Connect with us

Mandya

ಸರ್ವೇ ಮಾಡಿ ವರದಿ ನೀಡಲು 1 ಸಾವಿರ ರೂ. ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ತಾಲೋಕು ಸರ್ವೇಯರ್

Published

on

ಮಂಡ್ಯ :ಸರ್ವೇ ಮಾಡಿ ವರದಿ ನೀಡಲು 1 ಸಾವಿರ ರೂ. ಬೇಡಿಕೆಇಟ್ಟಿದ್ದ ತಾಲೋಕು ಸರ್ವೇಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಡ್ಯ ತಾಲ್ಲೂಕು ಎಡಿಎಲ್’ಆರ್ ಕಚೇರಿ ಸರ್ವೇಯರ್ ಶಿವಕುಮಾರ್ ಕೆ.ಎನ್ ಲೋಕಾಯುಕ್ತ ಬಲೆಗೆ ಬಿದ್ದ ಮಿಕವಾಗಿದ್ದಾರೆ.

ಫಿರ್ಯಾದಿ ರೈತ ಡಣಾಯಕನಪುರ ರವಿಕುಮಾರ್ ಡಿ ಎಸ್ ರವರಿಂದ

ಪಾಂಡವಪುರ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಸ್ವೀಕರಿಸುವಾಗ ಸರ್ವೇಯರ್ ಶಿವಕುಮಾರ್ ಬಲೆಗೆ ಬಿದ್ದಿದ್ದಾರೆ.
ಲಂಚದ ಹಣ ಪಡೆಯಲು ದೂರುದಾರ ರೈತನನ್ನು ಪಾಂಡವಪುರ ಕ್ಕೆ ಬಾ ಎಂದು ರೈತನನ್ನು ಕರೆಸಿಕೊಂಡಿದ್ದ ಅಧಿಕಾರಿಯನ್ನು ಸಾಕ್ಷ್ಯಾ ಸಮೇತ ಲೋಕಾಯುಕ್ತ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲೋಕಾಯುಕ್ತ ಎಸ್ ಪಿ ಸಜೀತ್ ರವರ ನೇತೃತ್ವ ದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಮೋಹನ್ ರೆಡ್ಡಿ ಸಿಬ್ಬಂದಿಗಳಾದ ಶರತ್ ಶಂಕರ್ ಮಹದೇವಸ್ವಾಮಿ ಕಾರ್ಯಾಚರಣೆಯಲ್ಲಿ ಭಾಗೀಯಾಗಿದ್ದು ತನಿಖೆ ಮುಂದುವರಿದಿದೆ.

ಮಂಡ್ಯ ತಾಲ್ಲೂಕು ಎಡಿಎಲ್’ಆರ್ ಕಚೇರಿ ಸರ್ವೇಯರ್ ಶಿವಕುಮಾರ್ ಕೆ.ಎನ್ ಲೋಕಾಯುಕ್ತ ಬಲೆಗೆ

ಫಿರ್ಯಾದಿ ರೈತ ಡಣಾಯಕನಪುರ ರವಿಕುಮಾರ್ ಡಿ ಎಸ್

ಪಾಂಡವಪುರ ಬಸ್ ನಿಲ್ದಾಣದಲ್ಲಿ ರೈತನಿಂದ ಹಣ ಸ್ವೀಕರಿಸುಚಾಗ ಸಿಕ್ಕಿ ಬಿದ್ದ ಆರೋಪಿ
ಪಾಂಡವಪುರ ಕ್ಕೆ ಬಾ ಎಂದು ರೈತನನ್ನು ಕರೆಸಿಕೊಂಡಿದ್ದ ಅಧಿಕಾರಿ

ಲೋಕಾಯುಕ್ತ ಎಸ್ ಪಿ ಸಜೀತ್ ರವರ ನೇತೃತ್ವ ದಲ್ಲಿ ಇನ್ಸ್ಪೆಕ್ಟರ್ ಬ್ಯಾಟರಾಯಗೌಡ ಮತ್ತು ಮೋಹನ್ ರೆಡ್ಡಿ ಸಿಬ್ಬಂದಿಗಳಾದ ಶರತ್ ಶಂಕರ್ ಮಹದೇವಸ್ವಾಮಿ ಭಾಗಿ

Continue Reading
Click to comment

Leave a Reply

Your email address will not be published. Required fields are marked *

Mandya

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಣೆ :ಪಿ ರವಿಕುಮಾರ್

Published

on

ಮಂಡ್ಯ : ಬೂದನೂರು ಉತ್ಸವ ಪ್ರಯುಕ್ತ 30 ಗ್ರಾಮಗಳಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯಾಯಾ ಗ್ರಾಮಗಳಲ್ಲಿ ಏರ್ಪಡಿಸಲಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನವನ್ನು ವಿತರಿಸಲಾಗುವುದು ಮತ್ತು ಪ್ರತಿಯೊಂದು ಗ್ರಾಮಕ್ಕೂ ಪ್ರಥಮ,ದ್ವಿತೀಯ,ತೃತೀಯ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಶಾಸಕ ಪಿ ರವಿಕುಮಾರ್ ಗೌಡ ಹೇಳಿದರು.

