Uncategorized
ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ರಾಜ್ಯಾದ್ಯಂತ ಸೆ.144 ಜಾರಿ

Loksabha Election 2024: ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಮತ ಎಣಿಕೆ ನಾಳೆ ನಡೆಯಲಿರುವ ಕಾರಣ, ಕಾನೂನು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.5 ರ ಬೆಳಿಗ್ಗೆ 06 ಗಂಟೆಯವರೆಗೆ ಸೆ.144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಚುನಾವಣಾ ಆಯೋಗ ಆದೇಶ ಮಾಡಿದೆ.
ಮತ ಎಣಿಕೆಯಾದ ನಂತರ ಜಯಗಳಿಸಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸಿದ್ದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಈ ಆದೇಶ ಹೊರಡಿಸಲಾಗಿದೆ.
ಷರತ್ತುಗಳೇನು?
ಐದಕ್ಕಿಂಗ ಹೆಚ್ಚು ಜನ ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ ಚಟುವಟಿಕೆ ನಡೆಸುವುದು, ಸ್ಫೋಟಕ, ದಹನ ವಸ್ತು, ಮಾರಕ ಆಯುಧ ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಜೊತೆಗೆ ಚುನಾವಣಾ ಅಭ್ಯರ್ಥಿ, ಬೆಂಬಲಿಗರು ಸೇರಿ ಐದು ಜನರಿಗಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಮತ ಎಣಿಕೆ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯ ಪ್ರದೇಶ ಸಂಪೂರ್ಣ ನಿರ್ಬಂಧಿತ ಪ್ರದೇಶವಾಗಿದ್ದು, ಇಲ್ಲಿ ವಾಹನ ನಿಲುಗಡೆ, ಧ್ವನಿವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧ ಮಾಡಿದೆ.
ವಾದ್ಯ ಬಾರಿಸುವುದು, ಘೋಷಣೆ ಪದ ಹಾಡುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧ ಮಾಡಿದೆ.
Uncategorized
ಡಿಸಿಎಂ ಡಿಕೆಗೆ ಶಾಸಕರ ಬೆಂಬಲವಿಲ್ಲವೆಂಬ ಹೇಳಿಕೆಯೂ ಶಾಲು ಅಲ್ಲ, ಡೈರೆಕ್ಟ್ ಆಗಿ ಹೊಡೆದಂತಿದೆ: ಸಿ.ಟಿ.ರವಿ

ಚಿಕ್ಕಮಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕರ ಬೆಂಬಲವೆಂದು ಸಿಎಂ ಸಿದ್ದರಾಮಯ್ಯ ನೇರವಾಗಿ ಹೇಳಿದ್ದು, ಇದು ಶಾಲಿನಲ್ಲಿ ಸುತ್ತಿಕೊಂಡು ಹೊಡೆದಂತಿಲ್ಲ, ಡೈರೆಕ್ಟ್ ಆಗಿ ಹೊಡೆದಂತಿದೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಇಂದು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ 136 ಶಾಸಕರು ಅವರ ಅಧ್ಯಕ್ಷತೆಯಲ್ಲಿಯೇ ಗೆದ್ದಿದ್ದು. ಆದರೆ ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ಈ ರೀತಿ ಅವಮಾನ ಮಾಡಿಸಿಕೊಂಡು ಡಿ.ಕೆ.ಶಿವಕುಮಾರ್ ಸುಮ್ಮನೆ ಹೇಗೆ ಇರುತ್ತಾರೆ? ಇಂತಹ ಮಾತುಗಳನ್ನು ಡಿ.ಕೆ.ಶಿವಕುಮಾರ್ ಸಹಿಸಿಕೊಂಡರೆ ಅವರ ವ್ಯಕ್ತಿತ್ವಕ್ಕೇ ಅಪಚಾರ ಎಂದು ಲೇವಡಿ ಮಾಡಿದ್ದಾರೆ.
