Connect with us

Politics

ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಮಂತ್ರಿಗಳು !!

Published

on

ಮುಂಬರುವ ಲೋಕಸಭಾ ಚುನಾವಣೆಯ(Parliament election)ಕಾವು ಇದೀಗ ದೇಶಾದ್ಯಂತ ರಂಗೇರಿದೆ. ಎಲ್ಲಾ ಪಕ್ಷಗಳು ಗೆಲುವಿನ ಮಂತ್ರವನ್ನು ಪಠಿಸುತ್ತಿವೆ. ಕೆಲವು ಪಕ್ಷಗಳು ಮೈತ್ರಿ ಮಾಡಿಕೊಂಡು ಈಗಲೇ ಗೆಲುವಿನ ನಗೆ ಬೀರುತ್ತಿದೆ. ಇದರ ನಡುವೆಯೇ ಅಭ್ಯರ್ಥಿಗಳ ಆಯ್ಕೆ ಕೂಡ ನಡೆಯುತ್ತಿದ್ದು, ಲಾಭಿಗಳು ಕೂಡ ಜೋರಾಗಿದೆ. ಈ ನಡುವೆ ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಟು ಸ್ಥಾನಗಳನ್ನು ಗೆಲ್ಲುವ ಪಣತೊಟ್ಟಿದ್ದು ಸರ್ಕಾರದ ಮಂತ್ರಿಗಳನ್ನೇ ಕಣಕ್ಕಿಳಿಸಲು ತೀರ್ಮಾನಿಸಿದೆ.

ಹೌದು, ಲೋಕಸಭಾ ಚುನಾವಣೆ(Parliament election)ರಾಜ್ಯ ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆಯಾಗಿದೆ. ಯಾಕೆಂದರೆ ವಿಧಾನಸಭಾ ಚುನಾವಣೆಯ ಗೆಲುವಿನಷ್ಟು ಇದು ಸುಲಭವಲ್ಲ. ಮೋದಿ ಹವಾ ದೇಶಾದ್ಯಂತ ಇನ್ನೂ ಹಾಗೆಯೇ ಇದೆ. ಹೀಗಾಗಿ ಬಿಜೆಪಿ ವಿರುದ್ಧ ಪ್ರಬಲ ನಾಯಕರನ್ನು ಕಣಕ್ಕಿಳಿಸಿ ಹೇಗಾದರೂ ಗೆಲುವನ್ನು ತಮ್ಮದಾಗಿಸಿಕೊಳ್ಳಬೇಕೆಂಬುದು ಅವರ ತಂತ್ರ. ಇದಕ್ಕೆ ತುಂಬಾ ಖ್ಯಾತಿಗಳಿಸಿ ಹೆಸರು ಮಾಡಿರುವ ಮಂತ್ರಿಗಳೇ ಸರಿಯೆಂದು ಭಾವಿಸಿರುವ ಕಾಂಗ್ರೆಸ್ ಈ ಎಲ್ಲಾ ಕ್ಷೇತ್ರಗಳಲ್ಲಿ ಸಚಿವರನ್ನೇ ಕಣಕ್ಕಿಳಿಸಲು ತೀರ್ಮಾನ ಮಾಡಿದೆ. ಹಾಗಿದ್ದರೆ ಯಾವ ಮಂತ್ರಿಗಳೆಲ್ಲಾ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ನೋಡೋಣ.

ಹೆಚ್​.ಸಿ.ಮಹದೇವಪ್ಪ (ಚಾಮರಾಜನಗರ)
ಸತೀಶ್​ ಜಾರಕಿಹೊಳಿ(ಬೆಳಗಾವಿ)
ಚೆಲುವರಾಯಸ್ವಾಮಿ(ಮಂಡ್ಯ)
ಕೆ.ಎನ್.​​ರಾಜಣ್ಣ(ಹಾಸನ)
ಕೆ.ಹೆಚ್​​.ಮುನಿಯಪ್ಪ(ಕೋಲಾರ)

ಅಂದಹಾಗೆ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು ಲೋಕಸಭೆಗೆ ಸಚಿವರ ಸ್ಪರ್ಧೆ ಅನಿವಾರ್ಯ ಆಗಬಹುದು ಎಂದು ತೀರ್ಮಾನಿಸಲಾಗಿದೆ. ಹೀಗಾಗಿ ಮಾನಸಿಕವಾಗಿ ಸಿದ್ದರಾಗಿರಿ ಎಂದು ಸಚಿವರುಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Mysore

ಬಿಡದಿ ಟೌನ್‌ ಶಿಪ್‌ ಎಚ್‌.ಡಿ.ಕುಮಾರಸ್ವಾಮಿ ಕಾಲದಲ್ಲೇ ನಿರ್ಧಾರವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Published

on

ಮೈಸೂರು: ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈಬಿಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಪತ್ರ ಬರೆದಿದ್ದಾರೆ. ಆದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲೇ ಬಿಡದಿಯಲ್ಲಿ 7 ಟೌನ್‌ಶಿಪ್‌ ಮಾಡಬೇಕೆಂದು ನಿರ್ಧಾರವಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಕಾಲದಲ್ಲೇ ಬಿಡದಿಯಲ್ಲಿ 7 ಟೌನ್ ಶಿಪ್ ಆಗಬೇಕೆಂದು ತೀರ್ಮಾನ ಆಗಿತ್ತು. ಅದಕ್ಕಾಗಿ 300 ಕೋಟಿ ಹಣ ನೀಡಿದ್ದರು. ಅದನ್ನು ಈಗ ನಾನು ಡೈನೋಟಿಫಿಕೇಶ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದರು, ಅದೆಲ್ಲ ಇತಿಹಾಸ ಎಂದು ತಿರುಗೇಟು ನೀಡಿದರು.

