Connect with us

Manglore

ಬೈಕಂಪಾಡಿ ಫಾರ್ಚುನ್ ಇಂಡಸ್ಟ್ರೀಸ್ ಘಟಕಕ್ಕೆ ಬೀಗಮುದ್ರೆ

Published

on

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಫಾರ್ಚುನ್ ಇಂಡಸ್ಟ್ರೀಸ್‌ನ ಚೀಸ್ ಬಾಲ್ ಸ್ನ್ಯಾಕ್ಸ್ ತಯಾರಿಕಾ ಘಟಕದಲ್ಲಿ ಹೆಗ್ಗಣಗಳು ಓಡಾಡುತ್ತಿರುವುದು ಹಾಗೂ ತೀವ್ರ ಅನೈರ್ಮಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಘಟಕವನ್ನು ಸೀಲ್ ಮಾಡಿ ಮುಚ್ಚಲಾಗಿದೆ.


ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಅನಿರೀಕ್ಷಿತ ತಪಾಸಣೆ ವೇಳೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ. ಪ್ರವೀಣ್ ಕುಮಾರ್ ಸಿ.ಎಚ್. ನೇತೃತ್ವದ ತಂಡ ಈ ಕ್ರಮ ಕೈಗೊಂಡಿದೆ.

Continue Reading

Manglore

ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

Published

on

ಉಡುಪಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳು ಕಳೆದಿವೆ. ಆದರೆ ಹೇಳಿಕೊಳ್ಳುವಂತಹ ಯಾವುದೇ ಸಾಧನೆ ಮಾಡಿಲ್ಲ. ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ತಮ್ಮ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಈ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಕೊಡುಗೆ ಏನು? ಇದರ ಆರ್ಥಿಕ ಹೊರೆಯನ್ನು ಯಾರ ಮೇಲೆ ಹಾಕಲಾಗುತ್ತಿದೆ ಎಂದು ಪ್ರಶ್ನಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಜನರು ಕಷ್ಟಪಟ್ಟು ದುಡಿಯುತ್ತಿದ್ದಾರೆ. ತೆರಿಗೆ ರೂಪದಲ್ಲಿ ರಾಜ್ಯದ ಬೊಕ್ಕಸಕ್ಕೆ ಹಣ ತುಂಬುತ್ತಿದ್ದಾರೆ. ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಗಳಿಗಿಂತ ರಾಜ್ಯದ ಜನರು ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತೆರಿಗೆ ಹೆಚ್ಚಿಸುವ ಮೂಲಕ ಹಣ ಸಂಗ್ರಹಿಸುತ್ತಿದೆ. ಜನರ ಹಣವನ್ನು ದುರುಪಯೋಗಪಡಿಸುತ್ತಿದೆ ಎಂದರು.

ಕರಾವಳಿ ಭಾಗದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗೆ 35 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗಿತ್ತು. ಘೋಷಣೆ ಮಾಡಿ ಎರಡರಿಂದ ಮೂರು ತಿಂಗಳು ಕಳೆದಿವೆ. ಆದರೆ ಆ ಹಣ ಎಲ್ಲಿದೆ?. ಕೇವಲ ಘೋಷಣೆಗಳ ಮೂಲಕ ಕರಾವಳಿ ಭಾಗದ ಜನರನ್ನು ಸಮಾಧಾನಪಡಿಸಬಹುದು ಎಂದು ಸರ್ಕಾರ ಭಾವಿಸಿದ್ದರೆ, ಮುಂದಿನ ಪರಿಣಾಮಗಳನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ಧವಾಗಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ನವರು ಪದೇಪದೇ ಹೆಚ್‌ ಡಿ ಕುಮಾರಸ್ವಾಮಿ ಅವರಿಗೆ ಹೊಟ್ಟೆಕಿಚ್ಚು, ಸುಳ್ಳೇ ಅವರ ಕುಟುಂಬದ ದೇವರು ಎಂದು ಆರೋಪಿಸುತ್ತಾರೆ. ಆದರೆ ಜನರಿಗೆ ಸುಳ್ಳು ಹೇಳಿ ವಂಚಿಸುತ್ತಿರುವುದು ರಾಜ್ಯ ಸರ್ಕಾರವೇ ಹೊರತು ನಾವಲ್ಲ ಎಂದರು.