Uncategorized
ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣ: ಸರ್ಕಾರಕ್ಕೆ ವರದಿ ಸಲ್ಲಿಸಿದ ನಿ.ನ್ಯಾ.ಮೈಕೆಲ್ ಡಿ ಕುನ್ಹಾ

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ನಿವೃತ್ತ ನ್ಯಾ. ಮೈಕೆಲ್ ಡಿ. ಕುನ್ಹಾ ನೇತೃತ್ವದ ಏಕಸದಸ್ಯ ತನಿಖಾ ಆಯೋಗವೂ ಮುಚ್ಚಿದ ಲಕೋಟೆಯಲ್ಲಿ ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ಎಂ.ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಜೂನ್.4 ರಂದು ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ, ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾ. ಮೈಕೆಲ್ ಡಿ. ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿತ್ತು. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಹೀಗಾಗಿ, ನಿವೃತ್ತ ನ್ಯಾ. ಮೈಕೆಲ್ ಡಿ. ಕುನ್ಹಾ ಅವರು ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಇಂದು ಸಿಎಂ ಕಚೇರಿಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದಾರೆ.

The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016.
The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಇನ್ನೂ ಈ ವರದಿಯ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಾಲ್ತುಳಿತ ಪ್ರಕರಣದ ಕುರಿತು ನಿವೃತ್ತ ನ್ಯಾ. ಮೈಕಲ್ ಡಿ. ಕುನ್ಹಾ ಅವರು ತನಿಖೆ ನಡೆಸಿ ಇಂದು ಎರಡು ಸಂಪುಟದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅದನ್ನು ಮುಂಬರುವ ಗುರುವಾರ (ಜು. 17) ದಂದು ನಡೆಯುವ ಸಚಿವ ಸಂಪುಟದಲ್ಲಿ ವರದಿ ಮಂಡಿಸುತ್ತೇನೆ ಎಂದು ಹೇಳಿದರು.
Uncategorized
ಪ್ರಧಾನಿ ಮೋದಿ ಸಂಕಲ್ಪ, ಹಸಿರು ಸಾರಿಗೆಗೆ ಉತ್ತೇಜನ: ಇ-ಟ್ರಕ್ ಆರ್ಥಿಕ ಉತ್ತೇಜನಾ ಯೋಜನೆ ಘೋಷಿಸಿದ ಎಚ್‌ಡಿಕೆ

ನವದೆಹಲಿ: ಸರಕು ಸಾಗಾಣೆ ವಲಯದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಶೂನ್ಯಮಟ್ಟಕ್ಕೆ ಇಳಿಸುವ ತನ್ನ ಬದ್ಧತೆಯನ್ನು ಪುನರುಚ್ಚರಿಸಿರುವ ನರೇಂದ್ರ ಮೋದಿ ಅವರ ಸರ್ಕಾರ, ಇದೇ ಮೊದಲ ಬಾರಿಗೆ ವಿದ್ಯುತ್ ಚಾಲಿತ ಟ್ರಕ್ ಗಳಿಗೆ (ಇ-ಟ್ರಕ್‌ಗಳು) ಆರ್ಥಿಕ ಉತ್ತೇಜನ ನೀಡುವ ಯೋಜನೆಯನ್ನು ಆರಂಭಿಸಿದೆ.
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ದೆಹಲಿಯ ತಮ್ಮ ಸಚಿವಾಲಯದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಈ ಯೋಜನೆಯನ್ನು ಪ್ರಕಟಿಸಿದ್ದು, ಪಿಎಂ ಇ ಡ್ರೈವ್ (PM E-DRIVE) ಯೋಜನೆಯ ಅಡಿಯಲ್ಲಿ ಟ್ರಕ್ ಗಳಿಗೆ ಪ್ರೋತ್ಸಾಹ ಧನ ಕೊಡಲಾಗುವುದು ಎಂದರು.
