಾಯಿಂದರ ಜೊತೆ ಮಾತನಾಡಿದ ಅವರು ಮಕ್ಕಳಿಗೆ ಮನೆಯಲ್ಲಿ ನೀಡುತ್ತಿರುವ ಪೌಷ್ಠಿಕ ಆಹಾರದ ಬಗ್ಗೆ ತಾಯಿಂದಿರಿಂದ ಮಾಹಿತಿ ಪಡೆದರು. ಅಂಗನವಾಡಿ ಕಾರ್ಯಕರ್ತೆಯರು ನೀಡಿದ ಸಲಹೆಯ ಮೇರೆಗೆ ಎನ್ ಆರ್ ಸಿ ಕೇಂದ್ರಕ್ಕೆ ಬಂದಿರುವುದಾಗಿ ತಾಯಿಂದಿರು ಮಾಹಿತಿ ನೀಡಿದರು.
ಇದೇ ವೇಳೆ ಮಿಮ್ಸ್ ಹೆಚ್.ಒ.ಡಿ ಡಾ. ಶ್ರೀಧರ್, ಎನ್ ಆರ್ ಸಿ ನೊಡೆಲ್ ಅಧಿಕಾರಿ ಡಾ. ಮಂಜುಳಾ, ಆರ್. ಸಿ. ಹೆಚ್ ಡಾ. ಅಶ್ವತ್, ಜಿಲ್ಲಾ ಕುಷ್ಠ ರೋಗ ನಿಯಂತ್ರಣಾಧಿಕಾರಿ ಡಾ. ಸೋಮಶೇಖರ್ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
Mandya
ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಜಿ.ಪಂ. ಸಿಇಓ ಭೇಟಿ
ಮಂಡ್ಯ: ಕೃಷ್ಣರಾಜಪೇಟೆ ತಾಲೂಕಿನ ರಂಗನಾಥ ಪುರ ಕ್ರಾಸ್ ಗ್ರಾಮ ಪಂಚಾಯಿತಿಯ ಆದಿಹಳ್ಳಿ ಗ್ರಾಮದಲ್ಲಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಮಂಡ್ಯ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಸತಿ ಶಾಲೆಗೆ ಭೇಟಿ ನೀಡಿದ ಅವರು, ವಿದ್ಯಾರ್ಥಿ/ವಿದ್ಯಾರ್ಥಿನಿಯರ ಕೊಠಡಿಗಳಿಗೆ ಭೇಟಿ ನೀಡಿ ಹಾಸಿಗೆ ವ್ಯವಸ್ಥೆ ಹಾಗೂ ಕುಡಿಯುವ ನೀರು, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರ ಸಾಮಗ್ರಿಗಳನ್ನು ಪರಿಶೀಲಿಸಿದರು.
ದ್ವಿತೀಯ ಪಿ.ಯು.ಸಿ ವಿಜ್ಞಾನ ಪ್ರಯೋಗಾಲಯಕ್ಕೆ ಭೇಟಿ ನೀಡಿ ಜೀವಕೋಶವನ್ನು ಸೂಕ್ಷ್ಮದರ್ಶಕ ಯಂತ್ರದ ಮೂಲಕ ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿರುವುದನ್ನು ವೀಕ್ಷಿಸಿ ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದರು.

ಶಾಲೆಯಲ್ಲಿನ ಗಣಕಯಂತ್ರ ಕೊಠಡಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಭವಿಷ್ಯದಲ್ಲಿ ಯಾವ ರೀತಿಯ ಸೇವೆಗೆ ಸೇರಬೇಕು ಎಂಬ ಕನಸನ್ನು ಹೊಂದಿದ್ದೀರಿ ಎಂಬ ಬಗ್ಗೆ ಮಾಹಿತಿ ಪಡೆದು ಕನಸು ಸಾಕಾರಗೊಳಿಸಿಕೊಳ್ಳಲು ಯಾವ ರೀತಿಯ ಪ್ರಯತ್ನಗಳನ್ನು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಲ್ಪ ಸಂಖ್ಯಾತರಿಗೆ ಸಿ.ಬಿ.ಎಸ್.ಇ ಪಠ್ಯಕ್ರಮ ಇರುವ ಶಾಲೆ ಇದಾಗಿದ್ದು, ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ವಿದ್ಯಾಭ್ಯಾಸ ನಡೆಸುವಂತೆ ಪ್ರೋತ್ಸಾಹಿಸಿದರು.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ವಿದ್ಯಾಭ್ಯಾಸ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗೀ ನಿಮ್ಮ ಜೀವನದ ಗುರಿ ತಲುಪಲು ಹಾಗೂ ನಿಮ್ಮ ಕನಸನ್ನು ಸಕಾರಗೊಳಿಸಿಕೊಳ್ಳಲು ವಿದ್ಯಾಬ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಂಡ್ಯ ಉಪವಿಭಾಗದ ತಾಲ್ಲೂಕು ವಿಸ್ತರಣಾಧಿಕಾರಿ ರುದ್ರೇಶ್, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲ ಮಹೇಶ್ ಸೇರಿದಂತೆ ಇತರರು ಹಾಜರಿದ್ದರು.
-
State18 hours agoIPL, ಟಿ-20 ವಿಶ್ವಕಪ್ ಕ್ರಿಕೆಟ್ ಸಂಬಂಧ ಸಿಎಂ, ಡಿಸಿಎಂರನ್ನು ಭೇಟಿ ಮಾಡಿದ ವೆಂಕಟೇಶ್ ಪ್ರಸಾದ್
-
Mandya20 hours agoಜಿಲ್ಲಾಧಿಕಾರಿಗಳಿಂದ ಗುತ್ತಲು ಕೆರೆಗೆ ಭೇಟಿ ಮತ್ತು ಪರಿಶೀಲನೆ
-
Mandya18 hours agoಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಡಿಸಿ ಭೇಟಿ
-
Chamarajanagar13 hours agoಮ.ಮ.ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ: 28 ದಿನಗಳ ಅವಧಿಯಲ್ಲಿ 2.53 ಕೋಟಿ ರೂ. ಸಂಗ್ರಹ
-
State13 hours agoದ್ವೇಷ ಭಾಷಣ, ದ್ವೇಷ ಅಪರಾಧಗಳ ವಿಧೇಯಕ ಮಂಡಿಸಿದ ಡಾ.ಜಿ.ಪರಮೇಶ್ವರ್
-
Hassan16 hours agoಡಿ. 11ರಿಂದ 14 ರವರೆಗೆ ಶ್ರೀ ಮೆಳೆಯಮ್ಮದೇವಿ, ಚಿಕ್ಕಮ್ಮದೇವಿ ಅದ್ದೂರಿ ಜಾತ್ರಾ ಮಹೋತ್ಸವ
-
Hassan15 hours agoಗಾಂಜಾ ಅಮಲಿನಲ್ಲಿ ಯುವಕನೋರ್ವನ ಹ*ತ್ಯೆ: ಆರೋಪಿಯನ್ನು ಬಂಧಿಸಿದ ಪೊಲೀಸರು
-
Chamarajanagar14 hours agoರಾಗಿ ಒಕ್ಕಣೆ ಮಿಷನ್ ನಿಂದ ಕೂಲಿ ಕಾರ್ಮಿಕಳೊಬ್ಬಳ ಕೈ ತುಂಡು