ಬೂದನೂರು ಉತ್ಸವ 2026ರ ಪ್ರಯುಕ್ತ ಬೂದನೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಬಿಡಿಸಿರುವ ರಂಗೋಲಿಗಳನ್ನು ವೀಕ್ಷಣೆ ಮಾಡಿ ಬಳಿಕ ಮಾತನಾಡಿದ ಅವರು, ಬೂದನೂರು ಗ್ರಾಮದ ರಂಗೋಲಿ ಸ್ಪರ್ಧೆಯಲ್ಲಿ ವಿವಿಧ ರೀತಿಯ ರಂಗೋಲಿಗಳಾದ ಕಾಂತಾರ, 3D ರಂಗೋಲಿ ಮತ್ತು ಗೃಹಲಕ್ಷ್ಮಿ ಯೋಜನೆಯ ಕುರಿತು ಮಾಹಿತಿ ನೀಡುವಂತಹ ವಿವಿಧ ರೀತಿಯಲ್ಲಿ ರಂಗೋಲಿಯನ್ನು ಬಿಡಿಸಿರುವುದನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕೆ.ಆರ್ ನಂದಿನಿ, ಉಪ ವಿಭಾಗ ಅಧಿಕಾರಿಯಾದ ಶಿವಮೂರ್ತಿ, ಮಂಡ್ಯ ತಹಸಿಲ್ದಾರ್ ವಿಶ್ವನಾಥ್ ಇನ್ನಿತರರಿದ್ದರು.

Continue Reading

Mandya

ಜೀತ ಪದ್ಧತಿ ಆಚರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ : ನ್ಯಾ. ಜೆ.ಎನ್ ಸುಬ್ರಹ್ಮಣ್ಯ

Published

on

ಮಂಡ್ಯ : ಹಳ್ಳಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಪಡೆದಂತೆ ಜೀತ ಪದ್ಧತಿ ಕುಸಿಯುತ್ತಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಜೆ.ಎನ್ ಸುಬ್ರಹ್ಮಣ್ಯ ಅವರು ಹೇಳಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಜೀತ ಪದ್ಧತಿ ರದ್ದತಿ ಕಾಯ್ದೆ 1976ರ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಿ ಬರಗಾಲ, ಪ್ರವಾಹ ಉಂಟಾಗುತ್ತದೆ ಅಲ್ಲಿ ಆಹಾರದ ಸಮಸ್ಯೆಯಿಂದ ಹಾಗೂ ಖಾಸಗಿ ಲೇವಾದೇವಿ ವ್ಯವಹಾರ ಮಾಡುವ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೀತ ಪದ್ಧತಿ ಜಾರಿಯಲ್ಲಿದೆ. ಇವತ್ತಿಗೂ ಜೀತ ಪದ್ಧತಿ ಜೀವಂತವಾಗಿ ಇರುವುದು ನಮ್ಮ ಗಮನಕ್ಕೆ ಬಂದಿದೆ ಎಂದರು.

ದೇಶದಲ್ಲಿ ಜೀತ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸರ್ಕಾರದ ಪ್ರತಿಯೊಂದು ಅಂಗಗಳು ಕ್ರಮ ಕೈಗೊಳ್ಳಬೇಕು. ಜೀತ ಪದ್ಧತಿ ಮನಸ್ಥಿತಿ ಮತ್ತು ಜೀತ ಪದ್ಧತಿಯನ್ನು ಆಚರಿಸುತ್ತಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕೃಷ್ಣನ ಜನ್ಮ ಸ್ಥಳಕ್ಕೆ ಕಳುಹಿಸಿದರೆ ಉಳಿದವರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಹೇಳಿದರು.

