Connect with us

Hassan

ರೋಗಿಗಳಿಗೆ ನ್ಯೂಟ್ರಿಷಿಯನ್ ಫುಡ್ ಕಿಟ್

Published

on

ಸರಕಾರಿ ಶಾಲಾ ಮಕ್ಕಳಿಗೆ ನಿಘಂಟು ಪುಸ್ತಕ, ಗಾಲಿ ಕುರ್ಚಿ ವಿತರಣೆ

ಹಾಸನ: ಲಯನ್ಸ್ ಕ್ಲಬ್ ರಾಜ್ಯಪಾಲರ ಅಧಿಕೃತ ಭೇಟಿಯ ಕಾರ್ಯಕ್ರಮದಲ್ಲಿ ರೋಗಿಗಳಿಗೆ ನ್ಯೂಟ್ರಿಷಿಯನ್ ಫುಡ್ ಕಿಟ್ ವಿತರಣೆ ಹಾಗೂ ಸರಕಾರಿ ಶಾಲಾ ಮಕ್ಕಳಿಗೆ ಕನ್ನಡ ಇಂಗ್ಲಿಷ್ ನಿಘಂಟು ಪುಸ್ತಕ ಹಾಗೂ ಗಾಲಿ ಕುರ್ಚಿಯನ್ನು ಗೌರ‍್ನರ್ ಮೇಲ್ವಿನ್ ಡಿಸೋಜರವರು ವಿತರಿಸಿದರು.

ನಂತರ ಮಾತನಾಡಿ, ಲಯನ್ಸ್ ಕ್ಲಬ್ ಎಂಬುದು ಒಂದು ಸಮಾಜ ಸೇವೆ ಮಾಡುವ ಸಂಸ್ಥೆಯಾಗಿದ್ದು, ಬಡವರ, ನೊಂದವರಿಗೆ ಸ್ಪಂದಿಸುವುದು ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಹಾಸನ ಲಯನ್ಸ್ ಕೇಂದ್ರದಲ್ಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಟಿ.ಬಿ. ಕಾಯಿಲೆಯಿಂದ ಬಳಲುತ್ತಿರುವವರಿಗೆ ನ್ಯೂಟ್ರಿಷಿಯನ್ ಫುಡ್ ಕಿಟ್ ವಿತರಿಸಲಾಗಿದೆ. ಮಧ್ಯಾಹ್ನ ರಾಜಘಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕನ್ನಡ ಇಂಗ್ಲಿಷ್ ನಿಘಂಟು ಪುಸ್ತಕವನ್ನು ನೀಡಲಾಗಿದೆ. ಇದಾದ ಮೇಲೆ ಬಿ.ಎಂ. ರಸ್ತೆಯಲ್ಲಿರುವ ಕಾಮದೇನು ವೃದ್ಧಾಶ್ರಮದಲ್ಲಿ ಇರುವ ವೃದ್ಧರಿಗೆ ಒಂದು ದಿನದ ಉಪಹಾರ, ಮಧ್ಯಾಹ್ನದ ಮತ್ತು ಸಂಜೆಯ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಸಂಜೆ ನಮ್ಮ ಲಯನ್ ಸೆಂಟರ್ ನಲ್ಲಿ ಅಂಗವಿಕಲರಾದ ಎಚ್.ಎನ್. ಯೋಗೇಶ್ ಹಾಗೂ ಸಿ.ಆರ್. ಹರೀಶ್ ಎಂಬವರಿಗೆ ಗಾಲಿ ಕುರ್ಚಿಯನ್ನು ವಿತರಿಸಿರುವುದಾಗಿ ಹೇಳಿದರು. ಇಂತಹ ಹಲವಾರು ಸೇವಾ ಚಟುವಟಿಕೆಯನ್ನು ಹಾಸನದ ಲಯನ್ಸ್ ಮಾಡಿದೆ. ಇನ್ನು ಮುಂದೆ ಹೆಚ್ಚಿನ ರೀತಿ ಸೇವಾ ಕಾರ್ಯ ಮಾಡಲಿ ಎಂದು ಶುಭ ಹಾರೈಸಿದರು.