ದೇಶದಲ್ಲಿ ಸಾಮೂಹಿಕ ಸಾರಿಗೆ ಹಾಗೂ ಸರಕು ಸಾಗಣೆ ವ್ಯವಸ್ಥೆಯಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಪರಿಪೂರ್ಣವಾಗಿ ತಗ್ಗಿಸುವ ನಿಟ್ಟಿನಲ್ಲಿ ಪ್ರಧಾನಿ ಅವರ ಮಹತ್ವಾಕಾಂಕ್ಷೀಯ ಪಿಎಂ ಇ ಡ್ರೈವ್ ಯೋಜನೆಯನ್ನು ಈಗಾಗಲೇ ಅನುಷ್ಠಾನಕ್ಕೆ ತರಲಾಗಿದೆ. ಈ ಮೂಲಕ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಸ್ವಚ್ಛ, ದಕ್ಷ ಮತ್ತು ಸುಸ್ಥಿರ ಸರಕು ಸಾಗಣೆಗೆ ಪೂರಕವಾಗಿ ಪರಿವರ್ತನಾತ್ಮಕ ಹೆಜ್ಜೆಗಳನ್ನು ಇಡಲಾಗಿದೆ. ಕೇಂದ್ರ ಸರ್ಕಾರವು ವಿದ್ಯುತ್ ಟ್ರಕ್‌ಗಳಿಗೆ ನೇರ ಆರ್ಥಿಕ ಪ್ರೋತ್ಸಾಹ ನೀಡುತ್ತಿರುವುದು ಇದೇ ಮೊದಲು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಹೇಳಿದರು.
ಯೋಜನೆಯ ಮಹತ್ವವನ್ನು ವಿವರಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; “ಡೀಸೆಲ್ ಟ್ರಕ್‌ಗಳು ಒಟ್ಟು ವಾಹನ ಜನಸಂಖ್ಯೆಯಲ್ಲಿ ಕೇವಲ 3% ರಷ್ಟಿದ್ದರೂ, ಸಾರಿಗೆ ಸಂಬಂಧಿತ ಹಸಿರುಮನೆ ಅನಿಲ ಹೊರಸೂಸುವಿಕೆಯಲ್ಲಿ 42% ರಷ್ಟು ಕೊಡುಗೆ ನೀಡುತ್ತವೆ ಮತ್ತು ವಾಯುಮಾಲಿನ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಿಂದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ವಿದ್ಯುತ್ ಟ್ರಕ್‌ಗಳಿಗೆ ಮೀಸಲಾದ ಮೊತ್ತ ಮೊದಲ ಆರ್ಥಿಕ ಉತ್ತೇಜನ ಕಾರ್ಯಕ್ರಮ ಇದಾಗಿದೆ. ಈ ಮೂಲಕ ರಾಷ್ಟ್ರವನ್ನು ಸುಸ್ಥಿರ ಸರಕು ಸಾಗಣೆ, ಸ್ವಚ್ಛ ಭವಿಷ್ಯ ಮತ್ತು 2047ರ ವೇಳೆಗೆ ವಿಕಸಿತ ಭಾರತ ಸಾಕಾರದತ್ತ ಕೊಂಡೊಯ್ಯುತ್ತದೆ, 2070ರ ವೇಳೆಗೆ ಇಂಗಾಲದ ನಿವ್ವಳ ಹೊರಸೂಸುವಿಕೆಯನ್ನು ಶೂನ್ಯಕ್ಕೆ ಇಳಿಸುವ ಗುರಿಯನ್ನು ಮುಟ್ಟಲಿದ್ದೇವೆ. ಇದು ಪ್ರಧಾನಿಗಳ ಸಂಕಲ್ಪವಾಗಿದೆ ಎಂದು ಕೇಂದ್ರ ಸಚಿವರು ನುಡಿದರು.
ಈ ಯೋಜನೆಯಡಿಯಲ್ಲಿ ಕೇಂದ್ರ ಮೋಟಾರು ವಾಹನ ನಿಯಮಗಳ (CMVR) ಅಡಿಯಲ್ಲಿ ಪ್ರಸ್ತಾಪಿಸಲಾಗಿದೆ.
