ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ. ಪ್ರಕರಣದ ತನಿಖೆಯ ಭಾಗವಾಗಿ ವಿವರವಾದ ಹಣಕಾಸು ಹಾಗೂ ವಹಿವಾಟು ಮಾಹಿತಿಯನ್ನು ಕೋರಿ ನೋಟಿಸ್ ನೀಡಿದ್ದಾರೆ.

ನ.29 ರಂದು ನೋಟಿಸ್ ನೀಡಿರುವ ಪೊಲೀಸರು, ಡಿ.19 ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅಥವಾ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಸೂಚಿಸಿದ್ದಾರೆ.
ಡಿ.ಕೆ.ಸುರೇಶ್ ಅವರಿಗೂ ನೋಟಿಸ್ ನೀಡಿರುವ ದೆಹಲಿ ಪೊಲೀಸರು, ಎಷ್ಟು ದುಡ್ಡು ನೀಡಿದ್ದೀರಿ, ಯಾವ ಉದ್ದೇಶಕ್ಕೆ ಬಳಕೆಯಾಗಿದೆ, ಹಣವನ್ನು ನೀಡಿದ್ದು ಹೇಗೆ, ಎಷ್ಟು ಹಣ ನೀಡಿದ್ದೀರಿ ಎಂಬ ಪ್ರಶ್ನೆಗಳಿಗೆ ವಿವರ ಕೇಳಿದ್ದಾರೆ.