ಹಾಸನದ ಹಾಸನಾಂಬ ದೇವಸ್ಥಾನದಿಂದ 29 ಕೋಟಿ ರೂಪಾಯಿ ಆದಾಯ ಸಂಗ್ರಹವಾಗಿದೆ. 2025ರಲ್ಲಿ ಬಸ್ ಪ್ರಯಾಣ ದರವನ್ನು ಶೇ.35ರಷ್ಟು ಹೆಚ್ಚಿಸಲಾಗಿತ್ತು. ಇದೀಗ ಮತ್ತೆ ಶೇ.45ರಷ್ಟು ದರ ಏರಿಕೆ ಮಾಡಲಾಗಿದೆ. ಅಬಕಾರಿ ಇಲಾಖೆಯಿಂದ ಸುಮಾರು 40ಸಾವಿರ ಕೋಟಿ ರೂ. ಆದಾಯ ಸಂಗ್ರಹವಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಸರ್ಕಾರ ಜನರ ಬದುಕನ್ನು ಸಂಕಷ್ಟಕ್ಕೆ ದೂಡುತ್ತಿದೆ. ಭಾರತ್ ಜೋಡೋ ಅಭಿಯಾನದ ಬಗ್ಗೆ ತೋರುವ ಕಾಳಜಿಯನ್ನು ರೈತರ ವಿಚಾರದಲ್ಲಿ ತೋರುತ್ತಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸಿದರೂ ಅವರಿಗೆ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಈವರೆಗೂ ಕಬ್ಬು ಬೆಳೆಗಾರರ ನೆರವಿಗೆ ಬಂದಿಲ್ಲ. ಸಮರ್ಪಕವಾಗಿ ನೀರು ಹಂಚಿಕೆ ಮಾಡದ ಕಾರಣ ಕಬ್ಬಿನ ಬೆಳೆ ಸಂಪೂರ್ಣ ನಾಶವಾಗಿದೆ. ಮತ್ತೊಂದೆಡೆ, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿದ್ದಾರೆ. ರೈತರು ಭಾರಿ ನಷ್ಟ ಅನುಭವಿಸುತ್ತಿರುವಾಗ ಇಂತಹ ಪರಿಸ್ಥಿತಿಯನ್ನು ಹೇಗೆ ಸಮರ್ಥಿಸಿಕೊಳ್ಳಲು ಸಾಧ್ಯ‌ಎಂದರು.

ಹಿರಿಯೂರು ಉಪಚುನಾವಣೆ ವಿಚಾರಕ್ಕೆ ಪ್ರತಿಕ್ರಿಯೆ:

ಹಿರಿಯೂರು ಉಪಚುನಾವಣೆ ಕುರಿತು ಎಚ್.ಡಿ. ಕುಮಾರಸ್ವಾಮಿ ಮಾತನಾಡಿ, ಬಿಜೆಪಿ ತನ್ನ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಬಯಸುತ್ತಿದೆ. ಆದರೆ ಸಾಂಪ್ರದಾಯಿಕವಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸ್ಪರ್ಧೆ ನಡೆಯುತ್ತಾ ಬಂದಿದೆ. 2013ರಲ್ಲಿ ಜೆಡಿಎಸ್ ಅಭ್ಯರ್ಥಿ ಕೇವಲ ಒಂದು ಸಾವಿರ ಮತಗಳ ಅಂತರದಿಂದ ಸೋತಿದ್ದರು. 2018ರಲ್ಲಿ ಅನುಕಂಪದ ಆಧಾರದ ಮೇಲೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ವೈಯಕ್ತಿಕವಾಗಿ ಹಿರಿಯೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ನನಗೆ ಯಾವುದೇ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವೂ ಇಲ್ಲ ಎಂದರು.