•N2 ಮತ್ತು N3 ವರ್ಗದ ಎಲೆಕ್ಟ್ರಿಕ್ ಟ್ರಕ್‌ಗಳಿಗೆ ಬೇಡಿಕೆ ಪ್ರೋತ್ಸಾಹವನ್ನು ವಿಸ್ತರಿಸಲಾಗುತ್ತದೆ. N2 ವರ್ಗವು 3.5 ಟನ್‌ಗಳಿಗಿಂತ ಹೆಚ್ಚು ಮತ್ತು 12 ಟನ್‌ಗಳವರೆಗೆ ಒಟ್ಟು ವಾಹನ ತೂಕ (GVW) ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ.
• N3 ವರ್ಗವು 12 ಟನ್‌ಗಳಿಗಿಂತ ಹೆಚ್ಚು ಮತ್ತು 55 ಟನ್‌ಗಳವರೆಗೆ GVW ಹೊಂದಿರುವ ಟ್ರಕ್‌ಗಳನ್ನು ಒಳಗೊಂಡಿದೆ. ಆರ್ಟಿಕ್ಯುಲೇಟೆಡ್ ವಾಹನಗಳ ಸಂದರ್ಭದಲ್ಲಿ ಆರ್ಥಿಕ ಉತ್ತೇಜನ ಯೋಜನೆ N3 ವರ್ಗದ ಪುಲ್ಲರ್ ಟ್ರಾಕ್ಟರ್‌ಗೆ ಮಾತ್ರ ಅನ್ವಯಿಸುತ್ತವೆ. ವಿಶ್ವಾಸಾರ್ಹತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ಯೋಜನೆಯು ಸಮಗ್ರ ತಯಾರಿಕಾ ಬೆಂಬಲಿತ ವಾರಂಟಿಗಳನ್ನು ಕಡ್ಡಾಯಗೊಳಿಸುತ್ತದೆ.
• ಬ್ಯಾಟರಿಯನ್ನು ಐದು ವರ್ಷಗಳು ಅಥವಾ 5 ಲಕ್ಷ ಕಿಲೋಮೀಟರ್‌ಗಳವರೆಗೆ, ಇದರಲ್ಲಿ ಯಾವುದು ಮೊದಲೋ ಅದು ಖಾತರಿಯಡಿಯಲ್ಲಿ ಒಳಗೊಳ್ಳಬೇಕು.
• ವಾಹನ ಮತ್ತು ಮೋಟಾರ್ ಐದು ವರ್ಷಗಳು ಅಥವಾ 2.5 ಲಕ್ಷ ಕಿಲೋಮೀಟರ್‌ಗಳ ಖಾತರಿಯನ್ನು ಹೊಂದಿರಬೇಕು, ಇದರಲ್ಲಿ ಕೂಡ ಯಾವುದು ಮೊದಲೋ ಅದನ್ನು ಪರಿಗಣಿಸಲಾಗುತ್ತದೆ.
ಎಲೆಕ್ಟ್ರಿಕ್ ಟ್ರಕ್ ದರವು ಕೈಗೆಟುಕುವ ಹಾಗೆ ಇರಬೇಕು ಎನ್ನುವ ಉದ್ದೇಶದಿಂದ ಈ ಉತ್ತೇಜನ ಯೋಜನೆಯ ಪ್ರೋತ್ಸಾಹಕ ಮೊತ್ತವು ಎಲೆಕ್ಟ್ರಿಕ್ ಟ್ರಕ್‌ನ GVW ಅನ್ನು ಅವಲಂಬಿಸಿರುತ್ತದೆ. ಗರಿಷ್ಠ ಪ್ರೋತ್ಸಾಹಕ ಮೊತ್ತವನ್ನು ಪ್ರತಿ ವಾಹನಕ್ಕೆ ₹9.6 ಲಕ್ಷಕ್ಕೆ ನಿಗದಿಪಡಿಸಲಾಗಿದೆ. ಈ ಪ್ರೋತ್ಸಾಹಕಗಳನ್ನು ಖರೀದಿ ಬೆಲೆಯಲ್ಲಿ ಮುಂಗಡ ಕಡಿತವಾಗಿ ನೀಡಲಾಗುತ್ತದೆ ಮತ್ತು ಮೊದಲು ಬಂದವರಿಗೆ ಆದ್ಯತೆ ಆಧಾರದ ಮೇಲೆ PM E-DRIVE ಪೋರ್ಟಲ್ ಮೂಲಕ OEM ಗಳಿಗೆ ಮರುಪಾವತಿ ಮಾಡಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.