ಜೀತ ಪದ್ಧತಿ ಆಚರಿಸುವವರು ಹಾಗೂ ಜೀತ ಪದ್ಧತಿಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷಕವಾಗಿ ಪ್ರಚೋದನೆ ನೀಡುವವರ ವಿರುದ್ಧ ಯಾವುದೇ ರೀತಿಯ ದಯೆ ದಾಕ್ಷಿಣ್ಯ ಇಲ್ಲದೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಮೂಲಕ ಜಾಗೃತಿ ಜೀತ ಪದ್ಧತಿ ನಿರ್ಮೂಲನೆಗೆ ಅರಿವು ಮೂಡಿಸಬೇಕು‌ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಜೀತ ಪದ್ಧತಿ ನಿರ್ಮೂಲನೆ ಸಾಮಾಜಿಕ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಜೀತ ಪದ್ಧತಿಯನ್ನು ನಿರ್ಮೂಲನೆ ಮಾಡಲು ಪಣ ತೊಡಬೇಕು. ಸ್ವಾತಂತ್ರ್ಯ ಬಂದ ನಂತರ ಭಾರತದಲ್ಲಿ ಅನಕ್ಷರತೆ, ಮೂಢನಂಬಿಕೆ, ಬಡತನ, ಮೌಢ್ಯತೆ ಭಾರತದಲ್ಲಿ ಹೆಚ್ಚಿತ್ತು, ಅಂತಹ ಸಂದರ್ಭದಲ್ಲಿ ಜೀತ ಪದ್ಧತಿಯೂ ಕೂಡ ಹೆಚ್ಚಿತು ಆದರೆ ಇಂದು ದೇಶದಲ್ಲಿ ಸಾಕ್ಷರತೆ ಹೆಚ್ಚಿದರೂ ಸಹ ಭಾರತದಿಂದ ಜೀತ ಪದ್ಧತಿ ನಿರ್ಮೂಲನೆಯಾಗಿಲ್ಲ ಇದು ನಾಗರೀಕ ಸಮಾಜ ತಲೆತಗ್ಗಿಸುವ ಸಂಗಾತಿಯಾಗಿದೆ ಎಂದು ಹೇಳಿದರು.

ಮನುಷ್ಯನಿಂದ ಮನುಷ್ಯ ಅವನ ಇಚ್ಛೆಗೆ ಅನುಸಾರ ಶೋಷಣೆಯಿಂದ ಕಾರ್ಯ ಮಾಡಿಸಿಕೊಳ್ಳುವುದು ಕಾನೂನು ಬಾಹಿರ ಹಾಗೂ ಅಮಾನವೀಯ ಕೃತ್ಯವಾಗಿದೆ. ಜೀತ ಪದ್ಧತಿಗೆ ಪ್ರಮುಖ ಕಾರಣವೆಂದರೆ ನಮ್ಮಲ್ಲಿರುವ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಎಂದು ಹೇಳಿದರು.

ಕಳೆದ ಒಂದು ವರ್ಷದಿಂದ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣ ಅಧಿಕಾರಿಗಳು ಜಿಲ್ಲೆಯನ್ನು ಜೀತ ವಿಮುಕ್ತಿಗೊಳಿಸಲು ಶ್ರಮ ವಹಿಸಿದ್ದಾರೆ. ಜೀತ ಪದ್ಧತಿಗೆ ಒಳಗಾದವರನ್ನು ಗುರುತಿಸಿ ಅವರಿಗೆ ವಿಶೇಷ ಗುರುತಿನ ಚೀಟಿ ನೀಡಿ ವಿವಿಧ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಹಮ್ಮಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಜೀತ ಪದ್ಧತಿಗೆ ಪರೋಕ್ಷವಾಗಿ ಪ್ರಚೋದನೆ ನೀಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು. ಜೀತ ಪದ್ಧತಿಯ ಕುರಿತು ಅರಿವು ಮೂಡಿಸಬೇಕು. ಒಬ್ಬ ವ್ಯಕ್ತಿಯ ಬಡತನ, ಅನಕ್ಷರತೆ ಇನ್ನೊಬ್ಬರಿಗೆ ಬಂಡವಾಳ ಆಗಬಾರದು. ಸ್ವಾತಂತ್ರ್ಯದ ನಂತರ ಬಂದ ಸರ್ಕಾರಗಳು ದೇಶದ ಜನರನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಅಭಿವೃದ್ಧಿ ಪಡಿಸಲು ಅನೇಕ ಯೋಜನೆಗಳನ್ನು ರೂಪಿಸಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಜೀತ ಪದ್ಧತಿಗೆ ಒಳಗಾದವರಿಗೆ ಹೇಗೆ ನೆರವು ನೀಡಬಹುದು, ಸಮಾಜದ ಮುಖ್ಯವಾಹಿನಿಗೆ ತರಬೇಕು ಹಾಗೂ ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಮಾಡಬೇಕೆಂದರೆ ಮೊದಲು ಅವರಿಗೆ ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ಜಿಲ್ಲೆಯಲ್ಲಿ ಜೀತ ಪದ್ಧತಿಗೆ ಒಳಗಾದ 84 ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ಸಹಕಾರಿಸಿದರಿಂದ “ನನ್ನ ಗುರುತು” ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿದರು.

ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಇಲಾಖೆಯಿಂದ ಜೀತ ವಿಮುಕ್ತಿ ಹೊಂದಿದ ವ್ಯಕ್ತಿಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಕಾರ್ ನೀಡಿ ಅವರ ಬದುಕಿಗೆ ನೆರವಾಗಿದೆ. ಅಧಿಕಾರಿಗಳು ಜೀತ ವಿಮುಕ್ತರಿಗೆ ಮಾನವ ನೆಲೆಯಿಂದ ಸ್ಪಂದಿಸಬೇಕು. ಜೀತ ಪದ್ಧತಿಯಿಂದ ವಿಮುಕ್ತಿಗೊಳಿಸುವದರ ಜೊತೆಗೆ ಜೀತ ಪದ್ಧತಿ ಮನಸ್ಥಿತಿಯನ್ನು ಹೋಗಲಾಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಆನಂದ್ ಎಂ, ಸಮಾಲೋಚನ ಮನಶಾಸ್ತ್ರ ತಜ್ಞರಾದ ಪ್ರಥಮ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

Mandya

ಜನಗಣತಿ ಕಾರ್ಯವು ಅತ್ಯಂತ ಪರಿಣಾಮಕಾರಿಯಾಗಿ ಆಗಬೇಕು : ಡಾ ಕುಮಾರ

Published

on

ಮಂಡ್ಯ : 2027 ರ ಜನಗಣತಿಯು ಎರಡು ಹಂತಗಳಲ್ಲಿ ನಡೆಯಲಿದ್ದು ಮೊದಲ ಹಂತದ ಮನೆಗಳ ಪಟ್ಟಿ (House-listing) ಏಪ್ರಿಲ್ 16 ರಿಂದ ಸೆಪ್ಟೆಂಬರ್ 15, 2026 ರವರೆಗೆ ಹಾಗೂ ಜನಸಂಖ್ಯೆ ಎಣಿಕೆ ಫೆಬ್ರವರಿ 2027 ರಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

2027ರ ಜನಗಣತಿ ಸಿದ್ಧತೆಗಳ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುರಿತು ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಮುಖ್ಯ ಜನಗಣತಿ ಅಧಿಕಾರಿಗಳಾಗಿ ಜವಾಬ್ದಾರಿ ವಹಿಸಲಿದ್ದಾರೆ. 2026ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ನಡೆಯಲಿರುವ ಡಿಜಿಟಲ್ ಮನೆಗಳ ಪಟ್ಟಿ ಮತ್ತು ವಸತಿ ಗಣತಿಗಾಗಿ ಅಗತ್ಯ ಸಿಬ್ಬಂದಿ (ಶಿಕ್ಷಕರು, ನೌಕರರು) ನೇಮಕವಾಗಬೇಕು. ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.

ಜನವರಿ 15, 2026 ರೊಳಗೆ ಗಣತಿದಾರರು ಮತ್ತು ಮೇಲ್ವಿಚಾರಕರ ನೇಮಕಾತಿಯನ್ನು ಸಿಎಂಎಂಎಸ್ (CMMS) ಪೋರ್ಟಲ್‌ನಲ್ಲಿ ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.

ಜಿಪಿಎಸ್ ಆಧಾರಿತ ಡಿಜಿಟಲ್ ಮ್ಯಾಪಿಂಗ್ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜನಗಣತಿ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ ಮಾಡಲು ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅದರ ಪ್ರಕಾರ ಕೆಲಸ ಮಾಡಬೇಕು ಎಂದು ಹೇಳಿದರು.

ಜನಗಣತಿಗೆ ಅವಶ್ಯಕವಾಗಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನೇಮಕ ಆಗಬೇಕು ಎಂದು ಹೇಳಿದ ಜಿಲ್ಲಾಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕೆಲಸವನ್ನು ಮಾಡಬೇಕು ಎಂದು ಅವರು ಹೇಳಿದರು.

ಅಪರ ಜಿಲ್ಲಾಧಿಕಾರಿ ಬಿ.ಎಸ್. ಶಿವಾನಂದಮೂರ್ತಿ ಮಾತನಾಡಿ, ಶಿಕ್ಷಕರು ಮತ್ತು ಇತರ ಇಲಾಖೆ ಸಿಬ್ಬಂದಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸರ್ಕಾರದಿಂದ ಬರುವ ಮಹತ್ವದ ಸುತ್ತೋಲೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡು ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೆಲಸ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪವಿಭಾಗಾಧಿಕಾರಿ ಎಂ.ಶಿವಮೂರ್ತಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ನರಸಿಂಹ ಮೂರ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಧಿತರಿದ್ದರು.

Continue Reading

Trending

error: Content is protected !!