Chikmagalur
ರೌಡಿ ಶೀಟರ್‌ಗಳ ಜೊತೆ ಮದ್ಯದ ಪಾರ್ಟಿ: ಸಖರಾಯಪಟ್ಟಣ ಎಎಸ್‌ಐ ಅಮಾನತು
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನಲ್ಲಿ ಖಾಕಿ ಇಲಾಖೆಗೆ ಮುಜುಗರ ತರುವಂತಹ ಘಟನೆ ನಡೆದಿದ್ದು, ಸಮಾಜಘಾತುಕ ರೌಡಿ ಶೀಟರ್‌ಗಳ ಜೊತೆ ಮದ್ಯದ ಪಾರ್ಟಿ ಆಯೋಜಿಸಿದ್ದ ಸಖರಾಯಪಟ್ಟಣ ಠಾಣೆಯ ಸಹಾಯಕ ಸಬ್ ಇನ್‌ಸ್ಪೆಕ್ಟರ್ ವೀರೇಂದ್ರ ಅವರನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಾಯ್ಮಾ ಅಮಾನತುಗೊಳಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ವಾರದ ಹಿಂದೆ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದ ಬಾರ್‌ವೊಂದರಲ್ಲಿ ಈ ಅತಿರೇಕದ ಘಟನೆ ಜರುಗಿದ್ದು, ಖುದ್ದು ಎಎಸ್ಐ ಅವರೇ ರೌಡಿ ಶೀಟರ್‌ಗಳಿಗೆ ಮದ್ಯದ ಔತಣಕೂಟ ಏರ್ಪಡಿಸಿದ್ದರು ಎನ್ನಲಾಗಿದೆ. ತಡರಾತ್ರಿವರೆಗೂ ಮದ್ಯದ ಹೊಳೆ ಹರಿಸಿ, ಕರ್ಕಶ ಶಬ್ದದಲ್ಲಿ ಧ್ವನಿವರ್ಧಕಗಳನ್ನು ಹಾಕಿ ಕುಣಿದು ಕುಪ್ಪಳಿಸುತ್ತಿದ್ದ ದೃಶ್ಯ ಕಂಡು ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದರು.
ಗ್ರಾಮಸ್ಥರು ಹಾಗೂ ಮಹಿಳೆಯರು ರಾತ್ರೋರಾತ್ರಿ ಬಾರ್ ಎದುರು ಜಮಾಯಿಸಿ ಧಿಕ್ಕಾರ ಕೂಗಿ, ಬಾರ್ ಬಂದ್ ಮಾಡುವಂತೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದ್ದರು. ಸಾರ್ವಜನಿಕರ ಹಿತ ಕಾಯಬೇಕಾದ ಅಧಿಕಾರಿಯೇ ರೌಡಿಗಳ ಜೊತೆ ಶಾಮೀಲಾಗಿ ಮೋಜು-ಮಸ್ತಿ ನಡೆಸುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಪ್ರಾಥಮಿಕ ತನಿಖೆ ನಡೆಸಿ ಕರ್ತವ್ಯ ಲೋಪದಡಿ ವೀರೇಂದ್ರ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
Chikmagalur
ಕಬ್ಬಿಣದ ರಾಡ್‌ನಿಂದ ತಂದೆ ಮೇಲೆ ಮಗನ ಹಲ್ಲೆ
ಚಿಕ್ಕಮಗಳೂರು: ಕಬ್ಬಿಣದ ರಾಡ್‌ನಿಂದ ತಂದೆಯ ಮೇಲೆ ಪುತ್ರ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಕರಕನಹಳ್ಳಿಯಲ್ಲಿ ನಡೆದಿದೆ.

ಕರಕನಹಳ್ಳಿಯ ನಿವಾಸಿ ಕೃಷ್ಣೇಗೌಡ ಅವರ ಮೇಲೆ ಪುತ್ರ ಯೋಗೇಶ್ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯಿಂದ ಕೃಷ್ಣೇಗೌಡ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಟುಂಬದ ವಿಚಾರಕ್ಕೆ ಸಂಬಂಧಿಸಿದಂತೆ ತಂದೆ-ಮಗನ ನಡುವೆ ಮಾತಿನ ಚಕಮಕಿ ನಡೆದ ಬಳಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.