ಟೌನ್ ಶಿಪ್ ಪಿತಾಮಹ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರೇ. ಯಾರು ಏನೇ ಹೇಳಿದರು ನಮ್ಮ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗುತ್ತದೆ ಎಂದು ಹೇಳಿದರು.

ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಜಾಗವನ್ನು ತೆಗೆದುಕೊಳ್ಳಬಹುದು. ಈ ರಾಜ್ಯಕ್ಕೆ ಕುಮಾರಸ್ವಾಮಿ ಅವರು ಎರಡು ಬಾರಿ ಸಿಎಂ ಆಗಿದ್ದರು. ಅವರ ಕಾಲದಲ್ಲಿ ಯಾಕೆ ರೈತರ ಭೂಮಿಯನ್ನು ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ ಎಂದು ಪ್ರಶ್ನಿಸಿದರು.

ಇನ್ನೂ ಈ ವಿಚಾರದಲ್ಲಿ ರಾಜಕೀಯ ಬೇಡ. ಇದೆಲ್ಲ ನಿಮ್ಮ ಮಗನೆ ಮಾಡಿದ್ದು, ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಟಾಂಗ್‌ ನೀಡಿದರು.

ಕಾವೇರಿ ನಮ್ಮ ಜೀವನದಿ

ಕಾವೇರಿ ತಾಯಿಯ ಆರತಿ ಮಾಡಬೇಕು. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಸಂಬಂಧಿಸಿದಂತೆ ಭದ್ರತಾ ವೈಫಲ್ಯದ‌ ಬಗ್ಗೆ ಕೇಂದ್ರದ ಒಪ್ಪಿಗೆ ವಿಚಾರದ ಬಗ್ಗೆ ಮಾತನಾಡಿದ ಅವರು, ನಾನು ಇಲ್ಲಿ ಬ್ಲೇಮ್ ಗೇಮ್ ಮಾಡುವುದಿಲ್ಲ. ಯಾರ ವಿರುದ್ದವೂ ಮಾತನಾಡುವುದಿಲ್ಲ. ಇದು ರಾಜಕೀಯ ಮಾಡುವ ವಿಚಾರ ಅಲ್ಲ. ಯಾರು ಈ ವಿಚಾರದಲ್ಲಿ ಯಾರೂ ಕೂಡಾ ರಾಜಕೀಯ ಮಾಡಬಾರದು. ಪಕ್ಷದ ಅಧ್ಯಕ್ಷ ಹಾಗೂ ಡಿಸಿಎಂ ಆಗಿ ಹೇಳುತ್ತಿದ್ದೇನೆ. ಈ ವಿಚಾರದಲ್ಲಿ ರಾಜಕೀಯ ಯಾವುದೇ ಕಾರಣಕ್ಕೂ ಮಾಡಬಾರದು.
ಹೊರದೇಶದಿಂದ ಬಂದು ಶಾಂತಿ ಕದಡುವ ಕೆಲಸ ಮಾಡಿದ್ದಾರೆ. ಅವರನ್ನು ಮುಗಿಸುವ ಕೆಲಸ ಆಗಬೇಕು. ಕೇಂದ್ರ ಸರ್ಕಾರ ಹೀಗಾಗಲೇ ಆ ಕೆಲಸ ಮಾಡಿದೆ. ಈ ವಿಚಾರವಾಗಿ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದು ಹೇಳಿದರು.

ರಾಮನಗರ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕೆಂದು ಗೊತ್ತು ಮಾಡೇ ಮಾಡುತ್ತೇನೆ

ರಾಮನಗರ ಹೆಸರು ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ರಾಮನಗರ ಹೆಸರನ್ನು ಹೇಗೆ ಬದಲಾವಣೆ ಮಾಡಬೇಕೆಂದು ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ‌ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ? ಅಥವಾ ಅಸೂಯೆನಾ ಎಂಬ ಪ್ರಶ್ನೆ ಮೂಡುತ್ತದೆ. ಆದರೆ ಏನೋ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಇರಬೇಕು ಎಂದು ವ್ಯಂಗ್ಯ ಮಾಡಿದ್ದಾರೆ.

Continue Reading

Chamarajanagar

ಚಾಮರಾಜನಗರ: ಮಲೆ ಮಹದೇಶ್ವರ ಸ್ವಾಮಿ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌

Published

on

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾದಪ್ಪನ ದರ್ಶನ ಪಡೆದಿದ್ದಾರೆ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು(ಏಪ್ರಿಲ್‌.24) ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್‌ ಅವರು ಮಾದಪ್ಪನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗವಹಿಸಿದ್ದಾರೆ.

ಇನ್ನೂ ಮಲೆ ಮಹದೇಶ್ವರ ದೇವಾಲಯ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರಿಂದ ಬೆಳ್ಳಿ ರಥೋತ್ಸವದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಾಥ್‌ ನೀಡಿದ್ದಾರೆ.

Continue Reading

Politics

ಮೋದಿ, ಅಮಿತ್ ಶಾ ಸೇಡಿನ ರಾಜಕಾರಣಕ್ಕೆ ರಾಹುಲ್ ವಿರುದ್ಧ ದೂರು ದಾಖಲಿಸಲಾಗಿದೆ: ಸಿದ್ದರಾಮಯ್ಯ

Published

on

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ.

ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.

ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ.

Continue Reading

Trending

error: Content is protected !!