ಇದೀಗ ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದೇನೆ. ಹಿರಿಯೂರು ಕ್ಷೇತ್ರದಲ್ಲಿ ಜೆಡಿಎಸ್ ಸುಮಾರು 40 ಸಾವಿರ ಮತಗಳ ಮತಬ್ಯಾಂಕ್ ಹೊಂದಿದೆ. ಹೀಗಾಗಿ ಜೆಡಿಎಸ್ ಗೆಲುವು ಸಾಧಿಸುವ ಸಾಧ್ಯತೆ ಇದೆ. ಹಿರಿಯೂರು ವಿಚಾರದಲ್ಲಿ ಯಾವುದೇ ಗೊಂದಲ ಅಥವಾ ಪ್ರತಿಷ್ಠೆಯ ಪ್ರಶ್ನೆ ಇಲ್ಲ. ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ತಾಳ್ಮೆಯಿಂದ ಇರುತ್ತೇವೆ‌ ಎಂದರು.

ರಾಜ್ಯದ ಸಂಕಷ್ಟ, ಬರ ಪರಿಹಾರಕ್ಕೆ ಪ್ರಾರ್ಥನೆ:

ಕರಾವಳಿಯು ಧಾರ್ಮಿಕ ಹಾಗೂ ಶೈಕ್ಷಣಿಕ ಕೇಂದ್ರಗಳ ಸಂಗಮವಾಗಿದೆ. ನಮ್ಮದು ದೇವರಲ್ಲಿ ಅಪಾರ ನಂಬಿಕೆ ಹೊಂದಿರುವ ಕುಟುಂಬ. ಹಾಗಾಗಿ ರಾಜ್ಯವನ್ನು ಕಾಡುತ್ತಿರುವ ಸಂಕಷ್ಟ ಹಾಗೂ ಬರ ಪರಿಸ್ಥಿತಿ ನಿವಾರಣೆಯಾಗಲಿ ಎಂದು ಕೊಲ್ಲೂರು ಮೂಕಾಂಬಿಕಾ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

Continue Reading

Manglore

ಹಿರಿಯೂರು ಗೊಂದಲ ಇಲ್ಲ; ಒಮ್ಮತ ಅಭ್ಯರ್ಥಿಯನ್ನೇ ಕಣಕ್ಕಿಳಿಸುತ್ತೇವೆ ಎಂದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Published

on

ಕೊಲ್ಲೂರು : ಹಿರಿಯೂರು ವಿಧಾನಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ರಾಜ್ಯದ ಎನ್ಡಿಎ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ತಾಯಿ ಮೂಕಾಂಬಿಕೆ ದರ್ಶನ ಪಡೆದ ನಂತರ ಕೇಂದ್ರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಹೋರಾಡುವ ವಿಚಾರದಲ್ಲಿ ನಮ್ಮ ಮೈತ್ರಿಕೂಟದಲ್ಲಿ ಯಾವುದೇ ಬಗೆಯ ಭಿನ್ನ ನಿಲುವು ಇಲ್ಲ. ಅದೇ ರೀತಿ ಹಿರಿಯೂರು ಕ್ಷೇತ್ರದಲ್ಲಿಯೂ ಭ್ರಷ್ಟ ಕಾಂಗ್ರೆಸ ಪಕ್ಷವನ್ನು ನಾವು ಒಗ್ಗಟ್ಟಾಗಿಯೇ ಎದುರಿಸುತ್ತೇವೆ ಎಂದರು.