ದೇಶಾದ್ಯಂತ ಸುಮಾರು 5,600 ಇ-ಟ್ರಕ್‌ಗಳ ನಿಯೋಜನೆಯನ್ನು ಈ ಯೋಜನೆ ಬೆಂಬಲಿಸುವ ನಿರೀಕ್ಷೆಯಿದೆ. ದೆಹಲಿಯಲ್ಲಿ ನೋಂದಾಯಿಸಲಾದ 1,100 ಇ-ಟ್ರಕ್‌ಗಳಿಗೆ ಮೀಸಲಾದ ನಿಬಂಧನೆಯನ್ನು ರೂಪಿಸಲಾಗಿದೆ. ಇದರ ಅಂದಾಜು ವೆಚ್ಚ ₹100 ಕೋಟಿ. ರಾಜಧಾನಿಯ ಗಂಭೀರ ವಾಯು ಗುಣಮಟ್ಟದ ಸವಾಲುಗಳನ್ನು ಪರಿಹರಿಸುವ ಗುರಿಯನ್ನು ಇದು ಹೊಂದಿದೆ ಎಂದರು.
ಸಿಮೆಂಟ್ ಉದ್ಯಮ, ಬಂದರುಗಳು, ಉಕ್ಕು ಮತ್ತು ಇತರ ಸಾಗಾಣಿಕೆ ವಲಯವು ಈ ಯೋಜನೆಯ ಪ್ರಯೋಜನ ಪಡೆಯಲಿರುವ ಪ್ರಮುಖ ಕ್ಷೇತ್ರಗಳಾಗಿವೆ. ವೋಲ್ವೋ, ಐಷರ್, ಟಾಟಾ ಮೋಟಾರ್ಸ್ ಮತ್ತು ಅಶೋಕ್ ಲೇಲ್ಯಾಂಡ್‌ನಂತಹ ಹಲವಾರು ಪ್ರಮುಖ ಕಂಪನಿಗಳು ಈಗಾಗಲೇ ಭಾರತದಲ್ಲಿ ಎಲೆಕ್ಟ್ರಿಕ್ ಟ್ರಕ್‌ಗಳನ್ನು ತಯಾರಿಸುವಲ್ಲಿ ತೊಡಗಿಸಿಕೊಂಡಿವೆ. ಆತ್ಮನಿರ್ಭರ ಭಾರತ್ ದೃಷ್ಟಿಕೋನದ ಅಡಿಯಲ್ಲಿ ಸ್ಥಳೀಯ ಸಾಮರ್ಥ್ಯಗಳನ್ನು ಹೆಚ್ಚಿಸುತ್ತವೆ ಎಂದು ಸಚಿವರು ಹೇಳಿದರು.
150 ಇ-ಟ್ರಕ್ ಗಳನ್ನು ನಿಯೋಜಿಸಲಿದೆ ಉಕ್ಕು ಪ್ರಾಧಿಕಾರ:
ವಿದ್ಯುತ್ ಚಾಲಿತ ಟ್ರಕ್ ಗಳ ಬಳಕೆಯಲ್ಲಿ ದೊಡ್ಡ ಹೆಜ್ಜೆ ಇರಿಸಿರುವ ಉಕ್ಕು ಸಚಿವಾಲಯದ ಅಧೀನ ಸಂಸ್ಥೆಯಾಗಿರುವ ಭಾರತೀಯ ಉಕ್ಕು ಪ್ರಾಧಿಕಾರ (SAIL) ಮುಂದಿನ ಎರಡು ವರ್ಷಗಳಲ್ಲಿ 150 ಇ-ಟ್ರಕ್‌ಗಳನ್ನು ತನ್ನ ಕಾರ್ಯಾಚರಣೆಯ ವಿವಿಧ ವ್ಯೂಹಾತ್ಮಕ ಸ್ಥಳಗಳಲ್ಲಿ ನಿರ್ಧರಿಸಿದೆ. ಅಲ್ಲದೆ, ವಿವಿಧ ಉದ್ದೇಶಗಳಿಗೆ ತಾನು ಬಳಕೆ ಮಾಡುತ್ತಿರುವ ಒಟ್ಟಾರೆ ಟ್ರಕ್ ಗಳ ಪೈಕಿ ಕನಿಷ್ಠ 15% ವಿದ್ಯುತ್ ಚಾಲಿತ ಟ್ರಕ್ ಗಳನ್ನೇ ಬಳಕೆ ಮಾಡಲು ಪ್ರಾಧಿಕಾರ ನಿರ್ಧರಿಸಿದೆ.
