Kodagu
ಸುಗ್ರಿವಾಜ್ಞೆ ಅನುಷ್ಠಾನಕ್ಕೂ ಮೊದಲು ಬಡವರ ಸಾಲಮನ್ನಾ ಮಾಡಲಿ: ಯುವ ಜೆಡಿಎಸ್ ಆಗ್ರಹ

ಮಡಿಕೇರಿ : ಮೈಕ್ರೋಫೈನಾನ್ಸ್ ಗಳಿಂದ ಸಾಲಪಡೆದವರಿಗೆ ಆಗುತ್ತಿರುವ ಕಿರುಕುಳವನ್ನು ತಪ್ಪಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ಜಾರಿಗೆ ತಂದು ಕೆಲವು ನಿಯಮಗಳನ್ನು ರೂಪಿಸಿರುವುದು ಸ್ವಾಗತಾರ್ಹ. ಆದರೆ ಈ ನಿಯಮಗಳ ಅನುಷ್ಠಾಕ್ಕೂ ಮೊದಲು ಬಡವರು ಪಡೆದುಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಲಿ ಎಂದು ಯುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾಧ್ಯಕ್ಷ ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮೈಕ್ರೋಫೈನಾನ್ಸ್ ಗಳ ಕಿರುಕುಳಕ್ಕೆ ಅಂಕುಶ ಹಾಕುವುದಾಗಿ ಹೇಳಿಕೊಂಡಿದೆ. ಆದರೆ ಸರ್ಕಾರದ ಘೋಷಣೆಯ ನಂತರವೂ ಮೈಕ್ರೋಫೈನಾನ್ಸ್ ನ ಸಿಬ್ಬಂದಿಗಳು ಸಾಲ ಪಡೆದವರ ಮನೆಗಳಿಗೆ ತೆರಳಿ ಸಾಲದ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವುದು ಕಂಡು ಬಂದಿದೆ. ಬಡವರ ಮೇಲೆ ಸರ್ಕಾರಕ್ಕೆ ನೈಜ ಕಾಳಜಿ ಇದ್ದರೆ ಮೊದಲು ಸಾಲಮನ್ನಾ ಮಾಡಲಿ, ನಂತರ ಕಾನೂನು ಕ್ರಮದ ಪ್ರಕ್ರಿಯೆಯನ್ನು ಆರಂಭಿಸಲಿ ಎಂದು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಸಾಲದಬಾಧೆ ತಾಳಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವು ಭಾಗಗಳಲ್ಲಿ ಸಾಲಗಾರರ ಕಿರುಕುಳದಿಂದ ಬೇಸತ್ತು ಊರು ಬಿಟ್ಟವರೂ ಇದ್ದಾರೆ. ಅಧಿಕ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರೇ ಸಾಲ ಪಡೆದಿದ್ದು, ಬಡ್ಡಿ ಸಹಿತ ಅಸಲು ಪಾವತಿಸಲಾಗದೆ ಪರದಾಡುತ್ತಿದ್ದಾರೆ. ಮಕ್ಕಳ ವಿದ್ಯಾಭ್ಯಾಸ ಮತ್ತು ವಿವಾಹ ಮಾಡಲು ಹೆಚ್ಚಿನವರು ಸಾಲ ಮಾಡಿಕೊಂಡಿದ್ದು, ಬಡ್ಡಿಯ ಮೊತ್ತ ಏರುತ್ತಲೇ ಇದೆ.
ಸರ್ಕಾರದ ನಿಯಮಗಳು ಜಾರಿಯಾಗಲು ಒಂದಷ್ಟು ದಿನಗಳು ಬೇಕಾಗಬಹುದು, ಜಾರಿಯಾದರೂ ಬಡವರು ಹಾಗೂ ಕೂಲಿ ಕಾರ್ಮಿಕರು ಸಾಲದಿಂದ ಮುಕ್ತರಾಗಲು ಸಾಧ್ಯವಾಗುವುದಿಲ್ಲ. ಪಾವತಿಸಬೇಕಾದ ಹಣವನ್ನು ಮೈಕ್ರೋಫೈನಾನ್ಸ್ ಗಳಿಗೆ ಪಾವತಿಸಲೇಬೇಕಾಗುತ್ತದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು ತತ್ತರಿಸಿ ಹೋಗಿದ್ದಾರೆ.