“ಜೆಡಿಎಸ್ ಹಾಗೂ ಬಿಜೆಪಿ ನಡುವೆ ಅತ್ಯುತ್ತಮ ಸಮನ್ವಯವಿದೆ. ಕಾಂಗ್ರೆಸ್ ನಾಯಕರು ನಮ್ಮ ಮೈತ್ರಿಯಲ್ಲಿ ಬಿರುಕು ಮೂಡಿಸುವ ಹಗಲುಗನಸು ಕಾಣುತ್ತಿದ್ದಾರೆ. ಆದರೆ, ರಾಜ್ಯದ ಹಿತದೃಷ್ಟಿಯಿಂದ ನಾವು ಒಟ್ಟಾಗಿ, ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮತ್ತು ಹಗರಣಗಳನ್ನು ಜನರೆದುರು ಬಯಲು ಮಾಡಲು ಮುಂದಿನ ದಿನಗಳಲ್ಲಿ ಎರಡೂ ಪಕ್ಷಗಳ ನಾಯಕರು ಸೇರಿ ಜಂಟಿಯಾಗಿ ಇನ್ನಷ್ಟು ತೀವ್ರ ಸ್ವರೂಪದ ಹೋರಾಟಗಳನ್ನು ರೂಪಿಸುತ್ತೇವೆ” ಎಂದು ಅವರು ಅವರು ತಿಳಿಸಿದರು.


ಹಿರಿಯೂರು ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ವಿಚಾರದಲ್ಲಿ ಪರಸ್ಪರ ಚರ್ಚೆ ನಡೆಸಿ ತೀರ್ಮಾನಕ್ಕೆ ಬರುತ್ತೇವೆ. ಒಳ್ಳೆಯ ಅಭ್ಯರ್ಥಿಯನ್ನು ನಾವು ಕಣಕ್ಕೆ ಇಳಿಸುತ್ತೇವೆ ಎಂದು ಸಚಿವರು ಪ್ರಶ್ನೆ ಒಂದಕ್ಕೆ ಉತ್ತರ ನೀಡಿದರು.

ರಾಜ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯನ್ನು ಬಿಟ್ಟು ವ್ಯಾಪಕ ಭ್ರಷ್ಟಾಚಾರದಲ್ಲಿ ನಿರತವಾಗಿದೆ. ಪ್ರತಿದಿನವೂ ಸರ್ಕಾರದ ಅಕ್ರಮಗಳ ಬಗ್ಗೆ ವರದಿಗಳು ಬರುತ್ತವೆ. ಜನರ ನಿರೀಕ್ಷೆಯನ್ನು ಸುಳ್ಳು ಮಾಡಿರುವುದರಿಂದ ಈ ಸರ್ಕಾರದ ವಿರುದ್ಧ ಈಗಾಗಲೇ ಜನ ವಿರೋಧಿ ಅಲೆ, ದೊಡ್ಡ ಮಟ್ಟದಲ್ಲಿ ಎದ್ದಿದೆ ಎಂದು ಅವರು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಚಿವ ಕುಮಾರಸ್ವಾಮಿ ಅವರು; ಬರೀ ಗ್ಯಾರಂಟಿಗಳನ್ನು ಕೊಟ್ಟು ಅಭಿವೃದ್ಧಿ ಮಾಡಿದ್ದೇವೆ ಎಂದು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಹಾಗೂ ಕೇಂದ್ರದ ಸರ್ಕಾರದ ಮೇಲೆ ವಿನಾಕಾರಣ ಗೂಬೆ ಕೂರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿಗಳಿಂದ ಆರ್ಥಿಕ ದಿವಾಳಿತನ:

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ‘ಐದು ಗ್ಯಾರಂಟಿ’ಗಳನ್ನು ನೀಡುತ್ತಿರುವುದಾಗಿ ಹೇಳಿಕೊಳ್ಳುವ ಸರ್ಕಾರಕ್ಕೆ ಹಣ ಎಲ್ಲಿಂದ ಬರುತ್ತಿದೆ? ಮುಖ್ಯಮಂತ್ರಿ ಅಥವಾ ಮಂತ್ರಿಗಳು ತಮ್ಮ ಜೇಬಿನಿಂದ ಕೊಡುತ್ತಿದ್ದಾರೆಯೇ? ಎಂದು ಕೇಂದ್ರ ಸಚಿವರು ಖಾರವಾಗಿ ಪ್ರಶ್ನಿಸಿದರು.

ಮುದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಹಾಗೂ ಅಬಕಾರಿ ಸುಂಕವನ್ನು ಮನಬಂದಂತೆ ಹೆಚ್ಚಿಸಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಿ ₹32,000 ಕೋಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರೂ, ಬೊಕ್ಕಸದಲ್ಲಿ ಹಣವಿಲ್ಲದಿರುವಾಗ ಇದೆಲ್ಲ ಕೇವಲ ಕಣ್ಣೊರೆಸುವ ತಂತ್ರವಲ್ಲದೆ ಇನ್ನೇನು? ಅಷ್ಟು ಹಣವನ್ನು ಎಲ್ಲಿಂದ ತರುತ್ತಾರೆ? ಅವರು ಪ್ರಶ್ನಿಸಿದರು.

ಬರಗಾಲದ ನಿರ್ವಹಣೆ ಹಾಗೂ ರೈತರಿಗೆ ಪರಿಹಾರ ಒದಗಿಸುವ ವಿಚಾರದಲ್ಲಿ ಕೇಂದ್ರ ಸರ್ಕಾರದ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ನಿಲುವು ಹೊಂದಿದೆ. ಕೇಂದ್ರದ ಮುಂದೆ ಎನ್ ಡಿ ಆರ್ ಎಫ್ (NDRF) ನಿಯಮಗಳ ಅಡಿಯಲ್ಲಿ ಪರಿಹಾರದ ಬೇಡಿಕೆಯನ್ನು ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಕೇಳುತ್ತಿಲ್ಲ. ಪದೇಪದೇ ನನ್ನ ಅಭಿಪ್ರಾಯವನ್ನು ಬದಲಿಸುತ್ತಿದೆ. ಮೊದಲು ಕೇವಲ ₹3,000 ಕೋಟಿ ಕೇಳಿದ್ದ ಕಂದಾಯ ಸಚಿವರು, ನಂತರ ಅದನ್ನು ₹7,500 ಕೋಟಿಗೆ, ಬಳಿಕ ₹11,000 ಕೋಟಿಗೆ ಹಾಗೂ ಈಗ ಬರೋಬ್ಬರಿ ₹22,000 ಕೋಟಿಗೆ ಏರಿಸಿದ್ದಾರೆ. ಪ್ರಧಾನಮಂತ್ರಿಗಳ ಮುಂದೆಯೇ ₹62,000 ಕೋಟಿ ಕೃಷಿ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಹೇಳಿ, ಯಾವುದೇ ಸ್ಪಷ್ಟ ಲೆಕ್ಕಾಚಾರವಿಲ್ಲದೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಯತ್ನವನ್ನು ಮಾಡುತ್ತಿದ್ದಾರೆ ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ರೈತರು ಎಕರೆಗೆ ₹15,000-20,000. ಖರ್ಚು ಮಾಡಿದ್ದರೆ, ರಾಜ್ಯ ಸರ್ಕಾರ ಕೇವಲ ₹2,000 ಅಲ್ಪ ಪರಿಹಾರ ನೀಡಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಕಾರ್ಮಿಕರ ಹಣ ಹಾಗೂ ದೇಗುಲಗಳ ಹುಂಡಿ ಹಣದ ಮೇಲೆ ಕಣ್ಣು:

ಕಾಂಗ್ರೆಸ್ ಸರ್ಕಾರ ಬಿದ್ದ ಮತ್ತೊಂದು ಗಂಭೀರ ಆರೋಪ ಮಾಡಿದೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ₹40,000 ಕೋಟಿ ಸೆಸ್ ಹಣವನ್ನು ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದರು.