ಇದರ ಜತೆಯಲ್ಲಿ, ಪ್ರೋತ್ಸಾಹ ಧನಕ್ಕೆ ಅರ್ಹತೆ ಪಡೆಯಲು ಹಾಗೂ ತಾನು ಬಳಕೆ ಮಾಡುತ್ತಿರುವ ಅವಧಿ ಮೀರಿದ ಹಳೆಯ ಮಾಲಿನ್ಯಕಾರಕ ಟ್ರಕ್‌ಗಳನ್ನು ವಿಲೇವಾರಿ ಮಾಡಲಿದೆ ಎಂದು ಇದೇ ಸಂದರ್ಭದಲ್ಲಿ ಉಕ್ಕು ಸಚಿವರೂ ಆಗಿರುವ ಕುಮಾರಸ್ವಾಮಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಬೃಹತ್ ಕೈಗಾರಿಕೆ ಸಚಿವಾಲಯದ ಕಾರ್ಯದರ್ಶಿ ಕಮರನ್ ರಿಜ್ವಿ ಹಾಗೂ ಹೆಚ್ಚುವರಿ ಕಾರ್ಯದರ್ಶಿ ಹನೀಫ್ ಖುರೇಷಿ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.
-
Special10 hours ago
ಸೃಷ್ಟಿಯ ನಿಯಮವನ್ನು ಮೀರುವುದೆಂದರೆ ಇದೇ….?
-
Chamarajanagar5 hours ago
ಗುಂಡ್ಲುಪೇಟೆ: ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶ
-
Chamarajanagar11 hours ago
ಮಹಿಳಾ ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನ
-
Hassan6 hours ago
ಮುಸುಕಿನ ಜೋಳಕ್ಕೆ ಬಿಳಿ ಸುಳಿ ರೋಗ: ರೈತರಿಗೆ ಪರಿಹಾರ ನೀಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ ಎ.ಎಸ್.ಪಾಟೀಲ್ ನಡಹಳ್ಳಿ
-
Mysore7 hours ago
ಮುಖ್ಯಮಂತ್ರಿ ಬದಲಾವಣೆ ವಿಚಾರ| ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ: ಎಚ್.ಸಿ.ಮಹದೇವಪ್ಪ
-
Mysore7 hours ago
ಸರ್ಕಾರದ ಸಾಧನೆಗಳ ಸಮಾವೇಶ, ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಬಗ್ಗೆ ಪೂರ್ವಭಾವಿ ಸಭೆ ನಡೆಸಿದ ಎಚ್.ಸಿ.ಮಹದೇವಪ್ಪ
-
Kodagu4 hours ago
ಬಂದೂಕು ವಿನಾಯಿತಿ ಪ್ರಮಾಣ ಪತ್ರ : ಕೊಡವ ಜನಾಂಗೀಯ ಪ್ರಮಾಣ ಪತ್ರ ಪಡೆಯಲು ಸಿಎನ್ಸಿ ಸಲಹೆ
-
Hassan5 hours ago
ಹೆಣ್ಣಿನ ವ್ಯಕ್ತಿತ್ವ ಪ್ರತಿಪಾದಿಸುವ ವಕ್ತಿತ್ವದವರು ನಮ್ಮ ಜೊತೆ ಇರುವುದೇ ಒಂದು ಹೆಮ್ಮೆಯ ವಿಷಯ: ಕೆ.ಎಸ್. ಲತಾ ಕುಮಾರಿ