ಹೊರ ರಾಜ್ಯಗಳ ಕಾರ್ಮಿಕರ ಬಳಕೆ, ತೋಟಗಳಲ್ಲಿ ವನ್ಯಜೀವಿಗಳ ಹಾವಳಿ ಮತ್ತು ಹವಾಗುಣದ ವೈಪರೀತ್ಯದಿಂದ ಸ್ಥಳೀಯ ಕಾರ್ಮಿಕರು ವಾರದ ಆರೂ ದಿನವೂ ದುಡಿದು ಸಂಪಾದಿಸಲು ಸಾಧ್ಯವಾಗುತ್ತಿಲ್ಲ. ಅಲ್ಪಪ್ರಮಾಣದ ಸಂಪಾದನೆಯಲ್ಲಿ ಮನೆ ನಿರ್ವಹಣೆ, ಮಕ್ಕಳ ಶಿಕ್ಷಣ, ವಿವಾಹ ಮತ್ತು ಆರೋಗ್ಯವನ್ನು ನೋಡಿಕೊಳ್ಳಬೇಕಾಗಿದೆ. ಇಂದು ಪ್ರತಿಯೊಂದು ವಸ್ತುವಿನ ಬೆಲೆಯು ದುಬಾರಿಯಾಗಿದ್ದು, ಆದಾಯ ಕಡಿಮೆಯಾಗಿದೆ.
ಇದೇ ಕಾರಣದಿಂದ ಬಡವರು ಹಾಗೂ ಕೂಲಿ ಕಾರ್ಮಿಕರು ಮೈಕ್ರೋಫೈನಾನ್ಸ್ ಗಳಿಂದ ಬಡ್ಡಿಗೆ ಸಾಲ ಪಡೆದುಕೊಂಡಿದ್ದಾರೆ. ಬಡ್ಡಿ ಬೆಳೆಯುತ್ತಲೇ ಇದ್ದು, ಸಾಲ ಪಡೆದವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲ ನೀಡಿದವರು ರಾತ್ರಿ ಹಗಲೆನ್ನದೆ ಸಾಲ ವಸೂಲಾತಿಗೆ ಮನೆ ಬಾಗಿಲಿಗೆ ಹೋಗುತ್ತಿದ್ದಾರೆ. ಇದರಿಂದ ಮನನೊಂದ ಕುಟುಂಬಗಳು ಕೆಟ್ಟ ನಿರ್ಧಾರಗಳನ್ನು ಮಾಡುವ ಸಾಧ್ಯತೆಗಳಿದೆ.
ಆದ್ದರಿಂದ ಪ್ರಸ್ತುತ ಪಡೆದು ಆಗಿರುವ ಬಡವರ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಮೂಲಕ ಮೈಕ್ರೋಫೈನಾನ್ಸ್ ಗಳಿಗೆ ಆಗುವ ನಷ್ಟವನ್ನು ಸರ್ಕಾರವೇ ತುಂಬಬೇಕು. ಆ ಮೂಲಕ ಬಡವರ ನೆರವಿಗೆ ಸರ್ಕಾರ ಬರಬೇಕು ಎಂದು ಸಿ.ಎಲ್.ವಿಶ್ವ ಒತ್ತಾಯಿಸಿದ್ದಾರೆ.