ಇಷ್ಟು ಬೃಹತ್ ಮೊತ್ತದ ಹಣವನ್ನು ರಾಜ್ಯ ಸರ್ಕಾರ ಅನ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದೆಯಾ ಅಥವಾ ಲೂಟಿ ಮಾಡಲಾಗುತ್ತಿದೆಯಾ? ಎಂದು ಪ್ರಶ್ನಿಸಿದ ಸಚಿವರು; ಸರ್ಕಾರಿ ಶಾಲೆಗಳ ನಿರ್ವಹಣೆಗೂ ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಸಾಲ ಹಾಗೂ ಸಿಎಸ್ಆರ್ ನಿಧಿಯನ್ನು ನೆಚ್ಚಿಕೊಳ್ಳುವ ದುಸ್ಥಿತಿ ಬಂದಿದೆ ಎಂದರು.

ಇತ್ತೀಚೆಗೆ ಹಾಸನಾಂಬ ದೇವಸ್ಥಾನದಲ್ಲಿ ದಾಖಲೆಯ ₹29 ಕೋಟಿ ಆದಾಯ ಸಂಗ್ರಹವಾಗಿದ್ದು, ಸರ್ಕಾರದ ಕಣ್ಣು ಈಗ ಇಂತಹ ಧಾರ್ಮಿಕ ಕೇಂದ್ರಗಳ ಹುಂಡಿ ಹಣದ ಮೇಲೂ ಬಿದ್ದಿದೆ. ದೇವಸ್ಥಾನಗಳ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಬೇರೆಡೆಗೆ ತಿರುಗಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವರು ತೀವ್ರ ಕಳವಳ ವ್ಯಕ್ತಪಡಿಸಿದರು.

ಸ್ಟಿಂಗ್ ಪ್ರಕರಣ, ಪೊಲೀಸ್ ಕಮಿಷನರ್ ವಿರುದ್ಧ ವಾಗ್ದಾಳಿ:

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಬಗ್ಗೆಯೂ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ತಮ್ಮ ದೆಹಲಿ ನಿವಾಸದಲ್ಲಿಯೇ ಪ್ರಕರಣದ ಆರೋಪಿಗೆ ಮೊಬೈಲ್ ಹಸ್ತಾಂತರವಾಗಿದೆ ಎಂಬ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆಯನ್ನು ಕಟುವಾಗಿ ಟೀಕಿಸಿದ ಅವರು, “ಕಮಿಷನರ್ ಒಬ್ಬ ಹೆಡ್ ಕ್ಲರ್ಕ್ ಗಿಂತ ಕಡೆಯಾಗಿ ಹೇಳಿಕೆ ನೀಡಿದ್ದಾರೆ, ತಮ್ಮ ಜಾಗ ಉಳಿಸಿಕೊಳ್ಳಲು ಅವರು ಯಾರ ಹಂಗಿನಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ” ಎಂದು ಹರಿಹಾಯ್ದರು.

ಈ ಸರ್ಕಾರ ಮತ್ತು ಅಧಿಕಾರಿಗಳಿಂದ ಕುಮಾರಸ್ವಾಮಿಯನ್ನು ಅಷ್ಟು ಸುಲಭವಾಗಿ ಎದುರಿಸಲು ಅಥವಾ ಟಚ್ ಮಾಡಲು ಸಾಧ್ಯವಿಲ್ಲ ಎಂದ ಅವರು, ಸ್ಟಿಂಗ್ ಆಪರೇಷನ್ ಯಾರಿಗೆ ತಿರುಗುಬಾಣವಾಗಲಿದೆ ಎಂಬುದನ್ನು ಶೀಘ್ರದಲ್ಲೇ ಬಯಲು ಮಾಡುವುದಾಗಿ ಎಚ್ಚರಿಸಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ‘ಇದು ಕೇವಲ ಟ್ರೇಲರ್’ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು; ನಾನು ಸಿನಿಮಾ ಮಾಡಿದವನು, ಇವರು ಈಗ ಸಿನಿಮಾ ಮಾಡಲು ಶುರು ಮಾಡಿದ್ದಾರೆ, ಇವರ ಸಿನಿಮಾದ ಬಗ್ಗೆಯೂ ಮುಂದಿನ ದಿನಗಳಲ್ಲಿ ವಿವರವಾಗಿ ಹೇಳುತ್ತೇನೆ ಎಂದು ಕಿಡಿಕಾರಿದರು.