Chikmagalur
ಸೆ. 30ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ : ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಂದ ಸ್ಥಳ ಪರಿಶೀಲನೆ
ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ. 30ರಂದು ಕೊಳ್ಳೇಗಾಲಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಕೊಳ್ಳೇಗಾಲದಲ್ಲಿ ಸ್ಥಳ ಪರಿಶೀಲಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು ಸೇರಿದಂತೆ ಇನ್ನಿತರ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ ಎಂಜಿಎಸ್.ವಿ ಕಾಲೇಜು ಮೈದಾನದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದ ವೇದಿಕೆಗೆ ಸ್ಥಳ ಪರಿಶೀಲಿಸಿದರು.
ಇದೇ ವೇಳೆ ಕಾರ್ಯಕ್ರಮಕ್ಕಾಗಿ ಹಾಕಬೇಕಿರುವ ಬೃಹತ್ ಶಾಮಿಯಾನ, ವೇದಿಕೆ, ಸಭಿಕರ ಆಸನಗಳು, ಇನ್ನಿತರ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ಶಾಸಕರು ಅಗತ್ಯ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಸಾರ್ವಜನಿಕರ ವಾಹನ ನಿಲುಗಡೆ, ಕುಡಿಯುವ ನೀರು, ಉಪಹಾರ ವ್ಯವಸ್ಥೆ, ಶೌಚಾಲಯ, ತಾತ್ಕಾಲಿಕ ಆರೋಗ್ಯ ಘಟಕ ನಿರ್ಮಾಣ ಸೇರಿದಂತೆ ಇನ್ನಿತರ ವ್ಯವಸ್ಥೆಗಳಿಗೆ ಸ್ಥಳ ಪರಿಶೀಲಿಸಿ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಶಾಸಕರು ನಿರ್ದೇಶನ ನೀಡಿದರು.
ಮಹದೇಶ್ವರ ಕ್ರೀಡಾಂಗಣಕ್ಕೆ ಭೇಟಿ ನೀಡಿ ಅಲ್ಲಿ ನಿರ್ಮಾಣ ಮಾಡಬೇಕಿರುವ ಹೆಲಿಪ್ಯಾಡ್ ಸಂಬಂಧ ಸ್ಥಳ ವೀಕ್ಷಿಸಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದರು.
ಪರಿಶೀಲನೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎ.ಆರ್. ಕೃಷ್ಣಮೂರ್ತಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ 20ಕ್ಕೂ ಹೆಚ್ಚು ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ಉಪಮುಖ್ಯಮಂತ್ರಿಗಳು, ವಿವಿಧ ಇಲಾಖೆಗಳ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಯಳಂದೂರಿನಲ್ಲಿ ನಿರ್ಮಾಣ ಮಾಡಲಾಗಿರುವ ಸುಸಜ್ಜಿತ ಆಸ್ಪತ್ರೆ, ಹಾಸ್ಟೆಲ್, ಇನ್ನಿತರ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಸಂತೇಮರಹಳ್ಳಿಯ 5 ಕೋಟಿ ರೂ. ವೆಚ್ಚದ ಎಳನೀರು ಮಾರುಕಟ್ಟೆ, ಕೊಳ್ಳೇಗಾಲದಲ್ಲಿ 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ಮೊದಲ ಹಂತವಾಗಿ 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗೆ ಭೂಮಿ ಪೂಜೆ, ಮುಡಿಗುಂಡ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಹೀಗೆ ಹಲವಾರು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ಡಿವೈಎಸ್‍ಪಿ ಮೋಹನ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಇತರೆ ಇಲಾಖೆಗಳ ಅಧಿಕಾರಿಗಳು ಇದೇ ಸಂದರ್ಭದಲ್ಲಿ ಇದ್ದರು.