ಇದೆ ಸಂದರ್ಭದಲ್ಲಿ ಸಂಪುಟ ಕಾರ್ಯದರ್ಶಿ ಅಸ್ವಾಡ್ ಡಿಸೋಜಾ, ಹಾಸನ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಎಚ್.ಕೆ. ನಾಗೇಶ್, ಕೋ ಆರ್ಡಿ ಕೋರ್ಡಿನೇಟರ್ ಐ.ಟಿ. ತಾರಾನಾಥ್, ಮುಖ್ಯ ಜಿಲ್ಲಾ ಚೇರ್ ಪರ್ಸನ್ ಐಟಿ. ಸ್ವರೂಪ ಎನ್. ಶೆಟ್ಟಿ ಹಾಗೂ ರಿಸನ್ ೯ ಪ್ರಾಂತ್ಯ ಅಧ್ಯಕ್ಷರಾದ ಡಾ. ವಿಶಾಲಾಕ್ಷಿ, ಕಾರ್ಯದರ್ಶಿ ಸಿ.ಕೆ. ಕಿರಣ್ ಕುಮಾರ್, ಖಜಾಂಚಿ ರವಿಕುಮಾರ್ ಬಲ್ಲೇನಹಳ್ಳಿ, ವಲಯ ಅಧ್ಯಕ್ಷರಾದ ಎಸ್.ಪಿ. ಪ್ರಕಾಶ್, ಲಿಯೋ ಕ್ಲಬ್ ಅಧ್ಯಕ್ಷರಾದ ಪ್ರಿಯ ಕಿರಣ್ ಹಾಗೂ ನೂತನ್ ಗೌಡ, ಕಾರ್ಯದರ್ಶಿ ಸುರ್ವಚಲಾ ಇತರರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Hassan

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Published

on

ಹಾಸನ : ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ

ಹಾಸನ ಜಿಲ್ಲೆಯ ನಾಲ್ಕು ತಾಲ್ಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ

ಡಿಡಿಪಿಯು ಮಹಾಲಿಂಗಯ್ಯ ಆದೇಶ

ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಉಳಿದ ತಾಲ್ಲೂಕುಗಳಲ್ಲಿ ಹೆಚ್ಚಿನ ಮಳೆಯಾದರೆ ರಜೆ ನೀಡುವ ಬಗ್ಗೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸೂಚನೆ

ಡಿಸಿ ಅನುಮತಿ ಪಡೆದು ರಜೆ ಘೋಷಣೆ ಮಾಡಿದ ಡಿಡಿಪಿಯು

Continue Reading

Hassan

ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

Published

on

ಹಾಸನ : ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕ ಬಲಿ

ರಾಜೇಶ್ (9) ಸಾವನ್ನಪ್ಪಿದ ಬಾಲಕ

ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮಾಡಾಳು ಗ್ರಾಮದಲ್ಲಿ ಘಟನೆ

ಗ್ರಾಮದ ಗೌರಮ್ಮ-ನಾಗರಾಜ ದಂಪತಿ ಪುತ್ರ ರಾಜೇಶ್

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿದ್ದ ರಾಜೇಶ್

ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್

ಅರಸೀಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜೇಶ್

ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಹಿಮ್ಸ್‌ಗೆ ದಾಖಲಾಗಿದ್ದ ರಾಜೇಶ್

ಚಿಕಿತ್ಸೆ ಫಲಕಾರಿಯಾಗದೆ ಇಂದು ರಾಜೇಶ್ ಸಾವು

Continue Reading

Hassan

2 ತಿಂಗಳ ಮಗುವಿಗೆ ಅನಾರೋಗ್ಯ ಬೇಸೆತ್ತ ಅಪ್ಪ ಆತ್ಮಹತ್ಯೆಗೆ ಯತ್ನ

Published

on

ಹಾಸನ: ಮಗುವಿನ ಆರೋಗ್ಯವು ಸುಧಾರಿಸದೇ ದಿನೆ ದಿನೆ ಹೆಚ್ಚಾದ ಹಿನ್ನಲೆಯಲ್ಲಿ ಮನಸ್ಸಿಗೆ ನೋವುಂಟು ಮಾಡಿದ ಹಿನ್ನಲೆಯಲ್ಲಿ ಏನು ಮಾಡುವುದು ಎಂಬುದು ತೋಚದೇ ಹಾಸನ ಜಿಲ್ಲಾ ಸರಕಾರಿ ಆಸ್ಪತ್ರೆ ಕಟ್ಟಡದ ಮೇಲೆ ಹೋಗಿ ತುದಿಯಲ್ಲಿ ನಿಂತು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿ ಕೊನೆಗೆ ಆಸ್ಪತ್ರೆ ಸಿಬ್ಬಂದಿಗಳು ಆತನ ಮನವೊಲಿಸುವಲ್ಲಿ ಯಶಸ್ವಿಯಾಗಿ ಬದುಕಿಸಿದ ಘಟನೆ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಬೇಲೂರು ತಾಲ್ಲೂಕಿನ ಹಳೆಬೀಡು ಸಮೀಪದ ಬಸವರಾಯನಪುರ ಗ್ರಾಮದ ಗಂಗಸ್ವಾಮಿ ಎಂಬುವರ ಎರಡು ತಿಂಗಳ ಮಗುವಿನ ಅನಾರೋಗ್ಯವು ಹೆಚ್ಚಾಗುತ್ತಿರುವ ಬಗ್ಗೆ ತಿಳಿದು ಬೇಸರದಿಂದ ಆತ್ಮಹತ್ಯೆ ಯತ್ನಿಸಿರುವುದಾಗಿ ಹೇಳಲಾಗಿದೆ. ಮಗುವಿನ ಅನಾರೋಗ್ಯದಿಂದ ತಂದೆ ಮನನೊಂದಿದ್ದು, ಹಾಸನದ ಜಿಲ್ಲಾ ಹಿಮ್ಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡದ ಮೇಲೇರಿ ಸಾಯುವ ಹೈಡ್ರಾಮ ಮಾಡಲಾಗಿದೆ. ಕಟ್ಟಡದ ಐದನೇ ಮಹಡಿಯ ತುದಿಯಲ್ಲಿ ನಿಂತು ಆತ್ಮಹತ್ಯೆ ಬೆದರಿಕೆ ಹೊಡ್ಡಿದ್ದು,

ಮಗುವಿನ ಅರೋಗ್ಯ ಬಿಗಡಾಯಿಸಿದ ಹಿನ್ನೆಲೆಯಲ್ಲಿ ಈ ಆತ್ಮಹತ್ಯೆ ಯತ್ನ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆ ಸಿಬ್ಬಂದಿಯ ಸಮಯ ಪ್ರಜ್ಞೆ ಯಿಂದ ಅನಾಹುತ ತಪ್ಪಿದಂತಾಗಿದೆ. ಗಂಗಸ್ವಾಮಿಯನ್ನ ಆಸ್ಪತ್ರೆ ಕಟ್ಟಡದಿಂದ ಕೆಳಗಿಳಿಸಿ ನಂತರ ಪೊಲಿಸ್ ಠಾಣೆಗೆ ಆಸ್ಪತ್ರೆ ಸಿಬ್ಬಂದಿಗಳು ಕರೆದುಕೊಂಡು ಹೋಗಿದ್ದಾರೆ. ಈ ದೃಶ್ಯವನ್ನು ರಸ್ತೆಯಲ್ಲಿ ಸಾರ್ವಜನಿಕರು ನೋಡಿದ್ದು, ವಿಡಿಯೋ ಸೆರೆ ಹಿಡಿದಿದ್ದಾರೆ.

Continue Reading

Trending

error: Content is protected !!