Kodagu
ಕೊಡಗು ಜಿಲ್ಲಾಡಳಿತ ಭವನದಲ್ಲಿ ಆಧುನಿಕ ತಂತ್ರಜ್ಞಾನದ ಲಿಫ್ಟ್ ಭಾಗ್ಯ

ಕೊಡಗು: ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾಡಳಿತ ಭವನದ ಸಂಕೀರ್ಣಕ್ಕೆ ಆಧುನಿಕ ತಂತ್ರಜ್ಞಾನದ ನೂತನ ಲಿಫ್ಟ್ ಅಳವಡಿಕೆ ಆಗಲಿದೆ. ಸುಮಾರು 14 ಲಕ್ಷ ರೂ ವೆಚ್ಚದಲ್ಲಿ ಸಂಪೂರ್ಣ ರಸ್ಟ್ ಪ್ರೂಫ್ ಲಿಫ್ಟ್ ಇನ್ನು ಮೂರು ವಾರಗಳ ಒಳಗಾಗಿ ಅಳವಡಿಸಿ ಸಾರ್ವಜನಿಕ ಬಳಕೆಗೆ ಲಭ್ಯವಾಗಲಿದೆ ಎಂದು ನಿರ್ವಹಣೆ ಹೊತ್ತ ಸಂಸ್ಥೆ ಮಾಹಿತಿ ನೀಡಿದೆ.
ಜಿಲ್ಲಾಡಳಿತ ಭವನ ಲೋಕಾರ್ಪಣೆ ಗೊಂಡು ಐದು ವರ್ಷಗಳಲ್ಲಿಯೇ ಪದೇ ಪದೇ ರಿಪೇರಿಯಾಗಲು ಆರಂಭಿಸಿತ್ತು. ಕಟ್ಟಡ ನಿರ್ಮಾಣ ಕಾಲದಲ್ಲಿ ಕಾಮಗಾರಿ ವಸ್ತುಗಳನ್ನು ಸಾಗಿಸಲು ಲಿಫ್ಟ್ ಬಳಕೆಯಾದ್ದರಿಂದ ಅದರ ಸಾಮರ್ಥ್ಯ ಕೂಡ ಕುಗ್ಗಿತ್ತು. ಕಳೆದ ಡಿಸೆಂಬರ್ ನಲ್ಲಿ ಸಂಪೂರ್ಣ ಬಂದ್ ಆಗಿತ್ತು. ಕೊಡಗು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರಿಂದ ಸಂಪೂರ್ಣ ಮಾಹಿತಿ ಪಡೆದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಮತ್ತು ಡಾ ಮಂತರ್ ಗೌಡ ಅವರು ಲಿಫ್ಟ್ ನ್ನು ರಿಪೇರಿ ಮಾಡುವ ಬದಲು ಹೊಸ ಲಿಫ್ಟ್ ಖರೀದಿಗೆ ಸೂಚನೆ ನೀಡಿದ ಮೇರೆಗೆ ದಿನಾಂಕ 31-1-2025 ರಂದು ಜಿಲ್ಲಾಧಿಕಾರಿಗಳು ಟೆಂಡರ್ ಕರೆದು ದಿನಾಂಕ 4-3-2025 ರಂದು ಕಾರ್ಯಾದೇಶವನ್ನು ಲಿಫ್ಟ್ ತಯಾರಿಕೆಯಲ್ಲಿ ಪ್ರತಿಷ್ಠಿತ ಸಂಸ್ಥೆ ಯಾಗಿರುವ ಬೆಂಗಳೂರಿನ ಸ್ವಿಫ್ಟ್ ಸ್ಪೇಸ್ ಎಲಿವೇಟರ್ಸ್ ಸಂಸ್ಥೆಗೆ ನೀಡಲಾಯಿತು.
ಹಳೆಯ ಲಿಫ್ಟ್ ನ್ನು ಸ್ಥಳಾಂತರಿಸುವ ಕೆಲಸ ಮುಗಿದಿದ್ದು, ಹೊಸ ಲಿಪ್ಟ್ ಅಳವಡಿಕೆಗೆ ಸಂಸ್ಥೆ ಸಿದ್ದತೆ ನಡೆಸುತ್ತಿದೆ. ಇನ್ನು ಮೂರು ವಾರಗಳಲ್ಲಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಲಿದೆ. ಲಿಫ್ಟ್ ಇಲ್ಲದೆ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ವೃದ್ದರು ಮತ್ತು ವಿಶೇಷ ಚೇತನರು ಜಿಲ್ಲಾಡಳಿತ ಭವನದ ಮೂರನೇ ಮಹಡಿ ತಲುಪಲು ಪ್ರಯಾಸ ಪಡುತ್ತಿದ್ದು, ಈಗ
ಉಸ್ತುವಾರಿ ಸಚಿವರು, ಕೊಡಗಿನ ಶಾಸಕದ್ವಯರು ಹಾಗೂ ಕೊಡಗು ಜಿಲ್ಲಾಧಿಕಾರಿಗಳ ಕಾಳಜಿಯಿಂದ ನಿಟ್ಟುಸಿರು ಬಿಡುವಂತೆ ಆಗಿದೆ.