ಕ್ಷೇತ್ರ ದರ್ಶನಗಳ ಬಗ್ಗೆ ಹೇಳಿದ ಸಚಿವರು:

ನಮ್ಮದು ದೈವದಲ್ಲಿ ನಂಬಿಕೆ ಇರಿಸಿರುವ ಕುಟುಂಬವಾಗಿದೆ. ಬಹಳ ದಿನಗಳಿಂದ ಈ ಕ್ಷೇತ್ರಗಳಿಗೆ ಬರಬೇಕು ಎಂದು ಅಂದುಕೊಂಡಿದ್ದೆ. ಕೊಲ್ಲೂರು ಶ್ರೀ ಮೂಕಾಂಬಿಕೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ನಾಡಿಗೆ ಎದುರಾಗಿರುವ ಪ್ರಕೃತಿ ವಿಕೋಪ ಹಾಗೂ ಆಡಳಿತ ವೈಫಲ್ಯದ ಸಂಕಷ್ಟಗಳು ದೂರವಾಗಲಿ ಎಂದು ಪ್ರಾರ್ಥಿಸಲು ಬಂದಿದ್ದೇನೆ. ಕೊಲ್ಲೂರು ತಾಯಿಯಲ್ಲೂ ಕೂಡ ಇದನ್ನೇ ಕೇಳಿಕೊಂಡಿದ್ದೇನೆ ಎಂದು ಸಚಿವರು ಹೇಳಿದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ವಿಧಾನ ಪರಿಷತ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಸ್.ಎಲ್.ಭೋಜೇಗೌಡ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕುಟುಂಬ ಸಮೇತ ಮೂಕಾಂಬಿಕೆ ದರ್ಶನ ಪಡೆದ ಹೆಚ್ಡಿಕೆ:

ಇದಕ್ಕೂ ಮೊದಲು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ತಮ್ಮ ಪತ್ನಿ ಶ್ರೀಮತಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ, ಸೊಸೆ ಶ್ರೀಮತಿ ರೇವತಿ ನಿಖಿಲ್ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ತಾಯಿ ಮೂಕಾಂಬಿಕೆಯ ದರ್ಶನ ಪಡೆದುಕೊಂಡರು.

Continue Reading

Manglore

ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೇಟಿ

Published

on

ಉಡುಪಿ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಕಾಪು ಮಾರಿಯಮ್ಮ ಹಾಗೂ ಉಚ್ಚಂಗಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.


ಈ ವೇಳೆ ಅವರು ಕುಟುಂಬ ಸದಸ್ಯರೊಂದಿಗೆ ದೇವಸ್ಥಾನದ ಸಂಪ್ರದಾಯದಂತೆ ದೇವಸ್ಥಾನದ ವಿಶೇಷ ಸೇವೆ ಬೃಹತ್ ಗಂಟೆ ಭಾರಿಸುವ ಸೇವೆಯಲ್ಲೂ ಭಾಗವಹಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಮೊಯ್ದಿನ್ ಬಾವ, ಕಾಪು ಮಾರಿಗುಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಾಸುದೇವ ಶೆಟ್ಟಿ ಸೇರಿದಂತೆ ಹಲವು ಗಣ್ಯರು, ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

Continue Reading

Trending

error: Content is protected !!