Connect with us

Kodagu

ಆ.13ಕ್ಕೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

Published

on

ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 13 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕ ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಸಿದ್ದಾರೆ.

Continue Reading

Kodagu

ಪೊನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ವಾರು ಕೇತ್ರಗಳ ಪುನರ್ ವಿಂಗಡಣೆ

Published

on

ಮಡಿಕೇರಿ : ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತಾಲ್ಲೂಕು ಕೇಂದ್ರವಾಗಿರುವ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯನ್ನು ಮತ್ತು ಬಲ್ಯಮಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನೂರು ರಸ್ತೆ ಕಾಲೋನಿ, ಮಾಪಿಳ್ಳೆತೋಡು ಸೇತುವೆ, ಕಾವೇರಮ್ಮ ಬಡಾವಣೆ ಮತ್ತು ಇತರ ಬಡಾವಣೆಗಳು ಒಳಗೊಂಡಂತೆ ಸಂಪೂರ್ಣ ಮುಗುಟಗೇರಿ ಗ್ರಾಮವನ್ನು ಸೇರಿಕೊಂಡಂತೆ ಸರ್ಕಾರದ ಅಧಿಸೂಚನೆ ಸಂಖ್ಯೆ:ನಅಇ:221:ಎಂಎಲ್‍ಆರ್:2022(ಇ) ದಿನಾಂಕ:24-07-2024 ರಂತೆ ಪೆÇನ್ನಂಪೇಟೆ ಪಟ್ಟಣ ಪಂಚಾಯಿತಿಯನ್ನಾಗಿ ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.


ಸರ್ಕಾರದ ಆದೇಶ ಸಂಖ್ಯೆ:ಯುಡಿಡಿ/4/ಎಂಎಲ್‍ಆರ್/2014 ಬೆಂಗಳೂರು ದಿನಾಂಕ:15-02-2014ರ ಆದೇಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಾರ್ಡ್ ಪುನರ್ ವಿಂಗಡಣೆ ಮಾಡುವ ಬಗ್ಗೆ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸಿ ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಡಿಕೇರಿ ಇವರ ಪತ್ರ ಸಂಖ್ಯೆ:ಡಿಯುಡಿಸಿ/ಪೊ.ತಾ/96/2020-21 ದಿನಾಂಕ:20-02-2026ರಂತೆ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವಾರ್ಡ್‍ಗಳನ್ನು 2011 ರ ಜನಗಣತಿಯ ಆಧಾರದ ಮೇರೆ ಪುನರ್ ವಿಂಗಡಣೆ ಮಾಡಲು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.


ಆದ್ದರಿಂದ ಕರ್ನಾಟಕ ಪೌರಸಭೆಗಳ ಅಧಿನಿಯಮ-1964ರ ಪ್ರಕರಣ 13ರ ಮೇರೆಗೆ ಪೆÇನ್ನಂಪೇಟೆ ಪಟ್ಟಣ ಪಂಚಾಯಿತಿಯ ವಾರ್ಡ್‍ಗಳನ್ನು 2011ರ ಜನಗಣತಿಯನ್ನು ಆಧರಿಸಿ ಪುನರ್ ವಿಂಗಡಣೆ ಮಾಡಿ, ವಾರ್ಡ್‍ನ ಹೆಸರು ಹಾಗೂ ವಾರ್ಡ್ ವ್ಯಾಪ್ತಿಗೆ ಒಳಪಡುವ ಪ್ರದೇಶದ ವಿವರ ಮತ್ತು ಚೆಕ್ಕುಬಂದಿಗಳನ್ನು ವಿವರವಾಗಿ ನಮೂದಿಸಿ ಕರಡು ಅಧಿಸೂಚನೆ ಹೊರಡಿಸಲಾಗಿದೆ.
ಈ ಕರಡು ಅಧಿಸೂಚನೆಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆಯನ್ನು / ಸಲಹೆಗಳನ್ನು ಸಲ್ಲಿಸಲು ಇಚ್ಛಿಸುವ ವ್ಯಕ್ತಿಗಳು ಅದನ್ನು ಲಿಖಿತದಲ್ಲಿ ಕಾರಣ ಸಹಿತವಾಗಿ ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳೊಳಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಸಲ್ಲಿಸಬೇಕೆಂದು ಹಾಗೂ ಆಕ್ಷೇಪಣೆಯನ್ನು / ಸಲಹೆಗಳನ್ನು ಈ ಅವಧಿಯ ತರುವಾಯ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

Continue Reading

Kodagu

ಹುದಿಕೇರಿಯಲ್ಲಿ ಆಟೋ ತಂಗುದಾಣ ಲೋಕಾರ್ಪಣೆ

Published

on

ವಿರಾಜಪೇಟೆ : ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹುದಿಕೇರಿ ಭಾಗಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ತಾಲೂಕು ಹುದಿಕೇರಿಯಲ್ಲಿ ಶಾಸಕರ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಆಟೋ ತಂಗುದಾಣ ಲೋಕಾರ್ಪಣೆಗೊಳಿಸಿದರು.


ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಿದೇರೀರ ನವೀನ್, ವಲಯ ಅಧ್ಯಕ್ಷರು ಚಂಗುಲಂಡ ಸೂರಜ್, ಡಿಸಿಸಿ ಸದಸ್ಯರು ಪೆಮ್ಮಂಡ ರಾಜ, ಹಿರಿಯರು ಚೆಕ್ಕೇರ ವಾಸು ಕುಟ್ಟಪ್ಪ, ಜಿಮ್ಮಿ ಅಣ್ಣಯ್ಯ, ಸುಧೀರ್, ಪಕ್ಷದ ಮುಖಂಡರು ಅಜ್ಜಿಕುಟ್ಟಿರ ಗಿರೀಶ್, ಪಮ್ಮು, ನೊರೇರ ಮನೋಹರ್, ರಮೇಶ್, ಬಿಪಿನ್, ರೋನಿ, ಮದನ್ ಮಂದಣ್ಣ, ಕಿಸು, ಹುದಿಕೇರಿ ವಲಯ ಯುವ ಘಟಕದ ಅಧ್ಯಕ್ಷರು ರೀಕ್ಷಿತ್ ಕಾರ್ಯಪ್ಪ, ಮೌನ, ಮಂಜು ದೇವಯ್ಯ, ಬಾನಾಂಗಡ ಅರುಣ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

Kodagu

ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ ನಿಂದ ಕೆಸಿಎ ಕ್ರಿಕೆಟ್ ಟೂರ್ನಿಯ ಪೂರ್ವಭಾವಿ ಸಭೆ

Published

on

ಮಡಿಕೇರಿ : ಕೊಡಗು ಕ್ರಿಶ್ಚಿಯನ್ ಅಸೋಸಿಯೇ?ನ್ ವತಿಯಿಂದ ಇದೇ ಏ.24 ಮತ್ತು 25 ರಂದು ನಡೆಯಲಿರುವ ಸಂಭ್ರಮದ ಕೆಸಿಎ ಕ್ರಿಕೆಟ್ ಟೂರ್ನಿಯ ಪೂರ್ವಭಾವಿ ಸಭೆ ವಿರಾಜಪೇಟೆಯಲ್ಲಿ ನಡೆಯಿತು.

ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳು ಕ್ರಿಕೆಟ್ ಟೂರ್ನಿಯ ಯಶಸ್ಸಿಗೆ ಅಗತ್ಯವಿರುವ ರೂಪರೇ?ಗಳ ಕುರಿತು ಚರ್ಚಿಸಿದರು.


ಸಮುದಾಯದ ಸಂಘಟನೆ ಹಾಗೂ ಮನೋರಂಜನೆಗಾಗಿ ಕ್ರಿಕೆಟ್ ಟೂರ್ನಿಯೊಂದಿಗೆ ಹಗ್ಗಜಗ್ಗಾಟ, ಥ್ರೋಬಾಲ್ ಮತ್ತು ಶಾಟ್ ಪೂಟ್ ಸ್ಪರ್ಧೆಯನ್ನು ಎರಡು ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಯಿತು. ಕೆಸಿಎ ಕ್ರಿಕೆಟ್ ಟೂರ್ನಿಯ ವಿಜೇತ ತಂಡಕ್ಕೆ ರೂ.1 ಲಕ್ಷ ಮತ್ತು ದ್ವಿತೀಯ ರೂ.50 ಸಾವಿರ ನಗದು ಬಹುಮಾನ ನೀಡಲಾಗುವುದು.

ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಹಗ್ಗಜಗ್ಗಾಟ, ಶಾಟ್ ಪೂಟ್ ಮತ್ತು ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯ ನಡೆಯಲಿದೆ. ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಪ್ರತಿಯೊಂದು ಸ್ಪರ್ಧೆಯ ವಿಜೇತರಿಗೂ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಗುವುದು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವವರು ಡಾಡು ಜೋಸೆಫ್ (9483303676), ಜೋಬಿ ಅಮ್ಮತ್ತಿ (8123823860) ಅವರನ್ನು ಸಂಪರ್ಕಿಸಬಹುದಾಗಿದೆ.


ಸಭೆಯಲ್ಲಿ ಕಾರ್ಯದರ್ಶಿ ಸಿ.ಜೆ.ಅಂತೋಣಿ, ಜಂಟಿ ಕಾರ್ಯದರ್ಶಿ ಬಿಂದುಸಾರ, ಖಜಾಂಚಿ ಬೇಬಿ ಎಂ.ಟಿ, ಪ್ರಮುಖರಾದ ಜೋಬಿ ಅಮ್ಮತ್ತಿ, ಪ್ರವೀಣ್ ಜಾನ್ಸನ್, ರಿಜೋಶ್ ಜೋಸೆಫ್, ಅಂತೋಣಿ ರಾಬಿನ್, ಬಿನೀಶ್, ಅಂತೋಣಿ ಜೋಸೆಫ್ ಮತ್ತಿತರರು ಉಪಸ್ಥಿತರಿದ್ದರು.

Continue Reading

Trending

error: Content is protected !!