Kodagu
ಮಾ.25 ಮತ್ತು 26 ರಂದು ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಾರ್ಚ್, 25 ಮತ್ತು 26 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಮಾರ್ಚ್, 25 ರಂದು ಬೆಳಗ್ಗೆ 11 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ’ ಎಂಬ ಶೀರ್ಷಿಕೆಯಡಿ ಕನ್ನಡದಲ್ಲಿ 5ನೇ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 4.30 ಗಂಟೆಗೆ ಪೊನ್ನಂಪೇಟೆ ತಾಲ್ಲೂಕು ನಾಗರಹೊಳೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಭೇಟಿ ನೀಡಲಿದ್ದಾರೆ.
ಮಾರ್ಚ್, 26 ರಂದು ಬೆಳಗ್ಗೆ 10.30 ಗಂಟೆಗೆ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕುಗಳ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
Kodagu
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ

ಮಡಿಕೇರಿ : ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಎಂ.ಎಂ.ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ.
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯರಾತ್ರಿ 2.30 ಗಂಟೆಗೆ ಹೊರಟು ಮಡಿಕೇರಿಗೆ ಬೆಳಗ್ಗೆ 7.30 ಗಂಟೆಗೆ ತಲುಪಲಿದೆ.
ನಂತರ ಬೆಳಗ್ಗೆ 11.30 ಗಂಟೆಗೆ ಮಡಿಕೇರಿಯಿಂದ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದೆ. ಕೆಎಸ್‍ಆರ್‍ಟಿಸಿ ಬೆಂಗಳೂರು ಕೇಂದ್ರ ವಿಭಾಗದ ನಾಲ್ಕನೇ ಘಟಕದಿಂದ ಪ್ಲೈ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಮೆಹಬೂಬ್ ಅಲಿ ಅವರು ತಿಳಿಸಿದ್ದಾರೆ
-
Mandya6 hours ago
ಜನಮಿತ್ರ ಫಲಶೃತಿ: ಹೆಬ್ಬಾಡಿಹುಂಡಿ ಗ್ರಾಮದ ಸ್ಮಶಾನ ಜಾಗದ ರಸ್ತೆ ಬೇಲಿಗೆ ಸಿಗ್ತು ಉತ್ತರ
-
Hassan14 hours ago
ಹಾಸನದಲ್ಲಿ ಭಾರೀ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ
-
Mandya10 hours ago
ಜೆಎಸ್ಎಸ್ ಕಾಲೇಜಿನಲ್ಲಿ ಪತ್ರಿಕಾ ಬರಹ ಕುರಿತು ಕಾರ್ಯಾಗಾರ
-
Kodagu11 hours ago
ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
-
Mandya8 hours ago
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕರೆ ಕೂಡಲೇ ತಿಳಿಸಿ
-
Hassan13 hours ago
ಕ್ಷಯ ಮುಕ್ತ ಭಾರತವನ್ನಾಗಿ ಮಾಡಲು ಎಲ್ಲಾರೂ ಕೈಜೋಡಿಸಿ: ಡಿಸಿ ಸಿ. ಸತ್ಯಭಾಮ
-
Kodagu9 hours ago
ನಿವೃತ್ತ ಶಿಕ್ಷಕಿಯಿಂದ ಕಕ್ಕಬ್ಬೆ ಯುವಕಪಾಡಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಚಾರಣ ಭಾಗ್ಯ
-
Kodagu7 hours ago
ಮಡಿಕೇರಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲೈಬಸ್ ಸಂಚಾರ