Chikmagalur
ಬೀರೂರಿನಲ್ಲಿ ಯುವಕ ನಾ*ಪತ್ತೆ: ಪತ್ತೆಗೆ ಪೊಲೀಸರ ಶೋಧ ಪ್ರಕರಣ ದಾಖಲು
ಬೀರೂರು: ಗೌರಿ-ಗಣೇಶ ಹಬ್ಬಕ್ಕೆ ಮುಂಬೈನಿಂದ ದೊಗೇಹಳ್ಳಿ ಗ್ರಾಮಕ್ಕೆ ಬಂದಿದ್ದ 25 ವರ್ಷದ ಯುವಕನೊಬ್ಬ ಮನೆಯಿಂದ ಕಾರಿನಲ್ಲಿ ತೆರಳಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾದ ಯುವಕನನ್ನು ದೊಗೇಹಳ್ಳಿ ಗ್ರಾಮದ ಓಂ ಗೌಡ (25) ಎಂದು ಗುರುತಿಸಲಾಗಿದೆ. ಸೆ.21ರಂದು ಬೆಳಗ್ಗೆ 8.30ರ ಸುಮಾರಿಗೆ ಮನೆಯಿಂದ MH 46 CR 7658 ನೋಂದಣಿ ಸಂಖ್ಯೆಯ ಕಾರಿನಲ್ಲಿ ಯಾರಿಗೂ ಮಾಹಿತಿ ನೀಡದೆ ತೆರಳಿದ್ದು, ಬಳಿಕ ಮನೆಗೆ ವಾಪಸ್ ಬಂದಿಲ್ಲ. ಕುಟುಂಬದವರು ಸಂಬಂಧಿಕರು ಹಾಗೂ ಸ್ನೇಹಿತರ ಮನೆ ಸೇರಿದಂತೆ ವಿವಿಧೆಡೆ ಹುಡುಕಾಟ ನಡೆಸಿದರೂ ಓಂ ಗೌಡ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ತಾಯಿ ಲಲಿತಾ ಅವರು ಬೀರೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಓಂ ಗೌಡ ಅವರು ಸುಮಾರು 5.5 ಅಡಿ ಎತ್ತರ, ದುಂಡು ಮುಖ, ಬಿಳಿ ಮೈಬಣ್ಣ, ದೃಢಕಾಯ ಶರೀರ ಹೊಂದಿದ್ದು, ಹಣೆಯ ಬಳಿ ಕಪ್ಪು ಮಚ್ಚೆ ಇದೆ. ಮನೆಯಿಂದ ತೆರಳುವಾಗ ನೀಲಿ ಬಣ್ಣದ ಟಿ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಕುಟುಂಬದೊಳಗಿನ ಮನಸ್ತಾಪದಿಂದ ಬೇಸರಗೊಂಡು ಓಂ ಗೌಡ ಮನೆಯಿಂದ ತೆರಳಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಬೀರೂರು ಪೊಲೀಸ್ ಠಾಣೆಯಲ್ಲಿ ಮನುಷ್ಯ ಕಾಣೆ ಪ್ರಕರಣ ದಾಖಲಿಸಿಕೊಂಡು, ಯುವಕನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
-
State10 hours agoರೇಷನ್ ಕಾರ್ಡ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಅವಕಾಶ!!
-
Hassan6 hours agoಭಗತ್ಸಿಂಗ್ ಜನ್ಮದಿನದ ಅಂಗವಾಗಿ ಸೆ.27ರಂದು ರಾಜ್ಯಮಟ್ಟದ ವೈಚಾರಕ ಸಮಾವೇಶ
-
Mysore7 hours agoFIR ದಾಖಲಾದ ಬೆನ್ನಲ್ಲೇ ಪ್ರತಾಪ್ ಸಿಂಹ ಪ್ರತಿಕ್ರಿಯೆ
-
Kodagu9 hours agoಕರಿಕೆಯಲ್ಲಿ ಪೋಷಣ್ ವಾಟಿಕಾ ಉತ್ಪನ್ನ ಹಾಗೂ ಸ್ಥಳೀಯ ಆಹಾರ ಪ್ರದರ್ಶನ
-
National4 hours agoSIR ವಿಚಾರ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
-
Chamarajanagar2 hours agoಸಂಚಾರಿ ನಿಯಮ ಉಲ್ಲಂಘನೆ ಪತ್ತೆಗೆ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ
-
State8 hours agoಕಸ್ತೂರಿ ರಂಗನ್ ವರದಿ; ಸುಪ್ರೀಂ ಕೋರ್ಟ್ನಲ್ಲಿ ರಾಜ್ಯದ ಅಭಿಪ್ರಾಯ ಮಂಡಿಸಲು ಹಿರಿಯ ವಕೀಲರ ನೇಮಕ: ಡಿಕೆಶಿ
-
Chikmagalur1 hour agoಸೆ. 30ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆ : ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಂದ ಸ್ಥಳ ಪರಿಶೀಲನೆ
